Skip to content

February 27, 2012

7

“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!

by ನಿಲುಮೆ

- ಭೀಮಸೇನ್ ಪುರೋಹಿತ್

“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”

ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ  ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..

ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..

 ಸಾವರ್ಕರ್-ದೇಶಭಕ್ತಿ-ಸ್ವಾತಂತ್ರ್ಯ ಹೋರಾಟ..

ಸಾವರ್ಕರಜೀಯವರ ದೇಶಪ್ರೇಮ ವಿವಾದಾತೀತ.. ಬಾಲ್ಯದಿಂದಲೂ ರಾಷ್ಟ್ರಕ್ಕೆ ಅರ್ಪಿಸಿಕೊಂಡ ಬದುಕು ಅದು. ಚಿಕ್ಕಂದಿನಲ್ಲೇ ‘ಮಿತ್ರಮೇಳ’ವನ್ನು ಸ್ಥಾಪಿಸಿ ಗೆಳೆಯರಿಗೆ ರಾಷ್ಟ್ರೀಯತೆಯ ಪಾಠ ಕಲಿಸುತ್ತಿದ್ದವರು

ಅವರು. ಆನಂತರ “ಅಭಿನವ ಭಾರತ”ವನ್ನು ಸ್ಥಾಪಿಸಿ ದೊಡ್ಡ ಕ್ರಾಂತಿಯನ್ನೇ ಹುಟ್ಟುಹಾಕಿದ್ದು ಇತಿಹಾಸ..

ಪ್ರಥಮ ಸ್ವಾತಂತ್ರ್ಯ ಸಂಗ್ರಾಮವನ್ನು ’ಸಿಪಾಯಿ ದಂಗೆ’ ಎಂದು ಹೀಗಳೆಯುತ್ತಿದ್ದವರಿಗೆ, ಅದು ಬರೀ ಜಗಳವಲ್ಲ, ಸ್ವಾತಂತ್ರ್ಯದ ಅಡಿಗಲ್ಲು ಎಂಬುದನ್ನು ಪ್ರಮಾಣ ಸಹಿತವಾಗಿ ನಿರೂಪಿಸಿದ್ದರು. ಅವರ ಆ ಪುಸ್ತಕವೇ, ಪ್ರಕಟಣೆಗೂ ಮುನ್ನವೇ ವಿಶ್ವಾದ್ಯಂತ ನಿಷೇಧಕ್ಕೊಳಗಾಯಿತು.. ಆದರೂ ಆ ಪುಸ್ತಕ ರಹಸ್ಯವಾಗಿ ಭಾರತವನ್ನು ಸೇರಿದ್ದಷ್ಟೇ ಅಲ್ಲ, ಬದಲಾಗಿ ವಿಶ್ವದ ಬಹುತೇಕ ಎಲ್ಲ ಭಾಷೆಗಳಿಗೂ ಅನುವಾದಿತಗೊಂಡಿತು..

ಲಂಡನ್ನಿಗೆ ಬ್ಯಾರಿಸ್ಟರ್ ಪದವಿ ತರಲು ಹೋಗಿದ್ದ ಸಾವರ್ಕರ್, ಮರಳಿ ಬಂದದ್ದು ಕೈತುಂಬ ಕೋಳಗಳನ್ನು ತೊಡಿಸಿಕೊಂಡು..!!

ಅಲ್ಲಿಯೇ, ’ಸಾಗರೋತ್ತರ ಅಭಿನವ ಭಾರತ’ದ ಶಾಖೆಯೊಂದನ್ನು ಸ್ಥಾಪಿಸಿದ್ದರು. ಪಂಡಿತ್ ಶ್ಯಾಮಜಿ ಕ್ರಿಷ್ಣವರ್ಮಾರವರು ಕಟ್ಟಿಸಿದ್ದ ’ಭಾರತ ಭವನ’ದಲ್ಲಿ ಪ್ರತಿನಿತ್ಯ ಸಾವರ್ಕರರ ಅಗ್ನಿಜ್ವಾಲೆಯ ಉಪನ್ಯಾಸಗಳು ನಡಿತಿದ್ವು..ಅದರಿಂದ ಪ್ರೇರಿತರಾಗಿ ಸ್ವಾತಂತ್ರ್ಯಸಂಗ್ರಾಮಕ್ಕೆ ಧುಮುಕಿದ ತರುಣರು ಅಸಂಖ್ಯ.

ಮದನ್ ಲಾಲ್ ಧಿಂಗ್ರ, ವಿ.ವಿ.ಎಸ್.ಅಯ್ಯರ್, ಮೇಡಂ ಕಾಮಾ ಎಲ್ಲರೂ ಸಾವರ್ಕರರ ಗರಡಿಯಲ್ಲಿ ಪಳಗಿದವರೇ..

ಬ್ರಿಟಿಶ್ ಸರ್ಕಾರದ ವಿರುದ್ಧ ಕೆಲಸಗಳನ್ನು ಮಾಡುತ್ತಿದ್ದ ಆರೋಪದ ಮೇಲೆ ಆಂಗ್ಲರು ಅವರನ್ನು ಬಂಧಿಸಿ ಭಾರತಕ್ಕೆ ಕಳಿಸಲು ತಯಾರು ಮಾಡಿದರು.. ಮಾರ್ಗಮಧ್ಯೆ ಹಡಗಿನಿಂದಲೇ ಹಾರಿ, ಮಹಾ ಸಮುದ್ರವನ್ನೇ ಈಜಿ, ಫ಼್ರಾನ್ಸ್ ನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರೂ, ದುರ್ದೈವದಿಂದ ಸಾಧ್ಯವಾಗಲಿಲ್ಲ.

ಭಾರತದಲ್ಲಿ ವಿಚಾರಣೆ ನಡೆದ ಬಳಿಕ ಬರೋಬ್ಬರಿ 50 ವರ್ಷಗಳ ಅಂಡಮಾನಿನ ಕರಿನೀರಿನ ಶಿಕ್ಷೆ ವಿಧಿಸಲಾಯಿತು.. ಅದನ್ನೂ ನಿರಮ್ಮಳವಾಗಿ ಸ್ವೀಕರಿಸಿದ ಸಾವರ್ಕರ್ ಆ ಅಂಡಮಾನಿನಲ್ಲೂ ರಾಷ್ಟ್ರೀಯತೆಯ ಕಂಪನ್ನು ಪಸರಿಸಿದ ವಾಯು..

ತೆಂಗಿನ ನಾರು ಸುಲಿಯುವ, ಗಾನದ ಎಣ್ಣೆ ತೆಗೆಯುವ, ಒಂಟಿಕೋಣೆಯಲ್ಲಿನ ನರಕಯಾತನೆ ಅನುಭವಿಸಿದರೂ, ಬಿಡುವಾದಾಗಲೆಲ್ಲ ಅಲ್ಲಿಯ ಜನರಿಗೆ ದೇಶದ ಪಾಠ ಹೇಳಿಕೊಡುತ್ತಿದ್ದ ಅದ್ಭುತ ವ್ಯಕ್ತಿ..

ಅಂಡಮಾನಿನ ಕೈದಿಗಳಿಗೆ ಉಳಿದವರಂತೆ ಓದಲು, ಬರೆಯಲೂ ಅವಕಾಶವಿರಲಿಲ್ಲ.. ಆದರೆ ಸಾವರ್ಕರ್ ಮಾತ್ರ ಸುಮ್ಮನೆ ಕೂಡುವವರಲ್ಲ. ಹೇಗೋ ಒಂದು ಮೊಳೆಯನ್ನು ಸಂಪಾದಿಸಿ ಅದರಿಂದಲೇ ಜೈಲಿನ ಗೋಡೆಗಳ ಮೇಲೆಲ್ಲಾ ದೇಶಭಕ್ತಿಯ ಕವನಗಳನ್ನು ಕೆತ್ತಿ, ಬೇರೆಯವರೂ ಅದನ್ನು ಓದಿ ದೇಶಪ್ರೇಮವನ್ನು ಬೆಳೆಸಿಕೊಳ್ಳುವಂತೆ ಮಾಡುತ್ತಿದ್ದ ಚಾಣಾಕ್ಷರು. ಒಟ್ಟು ಹತ್ತುಸಾವಿರ ಸಾಲುಗಳ ಕಾವ್ಯವನ್ನು ಆ ಜೈಲಿನಲ್ಲೇ ರಚಿಸಿ, ಬಿಡುಗಡೆಯಾದ ಮೇಲೆ “ಕಮಲಾ” ಎಂಬ ಹೆಸರಿನಲ್ಲಿ ಪ್ರಕಟಿಸಿದರು..

 ಸಾವರ್ಕರ್ ಮತ್ತು ಹಿಂದುತ್ವ..!!

ಸಾವರ್ಕರ್ ಹಿಂದುತ್ವವಾದಿಗಳು ಅನ್ನೋದು ಇತಿಹಾಸವಿದಿತವೆ.. ಆದರೆ ಅದರ ಜೊತೆಗೆ ಅವರು ಅನ್ಯಧರ್ಮಗಳ ಕಟ್ಟಾ ದ್ವೇಷಿಗಳು ಅನ್ನೋ ಆರೋಪವನ್ನ ವಿನಾಕಾರಣ ಮಾಡಲಾಗುತ್ತೆ.

ಸಾವರ್ಕರ್ ಎಂದೂ ಸುಖಾಸುಮ್ಮನೆ ಧರ್ಮಗಳನ್ನ ಹೀಗಳೆದವರಲ್ಲ.. ಗಾಂಧೀಜಿಗೂ ಮುಂಚೆಯೇ “ಹಿಂದೂ-ಮುಸ್ಲಿಂ” ಏಕತೆ ಆಗಬೇಕು ಆನೋದನ್ನ ಮನಗಂಡಿದ್ದವರು. ಅವರ “ಪ್ರಥಮ ಸ್ವಾತಂತ್ರ್ಯ ಸಂಗ್ರಾಮ”ದ ಪುಸ್ತಕ ಓದಿದಾಗಲೇ ಅದರ ಅರಿವಾಗುತ್ತೆ.. ಅಂದು, ನಾನಾ ಸಾಹಿಬ್ ಪೇಶ್ವೆ ಮತ್ತು ಸಹಚರರು, ಹಾಗೂ ಮುಘಲ್ ದೊರೆ ‘ಬಹಾದ್ದೂರ್ ಷಾ’ ಅದೆಂತಹ ಐಕ್ಯತೆಯನ್ನು ಬೆಳೆಸಿ ಒಟ್ಟುಗೂಡಿ ಆಂಗ್ಲರ ವಿರುದ್ಧ ಬಂಡೆದ್ದ ಘಟನೆಯನ್ನು ಹೇಳುವಾಗಲೇ ಅವರ ಆಂತರ್ಯ ಅರ್ಥವಾಗುತ್ತೆ..

ಆದರೆ, ಆ ಐಕ್ಯತೆಗಾಗಿ ನಮ್ಮತನವನ್ನೆಲ್ಲ ಬಲಿಕೊಡಲು ಸಾವರ್ಕರ್ ಎಂದೂ ಸಿದ್ಧರಿರಲಿಲ್ಲ..

‘ಮುಸ್ಲಿಂ ಲೀಗ್’ ಅನ್ನು ಸಾವರ್ಕರ್ ವಿರೋಧಿಸಿದ್ದು ಅದಕ್ಕೇ.. ಮುಸ್ಲಿಂ ಲೀಗ್ ಯಾವತ್ತೂ ಭಾರತದ ಮುಸ್ಲಿಮರ ಪ್ರತೀಕವಾಗಿರಲಿಲ್ಲ.. ತಮ್ಮ ತಮ್ಮ ಸ್ವಾರ್ಥ-ಅಧಿಕಾರಗಳಿಗಾಗಿ ಹಂಬಲಿಸುತ್ತಿದ್ದ ಕೆಲವೇ ಕೆಲವು ನಾಯಕರ ಗೂಡು ಅದು..  ದೇಶ ಒಡೆಯಲೆಂದೇ ಹುಟ್ಟಿದ್ದ ಆ ಸಂಘಟನೆಗೆ ಗಾಂಧೀಜಿ ಎಲ್ಲ ಸವಲತ್ತುಗಳನ್ನು ಕೊಡಲಾರಂಭಿಸಿದರು. ಆದರೆ ಮುಸ್ಲಿಂ ಲೀಗ್ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು??????.. “ಕ್ವಿಟ್ ಇಂಡಿಯಾ” ಚಳುವಳಿಗೆ ಸ್ವತಃ ಲೀಗ್ ವಿರೋಧ ವ್ಯಕ್ತಪಡಿಸಿತ್ತು..

ಇಷ್ಟಾದರೂ ಅಂಥಾ ದೇಶದ್ರೋಹಿಗಳನ್ನು ನೆಹರು ಅಂತಹ ದ್ವಿಮುಖಿಗಳು ಬೆಂಬಲಿಸಿದ್ದರು..

ಆದರೆ ಒಬ್ಬ ಸಾವರ್ಕರ್ ಮಾತ್ರ ಸ್ಪಷ್ಟವಾಗಿ ಹೇಳಿದ್ದರು.. “ನೀವು ಬರುವುದಾದರೆ ನಿಮ್ಮ ಜೊತೆಗೆ, ಬರದಿದ್ದರೆ ನಿಮ್ಮನ್ನು ಬಿಟ್ಟು, ವಿರೋಧಿಸಿದರೆ ನಿಮ್ಮನ್ನು ಮೆಟ್ಟಿ ನಾವು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಲೇ ಇರುತ್ತೇವೆ” ಅಂತ..

ರಾಷ್ಟ್ರವನ್ನು ದುರ್ಬಲಗೊಳಿಸುವ ಎಲ್ಲಾ ಕಾರ್ಯಗಳನ್ನು ಅವರು ವಿರೋಧಿಸಿತ್ತಿದ್ದರು.. ಹೀಗಾಗಿಯೇ ಪುನಃ “ಶುದ್ಧಿ” ಚಳುವಳಿಯನ್ನ ಅವರು ಆರಂಭಿಸಿದ್ದು..

ಮತಾಂತರಕ್ಕೆ ‘ಹಿಂದೂ’ ಧರ್ಮದ ದೋಷಗಳು ಎಷ್ಟು ಕಾರಣವೋ, ಅಷ್ಟೇ ಬಲವಂತ, ಹಿಂಸೆಯೂ ಕಾರಣ ಅನ್ನೋದನ್ನ ಅವರು ಅಂಡಮಾನಿನಲ್ಲಿ ಸ್ವತಃ ಕಂಡಿದ್ದರು..

ಅಲ್ಲಿನ ಪಠಾಣರು ಬಲವಂತವಾಗಿ ಹಿಂದೂಗಳನ್ನ ಮತಾಂತರ ಮಾಡುತ್ತಿದ್ದರೂ ಜೈಲಿನ ಅಧಿಕಾರಿ ‘ಮತಾಂತರಕ್ಕೆ ನಮ್ಮ ಸರ್ಕಾರದಲ್ಲಿ ಅವಕಾಶವಿದೆ’ ಅಂತ ಹೇಳಿ ಸುಮ್ಮನಾಗಿದ್ದ.. ಹಾಗೆ ಹೇಳಿದ ಮರುದಿನವೇ, ಸಾವರ್ಕರ್ ಮತಾಂತರಗೊಂಡಿದ್ದ ಒಬ್ಬನನ್ನು ಕರೆದು ತಂದು, ಅವನಿಗೆ ತುಳಸಿಯ ನೀರನ್ನು ಕುಡಿಸಿ, ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ ತಂದರು..  ಈ ಕಾರ್ಯವನ್ನು ಪ್ರಶ್ನೆ ಮಾಡಿದ ಜೈಲಿನ ಅಧಿಕಾರಿಗೆ, ಸಾವರ್ಕರ್ ನಿಧಾನವಾಗಿಯೇ “ನೀವೇ ಹೇಳಿದ್ದಿರಿ, ನಿಮ್ಮಲ್ಲಿ ಮತಾಂತರಕ್ಕೆ ಅವಕಾಶವಿದೆ ಅಂತ. ಅವರು ಮುಸ್ಲಿಮನಾಗಿ ಮತಾಂತರ ಮಾಡಿದ್ದರು. ನಾನು ಮತ್ತೆ ಹಿಂದೂವಾಗಿ ಮತಾಂತರ ಮಾಡಿದ್ದೇನೆ. ಅದು ತಪ್ಪಲ್ಲ ಅಂದ್ರೆ, ಇದೂ ತಪ್ಪಲ್ಲ.” ಎಂದು ಹೇಳಿದಾಗ ಆ ಆಧಿಕಾರಿ ನಿರುತ್ತರನಾಗಿದ್ದ.

 ಸಾವರ್ಕರ್ ಮತ್ತು ಭಾರತ..!!

ಸಾವರ್ಕರ ಕನಸಿನ ಭಾರತ ವಿಶಿಷ್ಠವೇ ಆಗಿತ್ತು.. ಸಾವರ್ಕರರ ಭಾರತದಲ್ಲಿ ಪ್ರತಿಯೂಬ್ಬರಿಗೂ ಸಮಾನ ಹಕ್ಕು ಕರ್ತವ್ಯಗಳಿದ್ದವು.ಆದರೆ ದೇಶದೊಳಗೆ ಮತ್ತೊಂದು ದೇಶ ನಿರ್ಮಿಸುವ ಹಕ್ಕು ಯಾರಿಗೂ ಇರಲಿಲ್ಲ..

ಸಾವರ್ಕರ್ ಬಹುಮುಂಚೆಯೆ ಸಮಾಜಸುಧಾರಣೆಯ ಮಹತ್ವವನ್ನು ಅರಿತವರು. ಅದಕ್ಕೆಂದೇ ರತ್ನಾಗಿರಿಯಲ್ಲಿ “ಪತಿತಪಾವನ” ಮಂದಿರ ನಿರ್ಮಿಸಿದರು. ಅಲ್ಲಿ ಹಿಂದುಳಿದವರೇ ಪೂಜಾರಿಗಳು. ಅವರೇ ತೀರ್ಥ-ಪ್ರಸಾದ ವಿತರಕರು..ಅದಕ್ಕೆ ಚಕಾರ ಎತ್ತಿದವರೆಲ್ಲಾ ಸಾವರ್ಕರರ ತರ್ಕಬದ್ಧ ವಿಚಾರಗಳ ಎದುರು ಸೋತು, ಸಾವರ್ಕರರನ್ನೇ ಹಿಂಬಾಲಿಸಿದರು.

ಸಾವರ್ಕರರನ್ನ ನಾವು ನೆನಪಿಸಿಕೊಳ್ಳಬೇಕಾದದ್ದು ಅವರ ಸೈನ್ಯಕೀಕರಣವನ್ನ. ಎಷ್ಟೇ ಜನ ವಿರೋಧಿಸಿದರೂ ಸಾವರ್ಕರ್ ಮಾತ್ರ ಹಿಂದೂಗಳಿಗೆ ಸೈನ್ಯ ಸೇರಲು ಕರೆ ನೀಡಿದ್ದರು. ಅದರಿಂದ ಪ್ರೇರಿತರಾದ ಅನೇಕರು ಸೈನ್ಯ ಸೇರಿಯೇ ಬಿಟ್ಟರು.. ಅವರ ಆ ದೂರದೃಷ್ಟಿಯ ಪರಿಣಾಮವಾಗಿಯೇ ಇವತ್ತು ಹೈದರಾಬಾದ್ ಪ್ರಾಂತ, ಕಾಶ್ಮೀರಗಳು ಭಾರತದ ಭೂಪಟದಲ್ಲಿವೆ.. ಆದರೂ ಸಾವರ್ಕರರ ಎಣಿಕೆಯಂತೆ ಆ ಕಾರ್ಯ ಪೂರ್ಣವಾಗಿರಲಿಲ್ಲ..

ಚೈನಾ ಯುದ್ಧದಲ್ಲಿ  ಬೇಜವಾಬ್ದಾರಿಯಿಂದ  ಭಾರತ ಸೋತಾಗ ಆಗಿನ ಸೈನ್ಯಾಧಿಕಾರಿ ಕಾರಿಯಪ್ಪನವರು ಹೇಳಿದ್ದು ಅದನ್ನೇ..”ಒಂದು ವೇಳೆ ಭಾರತವು ಸಾವರ್ಕರರ ಸೈನ್ಯಕೀಕರಣದ ನೀತಿಯನ್ನು ಸ್ವೀಕರಿಸಿ ಅದಕ್ಕನುರೂಪವಾಗಿ ಸಿದ್ಧವಾಗಿದ್ದರೆ ಇಂದಿನ ಅಪ್ರಿಯ ಸ್ಥಿತಿಗೆ ಬರುತ್ತಿರಲಿಲ್ಲ..” ಅಂತ..!!

ಸಾವರ್ಕರ್ ಮತ್ತು ಗಾಂಧೀಹತ್ಯೆ

ಸಾವರ್ಕರ್ ಗಾಂಧೀಹತ್ಯೆಯ ರೂವಾರಿ ಎಂಬೀ ವಾದ, ಗಾಂಧೀಜಿ ಕೊಲೆಯಾದಾಗಿನಿಂದ ಇವತ್ತಿಗೂ ಜೀವಂತವಾಗಿ ಇದೆ.

“ಗಾಂಧೀ ಹತ್ಯೆಯಲ್ಲಿ,ಸಾವರ್ಕರರ ಪಾತ್ರವೇನೂ ಇಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಗಳೂ ಇಲ್ಲ.ಅದೊಂದು ಹುರುಳಿಲ್ಲದ ಆರೋಪ.ಅವರನ್ನು ಬಿಟ್ಟುಬಿಡಿ”- ಅಂತ ಅಂದಿನ ಕಾನೂನು ಸಚಿವರಾಗಿದ್ದ ‘ಶ್ರೀಯುತ ಅಂಬೇಡ್ಕರ’ರು ಸಾರಿ ಸಾರಿ ಹೇಳಿದರೂ, ಪ್ರಧಾನಿ ನೆಹರು ಮಾತ್ರ ಕಿವುಡರಾಗಿದ್ದರು..

ಸಾವರ್ಕರರನ್ನು ಅವಮಾನಿಸಲು ತನಗೆ ಸಿಕ್ಕ ಈ ಅವಕಾಶವನ್ನು, ಆ ‘ಗುಲಾಬಿಯ ಚಾಚಾ’ ಹೇಗೆ ತಾನೇ ಬಿಡಲು ಸಾಧ್ಯವಿತ್ತು.??!!… ಜೈಲಿನಲ್ಲಿಯೂ ಫ್ಯಾನು, ಸೋಫಾಗಳ ಸುಖದಲ್ಲಿ ದಿನ ಕಳೆಯುತ್ತಿದ್ದ ಆ ‘ಗುಲಾಬಿ’ಗೆ, ಅಂಡಮಾನಿನ ಭೀಕರ ಮೃತ್ಯುಕೂಪವನ್ನು ಜಯಿಸಿ ಬಂದ  ‘ವೀರ’ನ ಬಗ್ಗೆ ತಿಳಿದಿರಬೇಕಿತ್ತು ಅನ್ನೋದೇ ನಮ್ಮ ಮೂರ್ಖತನ..!!!

ಸ್ವಾತಂತ್ರಕ್ಕೂ ಮುಂಚೆ,  ದೇಶಕ್ಕಾಗಿ ಕೋರ್ಟಿನ ಕಟಕಟೆ ಹತ್ತಿದ್ದ ಸಾವರ್ಕರರನ್ನು,  ಸ್ವಾತಂತ್ರ್ಯ ಬಂದ ಮೇಲೂ,ಸುಳ್ಳು ಆರೋಪದೊಂದಿಗೆ, ಕಡೆಗೂ ಕೋರ್ಟಿಗೆ, ಜೈಲಿಗೆ ಅಲೆದಾಡಿಸಿದರು.. ಆದರೆ ನ್ಯಾಯಾಲಯ ಅಂತ ಒಂದಿದೆಯಲಾ.. ಅದಂತೂ ಸ್ಪಷ್ಟವಾಗಿ ಸಾವರ್ಕರರನ್ನು ನಿರ್ದೋಷಿ ಅಂತ ಕೂಗಿ ಹೇಳಿತು..

1949 ಫೆಬ್ರವರಿ 10 ರಂದು, ನ್ಯಾಯಾಧೀಶರಾದ ಆತ್ಮಾಚರಣರು ತಮ್ಮ ತೀರ್ಪಿನಲ್ಲಿ ಹೀಗೆ ಹೇಳಿದ್ದಾರೆ.

“There is no reason to support that Vinayak Damodar Savarkar had any hand in what took place at Delhi on 20-1-1948 and 30-1-1938″..

ತೀರ್ಪಿನ ಕಡೆಯಲ್ಲಿ ಮತ್ತೊಮ್ಮೆ ಈ ಅಂಶವನ್ನು ಸ್ಪಷ್ಟಪಡಿಸುತ್ತಾ ಹೀಗೆ ಹೇಳಲಾಗಿದೆ..

“Vinayak Damodar Savarkar is found not guilty on the offences as specified in the charge and is acquitted there under he is in custody and can be released forthwith”..

ಇಷ್ಟು ಸ್ಪಷ್ಟವಾದ ನಿರ್ಣಯವಾಗಿದ್ದರೂ, ಕಂಡೂ ಕುರುಡರಂತೆ ಕೆಲವರು ವರ್ತಿಸುತ್ತಿದ್ದಾರೆ ಅಂದ್ರೆ, ಅವರ ಬಗ್ಗೆ ಒಂದು ಸಣ್ಣ ಮರುಕವನ್ನಷ್ಟೇ ಪಡಬಹುದು..!!!!!!!!!

 

ಸಾವರ್ಕರರ ಬೆಗ್ಗೆ ಅಪಾರ ಅಭಿಮಾನ ಮೂಡುವುದೇ ಈ ಎಲ್ಲ ಕಾರಣಕ್ಕಾಗಿ.. ಅವರದು ಹತ್ತು ಹಲವು ಮುಖ. ಸದಾ ‘ರಾಷ್ಟ್ರ’ದಲ್ಲೇ ‘ಧ್ಯಾನಾ’ಸಕ್ತ ಮನಸ್ಸು ಅವರದು..ಆದರೆ ಅವರ ಜೀವನದ ಒಂದಿಂಚನ್ನೂ ಓದದ, ಓದಿದರೂ ಅರ್ಥೈಸಿಕೊಳ್ಳಲಾಗದವರು ಕೇವಲ  ಆರೋಪಗಳನ್ನು ಮಾಡುವುದರಲ್ಲಿ ಆಶ್ಚರ್ಯವೇನೂ ಇಲ್ಲ..ಆದರೆ, ಬದುಕಿಡೀ ದೇಶಕ್ಕಾಗಿ ಜೀವವನ್ನು ಬಲಿಕೊಟ್ಟ ಅವರಿಗೆ, ಒಂದು ಸಣ್ಣ ಕೃತಜ್ಞತೆಯನ್ನೂ ಹೇಳಲು ಹಿಂಜರಿಯುವಂತಾಯಿತಲ್ಲಾ..! ಅದೇ ಬೇಸರ..!!

ಸಾವರ್ಕರ್ಜೀ ನೀವು ಸದಾ ನಮ್ಮ ಮನದಲ್ಲಿದ್ದೀರಿ..

ನಿಮ್ಮ ತಾರ್ಕಿಕ, ರಾಷ್ಟ್ರೀಯ ವಿಚಾರಗಳು ಎಂದಿಗೂ ನಮಗೆ ಸ್ಫೂರ್ತಿ..

ಸಶಕ್ತ ಭಾರತಕ್ಕಾಗಿ ನಿಮ್ಮ ವಿಚಾರಧಾರೆ ನಮಗೆ ಬೇಕಾಗಿದೆ..

ನಿಮ್ಮ ಅದ್ಭುತ ವ್ಯಕ್ತಿತ್ವದ ಒಂದಂಶವನ್ನು ನಮಗೂ ಹರಸಿ..

ವಂದೇ ಮಾತರಂ………..!!!!

7 Comments Post a comment
  1. subhash ya ra
    Feb 27 2012

    savarkar bagge tilisiddakkae anata dhanyavadgalu.
    inamma dininityada kelsamayavannu deshakkagi meesalidona.
    BHarata uliya bekadare “SWADESHI BALASI, DESH ULISI” EE ABHIYANA ATAYAGATAYA.

    subhash
    yeriyur, yelandur tq, chamarajanagar dist

    Reply
  2. Feb 27 2012

    nijavaada maatu, savarkara obba nishtura deshpremi idaralli yavude anumaanavilla, adare indians heart is sweet but thinks are silly…annuvante illi olledakke horadabekandre kettaddanna nirikshisabekaaguttade, iduve namma mahaan bharat

    Reply
  3. Chethan Mng
    Feb 27 2012

    Bhimsen ji tumba dhanyavadagalu…

    nimma ee barahavannu So called Secularist galu odali embuvude nanna ashaya..

    Dhanyavad..
    Chethan Mng

    Reply
  4. Remesh Aravind
    Feb 27 2012

    ಕಂಗ್ಲಿಷ್’ಗಿಂತ ಇಂಗ್ಲಿಷೇ ಮೇಲು. ಅಭಿಪ್ರಾಯ ಬರೆಯುವವರು ಕನ್ನಡ ಯೂನಿಕೋಡ್ ಬಳಸಿ ಪ್ಲೀಸ್.
    ಇಲ್ಲದೇ ಹೋದರೆ, ಇಂಗ್ಲಿಷ್ ಲಿಪಿಯುಳ್ಳ ಕನ್ನಡ ವಾಕ್ಯ ಓದಲು ಅಪಾರ ತಾಳ್ಮೆ ಬೇಕಾಗುತ್ತದೆ.

    Reply
  5. Feb 27 2012

    @ಭೀಮಸೇನ್ ಪುರೋಹಿತ್.. Thaayi Bharathiyannu avirathavagi archisi, Swathanthryakkagi aneka kashta nashtagalannedurisi, Bharathada swathanthrya sangramakke avismaraneeyavada sahayoga needida Veer Savarkar bagge nimma lekhana mananeeyavagide. Vande Mataram.

    Reply
  6. Satish
    Feb 28 2012

    great to read we need persons like him in todays time to again freedom India

    Reply
  7. ಮಂಜುನಾಥ್.ಆರ್
    Apr 16 2012

    ಮೊಡದೊಳಗಿನ ಸೂರ್ಯ ಈ ಸಾವರ್ಕರರು……..

    Reply

Leave a comment

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s

Note: HTML is allowed. Your email address will never be published.

Subscribe to comments

Follow

Get every new post delivered to your Inbox.

Join 265 other followers