ನಮ್ಮ ಮೇಟ್ರೋದಲ್ಲಿ ಇನ್ನೂ ಸಿಗದ ಕನ್ನಡ
-ರವಿ ಸಾವ್ಕರ್
ವಿಶ್ವ ಗ್ರಾಹಕದ ದಿನದ ವಿಶೇಷ ಲೇಖನ [15ನೇ ಮಾರ್ಚ್]
ಕೆಲ ತಿಂಗಳ ಹಿಂದೆ “ನಮ್ಮ ಮೆಟ್ರೋ” ವಿನ ಅಧಿಕಾರಿಗಳು ದೈನಂದಿನ ಎಲ್ಲ ವ್ಯವಹಾರಗಳಲ್ಲಿ ಕನ್ನಡವನ್ನು ಬಳಕೆ ಮಾಡುವುದಾಗಿ ಹೇಳಿದ್ದರು. ಹಾಗೆಯೇ ಹೊರಗುತ್ತಿಗೆ ಕೊಟ್ಟಿರುವ ಸೆಕ್ಯೂರಿಟಿ ಗಾರ್ಡ್ ಎಜೆನ್ಸಿ ನವರಿಗೆ ಕನ್ನಡ ಓದಲು ಬರೆಯಲು ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ನಿಯಮ ಹಾಕಿದೀವಿ ಅಂತ ಸಹ ಹೇಳಿದ್ದರು. ಮೆಟ್ರೋ ಅಧಿಕಾರಿಗಳ ಹೇಳಿಕೆಗಳ ತುಣುಕು ಹೀಗಿದೆ. ಇವರು ಎಷ್ಟರ ಮಟ್ಟಿಗೆ ತಮ್ಮ ನಿಯಮಗಳನ್ನು ತಾವೇ ಪಾಲಿಸುತ್ತಾ ಇದಾರೆ ಅಂತ ನೋಡೋಣ.
ಅಪಘಾತ ಎಂಬ ಬಹಿರಂಗ ಹತ್ಯೆ
- ಚಾಮರಾಜ ಸವಡಿ

ಪುಣೆಯಲ್ಲಿ ಬುಧವಾರ ಸಂಭವಿಸಿದ ಘಟನೆ ನಿರ್ಲಕ್ಷ್ಯದ ಚಾಲನೆ ಅಥವಾ ರೋಷಾವೇಶದ ಚಾಲನೆ ಕುರಿತ ಪ್ರಶ್ನೆಗಳನ್ನು ಮತ್ತೆ ಎತ್ತಿದೆ. ತಲೆ ಕೆಟ್ಟ ಚಾಲಕನೊಬ್ಬ ಸರ್ಕಾರಿ ಬಸ್ಸನ್ನು ಮನಸೋಇಚ್ಛೆ ಚಾಲನೆ ಮಾಡಿ ೧೦ ಜನ ಅಮಾಯಕರ ಸಾವಿಗೆ ಹಾಗೂ ೩೫ಕ್ಕೂ ಹೆಚ್ಚು ಜನ ಗಾಯಗೊಳ್ಳಲು ಕಾರಣನಾಗಿದ್ದಾನೆ.
ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿರುವುದೇಕೆ?
ನಿಜ, ಎಲ್ಲರಿಗೂ ಅವರದೇ ಆದ ವೈಯಕ್ತಿಕ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ, ಭಾವಾವೇಶಕ್ಕೆ ಒಳಗಾಗಿ ರಸ್ತೆಗಿಳಿಯುವ ಮನಃಸ್ಥಿತಿ ಎಂಥದು? ಅದರಲ್ಲೂ ಪಕ್ಕದಲ್ಲಿ ಹಾಗೂ ಎದುರು ಇರುವ ವಾಹನಗಳನ್ನು ಹಿಂದಿಕ್ಕಿ ಹೋಗಬೇಕೆನ್ನುವ ಚಪಲ ಏಕೆ ಉಂಟಾಗುತ್ತದೆ? ರಸ್ತೆ ಸೂಚನೆಗಳನ್ನು ಉಲ್ಲಂಘಿಸುವ, ಇತರರ ಸರಾಗ ಚಲನೆಗೆ ಅಡ್ಡಿಪಡಿಸುವ ಮನಃಸ್ಥಿತಿ ಏಕೆ ಮೂಡುತ್ತದೆ?
ಹೆಚ್ಚುತ್ತಿರುವ ಒತ್ತಡ
ಇತ್ತೀಚಿನ ದಿನಗಳಲ್ಲಿ ಒತ್ತಡ ಪ್ರಮಾಣ ಹೆಚ್ಚುತ್ತಿದೆ. ಕೆಲಸದ ಸ್ಥಳಗಳ ಒತ್ತಡ ಬಹಳಷ್ಟು ಸಾರಿ ಇಂಥ ತಲೆಕೆಟ್ಟ ನಡತೆಗಳಿಗೆ ಕಾರಣವಾಗಿದ್ದೂ ಉಂಟು. ಮೇಲಧಿಕಾರಿಗಳ ಒತ್ತಡ, ಹಿಂಸೆ, ಸಹೋದ್ಯೋಗಿಗಳ ಕಿರಿಕಿರಿ, ಕೆಲಸದ ಸ್ಥಳದಲ್ಲಿ ಮೂಲಸೌಕರ್ಯಗಳ ಕೊರತೆ, ಅಸ್ತವ್ಯಸ್ತ ಕೆಲಸದ ಅವಧಿ, ರಜೆ ಕೊಡದಿರುವುದು, ಸರಿಯಾದ ವೇತನ/ಸೌಲಭ್ಯ ನೀಡದಿರುವುದು- ಹೀಗೆ ಹಲವಾರು ಕಾರಣಗಳಿಂದ ಒತ್ತಡ ಉಂಟಾಗುತ್ತದೆ. ಇದಕ್ಕೆ ವೈಯಕ್ತಿಕ ಸಮಸ್ಯೆಗಳ ಒತ್ತಡವೂ ಸೇರುತ್ತದೆ. Read more 




