Skip to content

Posts from the ‘ಸ್ಯಾಂಡಲ್ ವುಡ್’ Category

29
May

ಸುಂದರ್ ರಾಜ್ ನೆನಪಿಸಿಕೊಂಡಂತೆ ಅಂಬರೀಷ್ !

- ಶ್ರೀಧರ್ ಜಿ ಸಿ ಬನವಾಸಿ

ಅಂಬರೀಷ್ ಜೊತೆಗಿನ ನನ್ನ ಸ್ನೇಹವನ್ನು ಈ ಮೂಲಕ ವರ್ಣಿಸೋದು ತುಂಬಾ ಕಷ್ಟ. ಅಂಬರೀಷ್ ಜೊತೆಗಿನ ನನ್ನ ಒಡನಾಟ, ಸ್ನೇಹ, ಓಡಾಟ, ಕೆಲಸಮಾಡಿದ್ದು ನನಗೆ ಬೆಟ್ಟದಷ್ಟು ಅಪಾರ ನೆನಪುಗಳು ನನ್ನ ಮನಸ್ಸಿನಲ್ಲಿವೆ. ಆತ ಹೀಗೆ ಅಂತ ಹೇಳೋದು ತುಂಬಾ ಕಷ್ಟ, ಆತನ ತರಹ ನೀವಾಗಬೇಕು ಅಂತಾನೂ ಹೇಳೋದು ತುಂಬಾ ಕಷ್ಟ. ಅಂಬರೀಷನಿಗೆ ಅಂಬರೀಷನೇ ಸಾಟಿ. ಅಂಬರೀಷ್  ಯಾಕೆ ಇಷ್ಟವಾಗ್ತಾರೆ ಅಂತ ಅವರನ್ನ ಇಷ್ಟಪಡೋ ಎಲ್ಲರನ್ನು ಕೇಳಿ ಒಬ್ಬೋಬ್ಬರು ಆತನನ್ನು ಒಂದೊಂದು ರೀತಿಯಲ್ಲಿ ವರ್ಣಿಸುತ್ತಾರೆ. ಹಾಗಾಗಿ ಅಂಬರೀಷ್ ಇಷ್ಟವಾಗಲು ಬಹಳಷ್ಟು ಕಾರಣಗಳಿವೆ. ಕನ್ನಡಚಿತ್ರರಂಗವೇಕೇ, ರಾಜಕೀಯ, ಬೇರೆ ಚಿತ್ರರಂಗ, ರಾಜ್ಯ ರಾಜಕೀಯ, ದೆಹಲಿ ರಾಜಕೀಯದ ವ್ಯಕ್ತಿಗಳು ಕೂಡ ಆತನನ್ನು ಇಷ್ಟಪಡುತ್ತಾರೆ. ಆತನ ವ್ಯಕ್ತಿತ್ವೇ ಅಂತಹದ್ದು. ಅಜಾತಶತ್ರು, ಹುಂಬತನ, ಎದೆಗಾರಿಕೆ, ಬೇರೆಯವರಿಗೆ ಮರುಗುವ ಮನಸ್ಸು ಆತನ ಗುಣಗಾನ ಮಾಡುವುದು ನಿಜವಾಗಿಯೂ ಕಷ್ಟ ಸಾಧ್ಯ. ಇಂತಹ ಅಂಬರೀಷ್ ನನ್ನ ಆತ್ಮೀಯ ಸ್ನೇಹಿತ ಅನ್ನುವುದೇ ನನ್ನ ಹೆಮ್ಮೆಗೆ ಕಾರಣ.

ಅಂಬಿ ‘ನಾನೊಬ್ಬ ಅದ್ಭುತ ನಟ’ ಅಂತ ಎಲ್ಲೂ, ಯಾರ ಹತ್ತಿರವೂ ಹೇಳಿಕೊಂಡವರಲ್ಲ. ಆದರೆ, ವ್ಯಕ್ತಿಯಾಗಿ, ಸಮಾಜದ ಶಕ್ತಿಯಾಗಿ, ಉತ್ತಮ ಮನುಷ್ಯನಾಗಿ ಅಂಬಿಗೆ ಅಂಬಿಯೇ ಸಾಟಿ. ಇಂಥ ವೈವಿಧ್ಯತೆಯ ಮನುಷ್ಯನನ್ನು ಎಲ್ಲಿ ಹುಡುಕಿದರೂ ಸಿಕ್ಕುವುದಿಲ್ಲ. ಆ ದಿನಗಳಲ್ಲಿ ನನಗೆ ಅಂಬಿ ಕಂಡರೆ  ಸಣ್ಣ ಒಳ್ಳೆಯ ಹೊಟ್ಟೆಕಿಚ್ಚಂತೂ ಇತ್ತು, ಏನಪ್ಪಾ ಈ ಮನುಷ್ಯ ಪುಟ್ಟಣ್ಣನಂತಹ ನಿರ್ದೇಶಕರ ಮನಸ್ಸನ ಹೇಗಂಪಾ ಗೆದ್ದು ಬಿಟ್ಟಿದ್ದಾನೆ. ನಾವೇನೋ ಬಾಲಚಂದರ್ ಸಿನಿಮಾಗಳಲ್ಲಿ  ಗುರುತಿಸಿಕೊಂಡುಬಿಟ್ಟಿದ್ವಿ. ಆದರೆ ಪುಟ್ಟಣ್ಣರ ಸಿನಿಮಾಗಳಲ್ಲಿ ನಮಗೆ ಅವಕಾಶ ಸಿಕ್ಕಿರಲಿಲ್ಲ. ಈತನ್ನ ನೋಡಿದ್ರೆ ಪುಟ್ಟಣ್ಣನವರ ಹೆಚ್ಚಿನ ಸಿನಿಮಾಗಳಲ್ಲಿ ಚಾನ್ಸ್ ತಗೋತಾ ಇದಾನೆ. ಪುಟ್ಟಣ್ಣ ಕಣಗಾಲ್ ಗುರುಕೃಪೆಗೆ ಹೆಚ್ಚು ಒಳಗಾದ ನಟ ಅಂಬರೀಶ್ನನ್ನು ಕಂಡಾಗ ಈ ರೀತಿಯ ಅವ್ಯಕ್ತ ಅಸೂಹೆಯ ಪ್ರೀತಿ ಆತನ ಮೇಲಿತ್ತು. ಆದರೆ ಅಂಬರೀಷ್ ತನ್ನ ನಿಷ್ಕಲ್ಮಶ ಪ್ರೀತಿಯಿಂದ ನನ್ನನ್ನು ಗೆದ್ದುಬಿಟ್ಟಿದ್ದ.

Read more »

8
May

ಡಬ್ಬಿಂಗ್ ಅವಶ್ಯಕವೇ?

 ಡಾ ಅಶೋಕ್. ಕೆ. ಆರ್.

ಡಬ್ಬಿಂಗ್ ವಿವಾದ ಮತ್ತೆ ಗರಿಗೆದರಿದೆ. ಕಳೆದ ಹಲವಾರು ತಿಂಗಳುಗಳಿಂದ ‘ಏನ್ ಗುರು’ವಿನಂಥ ಬ್ಲಾಗುಗಳಲ್ಲಿ, ಫೇಸ್ ಬುಕ್ ನಂಥ ಸಾಮಾಜಿಕ ತಾಣಗಳಿಗೆ ಸೀಮಿತವಾಗಿದ್ದ ಈ ಚರ್ಚೆ ಅಮೀರ್ ಖಾನನ ‘ಸತ್ಯಮೇವ ಜಯತೆ’ಯ ಕನ್ನಡದವತರಣಿಕೆಯ ತಯಾರಿಕೆಯ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗಳಲ್ಲೂ ಚರ್ಚೆಗೊಳಪಡುತ್ತಿದೆ. ‘ಸತ್ಯಮೇವ ಜಯತೆ’ಯನ್ನು ಕನ್ನಡದಲ್ಲಿ ಪ್ರಸರಿಸಲು ಮುಂದಾಗಿದ್ದ ಸುವರ್ಣ ವಾಹಿನಿಯು ಚಿತ್ರೋದ್ಯಮದ ‘ಬೆದರಿಕೆ’ ಭರಿತ ವಿರೋಧದ ಹಿನ್ನೆಲೆಯಲ್ಲಿ ಪ್ರಸಾರದಿಂದ ಹಿಂದೆ ಸರಿದಿದೆ. ‘ಪ್ರಾಣ ಹೋದರೂ ಸರಿಯೇ ಡಬ್ಬಿಂಗಿಗೆ ಅವಕಾಶ ಕೊಡುವುದಿಲ್ಲ. ಅಪ್ಪಾಜಿಯ ಮೇಲಾಣೆ’ ಎಂದು ಶಿವರಾಜ್ ಕುಮಾರ್ ಆರ್ಭಟಿಸಿದ್ದಾರೆ. ಪ್ರಜಾವಾಣಿ ಶನಿವಾರದ ಪುಟವೊಂದನ್ನು ಡಬ್ಬಿಂಗಿನ ಚರ್ಚೆಗೆ ಮೀಸಲಿರಿಸಿದರೆ ಸುವರ್ಣ ವಾರ್ತಾ ವಾಹಿನಿಯು ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮದನ್ ಪಟೇಲ್ ಮತ್ತು ಬನವಾಸಿ ಬಳಗದ ಆನಂದ್ ರನ್ನು ಕರೆಸಿ ಜುಗಲ್ ಬಂದಿ ನಡೆಸಿದ್ದಾರೆ.
ಡಬ್ಬಿಂಗ್ ಪರವಾಗಿರುವವರು ವಾದಿಸುವುದೆಂದರೆ ‘ ನಾವು ಗ್ರಾಹಕರು. ಏನು ಪಡೆಯಬೇಕು ಎಂಬುದನ್ನು ನಾವು ನಿರ್ಧರಿಸಬೇಕೆ ಹೊರತು ಚಿತ್ರರಂಗದ ಕೆಲವರಲ್ಲ. ಇತರೆ ರಾಜ್ಯದವರು ತಮ್ಮ ತಮ್ಮ ಮಾತೃಭಾಷೆಯಲ್ಲೇ ಕಾರ್ಟೂನ್, ಡಿಸ್ಕವರಿ, ಪೋಗೋದಂಥಹ ವಾಹಿನಿಗಳನ್ನು, ಆಂಗ್ಲ ಸಿನಿಮಾಗಳನ್ನು ನೋಡುತ್ತಿರುವಾಗ ನಾವ್ಯಾಕೆ ಪರಭಾಷೆಯಲ್ಲೇ ಅವುಗಳನ್ನು ವೀಕ್ಷಿಸಬೇಕು? ಕನ್ನಡಿಗನಾಗಿ ಹುಟ್ಟಿದ್ದಕ್ಕೆ ಕನ್ನಡದಲ್ಲಿ ಚಿತ್ರ – ವಾಹಿನಿಗಳನ್ನು ವೀಕ್ಷಿಸುವ ಸೌಲಭ್ಯದಿಂದ ವಂಚಿತನಾಗಬೇಕೇಕೆ? ಅರ್ಥವಾಗದ ಭಾಷೆಯ ಸಿನಿಮಾಗಳನ್ನು ನೋಡಿ ಅರ್ದಂಬರ್ಧ ತಿಳಿದುಕೊಳ್ಳುವ ಬದಲು ಡಬ್ಬಿಂಗ್ ಮಾಡಿದರೆ ನನ್ನ ಭಾಷೆಯಲ್ಲೇ ನೋಡಿ ಆನಂದಿಸಿ ಸಂಪೂರ್ಣ ಅರಿತುಕೊಳ್ಳುವುದು ಒಳ್ಳೆಯದಲ್ಲವೇ? ತಮಿಳಿನಲ್ಲೇ ಪೋಗೋ ವೀಕ್ಷಿಸುವ ಹುಡುಗನಿಗೆ ತನ್ನ ಭಾಷೆಯ ಬಗ್ಗೆ ಪ್ರೀತಿ ಬೆಳೆಯುತ್ತದೆಯೇ ಹೊರತು ಅದೇ ಕಾರ್ಯಕ್ರಮಗಳನ್ನು ಇಂಗ್ಲೀಷಿನಲ್ಲಿ ನೋಡುವ ನಮ್ಮ ಮಕ್ಕಳಿಗೆ ಕನ್ನಡದ ಬಗ್ಗೆ ಪ್ರೀತಿ ಬೆಳೆಯಲು ಹೇಗೆ ಸಾಧ್ಯ? ನಮ್ಮ ಹಕ್ಕನ್ನು ಕಸಿದುಕೊಂಡಿರುವ ಚಿತ್ರೋದ್ಯಮದ ಈ ನೀತಿ ಸಂವಿಧಾನಬಾಹಿರ’
ಇನ್ನು ಡಬ್ಬಿಂಗ್ ವಿರೋಧಿಸುವವರು ಮುಂದಿಡುವ ವಾದವೆಂದರೆ ‘ಡಬ್ಬಿಂಗ್ ವಿರೋಧಿ ಚಳುವಳಿಗೆ ದಶಕಗಳ ಇತಿಹಾಸವಿದೆ. ಅನಕೃರಂಥ ಹಿರಿಯ ಲೇಖಕರು ಆರಂಭಿಸಿದ ಈ ಚಳುವಳಿ ರಾಜ್ ಕುಮಾರ್ ರಂಥ ಮೇರು ನಟರ ನೇತೃತ್ವದಲ್ಲಿ ಮುಂದುವರಿದು ಕನ್ನಡ ಚಿತ್ರೋದ್ಯಮದ ಉಳಿವಿನ ದೃಷ್ಟಿಯಿಂದ ಡಬ್ಬಿಂಗ್ ನಿಷೇಧಿಸಲಾಗಿದೆ. ಈ ನಿಷೇಧ ತೆರವುಗೊಳಿಸಿದರೆ ಹೆಚ್ಚು ಬಂಡವಾಳದ ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ಕನ್ನಡ ಚಿತ್ರಗಳ ಮಾರುಕಟ್ಟೆಯನ್ನು ಕಿತ್ತುಕೊಳ್ಳುತ್ತದೆ. ಚಿತ್ರೋದ್ಯಮವನ್ನೇ ಅವಲಂಬಿಸಿದ ಜನರ ಹೊಟ್ಟೆಪಾಡಿಗೆ ಚ್ಯುತಿಯುಂಟಾಗುತ್ತದೆ. ಮೇಲಾಗಿ ಪರಸಂಸ್ಕೃತಿ ಬಿಂಬಿಸುವ ಚಿತ್ರಗಳು ಎಂದಿಗೂ ನಮ್ಮವಲಾಗಲಾರವು ಮತ್ತು ನಮ್ಮ ಕನ್ನಡ ಸಂಸ್ಕೃತಿಯನ್ನು ಅವನತಿಗೆ ದೂಡುತ್ತದೆ’ Read more »
28
Apr

ಡಬ್ಬಿಂಗ್ ಎಂಬ ರುಚಿಗೆಟ್ಟ ದಿಢೀರ್ ಅಡುಗೆ ಏಕೆ?

- ರೂಪ ರಾವ್

ಇತ್ತೀಚಿಗೆ ಡಬ್ಬಿಂಗ್ ಬೇಕು ಬೇಡ ಅನ್ನುವ ಹುಯಿಲು ಮತ್ತೆ ಕಾಣ್ತಿದೆ. ರಾಕೇಶ್ ಶೆಟ್ಟಿಯವರ ಲೇಖನ ಓದಿದ ಮೇಲೆ ಇದರ ಬಗ್ಗೆ ನನ್ನದೊಂದಿಷ್ಟು ಅನಿಸಿಕೆ.

ಸ್ವಾಮಿ ಡಬ್ಬಿಂಗ್ ಬೇಡ ಅನ್ನೋದು ಹಳೆಯ ರಾಗವಿರಬಹುದು. ಆದರೆ ಕಾರಣ ಮಾತ್ರ ನಿಚ್ಚಳ… ಅದು ಕನ್ನಡದ ಕಲಾವಿದರಿಗೆ ಆಗೋ ಅನ್ಯಾಯ ಅಷ್ಟೆ. ಅದು ಯಾವತ್ತಿಗೂ ಸಲ್ಲುವ ಕಾರಣ. ಚಿತ್ರರಂಗವನ್ನೇ ನಂಬಿಕೊಂಡು ನಿಂತ ಅಸಂಖ್ಯಾತ ಕಲಾವಿದರಿಗೆ. ನಾಯಕ ,ನಾಯಕಿ ಪಾತ್ರದಿಂದ ಹಿಡಿದು ಪೋಷಕ ಪಾತ್ರಧಾರಿಗಳು, ಛಾಯಾಗ್ರಾಹಕರು, ನಿರ್ದೇಶಕರು,ನೂರಾರು ಜನ ನೇರವಾಗಿ ಇಲ್ಲವೇ ಪರೋಕ್ಷವಾಗಿ ಒಂದು ಚಿತ್ರದ  ಮೇಲೆ ಅವಲಂಬಿತರಾಗಿರುತ್ತಾರೆ.. ಅಷ್ಟೂ ಜನರ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರವಿದು.

ರಿಮೇಕ್ ಚಿತ್ರಗಳ ಆರ್ಭಟಕ್ಕೆ ನಿರ್ದೇಶಕರ ಸೃಜನಾತ್ಮಕತೆ ಈಗಾಗಲೇ ಕಡಿಮೆಯಾಗಿದೆ.ಒಂದು ವೇಳೆ ಡಬ್ಬಿಂಗ್ ನಿಷೇಧ ತೆರವು ಗೊಳಿಸಿದರೆ,ಕನ್ನಡದಲ್ಲಿ ನಿರ್ದೇಶಕ, ಕತೆಗಾರ, ಸತ್ತಂತೆ…..! ಉಪೇಂದ್ರ, ಸೂರಿ, ಶಶಾಂಕ್, ಚಂದ್ರು,ಯೋಗರಾಜ್ ಭಟ್ ರವರಂತೆ ಆಗಬೇಕೆನ್ನುವ ಯುವ ನಿರ್ದೇಶಕರ ಗತಿ ?

ಮತ್ತೆ ಯಾವುದೋ ಪ್ರಾದೇಶಿಕತೆಗೆ ಹೊಂದುವ ಅಲ್ಲಿನ ವಾತಾವರಣಕ್ಕೆ ನಿರ್ಮಿಸಲಾಗಿರುವ ಚಿತ್ರವೊಂದನ್ನ ಹಾಗೆಯೇ ಡಬ್ಬಿಂಗ್ ಮಾಡಿದಲ್ಲಿ ಅದನ್ನು ಕೂತು ನೋಡುವ ಕರ್ಮ ನಮ್ಮದಾಗುತ್ತದೆ.ಪಾತ್ರದ ತುಟಿಯ ಚಲನೆ ಒಂದಾದರೆ. ಹಿನ್ನಲೆ ದ್ವನಿಯ  ಮಾತು ಒಂದಾಗಿರುತ್ತದೆ. ಅದಕ್ಕೂ ಇದಕ್ಕೂ  ಜೋಡಿಸಿ ನೋಡುವ ದರ್ದು ನಮಗೆ ಬೇಕಾ?
Read more »

27
Apr

’ಸತ್ಯ ಮೇವ ಜಯತೇ’ ಅನ್ನಲು ಕನ್ನಡಿಗರು ಅಪ್ಪಣೆ ಪಡೆಯಬೇಕಾ?

- ರಾಕೇಶ್ ಶೆಟ್ಟಿ

ಕಳೆದ ವರ್ಷ ‘ಕನ್ನಡ ಚಲನ ಚಿತ್ರ ಅಕಾಡೆಮಿ’ಯು ಬಿಡುಗಡೆ ಮಾಡಿದ್ದ ವರದಿ ಡಬ್ಬಿಂಗ್ ಪರವಾಗಿತ್ತು.ಆ ವರದಿ ಬಿಡುಗಡೆಯಾದ ತಕ್ಷಣ ಚಿತ್ರರಂಗದ ಬಹುತೇಕ ಮಂದಿ ನಾಗಾಭರಣರ ಮೇಲೆ ಮುಗಿಬಿದ್ದರು.ಕಡೆಗೆ ಅವ್ರು ವರದಿಯನ್ನ ಹಿಂಪಡೆದರು.ಇಲ್ಲಿ ನಷ್ಟ ಆಗಿದ್ದು ಯಾರಿಗೆ? ಕನ್ನಡ ಚಿತ್ರ ರಂಗಕ್ಕಾ? ಅಲ್ಲ … ಕನ್ನಡ ಪ್ರೇಕ್ಷಕನಿಗೆ.

ಇಷ್ಟಕ್ಕೂ, ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”

ಡಬ್ಬಿಂಗ್ ಯಾಕೆ ಬೇಡ ಅಂದ್ರೆ, ಅದರಿಂದ ಕನ್ನಡದ ಮಕ್ಕಳಿಗೆ ಕೆಲಸವಿರೋದಿಲ್ಲ ಅಂತ ಹಳೆ ಕತೆ ಹೇಳ್ತಾ ಇದ್ದಾರೆ.ಈಗ ಬರ್ತಾ ಇರೋ ಅದಿನ್ನೆಷ್ಟು ಚಿತ್ರಗಳಲ್ಲಿ ಕನ್ನಡದ ಕಲಾವಿದರು,ತಂತ್ರಜ್ಞರು,ನಟಿಯರು,ಪೋಷಕ ನಟರು,ಖಳನಟರು,ಸಂಗೀತ ನಿರ್ದೇಶಕರು,ಗಾಯಕ-ಗಾಯಕಿಯರಿಗೆ ಕೆಲ್ಸ ಇದೆ?,ಎಲ್ಲದಕ್ಕೂ ಬೇರೆ ಭಾಷೆಯವರೇ ಬೇಕು.ಆಗ ಮಾತ್ರ ಯಾರು ಕನ್ನಡ ಮಕ್ಕಳಿಗೆ ಅನ್ಯಾಯವಾಗ್ತಾ ಇದೆ ಅಂತ ಉಸಿರೆತ್ತುವುದಿಲ್ಲ. ಭಾಷೆಯ ಉಚ್ಚಾರಣೆ ಬರದೆ ಇದ್ರೂ ನಮಗೆ ಬಾಲಿವುಡ್ ಗಾಯಕರು ಬಂದು ಉಸಿರು ಕಟ್ಟಿ ಹಾಡ್ಬೇಕು,ಬಾಯಿ ಅಲ್ಲಾಡಿಸಲು ಬರದ ಖಳ ನಟರು ಅಲ್ಲಿಂದಲೇ ಬರಬೇಕು.ಒಟ್ಟಿನಲ್ಲಿ ಬೇರೆ ಕಡೆಯಿಂದ ಜನ ಆಮದಾದಷ್ಟು ಚಿತ್ರ ಅದ್ದೂರಿ ಅನ್ನೋ ಭ್ರಮೆ! ಈಗಲೂ ಕನ್ನಡದ ಮಕ್ಕಳಿಗೆ ಆಗುತ್ತಿರುವುದು ಅನ್ಯಾಯವೇ ಅಲ್ಲವೆ?

ಇಷ್ಟಕ್ಕೂ ಡಬ್ಬಿಂಗ್ಗೆ ಅವಕಾಶ ಕೊಟ್ರೆ ಎಲ್ರೂ ಅದೇ ಮಾಡ್ತಾರೆ ಅನ್ನೋ ಅತಂಕವಿದ್ದರೆ,ಅದಕ್ಕಾಗಿ ಕೆಲ ನೀತಿ ನಿಯಮಗಳನ್ನ ಮಾಡಿಕೊಳ್ಳಬಹುದು. ಡಬ್ಬಿಂಗ್ ಮಾಡುವ ಹಕ್ಕನ್ನ ಮುಕ್ತವಾಗಿಡದೆ ‘ವಾಣಿಜ್ಯ ಮಂಡಳಿ’ ಯೇ ಆಯ್ದ ಚಿತ್ರಗಳನ್ನ ಡಬ್ಬಿಂಗ್ ಮಾಡಿ ಬಿಡುಗಡೆ ಮಾಡಬಹುದು.ಹಾಗೆ ಡಬ್ಬಿಂಗ್ ಮಾಡಿದ ಸಿನೆಮಾಗಳಲ್ಲಿ ನಮ್ಮ ನೇಟಿವಿಟಿ ಇಲ್ಲ ಅಂದ್ರೆ ಅವು ಗೆಲ್ಲೋದು ಅಷ್ಟರಲ್ಲೇ ಇದೆ,ಅದರಿಂದ ಯಾವ ಅಪಾಯವು ಇಲ್ಲ. ವಿಷಯ ಹೀಗಿರುವಾಗ ಇನ್ನು ಆಗಿನ ಕಾಲದ ಕತೆಯನ್ನೇ ಹೇಳಿ ಕನ್ನಡ ಪ್ರೇಕ್ಷಕರಿಗೆ ಒಳ್ಳೊಳ್ಳೆ ಚಿತ್ರವನ್ನ ನಮ್ಮ ಭಾಷೆಯಲ್ಲಿ ನೋಡದಂತೆ ಚಿತ್ರ ರಂಗದ ಕೆಲವರು ಯಾಕೆ ಮಾಡುತಿದ್ದಾರೆ!?, ಹಾಗೆ ಡಬ್ಬಿಂಗ್ನಿಂದ ಮುಳುಗಿ ಹೋಗುವಷ್ಟು ‘ಕನ್ನಡ ಚಿತ್ರ ರಂಗ’ ದುರ್ಬಲವಾಗಿಲ್ಲ.೭೫ ವರ್ಷದ ಇತಿಹಾಸವಿರುವ ಚಿತ್ರ ರಂಗದ ಮಾರುಕಟ್ಟೆ ವ್ಯಾಪ್ತಿ ಚಿಕ್ಕದು ಅಂತ ಇನ್ನ ಎಷ್ಟು ದಿನ ಹೆದರ್ತಿರ ಸ್ವಾಮೀ?

Read more »

31
Mar

ಶಿಕಾರಿ ಮಿಸ್ ಆಯ್ತು..!

- ಶ್ರೀಧರ್ ಜಿ.ಸಿ ಬನವಾಸಿ

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣನಾಯಕನಾಗಿ ಅಭಿನಯಿಸಿದ ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟ್ಟಿ ಅಭಿನಯದ `ಶಿಕಾರಿ’ ಬಿಡುಗಡೆಯ ಭಾಗ್ಯವನ್ನು ಕಂಡಿದೆ. ಪ್ರಶಸ್ತಿ ಪುರಸ್ಕೃತ
`ಗುಬ್ಬಚ್ಚಿಗಳು’ಸಿನಿಮಾ ಖ್ಯಾತಿಯ ಅಭಯಸಿಂಹ ನಿರ್ದೇಶಕರು. ಚಿತ್ರ ನೋಡಿಬಂದ ಮೇಲೆ ನನಗೆ ಚಿತ್ರದ ಬಗ್ಗೆ ನನಗನಿಸಿದ ಅಂಶಗಳು:
ಇಡೀ ಚಿತ್ರಕ್ಕೆ ಮುಮ್ಮಟ್ಟಿ ಬೇಕಿತ್ತೋ, ಅಥವಾ ಇಲ್ಲವೋ ಅಂತ ನಾವು ತರ್ಕ ಹಾಕಿ ನೋಡಿದಾಗ ಮುಮ್ಟಟ್ಟಿ ಬದಲು ನಮ್ಮ ಕನ್ನಡದಲ್ಲಿಯ ಯಾವುದಾದರೂ ಹೀರೋಗಳನ್ನು ಬಳಸಿಕೊಳ್ಳಬಹುದಿತ್ತು ಎಂಬುದನ್ನು  ಒಂದೇ ಮಾತಿನಲ್ಲಿ ಹೇಳಬಹುದು. ಇಲ್ಲವೇ ಕನ್ನಡದಲ್ಲಿರುವ ದೇವರಾಜ್ ರಂತಹ ಜನಪ್ರಿಯ ಗಡಸು ದನಿಯ ಕಲಾವಿದರು ಮುಮ್ಮುಟ್ಟಿ ಪಾತ್ರಕ್ಕೆ ದನಿ ನೀಡಬಹುದಿತ್ತು. ಚಿತ್ರದಲ್ಲಿ ಅದು ಆಗಲಿಲ್ಲ. ಅದಕ್ಕೆ ಕಾರಣ ಕೂಡ ಸ್ಟಷ್ಟವಾಗಿದೆ, ಮುಮ್ಮಟ್ಟಿ ಕನ್ನಡದಲ್ಲಿ ಮಾತನಾಡಲು ರಿಸ್ಕು ತೆಗೆದುಕೊಂಡಿದ್ದು, ಕೊನೆಪಕ್ಷ ಮಾತನಾಡಿಸಿದ್ದರೂ, ಡಬ್ಬಿಂಗ್ನಲ್ಲಿ ನಿರ್ದೇಶಕರು ಸ್ವಲ್ಪ ಹುಷಾರಾಗಿರಬೇಕಿತ್ತು.ಮುಮ್ಮಟ್ಟಿ ಕನ್ನಡ ಮಾತನಾಡುತ್ತಿದ್ದಾರೋ, ಮಲಯಾಳಂ ಮಾತನಾಡುತ್ತಿದ್ದಾರೋ ಎಂಬುದು ಅರ್ಥವಾಗುವುದೇ ಇಲ್ಲ. ಏಷ್ಟೋ ಸೀನ್ಗಳಲ್ಲಿ ಅವರು ಶಬ್ಗಗಳನ್ನು ನುಂಗಿ ಮಾತನಾಡುತ್ತಾರೆ. ಅವರು ಏನು ಹೇಳಿದರು ಅನ್ನುವುದೇ ಅರ್ಥವಾಗುವುದೇ ಇಲ್ಲ.  ಮುಮ್ಮಟ್ಟಿ ಮಾತನಾಡಿದ ಕನ್ನಡ,ನಮ್ಮ ಕನ್ನಡದವರಿಗೆ ಅರ್ಥವಾಗುವುದು ತುಂಬಾ ಕಷ್ಟ.  ಅದೇನಿದ್ದರೂ ಮಲಯಾಳಂ ಶೈಲಿಯಲ್ಲಿ ಕನ್ನಡ ಮಾತನಾಡುವ ಮಲ್ಲುಗಳಿಗೆ ಮಾತ್ರ ಅರ್ಥವಾದೀತು. ಹೆಚ್ಚಿನವರಿಗೆ ಇದು ಇಷ್ಟವಾಗಲೂಬಹುದು.
27
Mar

ಕನ್ನಡಮ್ಮನ ಹೆಮ್ಮೆಯ ಪುತ್ರನೂ ಅಣ್ಣಾವರ ಮಗನೂ

- ಜಿ.ವಿ ಜಯಶ್ರೀ

ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ,

ಇದು ಎಂಬತ್ತರ ದಶಕದ ಹಾಡು. ತುಂಬಾ ಇಷ್ಟ ಪಟ್ಟು ಈಗಲೋ ಕೇಳುವಂತಹ ಸುಂದರ ಗೀತೆ.ಈ ಚಿತ್ರದಲ್ಲಿ ನಟಿಸಿದ ಪುನೀತ್ ರಾಜ್ ಕುಮಾರ್ ನಟನೆಯಷ್ಟೇ ಮನಸೆಳೆದ ಸಂಗತಿ ಅಂದ್ರೆ ಅವರು ಹಾಡಿದ ಈ ಹಾಡು .
ಮೊದಲಿನಿಂದ ವೀಕ್ಷಕ ದೇವರ ಮನ ಸೆಳೆದ ಕಲಾವಿದ ಪುನೀತ್. ಅವರ ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಖುದ್ದು ಪುನೀತ್ ವಿಷಯದಲ್ಲಿ ತೋರುವ ಅಭಿಮಾನ ಅಪಾರ.

ಈತನ ಬಗ್ಗೆ ತಮಗೆ ತುಂಬಾ ಹೆಮ್ಮೆ ಇದೆ. ಅಪ್ಪಾಜಿಯ ನಂತರ ಬಣ್ಣ ಹಚ್ಚಿದ (ಪೂರ್ಣಿಮಾ ಸಹ ಹಚ್ಚಿದ್ದಾರೆ ) ಪುನೀತ್ ತಮಗೆ ಮಾದರಿ ಎನ್ನುವ ಮಾತು ಹೇಳಿರುವುದು ಅವರು ತಮ್ಮನ ಮೇಲೆ ಇಟ್ಟಿರುವ ಪ್ರೀತಿಯನ್ನು ಎತ್ತಿ ತೋರುತ್ತದೆ.

ಶಿವಣ್ಣ ಜೀ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮ ನಡೆಸಿ ಕೊಟ್ಟಾಗ ಅಪಾರ ಸಂಖ್ಯೆಯ ವೀಕ್ಷಾಕಾಭಿಮಾನ ಹೊಂದಿದ್ದರು.ಆ ಕಾರ್ಯಕ್ರಮದ ಮೂಲಕ  ಹೆಚ್ಚು ಗೊತ್ತಾದರೂ ಶಿವಣ್ಣ. ಕಾರಣ ಇಷ್ಟೇ ಸಿನಿಮಾದಲ್ಲಿ ಗಿಣಿಗೆ ಕಲಿಸಿದ ಪಾಠದಂತೆ   ಡೈಲಾಗ್ ಹೇಳುವ ಶಿವಣ್ಣನಿಗಿಂತ  ತನ್ನ ಹೃದಯದಿಂದ ಮಾತನಾಡಿದ ಶಿವಣ್ಣ ಇಷ್ಟ ಆಗಿತ್ತು.. ಮಾತಲ್ಲಿ ಯಾವುದೇ ರೀತಿಯ ನಾಟಕೀಯತೆ, ಕಲಿತ ಮಾತು ಇರದೇ ಸಾಮಾನ್ಯ ಮನೆಕನ್ನಡ ಮಾತಾಡಿ , ತಮ್ಮ ಸರಳತೆ, ವಿಶೇಷ ವ್ಯಕ್ತಿತ್ವ್ದದಿಂದ ಗೆದ್ದಿದ್ದರು.

Read more »

24
Feb

ಚಿಂಗಾರಿ

- ಫಿಲ್ಮಿ ಪವನ್

ಫೋರಂ ಮಾಲ್ ಅಲ್ಲಿ ಮಾಸ್ ಸಿನಿಮಾ ನೋಡೋದಂದ್ರೆ ಮಜಾನೆ ಇರಲ್ಲ ಬಿಡಿ, ಸುತ್ತ ಮುತ್ತ ಆಂಟಿಗಳು, ಅಂಕಲ್ಗಳು, ಲವರ್ಸ್ಗಳು. ಅದ್ರಲ್ಲು ದರ್ಶನ್ ಸಿನಿಮಾ ಅಂದ್ರೆ ಇನ್ನು ಉರ್ದೋಗುತ್ತೆ, ಪಂಚಿಂಗ್ ಡೈಲಾಗು ಬಂದ್ರೆ ಒಂದು ಶಿಲ್ಲೆ ಹೊಡ್ಯೋದು ಇಲ್ಲ ಯಾರುವೆ :( ಆದ್ರೆ ಏನ್ ಮಾಡೋದು ಈ ಹುಡುಗೀರು ಬಿಡ್ಲಿಲ್ಲ. ಫೋರಂ ಪಿ.ವಿ.ಅರ್. ಅಂತ ಚಿಂಗಾರಿ ಗೆ ಕರ್ಕೊಂಡೋಗಿದ್ರು ಮೊದ್ಲೇ ಬಾಸ್ ಸಿನಿಮ, ಎಲ್ಲಾದ್ರು ಮಾಸ್ ಆಗಿರೋ ಚಿತ್ರಂದಿರದಲ್ಲಿ ಕೂತು ಮಾಸ್ ಆಗಿ ಅರ್ಧ ಕಿಲೋ ಚಿಪ್ಸ್ ಮತ್ತೆ ೨ ಲೀಟರ್ ಪೆಪ್ಸಿ ೧ ಪ್ಯಾಕ್ ಕಿಂಗ್ ಇಟ್ಕೊಂಡು ಸಿನಿಮಾ ನೋಡೊಣ ಒಳ್ಳೊಳ್ಳೆ ಪಂಚಿಂಗ್ ಡೈಲಾಗ್ ಹೊಡೆದಾಗ ಶಿಲ್ಲೆ ಹೊಡ್ಯಾಣ ಮಾಸ್ ಸಾಂಗ್ ಗೆ ಪರದೆ ಬಳಿ ಹೋಗಿ ಸ್ಟೆಪ್ ಹಾಕೋಣ ಅನ್ನೋ ಆಸೆಗೆಲ್ಲಾ ತಣ್ಣೀರು ಬಿದ್ದಿತ್ತು.ಇನ್ನೊಂದು ವಿಷಯ ಅಂದ್ರೆ ಟಿಕೆಟ್ ಬೆಲೆ ಬೇರೆ ಜಾಸ್ತಿ ಕಣ್ರಿ :(

ಈ ಸಿನಿಮಾದ ಒಪೆನಿಂಗೇ ವಿಶೇಷವಿತ್ತು, ಯಾಕಂದ್ರೆ ಯಾವುದೇ ಸಿನಿಮಾದ ಟೈಟಲ್ ಕಾರ್ಡಲ್ಲಿ ತಾಂತ್ರಿಕ ವರ್ಗದವರ ಹೆಸರು ಮಾತ್ರ ಹಾಕ್ತಿದ್ರು. ಆದ್ರೆ ಈ ಸಿನಿಮಾದಲ್ಲಿ ಅವರ ಫೋಟೊ ಸಹ ನೋಡಿ ಖುಶಿ ಆಯ್ತು.ಪ್ರತಿಯೊಬ್ಬ ತಾಂತ್ರಿಕ ವರ್ಗದವರ ಭಾವಚಿತ್ರ ಅವರ ಹೆಸರಿನೊಂದಿಗೆ ಬಂದಾಗ ಖುಶಿ ಆಯ್ತು. ತಾಂತ್ರಿಕ ವರ್ಗದವರಿಗೆ ಅಷ್ಟು ಪ್ರಾಮುಖ್ಯತೆ ಕೊಟ್ಟಿರುವ ನಿರ್ದೇಶಕ ಹರ್ಷ ಅವರಿಗೆ ಕುಡೋಸ್. Read more »

10
Feb

ಜೊಳ್ಳೇ ಎಲ್ಲ – ಇದು ಸಿದ್ಲಿಂಗು ಸಿನಿಮಾ ಕಣ್ಲಾ

ಫಿಲ್ಮಿ ಪವನ್

ಬಹಳ ದಿನದಿಂದ ಸಿದ್ಲಿಂಗು ನೋಡ್ಬೇಕು ಅಂತ ಕಾದಿದ್ದೆ, ಮೆಜೆಸ್ಟಿಕ್ ತನಕ ಹೋಗಿ ಪಿಕ್ಚರ್ ನೋಡೋ ಅಷ್ಟು ಸಮಯ ಸಿಕ್ಲೆ ಇಲ್ಲ, ಅದಕ್ಕೆ ನಮ್ಮೂರಲ್ಲೇ ಹಾಕಲಿ ಅಂತ ಕಾಯ್ತಾ ಇದ್ದೆ. ಬೆಳಿಗ್ಗೆ ಆಫಿಸ್ ಗೆ ಹೋಗೋವಾಗ ಬ್ಹೊಜಣ್ಣನ ಟೀ ಅಂಗಡಿ ಹತ್ರ ಪೋಸ್ಟರ್ ನೋಡಿ ಸಿಕ್ಕಾಪಟ್ಟೆ ಖುಷಿ ಆಗೋಯ್ತು. ಸಂಜೆ ಏನೇ ಅಗಲಿ ಮಿಸ್ ಮಾಡಬಾರದು ಅಂತ ನಮ್ ಮ್ಯಾನೇಜರ್ ಗೆ ಹೇಳದೇನೆ ಅರ್ಧ ಘಂಟೆ ಮುಂಚೆನೇ escape ಆಗ್ಬಿಟ್ಟೆ. ಆಫಿಸ್ ಗೇಟ್ ಇಂದಾನೆ ದೋಸ್ತ್ ಯಾದವ್ ಗೆ ಫೋನ್ ಹಾಕಿ ಮಗಾ bioscope ಅಂದೆ. ಅವ್ನು ನಾನೆ ಫೋನ್ ಮಡ್ಬೇಕಂದಿದ್ದೆ ಬಾ ಥಿಯೇಟರ್ ಹತ್ರ ಸಿಕ್ತೀನಿ ಅಂದ, ಆಟೋ ಬಸ್ಸು ಎಲ್ಲ ಹಿಡ್ಕೊಂಡು ೫ ನಿಮಿಷ ಮುಂಚೆನೇ ಅರ್ಧ ಪ್ಯಾಕ್ ಕಿಂಗ್ ಮತ್ತೆ ೨೦೦ gm ಚಿಪ್ಸ್ ತೊಗೊಂಡು ಗೇಟ್ ಮುಂದೆ ಹಾಜರ್ ಆದೆ. ಆಗಲೇ ಯಾದವ್ ಟಿಕೆಟ್ ತೊಗೊಂಡಿದ್ದ ಒಳಗೋಗಿ ಮರದ ಬೆಂಚ್ ಮೇಲೆ ಕೂತಿದ್ದೆ ಕೂತಿದ್ದು bioscope ಶುರು ಆಗೋಯ್ತು.

petrOmax ಪುರಾಣ ಹೇಳ್ಕೊಂಡು ಶುರು ಆಗೋ ಕಥೆ, ಪುಟ್ಟ ಹುಡುಗನ ಕಾರ್ ಪ್ರೀತಿ ತೋರುಸ್ತ ಕಾರ್ ಗಾಗಿ classmate ನ dove ಹೊಡೆಯೋ ತನಕ ತಂದು ನಿಲ್ಸುತ್ತೆ, ನಿಜಕ್ಕೂ dove ಹೊಡ್ಯೋದು ಕಾರ್ ಗೋಸ್ಕರ ಆದ್ರು ನಿಜವಾಗೆ ಪ್ರೀತಿ ಮುಡಿರುತ್ತೆ. ಆದ್ರೆ ಆ ಪ್ರೀತಿ ಬಹಳ ದಿನ ಉಳ್ಯಲ್ಲ. ಅದೇ ನೋವಲ್ಲೆ ಬೆಳೆದ ಸಿದ್ಲಿಂಗು ಕಾರ್ ಗೋಸ್ಕರ ಅಂತಾನೆ ಟೀಚರ್ ಹಿಂದಿಂದೆ ತಿರ್ಗಾಡ್ತಾನೆ, ಗಂಡ ಇಲ್ಲದ ಟೀಚರ್ ಸಿದ್ಲಿಂಗು ನ ಆಕಸ್ಮಿಕವಾಗಿ ಉಪಯೋಗಿಸಿಕೊಂಡುಬಿಡುತ್ತಾಳೆ. ಅಷ್ಟರಲ್ಲೇ ಮತ್ತೊಂದು ಆಕಸ್ಮಿಕ, ಸಿದ್ಲಿಂಗು ತಂದೆ ತಾಯಿ ನ ಕಳ್ಕೊತಾನೆ. ಇನ್ನೂ ಓದಿ ದಬ್ಬಕೊದೇನು ಅಂತ ದುಡಿಮೆ ಮಾಡಕ್ಕೆ ಸಿಟಿ ಗೆ ಪ್ರಯಾಣ. ಅಲ್ಲಿಂದ ಕಾರ್ ಪ್ರೀತಿ ಬದುಕಲ್ಲಿ ಎನೆನಲ್ಲ ಮಾಡ್ಸುತ್ತೆ. ಯಾರ ಯಾರನ್ನೆಲ್ಲಾ ಪರಿಚಯ ಮಾಡ್ಸುತ್ತೆ, ಆಕಸ್ಮಿಕಗಳು ಹೇಗೆಲ್ಲ ನಡೆಯುತ್ತೆ ಅನ್ನೋದೇ ಸೀಡ್ಲೆಸ್ಸ್ ಕಡ್ಲೆಕಾಯಿ ಸಿದ್ಲಿಂಗು ಪುರಾಣ.

Read more »

10
Feb

ಸಿದ್ಲಿಂಗು – ಚಿತ್ರ ವಿಮರ್ಶೆ

-ಹೇಮಾ ಪವಾರ್

ತನ್ನ ಪೋಲಿ ಹುಡುಗಾಟಿಕೆಯ ಪ್ರೋಮೋಗಳಿಂದಲೇ ಜನಪ್ರಿಯತೆ ಗಳಿಸಿದ್ದ ತೀವ್ರ ನಿರೀಕ್ಷೆಯ ಚಿತ್ರ ಸಿದ್ಲಿಂಗು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿವೆ. Stereotype ಸಿನಿಮಾಗಳಿಂದ ಬೇಸತ್ತ ಜನರಿಗೆ ಒಂದು ಸಾಧಾರಣ ಕತೆಯನ್ನು ವಿಭಿನ್ನವಾಗಿ ಹೇಳಲಾಗಿರುವ ಕನ್ನಡದ ಚಿತ್ರಗಳಲ್ಲೊಂದು. ಕತೆಯ ಮಾದರಿಯಿಂದ ಹಿಡಿದು, ನಿರೂಪಣೆ, ಸಂಭಾಷಣೆ ಹಾಗು ನಟನೆಯಲ್ಲೂ ಕೂಡ ಹೊಸತನ್ನು ಹೊತ್ತು ತಂದಿರುವಂತಹ ಚಿತ್ರವೂ ಹೌದು.

ಚಿತ್ರದ ಕತೆಯನ್ನು ನಾಯಕ narrate ಮಾಡುತ್ತ ಹೋಗುತ್ತಾನೆ, ಆತ ಹುಟ್ಟಿದ್ದು, ಆತನ ಅಪ್ಪ ಚಿಕ್ಕಮ್ಮ, ಸ್ಕೂಲು, ಸ್ಕೂಲಿನ ಗೆಳತಿ, ಕಾರಿನ ಬಗ್ಗೆ ಆತನಿಗೆ ವ್ಯಾಮೋಹ ಬೆಳೆದು ಬಂದ ರೀತಿ. ಕಾರಿದ್ದದ್ದಕ್ಕೆ ಹತ್ತಿರವಾದ ಲೆಕ್ಚರರ್, ಸಲೀಸಾಗಿ ಎಂಬಂತೆ ಆಕೆಯೊಂದಿಗೆ ಕಾರಿನಲ್ಲೇ ನಡೆದು ಹೋಗುವ ದೈಹಿಕ ಸಂಪರ್ಕ, ಹಠಾತ್ತನೆ ಸತ್ತು ಹೋಗುವ ಅಪ್ಪ ಅಮ್ಮ, ಒಂಟಿಯಾಗಿ ಬೆಳೆಯುವ ಆತ, ಕಾರು ಕೊಳ್ಳಬೇಕೆಂಬ ಆತನ ಕನಸು, ಕಾರ್ ಮಾಲೀಕನ ಒಂದಷ್ಟು ಎಮೋಷನ್ಸು, ಬಡ್ಡಿಗೆ ದುಡ್ಡು ಕೊಡುವ ವ್ಯಾಪಾರಿ, ಅದರಿಂದ ಪರಿಚಯವಾಗುವ ನಾಯಕಿ, ಆಕೆಯೊಂದಿಗಿರುವ ಆಯಾ, ಧಿಡೀರ್ ಎಂದು ಮತ್ತೆ ಕಾಣಿಸಿಕೊಳ್ಳುವ ಲೆಕ್ಚರರ್ ’ತುರುವೇಕೆರೆ ಆಂಡಾಳಮ್ಮ’, ಆಕೆಯನ್ನು ನೋಡಿ ಕಾರಿನ ದಾಖಲೆಗಳನ್ನು ಕಳೆದುಕೊಳ್ಳುವ ನಾಯಕ, ಕಾರ್ ಮಾಲೀಕನ ಮಗನ ವಿಲನ್ ರೂಪದ ಎಂಟ್ರಿ, ಆತನಿಗೊಬ್ಬ ಇನ್ಸ್ ಪೆಕ್ಟರ್ ಶತ್ರು, ಇನ್ಸ್ ಪೆಕ್ಟರ್ ಗೆ ಹತ್ತಿರವಾಗುವ ಸಿದ್ಲಿಂಗು ಮತ್ತು ನಾಯಕಿ, ಕ್ಲೈಮ್ಯಾಕ್ಸ್ ನಲ್ಲಿ ವೈರಿ ನಾಶಕ್ಕಾಗಿ ಇನ್ಸ್ ಪೆಕ್ಟರ್ ಹಾಗು ಸಿದ್ಲಿಂಗು ಹೊಡೆದಾಡಬೇಕಾದರೆ, ಅಚಾತುರ್ಯದಿಂದ ಸತ್ತು ಹೋಗುವ ನಾಯಕಿ. ಕ್ಲೈಮ್ಯಾಕ್ಸ್ ಅನ್ನು ಪ್ರೇಕ್ಷಕರನ್ನು ದಿಗ್ಬ್ರಮಿಸಲೆಂದೇ ಮೂಡಿಸಿರುವುದು ತಿಳಿದರು ಇಡೀ ಕತೆ ಹಾಗು ಅದರ ರೀತಿ ಕ್ಲೈಮ್ಯಾಕ್ಸನ್ನು ಜಸ್ಟಿಫೈ ಮಾಡುವುದಿಲ್ಲ. ಹಾಗಾಗಿ ಅದು ಅಲ್ಟಿಮೇಟ್ ಶಾಕ್ ಎನಿಸದೆ ಅತೀ ಭಾವುಕವೂ ಎನಿಸದೆ ಪ್ರೇಕ್ಷಕರ ಮನಸ್ಸಿನಲ್ಲಿ ನಿಲ್ಲಲು ಸೋಲುತ್ತದೆ.

Read more »

3
Feb

ಪ್ರಪಾತ……ವಿಮಾನಯಾನ ಬಲುಪ್ರಾಚಿನ….!!!

 - ಫಿಲ್ಮಿ ಪವನ್

ವಿಮಾನ ಎಂದರೆ ಏನೋ ಅಚ್ಚರಿ, ರಾಮಾಯಣದಲ್ಲಿ ಪುಷ್ಪಕ ವಿಮಾನ ಇತ್ತಂತೆ. ಕಾಡಿಂದ ಸೀತೆಯನ್ನು ಅದರಲ್ಲೇ ರಾವಣ ಎತ್ಕೊಂದೋಗಿದ್ದಂತೆ. ಇವೆಲ್ಲ ಕೇಳ್ದಾಗ ನಮ್ಮೋರು ವಿದೆಶಿಯರಿಗಿಂತ ಮುಂಚೆಯೇ ವಿಮಾನ ಕಂಡುಹಿಡಿದಿದ್ರ ಅಂತ ಡೌಟ್ ಬರೋದು ಸಾಮಾನ್ಯ. ಇಂತಹ ಡೌಟ್ clear ಮಾಡೋ ಸಿನಿಮ ನೋಡೋ ಅವಕಾಶ ಈ ನಡುವೆ ಒದಗಿ ಬಂದಿತ್ತು.

ಹೋದವಾರ ಗಣರಾಜ್ಯೋತ್ಸವದ ಪ್ರಯುಕ್ತ ನಮ್ ಕಂಪನಿ ರಜೆ ಇತ್ತು. ಏನು ಮಾಡೋದು ಅಂತ ಯೋಚಿಸುತ್ತಿರುವಾಗಲೇ ನಮ್ಮ ನೆಂಟರೋಬ್ರು ಫೋನ್ ಮಾಡಿ, ಅವರು ಅಬಿನಯಿಸಿರೋ ಚಿತ್ರದ ಉಚಿತ ಪ್ರದರ್ಶನ ಇದೆ ಬಾ ಅಂತ ಕರೆದರು. ಬಿಟ್ಟಿಯಾಗಿ ಆಗೋಹಾಗಿದ್ರೆ 100 ರು ಕೆಲಸಕ್ಕೆ ಇನ್ನೂರು ರು ಖರ್ಚು ಮಾಡಕ್ಕು ತಯಾರು ಅಲ್ವೇ ನಾವು, ಸರಿ ಸರ್ ಬರ್ತೀನಿ ಅಡ್ರೆಸ್ ಕೊಡಿ ಅಂದೆ. ಸೀತ ಸರ್ಕಲ್ ಹತ್ರ ಯೋಗಶ್ರಿ ಆಶ್ರಮ ಸಿನಿಮ ಹೆಸರು ಪ್ರಪಾತ ಅಂದ್ರು. ನನಗೆ ಆ ಸಿನಿಮ ಬಗ್ಗೆ ಮೊದಲೇ ಸ್ವಲ್ಪ ಗೊತ್ತಿತ್ತು. ಥಿಯೇಟರ್ ಅಲ್ಲಿ ರಿಲೀಸ್ ಆಗಲಿ ಅಂತ ಕಾಯ್ತಿದ್ದೆ, ಆದ್ರೆ ಅಲ್ಲಿ ಹೋಗಿ ನೋಡಿದಾಗಲೇ ತಿಳಿದಿದ್ದು ಇದು ಪ್ರಪಾತದ ನೂರ ಎರಡನೇ ಶೋ ಅಂತ. ಅಷ್ಟು ಕಡೆ ಅದು ಸ್ಕ್ರೀನಿಂಗ್ ಆಗಿದೆ ಆದರೆ ಥಿಯೇಟರ್ ಅಲ್ಲಿ ರಿಲೀಸ್ ಆಗೋ ಯೋಗ ಮಾತ್ರ ಬಂದಿಲ್ಲ ಯಾಕೆ ಅಂತ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರೇ ಹೇಳ್ಬೇಕು. ಚಿತ್ರದ ನಿರ್ದೇಶಕ ಕನ್ನಡದ ಕಿರುತೆರೆ ಹಿರಿತೆರೆ ಮತ್ತು ಆಕಾಶವಾಣಿಗೆ ಬಹಳಷ್ಟು ಕೊಡುಗೆ ನಿದಿರುವಂತಹ ವಜ್ರ ಖಂಟದ ಶ್ರೀ ಸುಚೇಂದ್ರ ಪ್ರಸಾದರು. ಆ ದಿನ ಅಲ್ಲಿ ಪ್ರದರ್ಶನ ಹಮ್ಮಿಕೊಂದಿದ್ದವರು ಪ್ರೇರಣ ಟ್ರಸ್ಟ್ ಎಂಬ NGO ಅವರು ಬಡವರಿಗೆ ಉಚಿತ ಡಯಾಲಿಸಿಸ್ ಮಾಡಿಸುವ ಉತ್ತಮ ಕಾರ್ಯಕ್ಕೆ ಕೈ ಹಾಕಿದ್ದಾರೆ. Read more »

Follow

Get every new post delivered to your Inbox.

Join 265 other followers