ವಿಷಯದ ವಿವರಗಳಿಗೆ ದಾಟಿರಿ

Archive for

5
ಆಕ್ಟೋ

ರಂಗೋಲಿ……. ಚಿತ್ತ-ಚಿತ್ತಾರಗಳ ನಡುವೆ

ಅರವಿಂದ್

ತುಂಬಾ ದಿನಗಳಿಂದ ಬರೀಬೇಕು, ಬರೀಬೇಕು ಅಂತಾ ಕುಳಿತು ಪೆನ್ನು ಹಿಡಿದ್ರೆ ಹಾಳಾದ್ದು ಏನೇನೋ ಆಲೋಚನೆ ಕಣ್ ಮುಂದೆ ಬರೋದು, ಇವತ್ತು ಬರೀಲೇಬೇಕು, ಅಂತ ಬೆಳ್ಳಂಬೆಳ್ಳಗ್ಗೆ ಎದ್ದು, ಮೊದಲು ಪೋನ್ಗಳು ಸ್ವಿಚ್ ಆಫ್ ಮಾಡಿ ಕೂತೆ, ಮನೆ ಹೊರಗಡೆ ರಂಗೋಲಿ ರಂಗೋಲಿ………… ಅಂತ ಕೂಗ್ತಾಯಿರೋ ಸದ್ದು, ಚಿಕ್ಕಂದಿನಿಂದಲೂ ಈ ಸದ್ದು ಕೇಳಿದ್ದು ಮತ್ತೊಮ್ಮೆ, ನನ್ನ ಬಾಲ್ಯವನ್ನು ನೆನಪಿಸಿದ ಹಾಗೆ ಓಡೋಡಿ ಹೊರಗೆ ಬಂದೆ, ಮನೆಯ ಸುತ್ತಮುತ್ತಲಿನ ಕೆಲವರು ರಂಗೋಲಿ ವ್ಯಾಪಾರ ಮಾಡ್ತಿದ್ರು, ಸೇರಿಗೆ ೧೫ರೂಪಾಯಿ ಅಂತ ಆಕೆ, ಈ ಹೆಂಗಸರು ೧೦ರೂಪಾಯಿಗೆ ಒಂದು ಸೇರು ಕೊಡು ಅಂತ ವಾಗ್ವಾದ.

ನೆನಪಿದ್ದಂತೆ ಸೇರಿಗೆ ೧ರೂಪಾಯಿ ೧.೫೦ರೂಪಾಯಿತ್ತು. ನಿತ್ಯ ಜೀವನದ ದರ ಸಮರ, ಆರ್ಥಿಕ ಸಮತೋಲನ ಈ ರಂಗೋಲಿ ಹುಡುಗಿಯ ಮೇಲು ಬಿದ್ದಂಗಿದೆ ಅನ್ಕೊಂಡು, ಒಳಗೆ ಬರೋವಾಗ ಅಕಸ್ಮಾತ್ ಏನೋ ನೋಡಿದ ನೆನಪಾಗಿ ರಂಗೋಲಿ ಮಾರುವ ಹುಡುಗಿಯನ್ನೇ ದಿಟ್ಟಿಸಿ ನೋಡಿದೆ, ಎಲ್ಲೋ ನೋಡಿದ ನೆನಪು, ಗೊತ್ತಾಗ್ತಾಯಿಲ್ವೆಲ್ಲ, ಅಂತ ಅವಳ ಮುಖವನ್ನೇ ದಿಟ್ಟಿಸಿ ನೋಡ್ತಿದ್ದೆ. ಆಕೆ ಅಲ್ಲಿ ಚೌಕಾಸಿ ಮಾಡಿ ವ್ಯಾಪಾರ ಮುಗಿಸುವ ಧಾವಂತದಲ್ಲಿದ್ದಳು. ಈ ಹುಡುಗಿ ನನಗೆಲ್ಲೋ ಪರಿಚಯ ಇರಬಹುದಾ !!, ಇವಳನ್ನಾ ನೋಡಿದ್ದಿನಾ ಅಂತ ನನ್ನ ಸಮಸ್ತ ಗೆಳೆಯರ ಬಳಗವನ್ನೇ ಒಮ್ಮೆ ಮೆಲುಕು ಹಾಕಿದ್ದಾಯಿತು. ನೆನಪಾಗಲಿಲ್ಲ.

ಯೋಚನೆ ಬೆಳಿಗ್ಗೆಯ ನನ್ನ ಪ್ರಾತಕರ್ಮಗಳನ್ನು ಮರೆಸುವಂತಿತ್ತು. ಆಕೆ ನಮ್ಮ ಬೀದಿಯ ಕಡೆಯವರೆಗೂ ಹೋಗಿ ಒಂದ್ಯೆದು ನಿಮಿಷಕ್ಕೆ ವಾಪಸ್ ಬಂದು, ಅವಳನ್ನ ಕೇಳೇ ಬಿಡುವ ಅಂತ ನಿರ್ಧರಿಸಿ, ರೀ ಮೇಡಂ ಅಂದೆ, ಅರೆ!!! ಅರವಿಂದ ಅಲ್ವಾ ನೀವು ಅಂತಾ ಹುಡುಗಿ ನನ್ನ ಹತ್ರ ಬರ್ತಿದ್ಳು. ಈಗಂತೂ ನನ್ನ ನೆನಪಿನ ಶಕ್ತಿ ಕುಂದಿದೆ ಅನ್ನೋದು ಗ್ಯಾರೆಂಟಿ ಆಗೋಯ್ತು, ಏನಂತ ಹೇಳೋದು ಹು……… ಅಂದೆ. ನೀವಿಗ ಇಲ್ಲಿರೋದಾ ? ನಾನು ನಿಮ್ಮನ್ನ ಗುರುತು ಹಿಡಿತಿನಿ ಅಂತ ಅನ್ಕೊಂಡೆ ಇರಲಿಲ್ಲ ? ಅಪ್ಪಅಮ್ಮ ಎಲ್ಲಾ ಹೇಗಿದ್ದಾರೆ ? ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಯಾವುದಕ್ಕೂ ಉತ್ತರಿಸಲಿ ಎಂಬ ಧಾವಂತ, ಜೊತೆಗೆ ಈಕೆ ಯಾರು ಎಂಬ ಮರೆವು ? ಎಲ್ಲಾ ಆರಾಮಾಗಿದ್ದಿವಿ, ಅಂತ ಹೇಳಿ ಜಾರಿಕೊಳ್ಳೋ ಪ್ರಯತ್ನ ಮಾಡಿದ್ರು, ಈಕೆ ಯಾರು ಎಂಬ ಸುಳಿವು ನೆನಪಾಗ್ಲಿಲ್ಲ.

ಧ್ಯೆರ್ಯಮಾಡಿ ಕೇಳೇ ಬಿಡೋಣ, ಅನ್ನಿಸಿ, ಕ್ಷಮಿಸಿ, ನಿಮ್ಮನ್ನ ನೋಡಿದ ನೆನಪು ಆದ್ರೆ ಯಾರು ಅಂತ ಗೊತ್ತಾಗ್ತಿಲ್ಲ, ಅಂದೆ ? ಒಂದು ಕ್ಷಣ ಅವಳು ಮುಗುಳು ನಗು ತಡೆಹಿಡಿದು, ನೆನಪಿಸ್ಕೊಳ್ಳೀ, ನೀವು ನನ್ನನ್ನ ಮರೆತಿರೋಲ್ಲ, ಆದ್ರೆ ನೀವು ಮರೀತಿರಾ ಅಂತ ಗೊತ್ತಿರಲಿಲ್ಲ. ಅಂದಾಗ ಬಟ್ಟೆಗೆ ಚಪ್ಪಲಿಸುತ್ತಿ ಹೊಡೆದಂತಾದ ಅನುಭವ, ಹೌದು ನಾನು ಸಾಮಾನ್ಯವಾಗಿ ಯಾರನ್ನು ಅಷ್ಟು ಮರೆತಿರೋಲ್ಲ, ಈಗ್ಯಾಕೆ ಹೀಗೆ ? ಅನ್ನಿಸಿ, ಇಲ್ಲಾರಿ ಗೊತ್ತಾಗಲಿಲ್ಲ,

ನಿಮಗೆ ಹುಳಿಸಾರು ಮಾಡಿಕೊಟ್ಟ ನಾನು ನನ್ನಮ್ಮ ಮರೆತೋಯ್ತಾ ಅಂದ್ಲು, ಹುಳಿಸಾರು ನನಗಿಷ್ಟ ಅಂತ ಈಕೆಗೆ ಹೇಗೆ ಗೊತ್ತಾಯ್ತು, ನಾನ್ಯಾವಾಗ ಈಕೆಯ ಮನೆಗೆ ಹೋಗಿದ್ದೆ ? ಇವರಮ್ಮ ನನಗೇಕೆ ಹುಳಿಸಾರು ಮಾಡಿಕೊಡಬೇಕು ? ಪ್ರಶ್ನೆಗಳಿಗೆಲ್ಲ ನನ್ನ ಮರೆವೇ ಉತ್ತರವೆಂಬಂತೇ ಪೆಚ್ಚಾಗಿ ನೋಡುತ್ತಿದ್ದೆ. ಇನ್ನು ಈ ಮರೆವು ಸುಬ್ಬನಿಗೆ ನೆನಪಿಸೋದು ಸಾಧ್ಯವಿಲ್ಲ ಅನ್ನಿಸಿ, ಆಕೆ ಅನಂತಪುರಕ್ಕೆ ನೀವು ಬಂದಿದ್ದು ನೆನಪಿಲ್ವಾ ಅಂದ್ಳು ? ತಕ್ಷಣ ನನ್ನ ಮೆದುಳಿನಲ್ಲಿ ಬಲ್ಬ್ ಹತ್ತಿ ಉರಿದಂತೆ ಹಾ…….. ಬಂದಿದ್ದೇನೆ, ನನ್ನ ಗೆಳೆಯ ಶೇಖರ್ ಆಸ್ಪತ್ರೆಗೆ ಸೇರಿಸಿದಾಗ ಪಕ್ಕದ ಬೆಡ್ನಲ್ಲಿ ಮಲಗಿದ್ದ ಇವರಪ್ಪ ನೆನಪಾಯಿತು, ಹೋ ಸುನಂದ ತಾನೆ ನೀವು ಅಂದೆ! ಹು ಸದ್ಯ ನೆನಪಾಯಿತಲ್ಲಾ, ಅಂತ ಅವಳ ಮೂದಲಿಕೆ, ಹೇಗಿದ್ದೀರಾ,ನಿಮ್ಮ ಅಪ್ಪಅಮ್ಮ ಹೇಗಿದ್ದಾರೆ ? ಅಪ್ಪನ ಆರೋಗ್ಯ ಸರಿ ಹೋಯ್ತಾ ? ಅಮ್ಮ ಈಗ ಎಲ್ಲಿ ? ಎಂಬ ಒಂದಷ್ಟು ಪ್ರಶ್ನೆಗಳು ನನ್ನಿಂದ. ಆಕೆಯನ್ನು ಮನೆಗೆ ಬರ ಹೇಳಿ ಅಮ್ಮನಿಗೆ ಆಕೆಯ ಪರಿಚಯ ಮಾಡಿಕೊಟ್ಟು ನನ್ನ ಹಳೆ ಪ್ರಶ್ನೆಗಳನ್ನೇ ಮತ್ತೊಮ್ಮೆ ಕೇಳಿದೆ. ಮತ್ತಷ್ಟು ಓದು »