ಪೇಟೆ ಸಾಕು, ನಡೀರಿ ಹಳ್ಳಿಗೆ!
ಮಹೇಶಕುಮಾರ್ ನೀರ್ಕಜೆ
ಹಳ್ಳಿ ಮೇಲೋ ಪಟ್ಟಣ ಮೇಲೋ? ಶಾಲೆಗಳ ಚರ್ಚಾಕೂಟಗಳಲ್ಲಿ ಇಂಥಾದ್ದೊಂದು ಚರ್ಚೆ ಸಾಮಾನ್ಯವಾಗಿ ಇರುತ್ತಿತ್ತು. ಈ ಪ್ರಶ್ನೆಗೆ ಆಗ ಪರಿಹಾರ ಸಿಕ್ಕಿತ್ತೇ? ಗೊತ್ತಿಲ್ಲ. ಈಗಿನ ಪರಿಸ್ಥಿತಿಯಲ್ಲಂತೂ ಉತ್ತರವಿಲ್ಲದಂತಾಗಿದೆ. ನಿಖರವಾದ ಉತ್ತರವೊಂದನ್ನು ನಿರೀಕ್ಷಿಸುವುದು ಸಾಧುವೂ ಅಲ್ಲ. ಯಾಕೆಂದರೆ ಈ ಪ್ರಶ್ನೆಗೆ ಉತ್ತರ ಬಹುತೇಕವಾಗಿ ವೈಯಕ್ತಿಕ ಆಸಕ್ತಿ, ಕುಟುಂಬದ ಹಿನ್ನೆಲೆ, ಆರ್ಥಿಕ ಪರಿಸ್ಥಿತಿ ಇತ್ಯಾದಿ ಅಂಶಗಳನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ ಹಳ್ಳೀಲಿ ಯಾರನ್ನಾದರೂ ಈ ಪ್ರಶ್ನೆ ಕೇಳಿದರೆ ನೂರಕ್ಕೆ ತೊಂಭತ್ತರಷ್ಟು ಜನ ಪೇಟೇನೇ ಒಳ್ಳೆದು ಎನ್ನಬಹುದು. ಅದಕ್ಕೆ ಕಾರಣಗಳೂ ಸಾಕಷ್ಟು ಇರಬಹುದು. ಅದೇ ಪಟ್ಟಣಗಳಲ್ಲಿ ವಾಸಿಸುತ್ತಿರುವವರು ಅಲ್ಲಿನ ಜಂಜಾಟದಿಂದ ಬೇಸತ್ತಿರುತ್ತಾರೆ ಮತ್ತು ಹಳ್ಳಿ ಜೀವನದ ಬಗ್ಗೆ ಒಂದು ರೀತಿಯ ಕೃತ್ರಿಮವಾದ ಸುಂದರ ಕಲ್ಪನೆಗಳನ್ನು ಇಟ್ಟುಕೊಂಡಿರುತ್ತಾರೆ. ಈ ಲೇಖನದ ಉದ್ದೇಶ ಹಳ್ಳಿ ಮತ್ತು ಪಟ್ಟಣದ ಮಧ್ಯದ ಆಯ್ಕೆಯ ಬಗ್ಗೆ ಅಲ್ಲ, ಬದಲಾಗಿ ಇತ್ತೀಚೆಗೆ ಭಾರತೀಯ ಸಾಮಾಜದಲ್ಲಿ ಮತ್ತು ಪರಿಸರದಲ್ಲಾದ ಬದಲಾವಣೆಗಳ ಕುರಿತು ಒಂದು ಜಿಜ್ಞಾಸೆ – ಸಮಸ್ಯೆಗಳು, ಪರಿಹಾರಗಳು ಹಾಗೂ ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿರುವವರ ಬಗ್ಗೆ ಒಂದಿಷ್ಟು ವಿವರಗಳು.
ಮೊದಲಿಗೆ ಕೆಲವೊಂದು ಸರಳ ಮಾಹಿತಿಗಳು. ೨೦೦೮ ಅಂಕಿ-ಅಂಶಗಳ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆಯ ಶೇ ೩೦ ರಷ್ಟು ಜನ ಪಟ್ಟಣಗಳಲ್ಲಿ (ಮಹಾನಗರಗಳು, ನಗರಗಳು) ವಾಸಿಸುತ್ತಿದ್ದಾರೆ. ಈ ಸಂಖ್ಯೆ ೨೦೩೦ ರ ಹೊತ್ತಿಗೆ ಶೇ ೪೦ ಏರುತ್ತದೆ. ಈಗಿನ ಗತಿಯಲ್ಲೇ ಜನಸಂಖ್ಯೆ ಏರುತ್ತಿದ್ದರೆ ೨೦೩೦ ಕ್ಕೆ ಒಟ್ಟು ಜನಸಂಖ್ಯೆ ೧೪೭ ಕೋಟಿಗಳಷ್ಟಾಗುತ್ತದೆ ಮತ್ತು ಆ ಹೊತ್ತಿಗೆ ಶೇ ೪೦, ಅಂದರೆ ಸುಮಾರು ೬೦ ಕೋಟಿ ಜನ ಪಟ್ಟಣಗಳಲ್ಲಿ ವಾಸಿಸುತ್ತಾರೆ! ಇದು ಈಗಿನ ಪಟ್ಟಣಿಗರ ಸಂಖ್ಯೆ (ಸುಮಾರು ೩೫ ಕೋಟಿ) ಗಿಂತ ೨೫ ಕೊಟಿ ಹೆಚ್ಚು. ಮತ್ತಷ್ಟು ಓದು 




