ಅಪರಾಧ ಮತ್ತು ಶಿಕ್ಷೆ
ಅಜಕ್ಕಳ ಗಿರೀಶ ಭಟ್
ಕ್ಷಮಿಸಿ, ನನ್ನ ಅಭಿಪ್ರಾಯ ಈಗಿನ ಬಹುತೇಕ ಜನರ ಅಭಿಪ್ರಾಯಕ್ಕಿಂತ ಬೇರೆಯಾಗಿದೆ. ಅದರಲ್ಲೂ ಮಾನವ ಹಕ್ಕಿನ ಬಗ್ಗೆ ಕಾಳಜಿ ಉಳ್ಳವರ ಮಟ್ಟಿಗಂತೂ ಅಮಾನವೀಯವಾಗಿ ಕಾಣುವಂತಿರಬಹುದು.ಇರಲಿ. ಅಪರಾಧಕ್ಕೆ ಶಿಕ್ಷೆ ಯಾಕೆ?ಈ ಪ್ರಶ್ನೆ ವಿಚಿತ್ರವಾಗಿ ಕಾಣಬಹುದು. ತುಂಬಾ ಜನ ಅಂದುಕೊಳ್ಳುವುದೇನೆಂದರೆ ಅಪರಾಧ ಮಾಡಿದ್ದಕ್ಕಾಗಿ ಶಿಕ್ಷೆ ಅಂತ. ವಾಸ್ತವವಾಗಿ ಶಿಕ್ಷೆ ಕೊಡಬೇಕಾದದ್ದು ಮತ್ತು ಕೊಡುವುದು ಆತ ಇನ್ನು ಮುಂದೆ ಅಪರಾಧ ಮಾಡಬಾರದು ಎಂದಷ್ಟೆ ಅಲ್ಲ .ಅದಕ್ಕಿಂತ ಮುಖ್ಯವಾಗಿ,ಅಂಥ ಅಪರಾಧಗಳನ್ನು ಬೇರೆಯವರು ಮಾಡಬಾರದು ಎಂಬ ಕಾರಣಕ್ಕಾಗಿ. ಹಾಗಾಗಿ ಅಪರಾಧದ ಪ್ರಮಾಣಕ್ಕೆ ಅನುಗುಣವಾಗಿ ಕಠಿಣ ಶಿಕ್ಷೆಯೇ ಆಗಬೇಕಾಗುತ್ತದೆ. ಭಿನ್ನಾಭಿಪ್ರಾಯ ಎಂದೆನಲ್ಲ, ಅದು ಜೈಲುಗಳ ಬಗ್ಗೆ. ಜೈಲುಗಳು ಕೆಟ್ಟ ಸ್ಥಿತಿಯಲ್ಲಿವೆಯೆಂದು ಎಲ್ಲರೂ ಬೊಬ್ಬೆ ಹೊಡೆಯುತ್ತಾರೆ.ಜೈಲುಗಳು ಇರಬೇಕಾದದ್ದೇ ಹಾಗೆ. ಅಲ್ಲದಿದ್ದರೆ ಅದು ಶಿಕ್ಷೆಯಾಗುವುದು ಹೇಗೆ? ವಿಚಾರಣಾಧೀನ ಕೈದಿಗಳಿಗೆ ಮಾತ್ರ ಒಳ್ಳೆ ವ್ಯವಸ್ಥೆಯಿರಬೇಕು ನಿಜ.ಹಾಗಾಗಿ ಅವರಿಗೆ ಬೇರೆಯೇ ಜೈಲುಗಳು ಬೇಕು.ಈ ಮಟ್ಟಿಗೆ ಜೈಲು ವ್ಯವಸ್ಥೆ ಸುಧಾರಣೆಯಾಗಬೇಕೆಂಬುದು ನಿಜ. ನ್ಯಾಯಾಲಯದಿಂದ ತಪ್ಪಿತಸ್ಥರೆಂದು ತೀರ್ಮಾನವಾದ ಕೈದಿಗಳಿಗೆ ಈಗಿರುವುದಕ್ಕಿಂತ ಕೆಟ್ಟ ಜೈಲುಗಳೇ ಬೇಕು. ಅವರಿಗೆ ನಾಟಕ ಅದು ಇದು ಮನರಂಜನೆ ಇತ್ಯಾದಿ ಇರಬಾರದು. ಅವರ ಮನಪರಿವರ್ತನೆ ಮಾಡಬೇಕು ಎಂಬುದೆಲ್ಲ ಬರೀ ಬೊಗಳೆ. ಹಾಗೆ ಮನಪರಿವರ್ತನೆ ಆಗಬೇಕಾದರೆ ಶಿಕ್ಷಿಸದೆ ಬಿಡುವುದೇ ಒಳ್ಳೆಯದು. ಮತ್ತಷ್ಟು ಓದು 





