ಬ್ಲಾಗರ್‌ಗಳೆಂಬ ಜರ್ನಲಿಸ್ಟುಗಳಿಗೆ ಜಯವಾಗಲಿ
‘ಸಂಪಾದಕೀಯ’
ಇವರು ತಮ್ಮ ಪಾಡಿಗೆ ತಾವು ಬರೆಯುತ್ತಾರೆ. ಪಿಕ್ನಿಕ್ಕಿಗೆ ಹೋಗಿ ಬಂದ ಖುಷಿ, ಮನೆಯಲ್ಲಿ ಮಗು ಹುಟ್ಟಿದ ಸಡಗರ, ಕಸದ ತೊಟ್ಟಿಯಲ್ಲಿ ಎಸೆಯಲ್ಪಟ್ಟು ಸತ್ತ ಮಗುವಿನ ಕುರಿತ ಮರುಕ, ಹೊಸದಾಗಿ ಓದಿದ ಕವಿತೆಯ ಕನವರಿಕೆ, ಮನೆಯಲ್ಲಿ ಘಟಿಸಿದ ಸಾವಿನ ವಿಷಾದ, ರಸ್ತೆ ಅಪಘಾತದಲ್ಲಿ ಸತ್ತೋದವರ ಕುರಿತು ನೋವು, ಹಬ್ಬಗಳ-ವಿವಿಧ ಡೇ ಗಳ ಸಂಭ್ರಮ, ಹೊಸದಾಗಿ ಶಾಪಿಂಗ್ ಮಾಡಿದ ವಸ್ತುಗಳ ವಿವರ, ರಾತ್ರಿಯಷ್ಟೇ ಕಂಡ ದುಸ್ವಪ್ನದ ಕಿರಿಕಿರಿ… ಹೀಗೆ ಎಲ್ಲವನ್ನೂ ಹಂಚಿಕೊಳ್ಳುತ್ತಾರೆ.
ಇವರ ಬ್ಲಾಗುಗಳಿಗೆ ಇವರೇ ಮಾಲೀಕರು, ಇವರೇ ಸಂಪಾದಕರು, ಇವರೇ ಉಪಸಂಪಾದಕರು, ಇವರೇ ವರದಿಗಾರರು, ಇವರೇ ಡಿಟಿಪಿ ಆಪರೇಟರ್‌ಗಳು. ಯಾರ ಅಂಕೆಯಲ್ಲಿ ಇವರಿಲ್ಲವಾದರೂ ತಮ್ಮ ತಮ್ಮ ಅಂಕೆಯಲ್ಲಿ ಇದ್ದು ಬರೆಯುವವರು. ಮತ್ತಷ್ಟು ಓದು 





