ಹವ್ಯಕರೇ ಉದಾಹರಣೆಯಾದರೇಕೆ??
ಇಂದು ಬೆಳಗ್ಗೆ ಹಾಸ್ಟೆಲ್ ತಿಂಡಿ ಮುಗಿಸಿ ಪೇಪರ್ ಓದುತ್ತಿದ್ದೆ. ಪಕ್ಕದಲ್ಲೇ ಕುಳಿತವಳು ಸಂಯುಕ್ತ ಕರ್ನಾಟಕ ಓದುತ್ತಿದ್ದಳು. ನಿನ್ನದು ಓದಿ ಆದ ನಂತರ ನನಗೆ ಕೊಡು ಎಂದು ಬುಕ್ ಮಾಡಿದೆ. ಒಮ್ಮೆಲೇ ಅವಳು ನೀವು ಹವ್ಯಕರೇ ಅಲ್ವಾ ಅಂತ ಕೇಳ್ಬೇಕಾ.. ಹ್ಮ್ಮ್ ಅಂದೆ. ಏನು ಹೀಗೆ ಕೇಳಿದಳಲ್ಲ, ಎಂದು ಅವಳನ್ನೊಮ್ಮೆ ದಿಟ್ಟಿಸಿ ನೋಡಿದೆ. ಆಗ ಅವಳು”ಅಲ್ಲ ನಿಮ್ಮಲ್ಲಿ ಪೇಪರ್ ಅಲ್ಲೆಲ್ಲ ಬರೋವಷ್ಟರ ಮಟ್ಟಿಗೆ ಹುಡುಗಿಯರು ಕಡಿಮೆಯಾಗಿದಾರಾ ಅಂದಳು. ಏನು ಉತ್ತರಿಸದೆ ಪ್ರಶ್ನಾರ್ಥಕವಾಗಿ ಅವಳನ್ನೇ ನೋಡಿದೆ. ಪೇಪರ್ ಕೈಗಿತ್ತು ಹೋದಳು.
ಓಹ್!! ನೋಡಿದರೆ,” ವಧು ಬೇಕಾಗಿದ್ದಾರೆ” ಎಂದು ದೊಡ್ಡದಾಗಿ ಬರೆದಿತ್ತು ಶ್ರೀಮತಿ ಕೆ.ಎಚ್.ಸಾವಿತ್ರಿಯವರ ಜೀವನ್ಮುಖಿ ಕಾಲಂನಲ್ಲಿ!! ಅಲ್ಲಿ ಹವ್ಯಕರಲ್ಲಿ ವಧುಗಳಿಗೆ ಕೊರತೆ ಎನ್ನೋ ಉದಾಹರಣೆಗಳು. ಹವ್ಯಕರೇ ಏಕೆ ಉದಾಹರಣೆಯಾಗುತ್ತಿದ್ದಾರೆ? ಬೇರೆಯವರಲ್ಲಿ ಉದಾಹರಣೆಗಳಿಲ್ಲವೇ?ಕಾರಣಗಳು ಕಾಣುತ್ತಿರುವುದೆಲ್ಲ ಹವ್ಯಕರಲ್ಲೇ ಜಾಸ್ತಿಯಾಗಿದೆಯೇ? ಎನ್ನೋ ಪ್ರಶ್ನೆಗಳು. ೨ ವರುಷಗಳ ಹಿಂದೆಯೇ ಈ ಟಿವಿ ಹೆಡ್ಲೈನ್ ಅಲ್ಲಿ “ಹವ್ಯಕರಲ್ಲಿ ವಧುಗಳ ಕೊರತೆ, ವರರಿಗೆ ಮದುವೆಯ ಚಿಂತೆ” ಎಂದು ದೊಡ್ಡದಾಗಿ ಕೊಟ್ಟಿದ್ದರು. ಮತ್ತೊಮ್ಮೆ ಸಾಪ್ತಾಹಿಕ ವಿಜಯದಲ್ಲೂ ಪುಟವೆಲ್ಲ ಇದೇ ವಿಷ್ಯ!ಹೀಗೆ ಮನೆ ಮಾತಾಗುವ ಮಟ್ಟಕ್ಕಿಳಿಯಿತೇ? ಮತ್ತಷ್ಟು ಓದು 





