ನೆನಪುಗಳ ಮಾತೆ ಮಧುರ.. ನಿಮಗೂ ಹಾಗೇನಾ?
ಅಂತೂ ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿಗೆ ಬಂದು ಹುಡುಗರೆಲ್ಲ ಸೇರಿ ಬಾಡಿಗೆ ಮನೆ ಮಾಡಿ ಆಮೇಲೆ ಒಂದು ಕೆಲಸ ಹುಡ್ಕಿದ್ದಾಯ್ತು. ಇನ್ನೇನು ಆರಾಮು ಅಂದ್ಕೊಂಡ್ರೆ ಸಮಸ್ಯೆ ಶುರುವಾಗಿದ್ದೆ ಆಗ. ಬೆಳಗ್ಗೆ ಎದ್ರೆ ಏನು ತಿಂಡಿ ಮಾಡೋದು ಅನ್ನೋ ಯೋಚನೆ, ಏನೋ ಮಾಡೋಣ ಅಂದ್ಕೊಂಡು ಶುರು ಮಾಡಿದ್ರೆ, ಇಲ್ಲ ಈರುಳ್ಳಿ ಅಥವಾ ಟೊಮೇಟೊ ಅಥವಾ ಮೆಣಸಿನಕಾಯಿ ಅಥವಾ ಹೆಸರುಬೇಳೆ ಹೀಗೆ ಏನಾದರೂ ಒಂದು ಮಿಸ್. ಅಂತೂ ತಿಂಡಿ ಮಾಡಿ ಆಫೀಸಿಗೆ ರೆಡಿ ಆಗಿ ಬಸ್ ಹಿಡಿಯೋಕೆ ಹೋದ್ರೆ, ನಮ್ಮ ಹಳ್ಳಿ ಬಸ್ಸಾದ್ರೂ ಆಗಬಹುದು ಉಹುಂ ಬಿ.ಎಂ.ಟಿ.ಸಿ ಬಸ್ ಸಹವಾಸ ಅಲ್ಲ. ಮಕ್ಕಳನ್ನು ಕಂಡ್ರೆ ಬೆಂಗ್ಳೂರಿನ ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗಿ ಕಚ್ಹೋ ಹಾಗೆ ಜನಗಳು ಸೀಟ್ ಹಿಡ್ಕೊಳ್ಳೋಕೆ ನುಗ್ತಿರ್ತಾರೆ. ಆ ಟ್ರಾಫಿಕ್ನಲ್ಲಿ ಆ ರಶ್ನಲ್ಲಿ ಆಫೀಸ್ ತಲ್ಪೋಹೊತ್ತಿಗೆ ಹೈರಾಣಾಗಿ ಹೋಗಿರ್ತೇವೆ.
ಆಫೀಸಲ್ಲಿ ಆ ಡೆಡ್ ಲೈನ್ಗಳು, ಮೀಟಿಂಗ್ಗಳು, ಟ್ಯೂಬ್ ಲೈಟ್ಗಳು, ಕಣ್ಣು ಕುಕ್ಕುವ ಮಾನಿಟರ್ಗಳು, ಟೇಸ್ಟ್ ಇಲ್ಲದ ಟೀ, ಕಾಫೀಗಳು, ಬೇಡದೆ ಇರೋ ಗಾಸಿಪ್ಗಳು. ಅಬ್ಬ ಸಾಕಪ್ಪಾ ಇದೇನು ಜೀವನ ಅನ್ಸಿಬಿಡತ್ತೆ ಆದ್ರೆ ಏನು ಮಾಡೋ ಹಾಗಿಲ್ಲ, ಹೊಟ್ಟೆಪಾಡು.
ಕೆಲಸ ಮುಗಿಸಿ ಮತ್ತೆ ಮನೆ ಕಡೆ ಹೊರಟ್ರೆ ಮತ್ತೆ ಅದೇ ಬಿ.ಎಂ.ಟಿ.ಸಿ ಬಸ್, ಸಂತೆಯಂತೆ ಜನ, ಟ್ರಾಫಿಕ್ ಜಾಮ್. ಮನೆ ತಲುಪೋ ಹೊತ್ತಿಗೆ ನಮ್ಮ ಪಾಡು ಹೇಗಾಗಿರತ್ತೆ ಅಂದ್ರೆ ನೀರಿನಲ್ಲಿ ಅದ್ದಿಟ್ಟ ಬಟ್ಟೆಯನ್ನು ತೆಗೆದು ಹಿಂಡಿಹಾಕ್ತಾರಲ್ಲ ಹಾಗೆ ಆಗಿರ್ತೀವಿ. ರಾತ್ರಿ ಮತ್ತದೇ ಕಥೆ, ಬೆಳಗ್ಗೆ ನಡೆದ ಘಟನೆಗಳ ಪುನರಾವರ್ತನೆ. ಮತ್ತಷ್ಟು ಓದು 





