ವಿಷಯದ ವಿವರಗಳಿಗೆ ದಾಟಿರಿ

Archive for

25
ಜನ

ಕನ್ನಡ ಸಾಹಿತ್ಯ ಸಮ್ಮೇಳನ – ಬಂತು ನಮ್ ಬೆಂಗಳೂರಿಗೆ !

— ವಸಂತ್ ಶೆಟ್ಟಿ

41 ವರ್ಷಗಳ ದೊಡ್ಡ ಅಂತರದ ನಂತರ ಕನ್ನಡ ಸಾಹಿತ್ಯ ಸಮ್ಮೇಳನ ರಾಜಧಾನಿ ಬೆಂಗಳೂರಿಗೆ ಬರುತ್ತಿದೆ. 1970ರ ಬೆಂಗಳೂರಿಗೂ, 2011ರ ಬೆಂಗಳೂರಿಗೂ ಆಕಾಶ-ಭೂಮಿಗಿರುವಷ್ಟು ಅಂತರವಿದೆ. ಬೆಂಗಳೂರಿನ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳಲ್ಲಿ ಗಣನೀಯವಾದ ಬದಲಾವಣೆಯಾಗಿದೆ. ಜಾಗತೀಕರಣದ ನಂತರ ಶುರುವಾದ ಐಟಿ ಕ್ರಾಂತಿ, ತದನಂತರ ಕೋಡಿ ಬಿದ್ದ ಕೆರೆಯಂತೆ ಹರಿದು ಬಂದ ವಲಸಿಗರ ಅಬ್ಬರದಲ್ಲಿ ಬೆಂಗಳೂರು ಖಂಡಿತ ಬದಲಾಗಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿಗೆ ಬರುತ್ತಿರುವ ಸಮ್ಮೇಳನ ಖಂಡಿತವಾಗಿಯೂ ಪ್ರಮುಖವಾದದ್ದು, ಅಲ್ಲಿ ಆಗಬೇಕಾದ ಚರ್ಚೆ, ನಡೆಯಬೇಕಾದ ವಿಚಾರ-ವಿಮರ್ಷೆ, ತೆಗೆದುಕೊಳ್ಳಬೇಕಾದ ನಿಲುವು ಎಲ್ಲವೂ ಬೆಂಗಳೂರು, ಕರ್ನಾಟಕದ ಮುಂದಿನ ದಾರಿಗೆ ದಿಕ್ಸೂಚಿಯಾಗಬಲ್ಲಂತದ್ದು ಅನ್ನುವುದು ನನ್ನ ಅನಿಸಿಕೆ.

ಬೆಂಗಳೂರಿಗೆ ಅಷ್ಟೊಂದು ಮಹತ್ವ ಯಾಕೆ?
ಇದೆಲ್ಲ ಸರಿ, ಆದ್ರೆ ಬೆಂಗಳೂರಲ್ಲಿ ಸಾಹಿತ್ಯ ಸಮ್ಮೇಳನ ಆದ್ರೆ ಅದಕ್ಯಾಕೆ ಅಷ್ಟು ಮಹತ್ವ ಅನ್ನಿಸಬಹುದು. ಬೆಂಗಳೂರು ಅನ್ನುವುದು ಕರ್ನಾಟಕದ ಬೇರೆ ಊರುಗಳಂತಲ್ಲ. ಇಡೀ ಕರ್ನಾಟಕದ, ಕನ್ನಡಿಗರ ಕಲಿಕೆ, ದುಡಿಮೆ, ಬದುಕು ರೂಪಿಸಬೇಕಾದ ವ್ಯವಸ್ಥೆಯಾದ ಸರ್ಕಾರ ಇಲ್ಲೇ ನೆಲೆಗೊಂಡಿರುವುದು. ಕರ್ನಾಟಕದ ಸಾಂಸ್ಕೃತಿಕ ಗುರುತುಗಳಲ್ಲೊಂದಾದ ಕನ್ನಡ ಚಿತ್ರೋದ್ಯಮ ಇಲ್ಲೇ ನೆಲೆಗೊಂಡಿರುವುದು. ಕರ್ನಾಟಕದ ಕಳೆದ 60 ವರ್ಷಗಳ ಇತಿಹಾಸದಲ್ಲಿ ರೂಪುಗೊಂಡ ಹತ್ತು ಹಲವು ನಾಡ ಪರ, ಭಾಷೆ ಪರ ಚಳುವಳಿಗಳಿಗೆ ಹೊಸ ದಿಕ್ಕು ತೋರಿಸಿದ, ಜನಾಭಿಪ್ರಾಯ ರೂಪಿಸುವಲ್ಲಿ ಕೆಲಸ ಮಾಡಿದ ಹತ್ತು ಹಲವು ಕನ್ನಡ ಚಿಂತಕರು, ಸಂಘಟನೆಗಳಿಗೂ ಬೆಂಗಳೂರು ಕೇಂದ್ರ ಸ್ಥಾನ. ಕರ್ನಾಟಕದ ರಾಜಕೀಯ, ಆಡಳಿತ ವ್ಯವಸ್ಥೆಯನ್ನು ಹದ್ದಿನ ಕಣ್ಣಿನಿಂದ ಬೆನ್ನು ಬಿಡದೇ ಕಾಯುತ್ತಿರುವ ಸುದ್ದಿ, ದೃಶ್ಯ ಮಾಧ್ಯಮಗಳಿಗೂ ಬೆಂಗಳೂರೇ ಕೇಂದ್ರ ಸ್ಥಾನ. ಇವೆಲ್ಲದಕ್ಕೂ ಮಿಗಿಲಾಗಿ ಕರ್ನಾಟಕದ ಆರ್ಥಿಕ ವ್ಯವಸ್ಥೆಯನ್ನು ಬಹು ಪಾಲು ನಿಯಂತ್ರಿಸುತ್ತಿರುವುದು  ಬೆಂಗಳೂರೆಂಬ ಕೆಂಪೇಗೌಡರ ಊರು. ಕರ್ನಾಟಕದ ಪಾಲಿನ ಹೆಚ್ಚಿನ ಎಲ್ಲ stakeholders ಇರೋ ಬೆಂಗಳೂರಲ್ಲಿ, ಇವರೆಲ್ಲರ ನಡುವೆ ನಡಿತಿರೋ ಈ ಸಮ್ಮೇಳನ ನಿಜಕ್ಕೂ ಮಹತ್ವದ್ದೇ. ಮತ್ತಷ್ಟು ಓದು »