ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”
“ಮಚ್ಚು,ಲಾಂಗು,ಲೀಟರ್ ಗಟ್ಲೆ ರಕ್ತ ಬಿಟ್ಟು ಬೇರೆ ಇನ್ನೆನಪ್ಪ ಇದೆ ನಿಮ್ಮ ಕನ್ನಡ ಚಿತ್ರಗಳಲ್ಲಿ?, ವರ್ಷಕ್ಕೆ ಬರೋ ಚಿತ್ರಗಳಲ್ಲಿ ಅರ್ದಕ್ಕರ್ಧ ರಿಮೇಕ್ ಚಿತ್ರಗಳೇ.ಯಪ್ಪಾ!! ಬಿಡೋ ಹೋಗ್ಲಿ… ” ಅಂತ ನನ್ನ ಅನ್ಯ ಭಾಷೆಯ ಗೆಳೆಯರು ಕೂಡಿ ಗೇಲಿ ಮಾಡಿ ನಗ್ತಾ ಇದ್ರು.ನಾನಾದರು ಏನಂತ ಉತ್ತರ ಕೊಡ್ಲಿ, ಇರೋ ವಿಷ್ಯಾನೆ ತಾನೇ ಪಾಪ ಅವ್ರು ಹೇಳ್ತಾ ಇರೋದು.ಅದ್ರಲ್ಲಿ ತಪ್ಪೇನಿದೆ?,ಒಬ್ಬ ಕನ್ನಡ ಸಿನೆಮಾ ಅಭಿನಯದ ಅಭಿಮಾನಿಯಾಗಿದ್ದಕ್ಕೆ ಇಂತ ಮಾತುಗಳನ್ನ ಕೇಳಲೆಬೇಕಾಗಿತ್ತು.
ಅವ್ರು ಹೇಳಿದ್ ಮಾತ್ಗಳನ್ನ ಒಮ್ಮೆ ಕೂತು ಯೋಚಿಸಿ ನೋಡಿದೆ.ಹೌದಲ್ಲ! ನಮ್ಮ ಚಿತ್ರರಂಗದವರು ‘ಓಂ’ ಚಿತ್ರ ಗೆದ್ದಾದ ಮೇಲೆ ದಶಕಗಳ ಕಾಲ ಮಚ್ಚು,ಲಾಂಗು ಹಿಡಿದು ಟಿ.ಎಂ.ಸಿಗಟ್ಲೆ ರಕ್ತ ಚೆಲ್ಲಾಡಿ,ಮಧ್ಯೆ ‘ತವರಿನ’ ನೆನಪಾಗಿ ತೊಟ್ಟಿಲು,ಬಟ್ಟಲು,ಬಿಂದಿಗೆ,ಚೊಂಬು ಎಲ್ಲ ತಂದು,ಕಡೆಗೆ ‘ಮುಂಗಾರು ಮಳೆ’ ಬಂದ್ ಮೇಲೆ ಪ್ರವಾಹದ ರೀತಿಯಲ್ಲಿ ಪ್ರೀತಿಯ ಮಳೆ ಸುರಿಸುತ್ತಾ,ಒಂದ್ಸರಿ ತಮಿಳು ಸಿನೆಮ, ಇನ್ನೊಂದ್ಸರಿ ತೆಲುಗು ಸಿನೆಮ,ಟೈಮ್ ಸಿಕ್ಕಾಗ ಮಲಯಾಳಂ,ಹಿಂದಿ ಸಿನೆಮಾಗಳನ್ನ ನೋಡಿ ಆ ರೀಲುಗಳನ್ನ ಇಲ್ಲಿಗ್ ತಗಂಡ್ ಬಂದು,ಅದನ್ನ ಇಲ್ಲಿ ಬಿಚ್ಚಿ ಅದೇ ಕತೆಗೆ ಕನ್ನಡದ ಬಣ್ಣ (ಅದನ್ನು ಸರಿಯಾಗ್ ಬಳಿಯೋದಿಲ್ಲ ಎಷ್ಟೋ ಜನ,ಅದು ಇರ್ಲಿ ಬಿಡಿ) ಬಳಿದು ಮೇಲ್ಗಡೆ ಆ ಸ್ಟಾರು,ಈ ಸ್ಟಾರು ಅಂತ ಹೆಸ್ರಾಕಂಡು ರಿಲೀಸ್ ಮಾಡ್ತಾರೆ.ಜನ ಬಂದ್ ನೋಡ್ತಾರಾ?,ಎಲ್ಲೋ ನಮ್ಮಂತ ಕನ್ನಡ ಚಿತ್ರಗಳನ್ನ ಮಾತ್ರ ನೋಡೋ ಮಂದಿ ವಿಧಿಯಿಲ್ಲದೇ ಬಂದು ನೋಡ್ತಾರೆ.ಉಳಿದವರು ‘ಬನ್ರೋ,ಆ ಸಿನೆಮ ಬಂದೈತೆ ನೋಡನ’ ಅಂದ್ರೆ ‘ಹೇಯ್,ಹೋಗಲೇ ಅದನ್ನ ಆ ಭಾಷೆಯಲ್ಲೇ ನೋಡಿವ್ನಿ.ಯಾವ್ದಾದ್ರು ಇವರೇ ಮಾಡಿರೋ ಕತೆಯಿದ್ರೆ ಹೇಳು ಬತ್ತಿನಿ ನೋಡಕೆ’ ಅಂತಾರೆ. ಮತ್ತಷ್ಟು ಓದು 





