ಗುಬ್ಬಿ ಮೇಲೆ ಬ್ರಹ್ಮಾಸ್ತ್ರ…!
ಸಾಮೂಹಿಕ ಆತ್ಮಹತ್ಯೆ: ಮಲೆಕುಡಿಯರ ಬೆದರಿಕೆ, ನಿಲ್ಲದ ಮಲೆಕುಡಿಯರ ಮೇಲಿನ ದೌರ್ಜನ್ಯ,
ಬಲಾತ್ಕಾರದಿಂದ ಎಬ್ಬಿಸಿದರೆ ಪ್ರಾಣತ್ಯಾಗ, ಸತ್ತರೂ-ಬದುಕಿದರೂ ಇಲ್ಲಿಯೇ: ಮಲೆಕುಡಿಯರ ಶಪಥ
ಪ್ರಜಾವಾಣಿ ಪತ್ರಿಕೆಯಲ್ಲಿ ಜನವರಿ ತಿಂಗಳ ಕೊನೆಯ ಕೆಲವು ದಿನಗಳಲ್ಲಿ ಬಂದ ಪ್ರಮುಖ ಸುದ್ದಿಗಳು. ಇವೆಲ್ಲಾ ‘ಕಾನೂನು ಪ್ರಕಾರವಾಗಿ ಎತ್ತಂಗಡಿ ಮಾಡಿಸಿದ್ದೇವೆ’ ಎಂದು ಹೇಳುತ್ತಿರುವ ಅಧಿಕಾರಿಗಳ ವಿರುದ್ಧವಾಗಿ ಮನೆ ಕಳೆದುಕೊಂಡ ಸುಲ್ಕೇರಿಯ ಮಲೆಕುಡಿಯರು ದು:ಖಭರಿತ ಅಸಹಾಯಕತೆಯ ದನಿ. ಇಷ್ಟಾದರೂ ಅಲ್ಲಿನ ಕಾಂಗ್ರೆಸ್ ಶಾಸಕರು ‘ಸುಲ್ಕೇರಿ ನಾಯ್ದಿಗುರಿಯಲ್ಲಿ ಒಕ್ಕಲೆಬ್ಬಿಸಿರುವ ಪ್ರಕರಣ ಕಾನೂನು ಪ್ರಕಾರವೇ ನಡೆದಿದೆ. ಸಂಸದರು, ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಿಂದ ನಾನು ಪಾಠ ಕಲಿಯಬೇಕಾಗಿಲ್ಲ. ನಾನು ಘಟನಾ ಸ್ಥಳಕ್ಕೆ ಕಾಲಿಡುವುದಿಲ್ಲ. ತಾಕತ್ತಿದ್ದರೆ ಅವರು ನನ್ನನ್ನು ಅಲ್ಲಿಗೆ ಬರುವಂತೆ ಮಾಡಲಿ’ಎಂದು ಘೋಷಿಸಿದ್ದಾರೆ. (ಪ್ರ.ವಾ) ಮತ್ತಷ್ಟು ಓದು 
ಜೇನುಗೂಡಿಗೆ ಕಲ್ಲು ಹೊಡೆದ್ರೆ ಏನಾಗುತ್ತೆ ಅಂತ ಗೊತ್ತಾಯ್ತಾ!?
(ಇದೆ ಲೇಖನಗಳನ್ನ ನೋಡಿ ಬೋರ್ ಅನಿಸಬಹುದು,ಆದರೆ ಈ ಮನುಷ್ಯ ಮಾಡಿದ ಕೆಲಸ ಮೈ ಉರಿಯುವಂತದ್ದು,ನಾನು ಬರೆಯಬಾರದು ಅಂದುಕೊಂಡರು ಬರೆಯದಿರಲಾಗಲಿಲ್ಲ.ಇದನ್ನ
ಬರೆಯುವ ಹೊತ್ತಿಗೆ ಚಿಮೂ ಅವರಿಗೆ ಗೌರವ ಸಲ್ಲಲ್ಲಿದೆ ಅನ್ನುವ ಸಮಾಧಾನಕರ ಸುದ್ದಿ ಬಂದರೂ,ಅಂತ ಹಿರಿಯ ಜೀವದ ಮನ ನೋಯಿಸಿದವರ ಬಗ್ಗೆ ಬರೆಯದಿರಲು ಹೇಗೆ ಸಾಧ್ಯ? )
ಮರವಂಜಿ ಅನ್ನೋದು ಈ ರಾಜ್ಯದ ಒಂದು ಪುಟ್ಟಹಳ್ಳಿ.ಆ ಹಳ್ಳಿಯ ಬಯಲಲ್ಲಿ ಆಟವಾಡುತಿದ್ದ ಮಕ್ಕಳ ಬಳಿ ಒಬ್ಬ ಪೇಲವ ಶರೀರದ,ಮೃದು ಮಾತಿನ ವ್ಯಕ್ತಿ ಬಂದು ಕೇಳಿದರು ’ಮಕ್ಕಳೇ,ಈ ಹಳ್ಳಿಯಲ್ಲಿ ದೊಡ್ಡ ಮನೆ ಯಾರದಪ್ಪ?’ಅಲ್ಲಿ ಆಟವಾಡುತಿದ್ದ ದೊಡ್ಡ ಮನೆಯ ಮಕ್ಕಳು ಆ ವ್ಯಕ್ತಿಯನ್ನ ಮನೆಗೆ ಕರೆದುಕೊಂಡು ಹೋದರು.ಮನೆಯ ಹಿರಿಯರೊಂದಿಗೆ ಆ ವ್ಯಕ್ತಿ ’ತಾನು, ಕರ್ನಾಟಕ-ಕನ್ನಡದ ಬಗ್ಗೆ ಸಂಶೋಧನೆ ಮಾಡುತ್ತಾ ಇರುವುದಾಗಿಯೂ,ಅದಕ್ಕಾಗಿ ಹೀಗೆ ಹಳ್ಳಿ ಹಳ್ಳಿಗಳಿಗೊ ಭೇಟಿ ನೀಡುತ್ತಿರುವುದಾಗಿಯು ಮತ್ತು ಹೋದೆಡೆ ಹೀಗೆ ಉಳ್ಳವರ ಮನೆಯಲ್ಲಿ ವಿಶ್ರಾಂತಿ ಪಡೆದು ಸಾಗುತ್ತಿರುವುದಾಗಿ’ ಹೇಳಿದ್ದರು.ಹಾಗೆ ಮುಂದುವರೆದು ’ಉಚಿತವಾಗಿ ಈ ರೀತಿ ಉಳಿದುಕೊಳ್ಳುವುದು ನನಗೆ ಕಷ್ಟವಾಗುತ್ತದೆ, ನಿಮ್ಮ ಮನೆಯ ಮಕ್ಕಳನ್ನೆಲ್ಲ ಕರೆಯಿರಿ ನಾನವರಿಗೆ ಕಥೆಯನ್ನಾದರು ಹೇಳುತ್ತೇನೆ’ ಅಂದರಂತೆ.ಆ ವ್ಯಕ್ತಿ ಹಾಗೆ ಮನೆಗೆ ಬಂದು ಹೋದ ೪-೫ ವರ್ಷದ ಮೇಲೆ ಯಾವುದೋ ಪತ್ರಿಕೆಯಲ್ಲಿ ಅವರ ಫೋಟೊ ನೋಡಿದಾಗಲೆ ಆ ಮನೆಯವರಿಗೆ ಗೊತ್ತಾಗಿದ್ದು ಅಂದು ನಮ್ಮ ಮನೆಗೆ ಬಂದು ಉಳಿದುಕೊಂಡಿದ್ದ ವ್ಯಕ್ತಿ, ಕನ್ನಡದ ಹಿರಿಮೆಯ ಸಂಶೋಧಕ,ವಿದ್ವಾಂಸರು ಅಂತ.





