ವಿಷಯದ ವಿವರಗಳಿಗೆ ದಾಟಿರಿ

Archive for

14
ಫೆಬ್ರ

ಒಲವೆಂಬ ವಿಸ್ಮಯ!

ಸುಪ್ರೀತ್.ಕೆ.ಎಸ್

ಈ ಪ್ರೀತಿ ಅಂದರೆ ಏನು?
ಹಾಗಂತ ಕೇಳಿ ನೋಡಿ ಪ್ರೀತಿಯಲ್ಲಿ ಬಿದ್ದವರಿಗೆ ಮಾತನಾಡಲು ಪದಗಳೇ ಸಿಕ್ಕುವುದಿಲ್ಲ. ಎಂದೂ ಪ್ರೀತಿಸಿರದವರಿಗೆ ಮಾತನಾಡಲಿಕ್ಕೆ, ವಾದಿಸುವುದಕ್ಕೆ ಸಾವಿರ ಸಾವಿರ ಸಂಗತಿಗಳು ಸಿಕ್ಕುತ್ತವೆ. ನೂರಾರು ಥಿಯರಿಗಳು ಕೈಗೆ ಎಟುಕುತ್ತವೆ. ಹತ್ತಾರು ಶ್ರೇಷ್ಠ ಚಿಂತಕರು ಹೇಳಿದ ಸಿದ್ಧಾಂತಗಳು ನೆರವಿಗೆ ಬರುತ್ತವೆ. ಆದರೆ ಪ್ರೀತಿಯಲ್ಲಿ ಮುಳುಗಿದವರನ್ನು ಕೇಳಿ, ಅವರಿಗೆ ಮಾತೇ ಬರದು, ಅವರು ಪ್ರೀತಿ ಕೊಡಮಾಡುವ ಮಧುರ ಅನುಭೂತಿಯನ್ನು ಸವಿಯುವುದರಲ್ಲಿ ಮಗ್ನರಾಗಿರುತ್ತಾರೆ, ಮಾತು ಮರೆತಿರುತ್ತಾರೆ.

ಧರ್ಮವೆಂದರೆ ಏನು, ದೇವರು ಇದ್ದಾನಾ? ಅಂತೆಲ್ಲಾ ಕೇಳಿದಾಗ ದೈವತ್ವದ ಅನುಭವವನ್ನು, ತನ್ನನ್ನೇ ತಾನು ಕಳೆದುಕೊಳ್ಳುವ ಮಗ್ನತೆಯನ್ನು ಎಂದೂ ಕಂಡಿರದವ ಮಾತ್ರ ಉಗ್ರವಾಗಿ ವಾದ ಮಾಡಬಲ್ಲ. ದೇವರಿದ್ದಾನೆ, ಅವನನ್ನು ನಂಬದವರು ದುರುಳರು ಎಂದು ಅಬ್ಬರಿಸಬಲ್ಲ. ದೇವರು ಎಂಬುದು ನಮ್ಮ ದೌರ್ಬಲ್ಯ, ನಮಗೆ ನಾವು ಮಾಡಿಕೊಳ್ಳುವ ವಂಚನೆ ಎಂದು ಉಪದೇಶಿಸಬಲ್ಲ. ಆದರೆ ದೇವರನ್ನು ಅನುಭವಿಸಿದವ ಮಾತ್ರ ಯಾವ ಮಾತನ್ನೂ ಆಡದೆ ಮೌನವಾಗಿ ಹಿಮಾಲಯದ ನಿಶ್ಯಬ್ಧ, ನಿರ್ಮಾನುಶ ಗುಹೆಗಳಲ್ಲಿ ಧ್ಯಾನಿಸುತ್ತಿರುತ್ತಾನೆ. ಖಾಲಿಯಾದ ಡಬ್ಬಗಳು ಜೋರಾಗಿ ಸದ್ದು ಮಾಡುತ್ತಾ ಬಡಿದುಕೊಳ್ಳುತ್ತಿರುತ್ತವೆ! ಎಂದಿನಂತೆ!

ಎರಡು ವಿಪರೀತಗಳು

ಪ್ರೀತಿಯ ಅನುಭವವನ್ನು ಹಂಚಿಕೊಳ್ಳುವಾಗ, ಪ್ರೀತಿಯನ್ನು ವ್ಯಾಖ್ಯಾನಿಸಲು ಕೂರುವಾಗ ನಾವು ಎರಡು ವಿಪರೀತಗಳಿಗೆ ಹೋಗುವ ಅಪಾಯವಿರುತ್ತದೆ. ಪ್ರೀತಿಯನ್ನು ತೀರಾ ಭಾವುಕವಾಗಿ ವರ್ಣಿಸುತ್ತಾ, ಪ್ರೀತಿ ಈ ಜಗತ್ತಿನದ್ದೇ ಅಲ್ಲ. ಅದು ಇಂದ್ರಿಯಗಳಿಗೆ ನಿಲುಕದ್ದು, ಅದು ಎಂಥಾ ವಿರೋಧವನ್ನಾದರೂ ಎದುರಿಸಬಲ್ಲದು. ಇಡೀ ಪ್ರಪಂಚವನ್ನೇ ಬೇಕಾದರೂ ಎದುರು ಹಾಕಿಕೊಂಡು ಪ್ರೀತಿ ಬದುಕಬಲ್ಲದು. ಪ್ರೀತಿಗೆ ಹಣ, ಅಂತಸ್ತಿನ ಹಂಗು ಇಲ್ಲ. ಅದು ಮುಖ ನೋಡಿ, ಭವಿಷ್ಯವನ್ನು ಆಲೋಚಿಸಿ ಪ್ರೀತಿಗೆ ಬೀಳಿಸುವುದಿಲ್ಲ. ಪ್ರೀತಿಯೆಂಬುದು ಒಂದು ಪವಾಡ. ನಮ್ಮ ನಿಯಂತ್ರಣವೇ ಇಲ್ಲದ ಆದರೆ ನಮ್ಮೆಲ್ಲರನ್ನೂ ನಿಯಂತ್ರಿಸುವ ಅಗೋಚರವಾದ ಶಕ್ತಿ ಪ್ರೀತಿ. ಪ್ರೀತಿಸಿದವರಿಗೆ ಪ್ರೀತಿಯೇ ದೇವರು. ಪ್ರೀತಿಗಿಂತ ದೊಡ್ಡದು ಅವರಿಗೆ ಬೇರೇನೂ ಕಾಣುವುದಿಲ್ಲ. ನಮ್ಮ ಜೀವನದ ಏಕೈಕ ಗುರಿಯೇ ಪ್ರೀತಿ. ಅಂತೆಲ್ಲಾ ಭಾವುಕವಾಗಿ ಪ್ರೀತಿಯ ಅಗಾಧತೆಯನ್ನು ಮೆರೆಸುವ ಭರದಲ್ಲಿ ವಾಸ್ತವದಿಂದ ದೂರಾಗುವ, ತೀರಾ ಎಮೋಶನಲ್ ಆಗುವ ಅಪಾಯವಿದೆ. ಮತ್ತಷ್ಟು ಓದು »