ವಿಷಯದ ವಿವರಗಳಿಗೆ ದಾಟಿರಿ

Archive for

7
ಫೆಬ್ರ

ಮಾಜಿ ಸೈನಿಕರ ಅಳಲು : ಸ್ವಲ್ಪ ಕನ್ಸರ್ನ್ ತೋರಿಸಿಯಪ್ಪಾ..

– ಹರ್ಷ ಕುಗ್ವೆ

ನಾವು ಭಯೋತ್ಪಾದಕ ದಾಳಿಯಾದಾಗ ಸೈನ್ಯವನ್ನು, ಸೈನಿಕರನ್ನು ಹಾಡಿ ಹೊಗಳುತ್ತೇವೆ, ಕಾರ್ಗಿಲ್ ನಂತ  ಯುದ್ಧವಾದಾಗ ಸಿಯಾಚಿನ್ ಹಿಮದಲ್ಲಿ ಕುಳಿತ ಸೈನಿಕರು ನಮಗೆ ನೆನಪಾಗುತ್ತಾರೆ. ಆದರೆ ಉಳಿದ ಸಮಯದಲ್ಲಿ?. ಒಬ್ಬ ಸೈನಿಕನ ಸೇವೆಯನ್ನು ಸ್ಮರಿಸಲು ನಮಗೆ ಆತನ ಶವವೇ ಸಿಗಬೇಕೇ ಎಂಬ ಪ್ರಶ್ನೆಯನ್ನು ಹಾಕಿಕೊಳ್ಳೋಣ. ಒಂದಷ್ಟು ವರ್ಷ ಯಾವುದೂ ಯುದ್ಧವೇ ನಡೆಯದಿದ್ದಲ್ಲಿ ಅವರನ್ನು ನೆನೆಸಿಕೊಳ್ಳುವ ಮಾತು ದೂರವೇ ಸರಿ. ನಮ್ಮನ್ನು ಇಲ್ಲಿ ನಮ್ಮ ನಮ್ಮ ಬಂಗಲೆ, ಮನೆಗಳಲ್ಲಿ ಬೆಚ್ಚಗಿಡಲು ಸೈನಿಕರು ಗಡಿಗಳಲ್ಲಿ, ಪರ್ವತಗಳ ಹಿಮದಲ್ಲ್ಲಿ, ಸಮುದ್ರಗಳ ಅಲೆಗಳಲ್ಲಿ ದಿನನಿತ್ಯ ಪಡುತ್ತಿರುವ ಶ್ರಮ ನಮಗೆಂದೂ ಅರಿವಾಗುದೇ ಇಲ್ಲ.
‘ಸಮಾನ ಶ್ರೇಣಿಗೆ ಸಮಾನ ಪೆನ್ಶನ್’ ನೀತಿಯನ್ನು ನಿವೃತ್ತ ಸೈನಿಕರಿಗೆ ಅಳವಡಿಸಿ ಎಂಬ ಬೇಡಿಕೆಯನ್ನಿಟ್ಟು ಸಾವಿರಾರು ಸೈನಿಕರು ಬೀದಿಗಿಳಿಯುವವರೆಗೂ ನಮ್ಮ ಸರ್ಕಾರಗಳು  ಒಪ್ಪಿಕೊಂಡಿರಲೇ ಇಲ್ಲ. ಬದಲಿಗೆ ಹಾಗೆ ಮಾಡಲು ಸಕರ್ಾರಕ್ಕೆ ಹಣದ ಕೊರತೆಯಾಗುತ್ತದೆ ಎಂಬ ಸಬೂಬು ಹೇಳುತ್ತಾ ಬಂದಿದ್ದರು. ಆದರೆ ಸಂಸತ್ತಿನ, ಅಥವಾ ವಿಧಾನಸೌಧದ ಅಧಿವೇಶನಗಳಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ತಮ್ಮ ವೇತನಗಳನ್ನು ಬರೋಬ್ಬರಿ ಏರಿಸಿಕೊಂಡು  ಬಿಟ್ಟಿದ್ದರು. ಅದು ಸರ್ಕಾರಕ್ಕೆ ಯಾವ ಹೊರೆಯನ್ನೂ ಉಂಟು ಮಾಡಲಿಲ್ಲ.

ಮತ್ತಷ್ಟು ಓದು »

5
ಫೆಬ್ರ

ಚಿಮೂ ಗೌರವ ಡಾಕ್ಟರೇಟ್ : ನಿಲುಮೆಯ ನಿಲುವು ಮತ್ತು ಕನ್ನಡ ಸಾಹಿತ್ಯ ಲೋಕದ ನಿಲುವು

ನಿಲುಮೆ

ಕನ್ನಡದ ಹಿರಿಯ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕ ಚಿಮೂ ಅವರಿಗೆ ರಾಜ್ಯಪಾಲ ಹಂಸ ಭಾರಧ್ವಾಜ್ ರಾಜಕೀಯ ಉದ್ದೇಶದಿಂದ ಗೌರವ ಡಾಕ್ಟರೇಟ್ ನಿರಾಕರಿಸಿದನ್ನ ಪ್ರಶ್ನಿಸಿ ನಿನ್ನೆ ನಿಲುಮೆ ತನ್ನ ನಿಲುವನ್ನ ಪ್ರಕಟಿಸಿತ್ತು.ಇಂದಿನ ಪ್ರಜಾವಾಣಿ ಪತ್ರಿಕೆಯಲ್ಲಿ ಕನ್ನಡ ಸಾಹಿತ್ಯವಲಯದಿಂದ ರಾಜ್ಯಪಾಲರ ನಿಲುವಿಗೆ ತಪರಾಕಿಗಳು ಬಿದ್ದಿವೆ.

ಇವರ ತಪರಾಕಿಗಳನ್ನ ನೋಡಿ ನಮಗಂತೂ ಬಹಳ ಸಮಧಾನವಾಗಿದೆ.ಇದೋ ನಿಮಗಾಗಿ

ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ :
‘ರಾಜ್ಯಪಾಲರು ಮಾಡಿದ್ದು ಬಹಳ ತಪ್ಪು. ಅವರು ಈ ರೀತಿ ನಡೆದುಕೊಂಡಿರುವುದು ವಿಪರ್ಯಾಸ. ಚಿದಾನಂದಮೂರ್ತಿ ಅವರು ವಯಸ್ಸಿನಲ್ಲೂ, ವಿದ್ವತ್ತಿನಲ್ಲೂ ನಮಗಿಂತ ಹಿರಿಯರು. ಈ ಬೆಳವಣಿಗೆಯನ್ನು ನೋಡಿದರೆ ಸ್ವಾಭಿಮಾನ ಇರುವ ಯಾವ ಸಾಹಿತಿಯೂ ಗೌರವ ಡಾಕ್ಟರೇಟ್ ಸ್ವೀಕರಿಸಬಾರದು ಎಂದೆನಿಸುತ್ತದೆ. ಅವರಿಗೆ ಡಾಕ್ಟರೇಟ್ ಕೊಡುವ, ಕೊಡದಿರುವ ಬಗ್ಗೆ ಗುಪ್ತವಾಗಿ ಚರ್ಚೆ ನಡೆಯಬೇಕಿತ್ತು. ಆದರೆ ಈ ವಿಷಯ ರಾಜ್ಯಪಾಲರ ತನಕ ಹೋಗಿ, ದಿನಪತ್ರಿಕೆಗಳಲ್ಲಿ ಅವರಿಗೆ ‘ಡಾಕ್ಟರೇಟ್ ತಿರಸ್ಕರಿಸಲಾಗಿದೆ’ ಎಂದು ಪ್ರಕಟವಾಗುವ ಹಂತ ತಲುಪಿದ್ದು ನೋವಿನ ಸಂಗತಿ. ಯಾವ ಸಾಹಿತಿಗಳೂ ಈ ರೀತಿ ನೀಡಲಾಗುವ ಡಾಕ್ಟರೇಟ್ ಸ್ವೀಕರಿಸಬಾರದು’
ಮತ್ತಷ್ಟು ಓದು »

4
ಫೆಬ್ರ

ಇದು ಕನ್ನಡಕ್ಕಾದ ಅವಮಾನವಲ್ಲವೇ?

ಕರ್ನಾಟಕದಲ್ಲಿ ಕನ್ನಡದ ಪರ ಕೆಲಸ ಮಾಡಿದವರಿಗೆ ಗೌರವ ಕೊಡೋದು ತಪ್ಪಾ? ತಪ್ಪು ಅನ್ನೋದಾದ್ರೆ ರಾಜ್ಯಪಾಲರು, ಡಾ|| ಎಂ. ಚಿದಾನಂದಮೂರ್ತಿ  ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನಿರಾಕರಿಸಿರುವುದು ಸರಿಯಾಗುತ್ತದೆ,ಅಲ್ವಾ? ಚಿಮೂ ಯಾರು? ಕನ್ನಡಕ್ಕೆ ಅವರ ಕೊಡುಗೆಯೇನು? ಎಲ್ಲ ಅರ್ಹತೆಯಿದ್ದರು ಅವರಿಗೆ ಗೌರವ ಡಾಕ್ಟರೇಟ್  ನಿರಾಕರಿಸಲು ನೀಡಿರುವ ಕಾರಣವಾದರು ಏನು ಅಂತ ನೋಡಿದರೆ ‘ಸಂಘ ಪರಿವಾರದ’ ಜೊತೆ ಅವರು ಗುರ್ತಿಸಿಕೊಂಡಿರುವ ಮಹಾಪರಾಧವನ್ನ ಮಾಡಿರುವುದಂತೆ!

ಅದ್ಯಾವ ಸೀಮೆಯ ಅಪರಾಧ ಅಂತ ನನಗೂ ಇನ್ನು ಕೆಲವರಿಗೂ ಅನ್ನಿಸಬಹುದು ಆದರೆ ಸಿಕ್ಯುಲರ್ ಮನಸ್ಸುಗಳಿಗೆ ಅದು ದೇಶ ದ್ರೋಹಕ್ಕೆ ಸಮ ಅನ್ನಿಸಲೂಬಹುದು.ಆದರೆ ಚಿಮೂ ಅವರನ್ನ ಕೇಸರಿ-ಹಸಿರಿನ ಪರದೆ ಸರಿಸಿ, ಕೆಂಪು-ಹಳದಿಯ ಕನ್ನಡದ ಪರದೆಯ ಮೂಲಕ ನೋಡಿದಾಗಲೂ ಅವರ ವಿರೋಧಿಗಳು ಅವರಿಗೆ ಗೌರವ ಡಾಕ್ಟರೇಟ್ ನೀಡುವುದನ್ನು ವಿರೋಧಿಸಬಲ್ಲರೆ?

ಯಾವುದೇ ರಾಜಕೀಯ ಪಕ್ಷ,ಸಂಘಟನೆ, ಪಂಥಕ್ಕೆ ಸೇರದ ಒಬ್ಬ ಸಾಮನ್ಯ ಕನ್ನಡಿಗನ ಕಣ್ಣಿಗೆ ಚಿಮೂ ಅವರು,ಕನ್ನಡದ ಪ್ರಖ್ಯಾತ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕರಾಗಿ ಮಾತ್ರ ಕಾಣಬಲ್ಲರು.

ಇಂತ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನಿರಾಕರಿಸುವುದು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಪ್ರಾಚೀನ ಕರ್ನಾಟಕದ ಬಗ್ಗೆ ಅವರ ಒಲವನ್ನ,ನಿಷ್ಠೆಯನ್ನ,ತುಡಿತವನ್ನ ಮತ್ತು ಕನ್ನಡಕ್ಕಾಗಿ ಅವರು ಮಾಡಿರುವ ಕೆಲಸವನ್ನ ಕಡೆಗಣಿಸಿದಂತೆ ಅವಮಾನಿಸಿದಂತಲ್ಲವೇ? ಕನ್ನಡಕ್ಕಾಗಿ ಕೆಲಸ ಮಾಡಿದವರನ್ನ ಕಡೆಗಣಿಸುವುದು ಕನ್ನಡಿಗರನ್ನ,ಕರ್ನಾಟಕವನ್ನ ಕಡೆಗಣಿಸಿದಂತೆ-ಅವಮಾನಿಸಿದಂತೆಯೇ ಸರಿ. ಮತ್ತಷ್ಟು ಓದು »

4
ಫೆಬ್ರ

ಮಕ್ಕಳೇ, ಕಿಂದರಿಜೋಗಿ ಇಂಟರ್ ನೆಟ್ ನಲ್ಲಿದ್ದಾನೆ

* ಚುಕ್ಕಿಚಂದಿರ

ಇವನು ತುತ್ತೂರಿ ಊದುವ ಕಿಂದರಿಜೋಗಿಯಲ್ಲ. ನಿಮಗೆ ತುತ್ತೂರಿ ಊದಲು, ಚಿತ್ರ ಬಿಡಿಸಲು, ಕತೆಕವನ ಬರೆಯಲು, ಮಕ್ಕಳ ಸೃಜನಾತ್ಮಕತೆ ಬೆಳೆಸಲು ಹೇಳಿಕೊಡುತ್ತಾನೆ. ಒಂದು ಲೆಕ್ಕದಲ್ಲಿ ಇವನು ಮಕ್ಕಳಿಗೆ ಇಂಟರ್ ನೆಟ್ ಮಾಮ. ಮಕ್ಕಳಿಗೆ ಬೇಕಾದ್ದು ಇಂದು ಇಂಟರ್ ನೆಟ್ ನಲ್ಲಿ ಕಡಿಮೆಯಿದೆ. ಅವರ ಸೃಜನಶೀಲತೆ ಬೆಳೆಸಲು ಪೂರಕವಾದ ವೆಬ್ ಸೈಟ್, ಬ್ಲಾಗ್ ಗಳು ಕನ್ನಡದಲ್ಲಿ ಬೆರಳೆಣಿಕೆಯಷ್ಟಿವೆ ಅಷ್ಟೇ. ಚಂದಮಾಮ, ಬಾಲವನ.. ಮತ್ತೊಂದಿಷ್ಟು ಬ್ಲಾಗ್ ಗಳಿವೆ ಅಷ್ಟೇ.

ಹೆಚ್ಚು ಮಕ್ಕಳಿಗೆ ಇಷ್ಟವಾಗುವ ಹೊಸ ಮಕ್ಕಳ ವೆಬ್ ಸೈಟ್ ಇನ್ನೊಂದಿದೆ. ಅದು ಕಿಂದರಿಜೋಗಿ ಅಂತ. “ಕಿಂದರಜೋಗಿ, ಮಕ್ಕಳಿಗಾಗಿ ತೆರೆದಿರುವ ಮುಕ್ತ ತಾಣ. ದಿನನಿತ್ಯದ ಕಲಿಕೆಯಿಂದ ಹಿಡಿದು, ತಾವೇ ತಾವಾಗಿ ಹೊಸತನ್ನೇನಾದರೂ ಮಾಡಬಲ್ಲೆವು ಎಂಬ ಶಕ್ತಿಯನ್ನು ಮಕ್ಕಳಲ್ಲಿ ತುಂಬುವ ಒಂದು ಸಣ್ಣ ಪ್ರಯತ್ನ. ಯಾವುದೇ ತಂಡ ರಚನೆಯಿಲ್ಲದೆ, ಮಕ್ಕಳೊಡನೆ ತನ್ನಲ್ಲಿರುವ ಕಲೆ, ಕಲಿಕೆ, ಜ್ಞಾನ ಇತ್ಯಾದಿಗಳನ್ನು ಹಂಚಿಕೊಳ್ಳುವ ಎಲ್ಲರಿಗೂ ಇದು ವೇದಿಕೆ. ನೀವೂ ನಮ್ಮೊಂದಿಗೆ ಕೈಜೋಡಿಸ್ತೀರಲ್ಲವೇ” ಎಂದು ಕಿಂದರಿಜೋಗಿ ಹೇಳುತ್ತಾನೆ.

ಕಿಂದರಿಜೋಗಿ ಮಕ್ಕಳ ಎಲ್ಲ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತಾನೆ ಅಂತ ವೆಬ್ ಸೈಟ್ ನೋಡಿದಾಗಲೇ ಅರಿವಾಗುತ್ತದೆ. ಅಲ್ಲಿ ಓದಿ ಕಲಿ, ಕಥೆ, ಕವನ, ಗಣಿತ, ಚಿತ್ರಕಥೆ, ನಾಟಕ, ನೋಡಿ ನಲಿ, ಪ್ರಯೋಗ, ಭೂಮಿ ಮೇಲೆ, ಮಕ್ಕಳ ಸುದ್ದಿ, ಮಾಡಿ ತಿಳಿ, ವಿಜ್ಞಾನ, ವ್ಯಂಗ್ಯಚಿತ್ರಗಳು, ಸಂಗೀತ ಎಲ್ಲವೂ ಇದೆ.

ಒಂದಿಷ್ಟು ಸ್ಯಾಂಪಲ್ ನೋಡಿ
ಇಲ್ಲಿ……………………
ಮತ್ತಷ್ಟು ಓದು »

3
ಫೆಬ್ರ

ಇಲ್ಲಿ ಮತ್ತೊಂದು ಸಾಹಿತ್ಯ ಸಮ್ಮೇಳನವಿದೆ…

3
ಫೆಬ್ರ

ಆತ್ಮಕತೆಗಳೊಂದಿಗೆ Simply Fly

ವಿಕಾಸ್ ಹೆಗ್ಡೆ

ನಿನ್ನೆಗೆ ಕ್ಯಾಪ್ಟನ್ ಗೋಪೀನಾಥರ Simply Fly ಪುಸ್ತಕವನ್ನು ಓದಿ ಮುಗಿಸಿದೆ.  ರೆಟ್ಟೆಗಾತ್ರದ ಈ ಪುಸ್ತಕವನ್ನು ಒಂದೂವರೆ ತಿಂಗಳಿನ ಹಿಂದೆಯೇ ಓದಲು ಶುರುಮಾಡಿದ್ದರೂ ಮಧ್ಯೆ ಮಧ್ಯೆ ನಾನಾ ಕಾರಣಗಳಿಂದ ಅದನ್ನು ಮುಗಿಸಲಾಗದೇ ಇಷ್ಟು ತಡವಾಯಿತು. ಆ ಪುಸ್ತಕ ಕನ್ನಡದಲ್ಲಿ ’ಬಾನಯಾನ’ವಾಗಿ ಹೊರಬಂದಿದ್ದರೂ ಕೂಡ ಇಂಗ್ಲೀಷಲ್ಲಿ ಮೂಲ ಪುಸ್ತಕವನ್ನೇ ಓದೋಣ ಎಂದು ಹೊರಟಿದ್ದೂ ತಡವಾಗಿ ಮುಗಿದುದ್ದಕ್ಕೆ ಒಂದು ಕಾರಣ ಎನ್ನಬಹುದು. ಇರಲಿ. ಸಾಮಾನ್ಯವಾಗಿ ನನಗೆ ಮೊದಲು ಆತ್ಮಕತೆಗಳನ್ನು ಓದಲು ಇಷ್ಟವಾಗುತ್ತಿರಲಿಲ್ಲ. ಅದ್ಯಾವ ಗಳಿಗೆಯಲ್ಲೋ ಲಂಕೇಶರ ಆತ್ಮಕತೆ ’ಹುಳಿಮಾವಿನಮರ’ವನ್ನು ಓದಿದ ಮೇಲೆ ಆತ್ಮಕತೆಗಳ ಬಗ್ಗೆ ಆಸಕ್ತಿ ಹೊರಟುಹೋಗಿತ್ತು. ಆಗಿನ್ನೂ ಸಣ್ಣವಯಸ್ಸಿದ್ದುದರಿಂದ ಹಾಗೆನ್ನಿಸಿತ್ತೋ ಅಥವಾ ಆ ಪುಸ್ತಕವೇ ಹಾಗಿತ್ತೋ ನೆನಪಿಲ್ಲ. ಆತ್ಮಕತೆಗಳು ಎಂದರೆ ಕೇವಲ ನಿರುಪಯೋಗಿ ವೈಯಕ್ತಿಕ ವಿವರಗಳು, ಅದು ಯಾರದ್ದಾದರೂ ಸರಿ, ಓದಿ ಮಾಡುವುದಾದರೂ ಏನು ಎನ್ನಿಸಿಬಿಟ್ಟಿತ್ತು. ಆದರೆ ನನ್ನ ಈ ಭಾವನೆಯನ್ನು ಬದಲಿಸಿದ್ದು ಶಿವರಾಮಕಾರಂತರ ’ಹುಚ್ಚುಮನಸ್ಸಿನಹತ್ತುಮುಖಗಳು’. ಒಮ್ಮೆ ಗೆಳೆಯನೊಬ್ಬನ ಮನೆಗೆ ಹೋದಾಗ ಕಂಡಪುಸ್ತಕವನ್ನು ಸುಮ್ಮನೇ ಕೈಗೆತ್ತಿಕೊಂಡು ಓದಿದ್ದು ಆತ್ಮಕತೆಗಳ ಬಗ್ಗೆ ನನ್ನ ಭಾವನೆಯನ್ನು ಬದಲಿಸಿತು. ಎಲ್ಲಾ ಆತ್ಮಕತೆಗಳು ಆಸಕ್ತಿದಾಯಕವಾಗಿರಬೇಕಂತಿಲ್ಲ, ಆದರೆ ಅದರಿಂದ ತಿಳಿದುಕೊಳ್ಳುವುದು ಬಹಳಾ ಇರುತ್ತದೆ ಎಂಬುದು ಅರ್ಥವಾಗಿತ್ತು. ಹಿರಿಯರ ಅನುಭವವು ತಿಳಿಸಿಕೊಡುವಷ್ಟು ಮತ್ತೆಲ್ಲೂ ಸಿಗುವುದಿಲ್ಲ ಎಂದು ಖಾತ್ರಿಯಾಗಿತ್ತು. ಒಬ್ಬರ ಬಗ್ಗೆ ಮತ್ತೊಬ್ಬರು ಬರೆದ ಜೀವನ ಚರಿತ್ರೆಗಳು ಒಬ್ಬ ವ್ಯಕ್ತಿಯ ಸರಿಯಾದ ಚಿತ್ರಣವನ್ನು ಕೊಡಲು ಸಾಧ್ಯವಾಗುವುದಿಲ್ಲ. ಒಬ್ಬ ವ್ಯಕ್ತಿ ತನ್ನ ಬಗ್ಗೆ ತಾನು ತಿಳಿದುಕೊಂಡಷ್ಟು ಮತ್ಯಾರಿಗೂ ತಿಳಿಯಲು ಸಾಧ್ಯವಿಲ್ಲವಲ್ಲ ಅಂತೆಯೇ ಶಿವರಾಮ ಕಾರಂತರ ಆತ್ಮಕತೆ ಓದಿ ಅವರ ಬಗ್ಗೆ ಅಚ್ಚರಿಪಟ್ಟೆ. ಎಲ್ಲಾ ಕ್ಷೇತ್ರಗಳಲ್ಲೂ ಅವರ ಒಂದೊಂದು ಕೆಲಸದ ಬಗ್ಗೆಯೂ ಅವರಿಟ್ಟುಕೊಂಡ ನೋಟಗಳು, ಅದನ್ನು ಕಾರ್ಯಗತಗೊಳಿಸಿದ, ಅನುಭವಗಳ ವಿವರಗಳು ಮನಸ್ಸಿನಲ್ಲಿ ಕೂತವು. ಅದರಿಂದ ನನ್ನಲ್ಲಿ ಏನೋ ಅದ್ಭುತ ಬದಲಾವಣೆಯಾಗಿ ಹೋಯಿತು ಅಂತೇನೂ ಇಲ್ಲ , ಆದರೆ ಅದರಿಂದಾಗಿ ಜೀವನದ ಕೆಲ ವಿಷಯಗಳ ಬಗ್ಗೆ ನನ್ನ ಧೋರಣೆ ಬದಲಾಯಿಸಿಕೊಂಡೆ. ಹೊಸನೋಟ ಬೆಳೆಸಿಕೊಂಡೆ. ಅದು ಬಹಳ ಸಹಾಯಕಾರಿಯೂ ಆಯಿತು. ಮತ್ತಷ್ಟು ಓದು »
2
ಫೆಬ್ರ

ಇದೋ ನಿಮಗೆ ಆಹ್ವಾನ…

ಮತ್ತಷ್ಟು ಓದು »

1
ಫೆಬ್ರ

ಪೇಜಾವರ ಶ್ರೀಗಳಿಗೆ ದಲಿತರ ಮನೆ(ನ) ಇನ್ನೂ ಹತ್ತಿರವಿಲ್ಲವೇ?

ಸಾತ್ವಿಕ್ ಎನ್.ವಿ

ಉಡುಪಿಯಲ್ಲೊಂದು ಪ್ರಸಿದ್ಧ ಕಾಲೇಜು. ಪ್ರತಿವರ್ಷವೂ ಹೊಸದಾಗಿ ಬರುವ ವಿದ್ಯಾರ್ಥಿಗಳ ಜೊತೆ ಆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸ್ವಾಮೀಜಿಯವರೊಂದಿಗೆ ಸಂವಾದ ಕಾರ್ಯಕ್ರಮ. ಒಂದು ವರ್ಷವೂ ತಪ್ಪದೇ ಯತಿಗಳಿಗೆ ವಿದ್ಯಾರ್ಥಿಗಳು ಕೇಳುವ ಪ್ರಶ್ನೆ ‘ಸ್ವಾಮೀಜಿ ಕೃಷ್ಣಮಠದಲ್ಲಿ ಸಹಪಂಕ್ತಿ ಭೋಜನ ಯಾಕಿಲ್ಲ’ ಅಂತ. ‘ಅದು ನಮ್ಮ ಮಠದ ಸಂಪ್ರದಾಯ ಕ್ರಮ. ಅಲ್ಲದೇ ಯಾವುದೇ ಬ್ರಾಹ್ಮಣರು ‘ಅನ್ಯ’ರೊಂದಿಗಿನ ಸಹಪಂಕ್ತಿ ಭೋಜನ ಅಷ್ಟಾಗಿ ಇಷ್ಟಪಡುವುದಿಲ್ಲ’ ಎಂಬ ರೆಡಿಮೇಡ್ ಉತ್ತರ ಸ್ವಾಮೀಜಿಗಳಿಂದ. ಮರುಪ್ರಶ್ನೆ ಕೇಳಲು ಹೊರಟ ವಿದ್ಯಾರ್ಥಿಗೆ ಪಕ್ಕದಲ್ಲಿರುವ ಮೇಷ್ಟ್ರುಗಳ ಬಿರುಸುನೋಟ ರೆಡ್ ಸಿಗ್ನಲ್ ಆಗಿರುತ್ತದೆ. ಅಲ್ಲಿಗೆ ಸಂವಾದ ಕಾರ್ಯಕ್ರಮ ಮುಗಿಯುತ್ತದೆ.
ಈ ಪ್ರಸಂಗ ನೆನಪಾದದ್ದು ಪೇಜಾವರ ಶ್ರೀಗಳ ದಲಿತ ಕಾಲೋನಿಗಳ ಭೇಟಿಯನ್ನು ಪತ್ರಿಕೆಯಲ್ಲಿ ನೋಡಿದ ಸಂದರ್ಭದಲ್ಲಿ. ಸ್ವಾಮೀಜಿಯವರು ಅಲ್ಲಿನ ದಲಿತರಿಗೆ ವೈಷ್ಣವ ದೀಕ್ಷೆಯನ್ನು ನೀಡುವ ಮೂಲಕ ಜನರನ್ನು ಉತ್ತಮ ವ್ಯಕ್ತಿಗಳಾಗಿ ಪರಿವರ್ತಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಈ ಪ್ರಕ್ರಿಯೆ ನಮ್ಮಲ್ಲಿ ಸಾಮಾನ್ಯವಾದ ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವು- ಈವರಗೆ ದಲಿತರು ಉತ್ತಮ ವ್ಯಕ್ತಿಗಳಾಗಿರಲಿಲ್ಲವೇ? ಸಹಪಂಕ್ತಿ ಭೋಜನಕ್ಕೆ ಒಪ್ಪದ ಮನಸ್ಸುಗಳು ಮುಂದೆ  ದಲಿತರನ್ನು ಅಥವಾ ಇತರೆ ವೈಷ್ಣವ ದೀಕ್ಷೆ ಪಡೆದ ವ್ಯಕ್ತಿಗಳನ್ನು ತಮ್ಮವರೆಂದು ಒಪ್ಪಿಕೊಳ್ಳುತ್ತಾರೆಯೇ?

ಮತ್ತಷ್ಟು ಓದು »

1
ಫೆಬ್ರ

ಹೀಗೆಲ್ಲಾ ಉಂಟು!

ವಾಣಿ ಶೆಟ್ಟಿ, ಬೆಂಗಳೂರು

ಬೃಹತ್ ಬೆಂಗಳೂರಿನ ಕೆಲವು ಅನುಭವಗಳನ್ನು ನಾನೀಗ ಹೇಳ ಹೊರಟಿರುವೆ .ನೆನಪಾದರೆ ನಗು, ಅಳು ಎರಡೂ ಬರುವ ಘಟನೆಗಳವು. ಅದೊಂದು ಶನಿವಾರ ರಜೆಯಿದ್ದ ಕಾರಣ ಸ್ನೇಹಿತೆಯ ರೂಮಿಗೆ ಹೊರಟಿದ್ದೆ. ನಾನಿದ್ದ BTM ನಿಂದ ಅಷ್ಟು ದೂರದ ಕೋರಮಂಗಲಕ್ಕೆ ಆಟೋದಲ್ಲೇ ಹೊರಟಿದ್ದೆ. .(ನನ್ನಂತಹ ಇನ್ನೊಂದು ೪ ಜನರಿದ್ದರೆ ಆಟೋದವರ ಹೊಟ್ಟೆಪಾಡು ಬಹು ಸುಲಭ !)ಕೋರಮಂಗಲ (ಮೊನ್ನೆ ಮೊನ್ನೆ ಗೊತ್ತಾಗಿದ್ದು ಹೆಸರು )ದಲ್ಲೊಂದು ಸಿಗ್ನಲ್ ಬಿತ್ತು.ಇಳಿಯಲಿರುವ ಸ್ಟಾಪ್ ಮುಂದಿತ್ತು.ನಾನು ವಾಹನದಲ್ಲಿ ಕೂತ ಪಯಣಿಗರ ಯೋಗಕ್ಷೇಮ ವಿಚಾರಿಸಲು ಬರುತ್ತಿದ್ದ ಭಿಕ್ಷುಕರು ,ಮಾರಾಟಗಾರರನ್ನು ನೋಡುತ್ತಿದ್ದೆ .ಆಗ ನನ್ನ ದೃಷ್ಟಿ ಬಿತ್ತು ನೋಡಿ, ಸಿಗ್ನಲ್ ಕೆಳಗೆ ನಿಂತ ಬೈಕ್ ಸವಾರನ ಜೊತೆ ಜಗಳ ಆಡುತ್ತಿದ್ದ ಒಬ್ಬ ಹಿಜಡಾ ಮೇಲೆ. ನಮ್ಮ ಉಡುಪಿ ,ಕುಂದಾಪುರದ ಕಡೆ ಇವರು ಬೆರಳೆಣಿಕೆಯಷ್ಟು ಇರಬಹುದು ..ಆದ್ರೆ ನಾನಂತೂ ನೋಡಿದ್ದೇ ಇಲ್ಲ, t .v ಲೆಲ್ಲಾ ನೋಡಿದ್ದಾಗ ಭಯಮಿಶ್ರಿತ ಕುತೂಹಲ ಇದ್ದೆ ಇತ್ತು .ನಾ ಕಣ್ಣು ಬಾಯಿ ಬಿಟ್ಟುಕೊಂಡು ಅವಳನ್ನೇ ನೋಡುತ್ತಿದ್ದುದು ಅವಳಿಗೆ ಅದು ಹ್ಯಾಗೆ ಗೊತ್ತಾಯ್ತೋ, ಸ್ಮೈಲ್ ಕೊಡುತ್ತಲೇ ಬಂದುಬಿಟ್ಟಳಲ್ಲ ನಮ್ಮ ಆಟೋದ ಕಡೆ !ನನ್ನ ಫ್ರೆಂಡ್ ಹೇಳಿದ್ದು ನೆನಪಾಯ್ತು ,ಅವರು ಹುಡುಗೀರ ಹತ್ತಿರ ಏನೂ ಕೇಳಲ್ಲ ಅಂತ. !ಸುಳ್ಳೇ ಸುಳ್ಳು ಕ್ಯಾರೆ ಅನ್ನದೆ ಆಟೋ ಹತ್ತಿ ನನ್ನ ಪಕ್ಕ ಕುಳಿತು ಕೈ ಚಾಚಿದಳು.. ಅಬ್ಬಾಎಂದೂ ನಂಬದ ದೇವರು ಕೂಡ ನೆನಪಿಗೆ ಬಂದುಬಿಟ್ಟ ! ಆಟೋದವರಿಗೆ ಕೊಡಲು ಕೈಯಲ್ಲೇ ಇದ್ದ ನೂರರ ನೋಟನ್ನೇ ನಡುಗುವ ಕೈಯಿಂದ ಕೊಟ್ಟುಬಿಟ್ಟೆ.ಅವಳು ಅದನ್ನು ತೆಗೆದುಕೊಂಡು ತನ್ನಲ್ಲಿದ್ದ ಐವತ್ತರ ನೋಟನ್ನು ಅದು ಹೇಗೋ ತಲೆಗೆ ಸುತ್ತು ಹಾಕಿ (ನಾ ನೋಡಲಿಲ್ಲ) ಕೊಟ್ಟು ಬಿಟ್ಟಳಪ್ಪ.ನಾ ತೊದಲುತ್ತ ಬೇಡ ಬೇಡ ಅಂದಿರಬೇಕುಸ್ವರ ಹೊರಗೆ ಬಂದಿದ್ದು ಅನುಮಾನ !ಅವಳು ಬೇಡ ಅನ್ನೋಲ್ಲ, ಒಳ್ಳೆದಾಗುತ್ತೆ ಅಂತ ನನ್ನ ತಲೆ ಮುಟ್ಟಿ ಕೆಳಗಿಳಿದು ಹೋಗಿಬಿಟ್ಟಳು .ಅಲ್ಲಿ ತನಕ ನಾ ಉಸಿರಾಡಿದ್ದರೆ ಕೇಳಿ !……..ಆಗ ಬಾಯಿ ತೆರೆದ ಆಟೋದವನು, “ಮ್ಯಾಡಂ ಅವರನ್ನು ಹಾಗೆಲ್ಲ ನೋಡಬಾರದು ಅಂತ..ನಮಸ್ಕಾರ !ಮೊದಲೇ ಹೇಳಿದ್ದರೆ ಏನಾಗ್ತಿತ್ತೋ !?! ..ಈಗ ಹೋಗೋವಾಗ ಎಲ್ಲಾದರೂ ಅವರನ್ನು ನೋಡಿದರೆ ಕೈಯ್ಯಲ್ಲಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದರೂ ಕೂಡ ಅಲ್ಲಾಡದೆ ಅದನ್ನೇ ನೋಡುತ್ತಿರುತ್ತೇನೆ!
ಹ್ಮ್.. ಇದೊಂದು ಮಾಯಾನಗರೀನೆ ಹೌದು ಕಣ್ರೀ. ಇದು ಕೊಟ್ಟ ಪಾಡು , ನಾ ಪಟ್ಟ ಬವಣೆ ಎಷ್ಟೆಲ್ಲಾ ಅಂತ ಗೊತ್ತಾ..ಬರೆಯ ಹೋದರೆ ಕಾದಂಬರಿನೇ ಆದೀತು !3  ಸ್ಟಾಪ್ ಹಿಂದೆ ಹೋದರೆ ಸಿಗೋ ಸಿಲ್ಕ್ ಬೋರ್ಡ್ ಗೆ ಹೋಗಲು ಗೊತ್ತಿಲ್ಲದೇ btm ನಿಂದ ಮೆಜೆಸ್ಟಿಕ್ ಹೋಗಿ ಅಲ್ಲಿಂದ ಸಿಲ್ಕ್ ಬೋರ್ಡ್ಗೆ ಹೋದ ಪರಮ ಬುದ್ದಿವಂತೆ ನಾನು !.ಒಬ್ಬ ಆಸಾಮಿನ ಕೇಳಿದ್ದೆ,ಸಿಲ್ಕ್ ಬೋರ್ಡ್ಗೆ ಹೋಗಬೇಕಾದ್ರೆ ಹ್ಯಾಗ್ ಹೋಗ್ಬೇಕು ಅಂತ ! ಪಾಪ ,ಗೊತ್ತಿಲ್ಲ ಅನ್ನೋಕೆ ನಾಚಿಕೆ ಆಗಿರಬೇಕು !ನೆಕ್ಸ್ಟ್ ಸ್ಟಾಪ್ಗೆ ಹೋಗಿ ಯಾರ್ನಾದ್ರೂ ಕೇಳಿ ಅಂದ .ಅದಕ್ಕೆ ಅಲ್ಲಿ ತನಕ ಯಾಕೆ ಹೋಗ್ಬೇಕು ??ಮೆಜೆಸ್ಟಿಕ್ ನಲ್ಲಿ ಎಲ್ಲ ಬಸ್ಸು ಸಿಗತ್ತೆ ಅಂತ ಅಲ್ಲಿಗೆ ಹೋಗೋಕೆ ಬಸ್ ಸ್ಸ್ಟ್ಯಾಂಡ್ ನಲ್ಲಿ ನಿಂತರೆ ಬರೋ ಬಸ್ಸುಗಳ ಮೇಲಿದ್ದ ಹೆಸರು ಕೆಂ..ನಿ (!!?!!)ಆಮೇಲೆ ಬಂದ ಬಸ್ಸುಗಳ ಮೇಲೆ ಬರೆದಿತ್ತು ಕೆಂಪೇಗೌಡ ಬಸ್ ನಿಲ್ದಾಣ ಅಂತ !ಓಹೋ ಗೊತ್ತಾಯ್ತು ಗೊತ್ತಾಯ್ತು !ಅಲ್ಲಾ.ನಮ್ಮ ಕಡೆ ಕಂಡಕ್ಟರುಗಳು ಕಿರುಚುತ್ತಾರಪ್ಪ ಪ್ರಸ್ತುತ ನಿಲ್ದಾಣ ಮತ್ತೆ ಹೋಗಲಿರೋ ನಿಲ್ದಾಣದ ಹೆಸರನ್ನು ..ಇವರೆಲ್ಲ ಯಾಕೆ ಹಿಂಗೆ ?!ಛೆ ಸರಿಯಿಲ್ಲಪ್ಪ ಬೆಂಗಳೂರು !ಆಮೇಲೆ ಫ್ರೆಂಡ್ ಮೂಲಕ ಮೆಜೆಸ್ಟಿಕ್ ಮತ್ತೆ ಕೆಂ..ನಿ ಎರಡೂ ಒಂದೇ ಅಂತ ಗೊತ್ತಾದಾಗ ನಗು ಬಂತು ..ಸಂಜೆ ಸಿಲ್ಕ್ ಬೋರ್ಡ್ ಅನ್ನೋದು ನಾನಿದ್ದ ಸ್ಟಾಪಿನ ೩ ಸ್ಟಾಪ್ ಹಿಂದೇನೆ ಅಂತ ಗೊತ್ತಾದಾಗ ನಗು ,ಅಳು ಎರಡೂ ಬಂತು ! ಮತ್ತಷ್ಟು ಓದು »