ಕರಾವಳಿಗರನ್ನು ಬಲಿ ತೆಗೆದುಕೊಳ್ಳಲಿರುವ ನೇತ್ರಾವತಿ ನದಿ ತಿರುವು ಯೋಜನೆ…!
-ಶಂಶೀರ್, ಬುಡೋಳಿ
ಯಾರಾದರೂ ಊಹಿಸಿರಬಹುದೇ?
ತಣ್ಣನೆಯ ಹಾದಿಯಲ್ಲಿ ಹರಿಯುತ್ತಿದ್ದ ನೇತ್ರಾವತಿ ನದಿಗೋಸ್ಕರ ಒಂದೊಮ್ಮೆ ಹೋರಾಟ ನಡೆಸುವ ಬಗ್ಗೆ ನಮ್ಮ ಹಿರಿಯರು ಕನಸು ಕೂಡಾ ಕಂಡಿರಬಹುದೇ? ಇಲ್ಲ. ಸಾಧ್ಯವೇ ಇಲ್ಲ. ಯಾಕೆಂದರೆ ನದಿಯ ಮೂಲ ಶೋಧಿಸಬೇಡ ಎನ್ನುವ ಮಾತನ್ನು ಅವರು ನಂಬಿದ್ದರು. ಹಾಗಾಗಿ ಅವರು ಈ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ.ಪಶ್ಚಿಮ ಘಟ್ಟದ ಉಳಿವಿಗಾಗಿ ನಡೆಸುತ್ತಿರುವ ಹೋರಾಟದ ನಂತರ ಕರಾವಳಿಗರು ನಡೆಸುತ್ತಿರುವ ನೇತ್ರಾವತಿ ನದಿ ಉಳಿಸುವ ಹೋರಾಟ ಇವತ್ತಿಗೂ ನಡೆಯುತ್ತಲೇ ಇದೆ.ಮೊನ್ನೆಯ ವಿಶ್ವ ತುಳು ಸಮ್ಮೇಳನದಲ್ಲೂ ಸಹ ಈ ಬಗ್ಗೆ ಚರ್ಚೆ ಉಂಟಾಗಿತ್ತು. ಇತ್ತೀಚಿಗೆ ಪರಮಶಿವಯ್ಯನವರು ಈ ಬಗ್ಗೆ ಚಕಾರವೆತ್ತಿದ್ದು ತನ್ನ ವರದಿ ಅಸಮರ್ಪಕವಾಗಿದ್ಜದರೆ ತಾನು ಯಾವ ಶಿಕ್ಷಾರ್ಹ ಕ್ರಮಕ್ಕೂ ಬದ್ಧ ಎಂದು ಹೇಳಿಕೆ ಕೊಟ್ಟಿದ್ದಾರೆ. ಆದರೆ ಸರಕಾರ ಮಾತ್ರ ತೆಪ್ಪಗಾಗಿದೆ. ವಿಜ್ಞಾನ-ತಂತ್ರಜ್ಞಾನ,ಭ್ರಷ್ಟ ರಾಜಕಾರಣ,ಬಂಡವಾಳಶಾಹಿತ್ವದ ವಿರುದ್ಧದ ಹೋರಾಟದ ತರಹೇ ಈ ನೇತ್ರಾವತಿ ನದಿ ಉಳಿಸುವ ಹೋರಾಟ. ಈ ಹೋರಾಟಕ್ಕೆ ಪ್ರಗತಿಪರ ಸಂಘಟನೆಗಳು ಮಾತ್ರ ಬೆಂಬಲ ಕೊಡುತ್ತಿರುವುದರಿಂದ ಬಲಪಂಥೀಯ ಎನ್ನಿಸುವ ಸಂಘಟನೆಗಳ ವಿರುದ್ಧದ ಆಟದಿಂದ ಇವತ್ತು ಈ ಹೋರಾಟ ಮುಂದುವರಿಯುತ್ತಲೇ ಇದೆ. ಹಾಗಾಗಿ ಪಕ್ಷಾತೀತವಾದ ಸ್ವತಂತ್ರ ಸಂಘಟನೆಗಳು, ಸೇವಾ ಸಂಸ್ಥೆಗಳು ಮಾತ್ರ ಈ ಹೋರಾಟದಲ್ಲಿ ಭಾಗಿಯಾಗಿರುವುದನ್ನು ನಾವು ನೋಡ್ತಾ ಇದ್ದೇವೆ. ಉದಾಹರಣೆಗೆ ಭಾರತೀಯ ಕಿಸಾನ್ ಸಂಘ,ನಾಗರಿಕ ಸೇವಾ ಟ್ರಸ್ಟ್ ಮುಂತಾದ ಸಂಘಟನೆಗಳನ್ನ ಗುರುತಿಸಬಹುದು. ೨೦೦೯ಸಾಗಿದ್ದರೂ ಈ ವರ್ಷದಲ್ಲಿ ನೇತ್ರಾವತಿ ನದಿಯ ಹರಿವನ್ನು ನಿಲ್ಲಿಸಿ ಬೆಂಗಳೂರಿನಲ್ಲಿ ನದಿ ತಿರುಗಿಸುವ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ.
ಹೆಣ್ಣು ಮಹಿಳೆಯಾಗುತ್ತಿದ್ದಾಳೇಯೇ?
– ರೂಪ ರಾವ್
ನಿನ್ನೆ ಮಹಿಳಾ ದಿನಾಚರಣೆ, ಎಷ್ಟೊ ಶುಭಾಶಯಗಳು, ಆಕಾಂಕ್ಷೆಗಳು. ಹಾರೈಕೆಗಳು. ಒಮ್ಮೆಗೆ ಕೂತು ಯೋಚಿಸುತ್ತಿದ್ದಾಗ, ಮೂಡಿದ ಯೋಚನೆಗಳು ಹಲವಾರು ಅದರಲ್ಲಿ ಮೂಡಿದ ಒಂದು ಪ್ರಶ್ನೆ,
ಮಹಿಳೆ ಎನಿಸಿಕೊಳ್ಳುವ ಹಂಬಲದಲ್ಲಿ ಹೆಣ್ಣಿನ ಸಹಜ ಸಂವೇದನೆಗಳನ್ನು ಕಳೆದುಕೊಳ್ಳುತ್ತಿದ್ದೇವೆಯೇ ನಾವುಗಳು? ಅಷ್ಟಕ್ಕೂ ಹೆಣ್ಣಿಗೂ ಮಹಿಳೆಗೂ ಏನು ವ್ಯತ್ಯಾಸ?
ಹೌದು ಅರ್ಥದ ಪ್ರಕಾರ ಯಾವುದೂ ಇಲ್ಲ
ಆದರೆ ಮನಸಿಗೆ ಹೆಣ್ಣು ಆಪ್ತಳಾಗುತ್ತಾಳೆ, ಆದರೆ ಮಹಿಳೆ ದೂರದಲ್ಲಿಯೇ ನಿಲ್ಲುತ್ತಾಳೆ .
ಇದರ ಬಗ್ಗೆ ನನ್ನದೊಂದಿಷ್ಟು ಸಂವೇದನೆಗಳು
ಹೆಣ್ಣಿನ ಮೊದಲ ಹಂತವೇ ಹೆಣ್ಣಾಗುವುದು.
ಬಾಲಕಿ ಹೆಣ್ಣಾಗುವ ಆ ಹಂತದಲ್ಲಿ ಎಷ್ಟೋ ಕಾತುರತೆ,ನಿರೀಕ್ಷೆಗಳು,ನಾಚಿಕೆ,ಲಜ್ಜೆ,ಕನಸುಕಂಗಳು,ಕೆನ್ನೆಯ ಚುಂಬಿಸುತ್ತಲೆ ಇರುವ ರೆಪ್ಪೆಗಳು… ಹೀಗೆ ಏನೇನೋ ಲಕ್ಷಣಗಳು … ಹೌದು ಇವೆಲ್ಲಾವನ್ನು ಓದಿರುತ್ತೇವೆ, ನೋಡಿರುತ್ತೇವೆ ಎಲ್ಲಿ ಕಥೆಗಳಲ್ಲಿ ಕಾವ್ಯಗಳಲ್ಲಿ,ನಮ್ಮ ತಾಯಿ ಅಥವಾ ಅವರ ತಾಯಿಯ ಕಾಲಕ್ಕಿರಬಹುದೇನೋ…!
ಈಗ ಬಾಲಕಿ ಹೆಣ್ಣಾಗುವುದಿಲ್ಲ ಸೀದಾ ಮಹಿಳೆಯಾಗುವ ಹಂತಕ್ಕೆ ತಲುಪಿರುತ್ತಾಳೆ, ಅದೇನು ಗಾಂಭೀರ್ಯ,ಎಲ್ಲವನ್ನೂ ತಿಳಿದಿರುವವರ ಲಕ್ಷಣ, ಹುಡುಗರೆಂಬ ಕುತೂಹಲವಿರಲಿ ಅವರನು ಹೇಗೆ ಆಟ ಆಡಿಸುವುದೆಂಬ ಯೋಚನೆಯಲ್ಲಿ ತೊಡಗುತ್ತಾಳೆ.ಯಾವುದೇ ವಿಚಾರಕ್ಕಿರಲಿ ದೊಡ್ಡವರನ್ನು ಕೇಳಬೇಕಾದ ಅನಿವಾರ್ಯತೆ ಈಗ ಇಲ್ಲ.ಎಲ್ಲಕ್ಕೂ ಅಂತರ್ಜಾಲವಿದೆ. ಯಾವುದೇ ಕುತೂಹಲ,ಪ್ರಶ್ನೆಗೆ ಉತ್ತರ ಅಗತ್ಯಕ್ಕಿಂತ ಹೆಚ್ಚಾಗಿಯೇ ಸಿಗುತ್ತದೆ.ಹಾಗಾಗಿ ಲೈಂಗಿಕತೆ ಎಂಬುದು ಅವಳಿಗೆ ದೊಡ್ಡ ವಿಷಯವೇ ಅನ್ನಿಸುವುದಿಲ್ಲ.
ಈಗೀಗ ಕಾಲೇಜಿನಲ್ಲಿ ಹುಡುಗ ಕೈ ಕೊಟ್ಟ ಎಂಬ ಮಾತುಗಳಿಗಿಂತ ಹುಡುಗಿ ಬಿಟ್ಟು ಹೋದಳು ಎಂಬ ದೂರುಗಳೇ ಹೆಚ್ಚು.
ಅಪ್ಪ ಅಮ್ಮನ ನಂತರ ಹುಡುಗಿ ಹುಡುಕುವುದೇ ಸೂಕ್ತ ಗೆಳೆಯನಿಗಾಗಿ, ಹುಡುಗನಲ್ಲಿ ಗೆಳೆಯನನ್ನು ಹುಡುಕುತ್ತಾಳೆ,ಆಪ್ತವಾದ ಭಾವನೆ ಹುಟ್ಟು ಹಾಕುವ ಹುಡುಗ ಅವಳಿಗೆ ಹಿಡಿಸುತ್ತಾನೆ. ಆದರೆ ಯಾವುದೋ ಒಂದು ಘಳಿಗೆ ಯಲ್ಲಿ ತಾನು ಬಂದಿರುವುದು ಓದಲು ಪ್ರೀತಿಸಲು ಅಲ್ಲ ಎಂಬ ದಿವ್ಯ ತಿಳುವಳಿಕೆ ಬರುತ್ತದೆ. ಇದ್ದಕ್ಕಿದ್ದಂತೆಯೇ ಬಾಳಿನ ಗುರಿಗಳು ನೆನಪಾಗುತ್ತವೆ. ತನ್ನ ಮೊದಲ ಆದ್ಯತೆ ತಂದೆ ತಾಯಿ ಹಾಗು ಗುರಿ ಈ ಹುಡುಗ ಅಲ್ಲ ಎಂಬ ಆಲೋಚನೆಗಳು ಮುತ್ತಿಡಲಾರಂಭಿಸಿದೊಡನೆಯೇ ಹುಡುಗನ ಚಿತ್ರ ಮನದಿಂದ ದೂರವಾಗಲಾರಂಭಿಸುತ್ತದೆ. ಅದು ತಾತ್ಕಾಲಿಕ, ಮತ್ತೊಬ್ಬ ಹುಡುಗ ಬಂದು ಮನದಲ್ಲಿ ಕೂರುವವರೆಗೆ…