ಮರಳಿ ಎದ್ದು ಬಾ ಜಪಾನ್…
ಮತ್ತೆ ಅದೇ ಹಾಡು ಕೇಳುವ ಪ್ರಸಂಗ ಬರುತ್ತದೆ ಎಂದುಕೊಂಡಿರಲಿಲ್ಲ.
ರೈಲಿನಲ್ಲಿ ಹೋಗುತ್ತಿರುವಾಗ ನಾಲ್ವರು ವಿದೇಶಿಯರು ಇದಕ್ಕಿದ ಹಾಗೆ ಎದ್ದು ನಿಂತು ಹಾಡತೊಡಗಿದರು. ಬೋಗಿಯಲ್ಲಿನ ಜನರಿಗೆಲ್ಲ ಆಶ್ಚರ್ಯ. ಯಾರೋ ಹಿರಿಯರು ಆ ವಿದೇಶಿಯರನ್ನು ಕೇಳಿದಾಗ ಅಲ್ಲಿದ್ದ ಜನರಿಗೆ ಕಣ್ಣಾಲಿಗಳು ತುಂಬಿ ಬಂದವು. ವಿಷಯವಿಷ್ಟೇ. ಅವರು ಜಪಾನಿಯರು. ಅದರಲ್ಲಿ ಒಬ್ಬ ರೇಡಿಯೋ ಕೇಳುತ್ತಿದ್ದ. ಇದಕ್ಕಿದ ಹಾಗೆ ರೇಡಿಯೋದಲ್ಲಿ ಜಪಾನ್ ನಲ್ಲಿ ಭೂಕಂಪವಾಗಿ ಸಾಕಷ್ಟೂ ಸಾವು ನೋವುಗಳಾಗಿರುವುದು ತಿಳಿದುಬಂತು. ಆಗ ಆ ಜಪಾನಿಯರು ಎದ್ದು ನಿಂತು ತಮ್ಮ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಸಾವು ನೋವುಗಳಿಗೆ ಈಡಾದ ತಮ್ಮ ದೇಶವಾಸಿಗಳಿಗೆ ಸಂತಾಪ ಸೂಚಿಸಿದ್ದರು. ಇದು ಎಲ್ಲೋ ಓದಿದ್ದ ಸಂಗತಿ.
ಮತ್ತೆ ಈಗ ನೆನಪಾದದ್ದು ಘೋರವಾಗಿ ಅಪ್ಪಳಿಸಿದ ಸಮುದ್ರದ ಸುನಾಮಿಯ ಹೊಡೆತಕ್ಕೆ ಸಿಕ್ಕಿ ಜಪಾನಿನ ಒಂದು ಭಾಗವೇ ಉಳಿದ ಪ್ರದೇಶದೊಂದಿಗೆ ಸಂಪರ್ಕ ಕಳೆದುಕೊಂಡಿದೆ. ೮.೯ ಮ್ಯಾಗ್ನಟ್ಯುಡ್ ಇದ್ದ ಭೂಕಂಪ ಇಂಥ ಸುನಾಮಿಯನ್ನು ಎಬ್ಬಿಸಿದೆ. ಲಕ್ಷಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಇದರ ಭೀಕರತೆಯ ವಿವರ ತಿಳಿದು ಬರಬೇಕಷ್ಟೇ.
ವಿಶ್ವ ಕನ್ನಡ ಸಮ್ಮೇಳನ – ಏನಿದೆ, ಏನಿರಬೇಕಾಗಿತ್ತು?
ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ನೇನು ಹೊತ್ತು ಎಣಿಕೆ ಶುರುವಾಗಿದೆ. ನಾಟಕ, ಕವನ ವಾಚನ, ಗಮಕ ವಾಚನ, ಕುಣಿತ, ಹಾಡುಗಾರಿಕೆ ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅನ್ನುತ್ತೆ ಸಮ್ಮೇಳನದ ವೆಬ್ ಸೈಟ್ ಅಲ್ಲಿರೋ ಕರೆಯೋಲೆ. ಇದಲ್ಲದೇ, ಕೆಲವು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಾ ಗೋಷ್ಟಿಯನ್ನು ಏರ್ಪಡಿಸಲಾಗಿದೆ ಅಂತಲೂ ಕಂಡೆ. ಕನ್ನಡ, ಕನ್ನಡಿಗ, ಕರ್ನಾಟಕ ಇತಿಹಾಸದಲ್ಲೆಂದೂ ಕಂಡಿರದಂತಹ ಸವಾಲುಗಳನ್ನು ಎದುರಿಸುತ್ತಿರುವ ಜಾಗತೀಕರಣದ ನಂತರದ ಈ ದಿನಗಳಲ್ಲಿ ಇಂತಹ ಸಮ್ಮೇಳನಗಳು ಹೆಚ್ಚಿನ ಮಹತ್ವ ಪಡೆದಿವೆ ಕೂಡಾ. ಈ ಸಮ್ಮೇಳನ ಕರ್ನಾಟಕದ, ಕನ್ನಡಿಗರ ನಾಳೆಗಳನ್ನು ಕಟ್ಟಲು ಆಗಬೇಕಾದ ಕೆಲಸಗಳ ಬಗ್ಗೆ, ಇವತ್ತು ನಾವೆಲ್ಲಿದೀವಿ, ಈ ದಿನ ನಮ್ಮೆದುರು ಇರುವ ಸವಾಲುಗಳೇನು, ನಾವು ಸಾಗಬೇಕಾದ ದಾರಿ ಯಾವುದು, ಎಂತದ್ದು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುವ, ಹೊಸ ದಿಕ್ಕು,ದೆಸೆ ನೀಡುವ ವೇದಿಕೆಯಾಗುತ್ತೆ ಅನ್ನುವುದು ನನ್ನ ನಿರೀಕ್ಷೆಯಾಗಿತ್ತು, ಆದರೆ ಕಾರ್ಯಕ್ರಮದ ಪಟ್ಟಿ ನೋಡಿದಾಗ ಕೆಲ ಮಟ್ಟಿಗೆ ನಿರಾಸೆಯಾಗಿದೆ ಅಂತಲೇ ಹೇಳಬೇಕು. ಜ್ಞಾನಾಧಾರಿತ ಹೊಸ ಜಗತ್ತಿನ ಸವಾಲುಗಳನ್ನು ಎದುರಿಸಿ ಗೆಲ್ಲಲು ಕನ್ನಡಿಗರ ಕಲಿಕೆ, ದುಡಿಮೆಯ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಚೆನ್ನಾಗಿ ಕಟ್ಟಿಕೊಳ್ಳಬೇಕಾದ ತುರ್ತು ಅಗತ್ಯ ನಮ್ಮ ಮುಂದಿದೆ. ಆದರೆ ಕಾರ್ಯಕ್ರಮದ ಪಟ್ಟಿ ನೋಡಿದ್ರೆ, ಈ ಸಮ್ಮೇಳನ ಹೊಟ್ಟೆಗೆ ಹಿಟ್ಟಿನ ವಿಷಯಗಳಿಗಿಂತ ಹೆಚ್ಚು ಜುಟ್ಟಿನ ಮಲ್ಲಿಗೆಯ ವಿಷಯಗಳತ್ತಲೇ ಗಮನ ಹರಿಸಿದೆಯೆನೋ ಅನ್ನುವಂತಿದೆ !
ಏನಿದೆ?
ಹಾಗಂತ, ಸಮ್ಮೇಳನದಲ್ಲಿ ಪ್ರಯೋಜನವಾಗುವಂತಹ ವಿಷಯಗಳೇ ಇಲ್ಲ ಅಂತಿಲ್ಲ. ಜಾಗತೀಕರಣ, ಮಾರುಕಟ್ಟೆ ಮತ್ತು ಯುವಕರ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಜಾಗತೀಕರಣ ಕರ್ನಾಟಕ ಅನ್ನುವ ಗೋಷ್ಟಿ, ಗಡಿನಾಡಲ್ಲಿರುವ ಕನ್ನಡಿಗರ ಶಿಕ್ಷಣ ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವ ಗಡಿನಾಡ ಕನ್ನಡಿಗರು ಅನ್ನುವ ಗೋಷ್ಟಿ, ಕನ್ನಡ ತಂತ್ರಾಂಶ, ವಿಜ್ಞಾನ ಶಿಕ್ಷಣದಂತಹ ವಿಷಯಗಳ ಬಗೆಗಿನ ಜ್ಞಾನ-ವಿಜ್ಞಾನ-ತಂತ್ರಜ್ಞಾನ-ಕರ್ನಾಟಕಅನ್ನುವ ಗೋಷ್ಟಿ, ಆಡಳಿತದಲ್ಲಿ ಕನ್ನಡ ಬಳಕೆ ಬಗೆಗಿನ ಕನ್ನಡ ಭಾಷಾ ಬಳಕೆ ಅನ್ನುವ ಗೋಷ್ಟಿ, ಕೃಷಿ ರಂಗ ಎದುರಿಸುತ್ತಿರುವ ಸವಾಲುಗಳ ಬಗೆಗಿನ ಕೃಷಿ-ಸಾಧನೆ ಸವಾಲು ಗೋಷ್ಟಿಗಳು ಈ ಕಾಲಮಾನಕ್ಕೆ ಪ್ರಸ್ತುತವೆನ್ನಿಸುವಂತಹ ಗೋಷ್ಟಿಗಳಾಗಿವೆ. ಇಲ್ಲಿ ಪಾಲ್ಗೊಳ್ಳುತ್ತಿರುವವರು ಅಷ್ಟೇ ಯೋಗ್ಯರು ಅನ್ನುವುದು ಕೂಡಾ ಗಮನಿಸಬೇಕಾದದ್ದು. ಮತ್ತಷ್ಟು ಓದು
ಸೌರ ವಿದ್ಯುತ್ ಅವಕಾಶಗಳು
– ಗೋವಿಂದ ಭಟ್

ಒಮ್ಮೆ ಹೊಸ ಕೊಳವೆ ಬಾವಿಗೆ ಸೌರ submersible ಪಂಪಿನ ವಿಚಾರಣೆಗೆ ಹೋಗಿದ್ದೆ. ಆಗ ಒಂದು ಮಾಮೂಲಿ surface ಪಂಪಿಗೆ ಸಬ್ಸಿಡಿ ಇದ್ದ ಕಾಲ. ಹಾಗಾಗಿ ಅಂಗಡಿಯವರು ಅಷ್ಟೊಂದು ಫಲಕಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆಲೋಚನೆ ಮಾಡಿ ಎಂದು ಪುಸಲಾಯಿಸಿದರು. ಅಂದಿಗೆ ಹದಿನೆಂಟು ವರ್ಷ ಹಿಂದೆ ಸೈಕಲಿನಲ್ಲಿ ದೆಹಲಿಗೆ ಸಾಗುವಾಗ ಟಿಲೋನಿಯದಲ್ಲಿ ಸೌರ ವಿದ್ಯುತ್ ಬಳಸಿ ರಾತ್ರಿ ಶಾಲೆ ಕಾರ್ಯಾಚರಿಸುವುದನ್ನು ಕಂಡಿದ್ದೆ. ಆಗಲೇ ಈ ಸೌರ ವಿದ್ಯುತ್ ಉಪಯೋಗ ಬಗೆಗೆ ಮನದಲ್ಲಿ ಬಿತ್ತಿದ ಬೀಜ ಮೊಳಕೆಯೊಡೆಯಿತು. ನನಗೆ ಬೇಕಾದ ಪಂಪ್ ಅಲ್ಲವಾದರೂ ಇದನ್ನು ಬಳಸಬಹುದೆಂಬ ಅಲೋಚನೆಯಿಂದ ಒಪ್ಪಿದೆ.
ಹಾಗೆ 2002ರಲ್ಲಿ ಒಂದಷ್ಟು ಫಲಕಗಳೊಂದಿಗೆ ಒಂದು ಸೌರ ಶಕ್ತಿಯ ಪಂಪು ನಮ್ಮಲ್ಲಿಗೆ ಬಂತು. ಅಂದಿನಿಂದ ಇಂದಿನ ವರೆಗೆ ಸೌರ ವಿದ್ಯುತ್ ಗರಿಷ್ಟ ಉಪಯೋಗದ ಬಗೆಗೆ ಆರು ಇಂಚು ಮೇಲೆ ಸರಿದರೆ ಮೂರು ಇಂಚು ಕೆಳಗೆ ಜಾರುವುದು ಎನ್ನುವ ಕಪ್ಪೆಯಾಟ ನಿರಂತರವಾಗಿ ಸಾಗುತ್ತಲೇ ಇದೆ.