– ಬನವಾಸಿ ಬಳಗ
ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಇವತ್ತಿನಿಂದ ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
ಭ್ರಷ್ಟಾಚಾರವೆಂಬ ಮಹಾ ಪಿಡುಗು
ಭಾರತದಲ್ಲಿ ದಿನಗಳೆದಂತೆ ಭ್ರಷ್ಟಾಚಾರವೆನ್ನುವುದು ಆಳವಾಗಿ ಬೇರೂರತ್ತಲೇ ಹೋಗುತ್ತಿದೆ. ಈ ರೋಗವು ರಾಜಕಾರಣದ ಮೊಗಸಾಲೆಯನ್ನೂ ಬಿಟ್ಟಿಲ್ಲದಿರುವಾಗ, ನಾಡಿನ ವ್ಯವಸ್ಥೆಗಳನ್ನು ಕಟ್ಟಿ ನಿರ್ವಹಿಸಬೇಕಾದ ಜನಪ್ರತಿನಿಧಿ ಸಭೆಗಳು ಕೂಡಾ ಭ್ರಷ್ಟಾಚಾರವನ್ನು ಇಲ್ಲವಾಗಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ನೋವು ಜನರಲ್ಲಿದೆ. ಇಡೀ ವ್ಯವಸ್ಥೆಯೇ ಭ್ರಷ್ಟಾಚಾರದ ಕ್ಯಾನ್ಸರ್ ತಗುಲಿ ನಲುಗುತ್ತಿರುವಾಗ ಇದಕ್ಕೊಂದು ಮದ್ದು ಬೇಕು ಎಂದು ಜನಾಂದೋಲನ ರೂಪಿಸುವಲ್ಲಿ ಈ ಹಿರಿಯ ಜೀವ ತೊಡಗಿದೆ.
ಜನ್ ಲೋಕಪಾಲ್ ಮಸೂದೆಯನ್ನು ಸರಿಯಾಗಿ ರೂಪಿಸಿ ಜಾರಿಗೊಳಿಸಲು ಪ್ರಧಾನಮಂತ್ರಿಗಳಿಗೆ ಮೊರೆಯಿಡುತ್ತಿದ್ದರೂ ಅದು ಫಲಿಸಲಿಲ್ಲವೆಂದು ಇದೀಗ ಅಣ್ಣಾ ಹಜಾರೆಯವರು ಸಾಯೋವರೆಗೆ ಉಪವಾಸ ಮಾಡುವುದಾಗಿ ಘೋಷಿಸಿ, ಅದರಂತೆ ಸತ್ಯಾಗ್ರಹ ಆರಂಭಿಸಿದ್ದಾರೆ.
ಲೋಕಪಾಲ ಮಸೂದೆ ಮತ್ತು ಜನ್ ಲೋಕಪಾಲ್ ಮಸೂದೆ
2010ರಲ್ಲಿ ಭಾರತ ಸರ್ಕಾರ ಭ್ರಷ್ಟಾಚಾರ ನಿಯಂತ್ರಣದ ಉದ್ದೇಶದಿಂದ
ಲೋಕ್‍ಪಾಲ್ ಮಸೂದೆಯನ್ನು ಜಾರಿಗೊಳಿಸಲು ಮುಂದಾಯಿತು. ಈ ಮಸೂದೆಯಲ್ಲಿದ್ದ ಹಲವಾರು ಕುಂದುಕೊರತೆಗಳು ಭ್ರಷ್ಟಾಚಾರವನ್ನು ನಿಯಂತ್ರಿಸಲು ಪರಿಣಾಮಕಾರಿಯಾಗಿಲ್ಲವೆಂದು ಅಣ್ಣಾ ಒಂದು ಚಳವಳಿಯನ್ನು ಶುರುಮಾಡಿದರು. ಇದರ ಅಂಗವಾಗಿ “
ಭ್ರಷ್ಟಾಚಾರದ ವಿರುದ್ಧ ಭಾರತ” ಎನ್ನುವ ಸಂಘಟನೆ ಸದಸ್ಯರ ಜೊತೆಗೂಡಿ “
ಜನ್ ಲೋಕ್‍ಪಾಲ್” ಮಸೂದೆಯನ್ನು ಸಿದ್ಧಪಡಿಸಲಾಯಿತು. ಈ ಮಸೂದೆಯನ್ನು ನ್ಯಾಯಮೂರ್ತಿ ಡಾ. ಸಂತೋಶ್ ಹೆಗ್ಡೆ, ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರುಗಳು ಸಿದ್ಧಪಡಿಸಿದ್ದಾರೆ. ಇದರಲ್ಲಿ ಭ್ರಷ್ಟರಿಗೆ ಜೀವಾವಧಿಯಂತಹ ಕಠಿಣ ಶಿಕ್ಷೆಯೂ, ಜನರ ನೇರ ಪಾಲ್ಗೊಳ್ಳುವಿಕೆಯೂ, ಲೋಕಾಯುಕ್ತರ ವ್ಯಾಪ್ತಿಯ ಹೆಚ್ಚಳವೂ ಅಡಗಿದ್ದು ಭ್ರಷ್ಟಾಚಾರ ನಿಯಂತ್ರಣಕ್ಕೆ ಕಡಿವಾಣ ಹಾಕುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ.
ಈ ಮಸೂದೆಯಂತೆ ಲೋಕಪಾಲ್ ಮಸೂದೆ ರೂಪುಗೊಳ್ಳಬೇಕು ಎಂದು ಒತ್ತಾಯಿಸಿ ಅಣ್ಣಾ ಹಜಾರೆ ಈಗ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಅವರನ್ನು ಬೆಂಬಲಿಸಿ ದೇಶಾದ್ಯಂತ ಜನಸಾಮಾನ್ಯರು ದನಿ ಎತ್ತಿದ್ದಾರೆ. ಈ ದನಿ ಮತ್ತಷ್ಟು ಗಟ್ಟಿಯಾಗಿ ಸಂಸತ್ತಿನಲ್ಲಿ ಕುಳಿತವರ ಕಿವಿಗಳನ್ನು, ಕಣ್ಣುಗಳನ್ನು ತೆರೆಸಬೇಕಾಗಿದೆ. ಭ್ರಷ್ಟಾಚಾರದ ವಿರುದ್ಧದ ಈ ಹೋರಾಟದಲ್ಲಿ ನಮ್ಮದೂ ಒಂದು ದನಿ ಇರಲಿ. ಅಣ್ಣಾ ಅವರನ್ನು ಬೆಂಬಲಿಸಿ, ಕೂಡಲೇ ಜನ ಲೋಕಪಾಲ್ ಮಸೂದೆಯನ್ನು ಜಾರಿ ಮಾಡಲು ಮುಂದಾಗುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸೋಣ. ಅನುಕೂಲವಿದ್ದವರು ಬೆಂಗಳೂರಿನಲ್ಲೂ ಏಪ್ರಿಲ್ 5ರಿಂದ 10ರವರೆಗೆ ಸ್ವಾತಂತ್ರ್ಯ ಉದ್ಯಾನವನ (Freedom park)ಅಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಬಹುದು.
ಗೆಲ್ಲಲೇಬೇಕು………
ಈ ಹೋರಾಟಕ್ಕೆ ಎಲ್ಲ ಕಡೆಯಿಂದ ಬೆಂಬಲ ವ್ಯಕ್ತವಾಗುತ್ತಿರುವುದು ಸಂತಸದ ವಿಷಯ..ಬಹುಶ: ಮಧ್ಯಪ್ರಾಚ್ಯ ದೇಶಗಳ ಕ್ರಾಂತಿ ನೋಡಿ ನಮ್ಮ ಜಡತ್ವ ಸ್ವಲ್ಪ ಮಟ್ಟಿಗೆ ಬಿಟ್ಟಿರುವ ಸಾಧ್ಯತೆಯಿದೆ!. ಅಣ್ಣಾರ ನೇತೃತ್ವದಲ್ಲಿ ಬ್ರಷ್ಟಾಚಾರ ನಿರ್ಮೂಲನೆಯತ್ತ ದಿಟ್ಟ ಹೆಜ್ಜೆ ಹಾಕೋಣ. ಬೆಂಗಳೂರಿನಲ್ಲಿ ವಾಸವಾಗಿರುವ ನನ್ನ ಮಿತ್ರರಿಗೆ ಒಂದು ಕೋರಿಕೆ. ದಯವಿಟ್ಟು ಸ್ವಲ್ಪ ಸಮಯ ಮಾಡಿಕೊಂಡು ನಿರಶನದಲ್ಲಿ ಭಾಗವಹಿಸಿ. ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿ, ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸೋಣ.
ಪೂರ್ತ ನೈತಿಕ ಬೆಂಬಲ …… ಸಶರೀರವಾಗಿ ಭಾಗವಹಿಸಲಾಗುತ್ತಿಲ್ಲ ಎಂಬ ಕೊರಗಿನೊ೦ದಿಗೆ …
ಗೆಳೆಯ ರೆ
ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ಯವರಿಗೆ ಬೆಂಬಲ ಸೂಚಿಸಿ . ಭ್ರಷ್ಟಾಚಾರ ದ ವಿರುದ್ಧ ಜನರು ಮಾತನಾಡಬೇಕು. ಇಷ್ಟು ವರ್ಷಗಳ ನಂತರ ಅಣ್ಣ ಹಜಾರೆಯವರಿಗೆ ಈ ಪಿಡುಗಿನ ವಿರುದ್ಧ ಹೋರಾಡುವ ಮನಸ್ಸು ಬಂತಲ್ಲ ಅದು ಬಹಿರಂಗವಾಗಿ ಅದಕ್ಕೆ ಪೂರಕವಾಗಿ ದೇಶದ ಮಾಧ್ಯಮದವರೆಲ್ಲ ಪೈಪೋಟಿಗೆ ಬಿದ್ದಂತೆ ಬೆಂಬಲ ಸೂಚಿಸಿದರು. “ಭ್ರಷ್ಟರ ಬೆನ್ನತ್ತಿ” ಎಂಬ ಶೀರ್ಷಿಕೆ ಯೊಂದಿಗೆ ವಾಹಿನಿಯೂ ಅಭಿಯಾನ ಕೈಗೊಂಡಿತು. ಅಣ್ಣ ರವರ ಹೋರಾಟಕ್ಕೆ ಗೆಲುವು ಸಿಕ್ಕಿದೆಯಾದರು ಅದು ಜಾರಿಗೆ ಬರುವಷ್ಟರಲ್ಲಿ ಇನ್ನೆಷ್ಟು ದಾರಿ ತಪ್ಪುತ್ತೋ ಕಾದುನೋಡಬೇಕು.
ಎಲ್ಲೋ ದೂರದ ಅಣ್ಣ ಹಜಾರೆಯವರಿಗೆ ಬೆಂಬಲ ಸೂಚಿಸುವ ನಾವು ನಾವುಗಳೇ ಯಾಕೆ ಭ್ರಷ್ಟಾಚಾರ ಪಿಡುಗನ್ನು ತಡೆಯಲು ಪ್ರಯತ್ನಿಸಬಾರಾದು.
ನಾವು ಹುಟ್ಟಿದ್ದೇವೆ. ದುಡಿಯುತ್ತೇವೆ. ಅನ್ನೋವುದಕ್ಕಿಂತ ಈ ದೇಶಕ್ಕಾಗಿ ಏನಾದರೂ ಮಾಡಬಹುದಲ್ಲವೇ ?
ಹೇಗೂ ಸಂಬಳ ಬರುತ್ತೆ ಕೆಲಸ ಮಾಡಿದರಾಯಿತು ಎನ್ನುವುದು ಎಷ್ಟರಮಟ್ಟಿಗೆ ಸರಿ ಅಲ್ಲವೇ.
ನಮ್ಮ ನಾಡಿನ ಭ್ರಷ್ಟಾಚಾರವನ್ನು ತಡೆಯುವುದು ಹೇಗೆ ?
ದಯವಿಟ್ಟು ಈ ಲಿಂಕನ್ನು ಓದಿ …. http://www.facebook.com/profile.php?id=100001508660835
ಈ ಲಿಂಕನ್ನು ಓದಿ ನಿಮ್ಮ ಅಭಿಪ್ರಾಯ ತಿಳಿಸಿ,
ರಾಜು
rajudavanagere@gmail.ಕಂ
9141624096