ವಿಷಯದ ವಿವರಗಳಿಗೆ ದಾಟಿರಿ

Archive for

28
ಏಪ್ರಿಲ್

ಬದುಕಿಗೆ ಪರಿಧಿ ಹಾಕೋಳ್ತಾ ಇದ್ದೀವಿ ಅನಿಸ್ತಾ ಇದೆ…

ಚಿತ್ರಾ ಸಂತೋಷ್

ಹಂಚಿ ಉಂಡರೆ ಹಸಿವಿಲ್ಲ…!! ಹತ್ತನೇ ತರಗತಿಯಲ್ಲಿ ನಾನು ಓದುತ್ತಿದ್ದಾಗ ಬಾಗೇವಾಡಿ ಅನ್ನೋ ಹೆಸರಿನ ಮೇಷ್ಟ್ರು ಇದ್ದರು. ತುಂಬಾ ಒಳ್ಳೆಯ ಮೇಷ್ಟ್ರು.ಮೂರು ವರ್ಷ ನಮ್ಮ ಜೊತೆಗಿದ್ದ ಆ ಮೇಷ್ಟ್ರು ಆಗಾಗ ಹೇಳುತ್ತಿದ್ದ ಮಾತು ಹಂಚಿ ಉಂಡರೆ ಹಸಿವಿಲ್ಲ. ಈಗಲೂ ಆ ಮಾತು ಆಗಾಗ ನೆನಪಾಗುತ್ತಿದೆ. ಮಾಮೂಲಿ ನಮ್ಮನೆಯಲ್ಲಿ ನಾನು-ತಮ್ಮ ಇಬ್ಬರೇ ಇರ್ತೀವಿ. ಆಗ ಒಂದು ಥರ ಬೋರ್. ನನಗೆ ರಜೆ ಇದ್ದ ದಿನ ಅವನಿಗರಲ್ಲ, ಅವನಿಗೆ ರಜೆ ಇದ್ದ ದಿನ ನಂಗೆ ರಜೆ ಇರೊಲ್ಲ. ಅದಕ್ಕೆ ಅವನಿಗೆ ರಜೆ ಇದ್ದ ನಾನು ಆಫೀಸ್ ನಿಂದ ಬೇಗ ಹೊರಡೋದು, ನಂಗೆ ರಜೆ ಇದ್ದ ದಿನ ಅವನು ಆಫೀಸ್ ನಿಂದ ಬೇಗ ಹೊರಟುಬರೋದು. ನಮಗೆ ರಜೆ ಇದ್ದ ದಿನ ಮಾವ, ಅಣ್ಣ ಬೇಗನೆ ಮನೆಮುಂದೆ ಹಾಜರಾಗೋದು. ಏನಾದ್ರೂ ಸ್ಪೆಷಲ್ ಅಡುಗೆ ಮಾಡೋದು, ದೇವಸ್ಥಾನಕ್ಕೆ ಹೋಗೋದು…ಅದೊಂದು ಥರಾ ನಮಗೆ ತುಂಬಾ ಖುಷಿಕೊಡೋದು. ನಂಗೆ ಎಲ್ಲಕ್ಕಿಂತ ಖುಷಿಕೊಡೋದು ಎಲ್ಲರೂ ಜೊತೆಗೆ ಊಟ ಮಾಡೋದು. ನಾವೇನದ್ರೂ ಮಾಡಿದ್ರೆ ಪಕ್ಕದ್ಮನೆ ಅಡುಗೆ ತಜ್ಞೆ ಆಂಟಿ ಅಲ್ಲಿ ಹಾಜರಾಗಿ..ನಾವು ಮಾಡೋ ಡಬ್ಬ ಅಡುಗೇನ ಇನ್ನಷ್ಟು ರುಚಿಯಾಗಿಸ್ತಾರೆ. ಆಮೇಲೆ ಅವರ ಮನೆ ಸಾರು ನಮ್ಮನೆಗೆ, ನಮ್ಮನೆ ಸಾರು ಅವರ ಮನೆಗೆ ಹೋಗುತ್ತೆ. ಒಟ್ಟಿನಲ್ಲಿ ಮನೆತುಂಬಾ ಜನರು ಓಡಾಡ್ತಾ ಇದ್ರೆ ಸಕತ್ ಖುಷಿ ಆಗೋದು.

ಪಕ್ಕದ್ಮನೆ ತಾತನೂ ಚಿತ್ರಾನಿಗೆ ಸಾರು ಕೊಟ್ಟೆಯೇನು? ಅಂತ ರಾತ್ರಿ ಮಲಗೋಕೆ ಮುಂಚೆ ಮೊಮ್ಮಕ್ಕಳನ್ನು ಗದರಿಸಿ ಅವರ ಕೈಯಲ್ಲಿ ಕೊಟ್ಟು ಕಳಿಸ್ತಾರೆ. ಸ್ವಲ್ಪನೇ ಆಗಲೀ ಮತ್ತೊಬ್ಬರಿಗೆ ಕೊಟ್ಟು ತಿನ್ನೋದ್ರಲ್ಲಿ ತುಂಬಾ ಖುಷಿ ಇರುತ್ತೆ ಅಲ್ವಾ? ಊರಲ್ಲಿ ಆದ್ರೆ ಮನೆಗೆ ಯಾರಾದ್ರೂ ನೆಂಟರು ಬರ್ತಾರೆ, ಖುಷಿ-ಖುಷಿಯಾಗಿ ಸಂಭ್ರಮಿಸೋ ಅವಕಾಶಗಳಿರ್ತವೆ. ಆದರೆ, ಬೆಂಗಳೂರಿನಲ್ಲಿದ್ರೆ ನೆಂಟರಿಲ್ಲ, ತುಂಬಾ ಆಪ್ತರಿಲ್ಲ, ಆಪ್ತರಿದ್ರೂ ಅವರಿಗೆ ಅವರದೇ ಆಗ ಕೆಲಸಗಳಿರ್ತವೆ. ನಮ್ಮನೆಯಲ್ಲಿ ಬಂದು ಅವರಿಗೆ ಹರಟೆ ಹೊಡೆಯೋಕೆ ಸಮಯವೆಲ್ಲಿ ಇರುತ್ತೆ? ಮತ್ತಷ್ಟು ಓದು »

28
ಏಪ್ರಿಲ್

ಸಂಜೆ ಏಳರ ಬಸ್ಸು…

-ಸೌಮ್ಯ ಭಾಗವತ್

ಕುಮಟಾದಿಂದ ಹತ್ತು ಕಿಲೋಮೀಟರುಗಳು ದೂರದಲ್ಲಿರುವ ನಮ್ಮೂರಿಗೆ, ದಿನಕ್ಕೆ ಹತ್ತು ಬಸ್ಸುಗಳಿವೆ. ಸುಮಾರಾಗಿ ಡಾಂಬರು ಇರುವ ರಸ್ತೆಯಲ್ಲಿ ಸುತ್ತಲಿನ ಹಸಿರು ಗದ್ದೆಗಳು, ಹಳ್ಳಗಳು, ಬೆಟ್ಟ ಗುಡ್ಡಗಳನ್ನು ನೋಡುತ್ತಾ ಬಸ್ಸಿನಲ್ಲಿ ಬರುವುದೇ ಒಂಥರದ ಖುಷಿ.

ಮಾಯಾನಗರಿ ಬೆಂಗಳೂರಿನ ಹಳೆಯ ಬಸ್ಸುಗಳೆಲ್ಲ (KA-01 registration) ನಮ್ಮಲ್ಲಿ ಹಳ್ಳಿಗಳಿಗೆ ಓಡಾಡುವ ಪುಷ್ಪಕ ವಿಮಾನಗಳು. ಹೆಚ್ಚಾಗಿ ಜನಸಾಮಾನ್ಯರ ಓಡಾಟ ಆ ಬಸ್ಸುಗಳ ಮೇಲೆ ಅವಲಂಬಿತ. ಇವಿಷ್ಟನ್ನು ನನ್ನ ಬರಹದ ವಿಷಯ ಎನ್ನಬಹುದಾದರೂ. ನನ್ನ ಜನ್ಮಸಿದ್ಧ ಹಕ್ಕನ್ನು ಚಲಾಯಿಸದೇ ಬಹಳ ದಿನಗಳೇ ಕಳೆದವು. (ತಲೆ ತಿನ್ನುವುದು ನನ್ನ ಆ ಜನ್ಮ ಸಿದ್ಧ ಹಕ್ಕು ಅದನ್ನು ನಾನು ಪಡೆದೆ ತೀರುತ್ತೇನೆ.! ಎಂದು ನಾನು ಈ ಭೂಮಿಗೆ ಬಂದಾಗಲೇ ನಿರ್ಧರಿಸಿ ಆಗಿತ್ತು). ವಿಷಯದ ರೈಲು ಅಲ್ಲಲ್ಲಿ ಹಳಿ ತಪ್ಪಿದರೂ ಸರಿಪಡಿಸಿ ಓಡಿಸಿದ್ದೇನೆ ನೀವು ಓದಿ.

ನಾನು ಬಸ್ಸಿನಲ್ಲಿ ಓಡಾಡುವುದನ್ನೇ ಇಷ್ಟ ಪಡುತ್ತೇನೆ.ಮಂಗಳೂರಿನಲ್ಲಿ ಗಾಜುಗಳಿಲ್ಲದ ಕಿಟಕಿಗಳ ಬಸ್ಸಿನಲ್ಲಿ ಕೂತು,ಒಂದುಕಾಲದಲ್ಲಿ ಬಾಬ್ ಇದ್ದ ಕೂದಲನ್ನು ಜುಟ್ಟಿಗೆ ಸಿಕ್ಕಿಸಲು ಹರಹರಿ ಸಾಹಸ ಮಾಡುತ್ತಾ.ಕೊನೆಗೆ ‘ಉಪೇಂದ್ರ’ನಿಗೆ ನೀನೇ ಸ್ಫೂರ್ತಿಯೋ ಎಂದೂ ಕೇಳಿಸಿಕೊಂಡಿದ್ದೇನೆ ಬಿಡಿ.

ಮತ್ತಷ್ಟು ಓದು »