ವಿಷಯದ ವಿವರಗಳಿಗೆ ದಾಟಿರಿ

Archive for

7
ಮೇ

ಕಳ್ಳಹೊಳೆ ಮತ್ತು ಹೇಮಾವತಿ

– ಹಂಸಾನಂದಿ

ನಮ್ಮೂರ ಹತ್ತಿರ ಹರಿಯೋ ಯಗಚೀನ ಕಳ್ಳ ಹೊಳೆ ಅಂತಿದ್ದರಂತೆ. ಯಾಕಂದ್ರೆ, ಅದರ ಹರಿವು ಸಣ್ಣದು, ಆದರೆ, ಎಲ್ಲೋ ಇಪ್ಪತ್ತು ಮೂವತ್ತು ಮೈಲಿ ಹಿಂದೆ ಮಳೆಯಾದರೆ ಯಗಚಿಯಲ್ಲಿ ಇದ್ದಕ್ಕಿದ್ದಂತೆ ನೆರೆ ಬಂದು ಬಿಡುತ್ತಿತ್ತಂತೆ. ಅಂತಹ ಸಂದರ್ಭದಲ್ಲಿ, ಹೊಳೆಯ ಪಾತ್ರದಲ್ಲಿ ಆಟವಾಡುತ್ತಿದ್ದ ಮಕ್ಕಳು, ದನ ಕರುಗಳೆಲ್ಲ ಕೊಚ್ಚಿಕೊಂಡು ಹೋಗುತ್ತಿದ್ದವಂತೆ. ಯಾವಾಗ ನೀರು ಬರುತ್ತೆ ಅನ್ನೋದು ಗೊತ್ತಾಗದೇ, ಕಳ್ಳನ ತರಹ ಜನ ಜಾನುವಾರನ್ನೆಲ್ಲ ನುಂಗಿಕೋತಾ ಇದ್ದಿದ್ದರಿಂದಲೇ ಇದು ಕಳ್ಳ ಹೊಳೆ ಅಂತ ಹೆಸರಾಗಿತ್ತಂತೆ. ಇವೆಲ್ಲ ನಾನು ಗೊರೂರು ರಾಮಸ್ವಾಮಿ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದ ವಿಷಯಗಳು.

ಮೂರನೇ ತರಗತಿಯಲ್ಲಿ ನಮಗೆ ಎರಡು ಪಠ್ಯ ಪುಸ್ತಕಗಳಿದ್ದವು – ಒಂದು ನಮ್ಮ ರಾಜ್ಯ ಅಂತ, ಮತ್ತೊಂದು ನಮ್ಮ ಜಿಲ್ಲೆ ಅಂತ. ನಮ್ಮ ಜಿಲ್ಲೆ ಅಂದರೆ ನೋಡುವ ಸ್ಥಳಗಳು ಬೇಲೂರು ಹಳೇಬೀಡು ಶ್ರವಣಬೆಳಗೊಳ; ಬೆಳೆಯೋ ಬೆಳೆಗಳು ರಾಗಿ ಆಲೂಗೆಡ್ಡೆ ಕಾಫಿ ಬೀಜ; ಕೈಗಾರಿಕೆ ಅಂದರೆ ಯಂತ್ರಭಾಗಗಳ ಕಾರ್ಖಾನೆ, ಕಾಫಿ ಬೀಜ ಸಂಸ್ಕರಣೆ ಅಂತ ನಾವು ಓದಿಕೊಂಡಿದ್ದೇ ಓದಿಕೊಂಡಿದ್ದು. ಅದರಲ್ಲಿ ಜಿಲ್ಲೆಯ ನದಿಗಳು ಅಂದರೆ ಕಾವೇರಿ ಹೇಮಾವತಿ ಮತ್ತೆ ಯಗಚಿ ಅಂತಲೂ ಇರ್ತಿತ್ತು. ನನ್ನ ಊರಿಗೆ ತೀರ ಹತ್ತಿರವಿದ್ದ ಯಗಚಿಯ ಹರಿವನ್ನ ನಾನು ನೋಡಿದ್ದೇ ಕಡಿಮೆ. ಊರಿನ ಪಶ್ಚಿಮದ ಹಾಲುಬಾಗಿಲು ಅನ್ನುವ ಕಡೆ ಯಗಚಿ ಹೊಳೆ ಪಕ್ಕದಲ್ಲಿ ಒಂದು ನೀರನ್ನು ಶುಚಿಮಾಡಿ, ಊರಿಗೆ ಸರಬರಾಜು ಮಾಡುವ ವ್ಯವಸ್ಥೆ ಇತ್ತು. ಕೆಲವೊಮ್ಮೆ ನಮ್ಮ ತರಗತಿಯ ಕೆಲವು ಹುಡುಗರು ಹಾಲುಬಾಗ್ಲಿನಲ್ಲಿ ಹೋಗಿ ಈಜಿ ಬಂದೆವು ಅಂತ ಹೇಳ್ತಿದ್ದಿದ್ದೂ ಉಂಟು.

Read more »

7
ಮೇ

ಕನಸ ಕಾಯುತ್ತಲೇ ಇರಬೇಕೆ?

ರೂಪ ಬೆಂಗಳೂರು

ಆ ಕ್ಷಣದ ಕಾಯುವಿಕೆಯಲ್ಲೂ ಎಷ್ಟೊಂದು ಸಂತಸವಿದೆ ಅನ್ನಿಸಿತು.

ಹೌದು , ಆವತ್ತು ಅಮ್ಮನ ಬಳಿಯಲ್ಲಿ ತನ್ನ ಅವನ ಪ್ರೀತಿಯ ಬಗ್ಗೆ ಹೇಳಿದ್ದೇ ಬಂತು, ಸಿಡುಕು ಮೋರೆ ಹೊತ್ತು ಅಮ್ಮ ಅಪ್ಪನ ಕಿವಿ ಕಚ್ಚಿ ಅಪ್ಪ ತನ್ನನ್ನ ದುರುದುರು ನೋಡಿ, ಸ್ವಲ್ಪ ಹೊತ್ತಿನಲ್ಲಿಯೇ ಕಿರುನಗೆ ನಕ್ಕು
“ಹೋಗಲಿ ಬಿಡು ಅವಳೇನು ಬೇರೆಯವರನ್ನ ಪ್ರೀತಿಸಲಿಲ್ಲವಲ್ಲ. ಅವನೂ ನಮ್ಮ ಜಾತೀನೆ, ಜೊತೆಗೆ ಒಳ್ಳೆ ಕೆಲಸದಲ್ಲಿ ಇದ್ದಾನೆ, ನಮ್ಮಕೆಲಸ ಹಗುರ ಮಾಡಿದಳು ಬಿಡು “ಎಂದು ನುಡಿದಾಗ ಸ್ವರ್ಗಕ್ಕೆ ಮೂರೇ ಗೇಣು
ಅತ್ತ ಅವನೂ ಫೋನ್ ಮಾಡಿದ್ದ
“ಶೀತಲ್ ನಮ್ಮ ಮನೆಯಲ್ಲೂ ಒಪ್ಪಿದರು ಕಣೇ, ಇನ್ನು ಮುಂದೇ ಬರೀ ಕನಸುಗಳ ಜಾತ್ರೇ, ಆ ಜಾತ್ರೆಯ ದೇವಿ ನೀನೆ, ನಿನ್ನ ಹೊತ್ತ ಪೂಜಾರಿ ನಾನೇ ಅಲ್ಲ್ವವೇನೇ?”
ಅಲ್ಲಿಯವರೆಗೆ ಇರದ ನಾಚಿಕೆ ದ್ವನಿಯಲ್ಲಿ ಬಂದುಬಿಟ್ಟಿತ್ತು
“ಹೂ ” ಎಂದಷ್ಟೇ ಉತ್ತರಿಸಿದ್ದೆ
“ಆಹಾಹ ಎಷ್ಟೊಂದು ನಾಚಿಕೆ ಬಂದು ಬಿಟ್ಟಿದೆ ನನ್ನರಗಿಳಿಗೆ” ಛೇಡಿಸಿದ್ದ
ಮಾತಾಡಿರಲಿಲ್ಲ.
ಕನಸಿನ ಕೋಟೆಯ ಬಾಗಿಲ ಕೀಲಿ ಕೊಟ್ಟಂತಾಗಿತ್ತು,
ಆ ಕೋಟೆಯಲ್ಲಿ ನಾನು ಅವನು , ಅವನು ಮತ್ತೆ ನಾನು , ಕೇವಲ ನಾವಿಬ್ಬರೇ ಮತ್ತಾರಿಗೂ ಪ್ರವೇಶವಿಲ್ಲ.
ಅಂದಿನಿಂದ ಇಬ್ಬರ ಫೋನುಗಳಿಗೂ ಬಿಡುವಿರಲಿಲ್ಲ
ಘಂಟಾನುಗಟ್ಟಲೆ ಮಾತನಾಡುತ್ತಾ ಹರಟುತಿದ್ದರೆ
ಹೊತ್ತು ಹೋಗಿದ್ದೆ ತಿಳಿಯುತ್ತಿರಲಿಲ್ಲ
ಕಣ್ಣುಗಳ ತುಂಬ ಅವನದೇ ಬಿಂಬ , ಹೊಂಗನಸುಗಳು, ಅಮಲಿನಲ್ಲಿದ್ದಂತೆ ಭಾಸವಾಗುತ್ತಿತ್ತು. ಸವಿ ಸವಿ ಕ್ಷಣಗಳು ಸವಿ ಸವಿ ಕನವರಿಕೆಗಳು , ಮನಸು ಅವನ ಸ್ಪರ್ಷಕ್ಕೆ ಹಾತೊರೆಯತೊಡಗಿತ್ತು.  ಮೈ ಮನಗಳಲ್ಲಿ ನವ ಚೇತನ ತುಂಬಿದಂತಾಗುತ್ತಿತ್ತು.
ಎಷ್ಟೋ ರಾತ್ರಿ ಕನಸುಗಳಲ್ಲಿ ಏನೇನೋ ಆಗತೊಡಗಿ ಒಂದು ಕ್ಷಣ ಕಂಪನ, ಜೊತೆಗೇ ಆ ಸಂತಸವನ್ನು ಮನಸಾರೆ ಸವಿಯುತ್ತಿದ್ದೆ
ಯಾವಾಗಲಾದರೂ ಅವನು “ಸೌಮ್ಯ ಏನೇ ನಾನು ನಿನ್ನಕನಸಲ್ಲಿ ಬರ್ತೀನೇನೆ,”ಎಂದಾಗ ” ಹೂ” ಎನ್ನುತ್ತಿದ್ದೆನಾದರೂ “ಬಂದು ಏನು ಮಾಡ್ತೀನಿ ” ಎಂದು ನಗುತ್ತಾ ಕೇಳುತ್ತಿದ್ದಾಗ ಒಮ್ಮೆಲೇ ಗಾಭರಿಯಾಗಿ “ಏನಿಲ್ಲ ಹೀಗೆ ಬಂದು ಹೋಗ್ತೀರಾ ” ಎಂದಂದು ಮುಖ ಮುಚ್ಚಿಕೊಳ್ಳುತ್ತಿದ್ದೆ.  ಎಲ್ಲಿ ತನ್ನ ಭಾವನೆಗಳು ಅವನಿಗೆ ಗೊತ್ತಾಗುತ್ತದೆ ಎಂದು… Read more »