ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!
ರಾಘವೇಂದ್ರ ನಾವಡ ಕೆ ಎಸ್
ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!
ಈ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ ನನ್ನ ಲೇಖನಕ್ಕೆ ಆಧಾರವಾಗಿದೆ. ಮೋದಿ ಸರ್ಕಾರದ ಮತ್ತೊ೦ದು ಸಾಧನೆಯನ್ನೇ ಈ ಲೇಖನದಲ್ಲಿ ಬಿ೦ಬಿಸುತ್ತಿದ್ದೇನೆ. ಈ ಹಿ೦ದೆ ನರೇ೦ದ್ರ ಮೋದಿಯವರ ಬಗ್ಗೆ ಇಷ್ಟಕ್ಕೂನರೇ೦ದ್ರ ಮೋದಿ ಮಾಡಿರುವ ತಪ್ಪಾದರೂ ಏನು? ಎ೦ಬ ಲೇಖನದಲ್ಲಿ ಗುಜರಾತ್ ಯಶೋಗಾಥೆಯನ್ನು ಸಾದ್ಯ೦ತವಾಗಿ ವಿವರಿಸುವ ಪ್ರಯತ್ನ ಮಾಡಿದೆ.

ಅಮರನಾಥ ಯಾತ್ರೆಯ ಪ್ರಾರಂಭ
ಶ್ರೀಹರ್ಷ ಸಾಲಿಮಠ
ಅಮರನಾಥ ಯಾತ್ರೆ ಮತ್ತೆ ಶುರುವಾಗಿದೆ. ಅಲ್ಲಿ ಇಲ್ಲಿ ರಿಸರ್ಚು ಮಾಡುವವರಿಗಿಂತ ಹೋಗಿಬಂದವನ ಬಾಯಲ್ಲೇ ಕೇಳಿದರೆ ವಿವರವಾದ ಐಡಿಯಾ ಸಿಗುತ್ತದೆ! ವಾಟ್ ಎನ್ ಐಡಿಯಾ ಸರ್ ಜಿ!
ಅಮರನಾಥಕ್ಕೆ ಹೋಗುವವರು ಮೊದಲು ಪರವಾನಗಿ ಪಡೆಯಬೇಕು. ಪರವಾನಗಿ ಜೆ&ಕೆ (ಜಮ್ಮು ಕಾಶ್ಮೀರ) ಬ್ಯಾಂಕ್ ನಲ್ಲಿ ದೊರೆಯುತ್ತದೆ. ಕರುನಾಡಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬ್ಯಾಂಕಿದೆ. ಬೆಂಗಳೂರಲ್ಲಿ ಅವೆನ್ಯೂ ರಸ್ತೆಯ ಕೊನೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಬಳಿ ಜಮ್ಮು ಕಾಶ್ಮೀರ ಬ್ಯಾಂಕಿದೆ. ದಿನಕ್ಕೆ ಪರಿಮಿತ ಜನರಿಗೆ ಮಾತ್ರ ಪರವಾನಗಿ ಕೊಡುತ್ತಾರೆ. ಇವತ್ತು ಪರವಾನಗಿ ಪಡೆದರೆ ಜುಲೈಗೆ ಸಿಗಬಹುದು. ಪರವಾನಗಿ ಸಿಕ್ಕ ದಿನವೇ ಗುಹೆಯ ಬಳಿ ಹೋಗಬೇಕೆಂದು ಹೇಳುತ್ತಾರಾದರೂ ಅಮರನಾಥದಲ್ಲಿ ಅಷ್ಟು ಕಟ್ಟುನಿಟ್ಟಿನ ನಿಯಮವಿರಲಿಲ್ಲ.
ಯಾತ್ರೆಗೆ ಹೊರಡಲು ಮದ್ಯಮವರ್ಗದವರಿಗೆ ರೈಲು ಒಳ್ಳೆಯ ಮಾರ್ಗ. ಪುಣೆಯಿಂದ ಜಮ್ಮುವಿಗೆ ನೇರ ರೈಲು ಇದೆ. ಇಲ್ಲವೇ ಹುಬ್ಬಳ್ಳಿ ಅಥವಾ ಬೆಂಗಳೂರಿನಿಂದ ಹೊಸದೆಹಲಿ ತಲುಪಿ ಹಳೆ ದೆಹಲಿ ರೇಲ್ವೇ ನಿಲ್ದಾಣದಿಂದ ಜಮ್ಮು ತಲುಪಬಹುದು (ಹೊಸ ದೆಹಲಿ ಯಿಂದ ಹಳೆದೆಹಲಿ ರೇಲ್ವೇ ನಿಲ್ದಾಣಕ್ಕೆ ಹೋಗಬೇಕು). ದೆಹಲಿಯಿಂದ ಜಮ್ಮು ಸುಮಾರು ಹದಿನೈದು ತಾಸುಗಳ ರೈಲು ಪಯಣ. ಸರ್ಕುಲಾರ್ ಟಿಕೆಟ್ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ರಿಯಾಯಿತಿ ಸಿಗುತ್ತದೆ.
ಜಮ್ಮು ಕಾಶ್ಮೀರದಲ್ಲಿ ಆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳನ್ನು ಹೊರತುಪಡಿಸಿ ಬೇರೆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳು ಕೆಲಸ ಮಾಡುವುದಿಲ್ಲ. ಎಲ್ಲ ರಾಜ್ಯದ ಎಲ್ಲ ಪೋಸ್ಟ್ ಪೇಡ್ ನೆಟ್ವರ್ಕ್‌ಗಳು ಕೆಲಸ ಮಾಡುತ್ತವಾದರೂ ಬಿ ಎಸ್ ಎನ್ ಎಲ್ ಪೋಸ್ಟ್ ಪೇಡ್ ಉತ್ತಮವಾದದ್ದು. ಮತ್ತಷ್ಟು ಓದು 





