ವಿಷಯದ ವಿವರಗಳಿಗೆ ದಾಟಿರಿ

Archive for

23
ಮೇ

ನೀವೂ ಭ್ರಷ್ಟಚಾರದ ವಿರೋಧಿಗಳೇ? ಹಾಗಿದ್ದರೆ, ಬಸವನಗುಡಿಗೆ ಬನ್ನಿ…

Advertisements
23
ಮೇ

ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!

ರಾಘವೇಂದ್ರ ನಾವಡ ಕೆ ಎಸ್

ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!

ಈ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ  ನನ್ನ ಲೇಖನಕ್ಕೆ ಆಧಾರವಾಗಿದೆ. ಮೋದಿ ಸರ್ಕಾರದ ಮತ್ತೊ೦ದು ಸಾಧನೆಯನ್ನೇ ಈ ಲೇಖನದಲ್ಲಿ  ಬಿ೦ಬಿಸುತ್ತಿದ್ದೇನೆ. ಈ ಹಿ೦ದೆ ನರೇ೦ದ್ರ ಮೋದಿಯವರ ಬಗ್ಗೆ  ಇಷ್ಟಕ್ಕೂನರೇ೦ದ್ರ ಮೋದಿ ಮಾಡಿರುವ ತಪ್ಪಾದರೂ ಏನು? ಎ೦ಬ ಲೇಖನದಲ್ಲಿ ಗುಜರಾತ್ ಯಶೋಗಾಥೆಯನ್ನು ಸಾದ್ಯ೦ತವಾಗಿ ವಿವರಿಸುವ ಪ್ರಯತ್ನ ಮಾಡಿದೆ.

ಕಣ್ಣಿಗೆ ಕ೦ಡ, ಕೇಳಿ ತಿಳಿದ ಒಳ್ಳೆಯ ವಿಚಾರಗಳ ಬಗ್ಗೆ ಹಾಗೂ ಒಳ್ಳೆಯ ವ್ಯಕ್ತಿಗಳ ಬಗ್ಗೆ ನಾನು ಯಾವಾಗಲೂ ಪ್ರಚಾರ ಮಾಡುತ್ತಲೇ ಇರುತ್ತೇನೆ! ನನ್ನ ಇ೦ಥ ಸ೦ತಸಕ್ಕೆ ಕಾರಣ ಏನೆ೦ದು ಕೇಳುವಿರೇ? ಹಾಗಾದರೆ ಕೇಳಿ: ಗುಜರಾತ್ ಸರ್ಕಾರವನ್ನು “ಪ್ರಪ೦ಚದ ಎರಡನೇ ಅತ್ಯುತ್ತಮ ರಾಜ್ಯ ಸರ್ಕಾರ“ ವೆ೦ದು ವಿಶ್ವಸ೦ಸ್ಥೆಯ ಅ೦ತರಾಷ್ಟ್ರೀಯ ವ್ಯವಹಾರಗಳ ಕಾರ್ಯಲಯ ಘೋಷಿಸಿದೆ! ಇದಕ್ಕಿ೦ತಾ ಮತ್ತೊ೦ದು ಸ೦ತಸದ ಸ೦ಗತಿ ಭಾರತೀಯರಾದ ನಮಗೆ ಪ್ರಸ್ತುತ ಬೇರೇನಿದೆ? ನರೇ೦ದ್ರ ಮೋದಿ ಈಗ ಭಾರತದ ಚಲಾವಣೆಯ ನಾಣ್ಯ!!   ಜನತೆ ರಾಜಕೀಯದ ಬಗ್ಗೆ ಚರ್ಚಿಸುವಾಗ ಮೋದಿ ಯವರ  ಬಗ್ಗೆ ಅವರು ಗುಜರಾತಿನಲ್ಲಿ ಆರ೦ಭಿಸಿರುವ “ಅಭಿವೃಧ್ಧಿಯ ಶಕೆ“ ಯ ಬಗ್ಗೆ ಪ್ರಸ್ತಾಪವೆತ್ತದೆ ಇರಲಾರರು! Read more »
23
ಮೇ

ಅಮರನಾಥ ಯಾತ್ರೆಯ ಪ್ರಾರಂಭ

ಶ್ರೀಹರ್ಷ ಸಾಲಿಮಠ

ಅಮರನಾಥ ಯಾತ್ರೆ ಮತ್ತೆ ಶುರುವಾಗಿದೆ. ಅಲ್ಲಿ ಇಲ್ಲಿ ರಿಸರ್ಚು ಮಾಡುವವರಿಗಿಂತ ಹೋಗಿಬಂದವನ ಬಾಯಲ್ಲೇ ಕೇಳಿದರೆ ವಿವರವಾದ ಐಡಿಯಾ ಸಿಗುತ್ತದೆ! ವಾಟ್ ಎನ್ ಐಡಿಯಾ ಸರ್‍ ಜಿ!

ಅಮರನಾಥಕ್ಕೆ ಹೋಗುವವರು ಮೊದಲು ಪರವಾನಗಿ ಪಡೆಯಬೇಕು. ಪರವಾನಗಿ ಜೆ&ಕೆ (ಜಮ್ಮು ಕಾಶ್ಮೀರ) ಬ್ಯಾಂಕ್ ನಲ್ಲಿ ದೊರೆಯುತ್ತದೆ. ಕರುನಾಡಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬ್ಯಾಂಕಿದೆ. ಬೆಂಗಳೂರಲ್ಲಿ ಅವೆನ್ಯೂ ರಸ್ತೆಯ ಕೊನೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಬಳಿ ಜಮ್ಮು ಕಾಶ್ಮೀರ ಬ್ಯಾಂಕಿದೆ. ದಿನಕ್ಕೆ ಪರಿಮಿತ ಜನರಿಗೆ ಮಾತ್ರ ಪರವಾನಗಿ ಕೊಡುತ್ತಾರೆ. ಇವತ್ತು ಪರವಾನಗಿ ಪಡೆದರೆ ಜುಲೈಗೆ ಸಿಗಬಹುದು. ಪರವಾನಗಿ ಸಿಕ್ಕ ದಿನವೇ ಗುಹೆಯ ಬಳಿ ಹೋಗಬೇಕೆಂದು ಹೇಳುತ್ತಾರಾದರೂ ಅಮರನಾಥದಲ್ಲಿ ಅಷ್ಟು ಕಟ್ಟುನಿಟ್ಟಿನ ನಿಯಮವಿರಲಿಲ್ಲ.
ಯಾತ್ರೆಗೆ ಹೊರಡಲು ಮದ್ಯಮವರ್ಗದವರಿಗೆ ರೈಲು ಒಳ್ಳೆಯ ಮಾರ್ಗ. ಪುಣೆಯಿಂದ ಜಮ್ಮುವಿಗೆ ನೇರ ರೈಲು ಇದೆ. ಇಲ್ಲವೇ ಹುಬ್ಬಳ್ಳಿ ಅಥವಾ ಬೆಂಗಳೂರಿನಿಂದ ಹೊಸದೆಹಲಿ ತಲುಪಿ ಹಳೆ ದೆಹಲಿ ರೇಲ್ವೇ ನಿಲ್ದಾಣದಿಂದ ಜಮ್ಮು ತಲುಪಬಹುದು (ಹೊಸ ದೆಹಲಿ ಯಿಂದ ಹಳೆದೆಹಲಿ ರೇಲ್ವೇ ನಿಲ್ದಾಣಕ್ಕೆ ಹೋಗಬೇಕು). ದೆಹಲಿಯಿಂದ ಜಮ್ಮು ಸುಮಾರು ಹದಿನೈದು ತಾಸುಗಳ ರೈಲು ಪಯಣ. ಸರ್ಕುಲಾರ್‍ ಟಿಕೆಟ್ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ರಿಯಾಯಿತಿ ಸಿಗುತ್ತದೆ.
ಜಮ್ಮು ಕಾಶ್ಮೀರದಲ್ಲಿ ಆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳನ್ನು ಹೊರತುಪಡಿಸಿ ಬೇರೆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳು ಕೆಲಸ ಮಾಡುವುದಿಲ್ಲ. ಎಲ್ಲ ರಾಜ್ಯದ ಎಲ್ಲ ಪೋಸ್ಟ್ ಪೇಡ್ ನೆಟ್ವರ್ಕ್‌ಗಳು ಕೆಲಸ ಮಾಡುತ್ತವಾದರೂ ಬಿ ಎಸ್ ಎನ್ ಎಲ್ ಪೋಸ್ಟ್ ಪೇಡ್ ಉತ್ತಮವಾದದ್ದು. Read more »