– ಅಮಿತಾ ರವಿಕಿರಣ್
ಉಷಾ ಕಟ್ಟೆಮನೆ ಅವರ ಬ್ಲಾಗು ಓದುತ್ತಿದ್ದೆ …ಪ್ರೆಮಿಸಿದವನ ಕಣ್ಣು ಕಿತ್ತ ಘಟನೆಯೊಂದರ ಕುರಿತಾದ ಬರಹವದು….ಅದನ್ನು ಓದುತ್ತ ಓದುತ್ತ ಹಸಿರಾದ ನೆನಪೊಂದನ್ನು ಅಕ್ಷರದಲ್ಲಿ ಬಂಧಿಸಿಡುವ ಪ್ರಯತ್ನ ಮಾಡುತ್ತಿರುವೆ…
ನಾನು ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ದಿನಗಳವು…ನನ್ನೂರಿಂದ ವಿಶ್ವವಿದ್ಯಾಲಯ ಸುಮಾರು ೭೪ ಕಿ ಮಿ ದೂರ..ದಿನ ಬೆಳಿಗ್ಗೆ ೮ ಕ್ಕೆ ನಾನು ಮನೆಯಿಂದ ಹೊರಡುತ್ತಿದ್ದೆ ..ಆ ಸಮಯದಲ್ಲಿ ಲಭ್ಯವಿದ್ದ ಬಸ್ಸುಗಳಲ್ಲಿ ವಿದ್ಯಾರ್ಥಿಗಳೇ ತುಂಬಿರುತ್ತಿದ್ದರು…ನಾ ಮುಂದು ನೀ ಮುಂದು ಎಂದು ಸೀಟು ಹಿಡಿಯೋದು…ಕಿಟಕಿಯಿಂದಲೇ ಕರ್ಚೀಪು ಎಸೆಯೋದು..ಹೇಗೋ ಒಂದು ಸೀಟು ಗಿಟ್ಟಿಸಿ ಕುಳಿತುಕೊಂಡರೆ ಹುಬ್ಬಳ್ಳಿ ತನಕ ಯಾವುದೊ ರಗಳೆ ಇಲ್ಲ….
ನಂತರ ಪುಟ್ಟ ಕಾಡು..ಬಿದಿರುಮೆಳೆ..ಬಾಚಣಿಕಿ ಡ್ಯಾಮ್ ..ಗಳನ್ನು ದಾಟಿದ ನಂತರ ಸಿಗುವುದು ತಡಸ್ ಎಂಬ ಪುಟ್ಟ ಊರು ..ಅಲ್ಲೊಂದಿಷ್ಟು ವಿದ್ಯಾರ್ಥಿಗಳು ತುಂಬುತ್ತಿದ್ದರು …ಬಸ್ಸು ತುಂಬಿದ ಗರ್ಭಿಣಿಯಂತೆ..ಅಲ್ಲೇ ಸಿಗುತ್ತಿದ್ದಳಾಕೆ…ಕೃಷ್ಣನ ತಾಯಿಯ ಹೆಸರವಳದು…ಸ್ನೇಹಿತೆ ಅಂತ ಹೇಳಲಾರೆ…ಸುಮ್ಮನೆ ನಗುತ್ತಿದ್ದಳು..ಅಥವಾ ದೂರದಿಂದಲೇ ಕೈ ಬೀಸುತ್ತಿದ್ದಳು..ಆಕೆಗೆ ಯಾವತ್ತು ಸೀಟ್ ಸಿಗುತ್ತಿರಲಿಲ್ಲ…ನಿಂತ ವಿದ್ಯಾರ್ಥಿಗಳ ಬ್ಯಾಗು,ಪುಸ್ತಕ ಕುಳಿತವರ ಮಡಿಲಲ್ಲಿ ಆರಾಂ ಮಾಡುತ್ತಿದ್ದವು…ಹಾಗೆ…ಪ್ರತಿ ದಿನ ಅಲ್ಲದಿದ್ದರೂ..ಹೆಚ್ಚಿನ ಸಂಧರ್ಭದಲ್ಲಿ ಆಕೆ ಮತ್ತು ನಾನು ಬಸ್ ನಲ್ಲಿ ಭೇಟಿ ಆಗುತ್ತಿದ್ದೆವು…
ಚಂದದ ಹುಡುಗಿ…ಆಕೆಗೂ ಕನಸುಗಳಿದ್ದವು..ಮಧ್ಯಮವರ್ಗದ ಎಲ್ಲಾ ಹುಡುಗಿಯರಿಗೆ ಇರೋ ಹಂಗೆ ಆಕೆಗೂ ಬಾನು ಮುಟ್ಟೋ ಕನಸಿತ್ತು…ಗಂಡ ಮನೇ ಮಕ್ಕಳ ಬಗ್ಗೆ ಸುಂದರ ಕಲ್ಪನೆಗಳಿದ್ದವು.ಇದೆಲ್ಲ ಇದ್ದ ಮೇಲೆ….ಹದಿವಯಸ್ಸಿಗೆ ಈ ಜಾಯಮಾನದಲ್ಲಿ ಕಂಪಲ್ಸರಿ ಅನ್ನೋ ಒಂದು ಅಫ್ಫೆರೂ ಇತ್ತು…ಹಾಗಂತ ಅವಳೇನು ನನ್ ಬಳಿ ಹೇಳಿರಲಿಲ್ಲ…ಗೆಳತಿಯರ ತಮಾಷೆ…,ಆಕೆಯ ಸುಖಾಸುಮ್ಮನೆ ನಗು..ಕಣ್ಣಂಚಿನ ತಿರುಚು .ಮೌನದಲ್ಲಿ ಮಾತು…ಇವೆಲ್ಲ ಅದಕ್ಕೆ ಪೂರಕವಾಗಿದ್ದವು…ಅದೇನು ಅಪರಾಧ ಅಲ್ಲ ಬಿಡಿ….
ಆದಿನ ಬೆಳಿಗ್ಗೆ ಕಪ್ಪು ಬಣ್ಣದ ಉಡುಗೆಯಲ್ಲಿ ಚಂದ ಕಾಣುತ್ತಿದ್ದಳು …ಅದೇ ಹೂ ನಗು…ಹಾಯ್ !ಅನ್ನೋ ರೀತಿಯ ಒಂದು ಕೈ ಬೀಸೋ ಮೂಲಕ ಮಾತಿಲ್ಲದೆ ಮಾತಾಡಿದ್ದಳು ಹುಡುಗಿ….ಹುಬ್ಬಳ್ಳಿ ಬಂತು ಸೀಟು ಹಿಡಿಯುವಾಗ ಇರೋ ಅವಸರದ ಮೂರು ಪಟ್ಟು ಅವಸರ ಇಳಿಯುವಾಗ…ಮತ್ತೆ ಬೇರೆ ಬಸ್ಸ ಹಿಡಿಬೇಕಲ್ಲ..”ಕ್ಲಾಸಸ್ ತಪ್ಪುತ್ತೆ..”ಇವತ್ತು ಮುಗೀತು ಮತ್ತೆ ಗೈರು ನಾ ಕ್ಲಾಸ್ ಗೆ..ಅಂತ..ಎಲ್ಲರು ಮಾತಾಡ್ತಾ ದೂದಡಿ ಕೊಂಡು ಇಳಿದು ಹೋಗಿದ್ದೆವು ಎಂದಿನಂತೆ…
ಮತ್ತಷ್ಟು ಓದು 