ವಿಷಯದ ವಿವರಗಳಿಗೆ ದಾಟಿರಿ

Archive for

31
ಮೇ

ಚಿತ್ರದುರ್ಗ: ಒಂದು ಅಪರೂಪ ಐತಿಹಾಸಿಕ ತಾಣ.

–    ಆರ್.ರಾಘವೇಂದ್ರ, ಚಳ್ಳಕೆರೆ

ಇತಿಹಾಸ ಪ್ರಸಿದ್ಧ ಚಿತ್ರದುರ್ಗ ಜಿಲ್ಲೆಯು ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಹೊಳಲ್ಕೆರೆ ಎಂಬ ಆರು ತಾಲ್ಲೂಕು ಕೇಂದ್ರಗಳನ್ನೊಳಗೊಂಡಂತೆ ೧೮೫ ಗ್ರಾಮ ಪಂಚಾಯಿತಿ ಕೇಂದ್ರಗಳಿಂದ ಕೂಡಿರುತ್ತದೆ. ಚಿತ್ರದುರ್ಗ ಜಿಲ್ಲೆಯು ೮೩೮೮ ಚ.ಕಿ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು ೧೫,೧೦,೨೨೭ ಜನಸಂಖ್ಯೆ ಇರುತ್ತದೆ.

ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ, ಚಿತ್ರದುರ್ಗ ತಾಲ್ಲೂಕು ಸಾಪೇಕ್ಷಿತವಾಗಿ ಅಭಿವೃದ್ಧಿ ಹೊಂದಿದ ತಾಲ್ಲೂಕಿನ ಗುಂಪಿನಲ್ಲಿದ್ದರೆ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ ಅತಿ ಹಿಂದುಳಿದ ತಾಲ್ಲೂಕುಗಳ ಗುಂಪಿನಲ್ಲಿವೆ ಹಾಗೂ ಮೊಳಕಾಲ್ಮೂರು ತಾಲ್ಲೂಕು ಅತ್ಯಂತ ಹಿಂದುಳಿದ ತಾಲ್ಲೂಕಿನ ಗುಂಪಿನಲ್ಲಿದೆ. ಆದರೆ ರಾಜ್ಯದ ಹಿಂದುಳಿದ ಪ್ರದೇಶವಾಗಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಅದು ಹೇಗೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕ್ಷರತೆ ಪ್ರಮಾಣ, ಮಕ್ಕಳು-ಉಪಾಧ್ಯಾಯರ ಅನುಪಾತ, ೬-೧೪ ವಯೋಮಾನದಲ್ಲಿ ಶಾಲೆ ಸೇರದ ಮಕ್ಕಳ ಪ್ರಮಾಣ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇವುಗಳ ಮೇಲೆ ನಾವು ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಕಾಣಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶವೆಂದು ಮೊಳಕಾಲ್ಮೂರು ತಾಲ್ಲೂಕು ಒಂದೇ. ಚಿತ್ರದುರ್ಗವು ತಾಮ್ರದ ಖನಿಜ ಸಂಪತ್ರವನ್ನು ಇಂಗಳದಾಳ್‌ನಲ್ಲಿ ಒಳಗೊಂಡಿದೆ.

ಸಾಹಿತ್ಯ ಕ್ಷೇತ್ರದ ಮೇರುವ್ಯಕ್ತಿಯಾದ ರಸಕವಿ ‘ಕುವೆಂಪು’ರವರನ್ನೇ ಶಿಷ್ಯರಾಗಿ ಪಡೆದಂತಹ ಕೀರ್ತಿ ಟಿ.ಎಸ್.ವೆಂಕಣ್ಣಯ್ಯರವರದು. ತಳಕಿನ ಕುಟುಂಬದ ತ.ಸು.ಶಾಮರಾಯರು, ತ.ರಾ.ಸು., ಅಂಬುಜಾ ತ.ರಾ.ಸು., ರವರು ಸೇರಿದಂತೆ, ಬೆಳಗೆರೆ ಮನತೆನದ ಬೆಳಗೆರೆ ಚಂದ್ರಶೇಖರಶಾಸ್ತ್ರಿ, ಬೆಳಗೆರೆ ಕೃಷ್ಣಶಾಸ್ತ್ರಿ, ಬೆಳಗೆರೆ ಜಾನಕಮ್ಮ ಮುಂತಾದ ಸಾಹಿತ್ಯ ಗಣಿಗಳು ಚಿತ್ರದುರ್ಗದ ಸಾಹಿತ್ಯವನ್ನು ಅಮರವಾಗಿಸಿದ್ದಾರೆ. ತ.ರಾ.ಸು. ರವರ ದುರ್ಗಾಸ್ತಮಾನ, ನಾಗರಹಾವು ಹಾಗೂ ಇತರೆ ಕೃತಿಗಳು ವಿಶ್ವಕ್ಕೆ ಚಿತ್ರದುರ್ಗದ ಪರಿಚಯವನ್ನು ಬಹುಸುಂದರವಾಗಿ ಮಾಡಿಕೊಟ್ಟಿದೆ. ‘ಬಿ.ಎಲ್.ವೇಣು’ ರವರ ‘ಕಲ್ಲರಳಿ ಹೂವಾಗಿ’ ಚಲನಚಿತ್ರವು ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಪಡೆದಿದ್ದು, ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರು, ಪ್ರೋ. ಲಕ್ಷ್ಮಣ ತೆಲಗಾವಿ, ಪ್ರೋ. ಬಿ.ರಾಜಶೇಖರಪ್ಪ, ಜಾನಪದ ತಜ್ಞರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಮಲ್ಲಿಕಾರ್ಜುನ ಕಲಮರಹಳ್ಳಿ, ನೇಮಿಚಂದ್ರ, ಮುಂತಾದವರು ಸೇರಿದಂತೆ ಅನೇಕ ಸಾಹಿತ್ಯ ಕಣ್ಮಣಿಗಳನ್ನೊಳಗೊಂಡಿದ್ದು, ದುರ್ಗವು ಸಾಹಿತ್ಯದ ಗಣಿಯಾಗಿದೆ. Read more »

31
ಮೇ

ಕನ್ನಡ ಟಿವಿ ವಾಹಿನಿಗಳು ಹಾಗೂ ಮೂಢನಂಬಿಕೆಗಳ ಪ್ರಸಾರ

ಆನಂದ ಪ್ರಸಾದ್

ಕನ್ನಡದ ಎಲ್ಲ ಟಿವಿ ವಾಹಿನಿಗಳೂ ಜ್ಯೋತಿಷ್ಯವೆಂಬ ಅವೈಜ್ಞಾನಿಕ ಹಾಗೂ ಮೂಢನಂಬಿಕೆಗಳನ್ನು ಬಲಪಡಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು ಇದು ಮಾಧ್ಯಮಗಳಿಗೆ ಇರಬೇಕಾದ ಜವಾಬ್ದಾರಿಗೆ ವಿರುದ್ಧವಾದುದು.  ವಿಜ್ಞಾನದ ಆವಿಷ್ಕಾರವಾದ ಟಿವಿಯನ್ನು ತಮ್ಮವ್ಯಾಪಾರ   ಹೆಚ್ಚಿಸಿಕೊಳ್ಳಲು ಜ್ಯೋತಿಷಿಗಳಿಗೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿರುವ ಟಿವಿ ವಾಹಿನಿಗಳು ಯಾವುದೇ ನಾಚಿಕೆ ಇಲ್ಲದೆ ಈ ಕೆಲಸದಲ್ಲಿ ತೊಡಗಿವೆ.  ವಿಜ್ಞಾನಿಗಳು ಶ್ರಮ ವಹಿಸಿ ಸಂಶೋಧಿಸಿದ ಟಿವಿ ಮಾಧ್ಯಮ ಇಂದು ಅವೈಜ್ಞಾನಿಕ ವಿಚಾರಗಳು ಹಾಗೂ ಮೂಢನಂಬಿಕೆಗಳನ್ನು ಬಲಪಡಿಸಲು ದುರುಪಯೋಗವಾಗುತ್ತಿದೆ.  ಇದನ್ನು ಪ್ರಜ್ಞಾವಂತರು ವಿರೋಧಿಸಬೇಕಾಗಿದೆ.  ಮಾಧ್ಯಮಗಳಿಗೆ ಜನರನ್ನು ವಿಚಾರವಂತರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಇದೆ.  ಇದನ್ನು ಕಡೆಗಣಿಸಿ ೨೧ ಶತಮಾನದಲ್ಲೂ ಜ್ಯೋತಿಷ್ಯ, ವಾಸ್ತು ಎಂಬ ವೈಜ್ಞಾನಿಕ ಆಧಾರಗಳಿಲ್ಲದ ಪುರೋಹಿತಶಾಹಿ ವಿಚಾರಗಳನ್ನು ಜನರ ಮೇಲೆ ಹೇರಲು ಯತ್ನಿಸುತ್ತಿರುವ ಟಿವಿ ವಾಹಿನಿಗಳ ಧೋರಣೆಯನ್ನು ವಿಚಾರವಂತರು, ಸಾಹಿತಿಗಳು, ವಿಜ್ಞಾನಿಗಳು, ತಂತ್ರಜ್ಞರು, ಪ್ರಜ್ಞಾವಂತರು  ವಿರೋಧಿಸಬೇಕಾಗಿದೆ.

ಇಂದು ದೇಶಾದ್ಯಂತ ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪುಗೊಳ್ಳುತ್ತಿರುವ ಹೊತ್ತಿನಲ್ಲಿ ಮೂಢನಂಬಿಕೆಗಳನ್ನು ಬಲಪಡಿಸುವ ಪುರೋಹಿತಶಾಹಿ ಕುತಂತ್ರದ ವಿರುದ್ಧವೂ ಹೋರಾಟ ನಡೆಯಬೇಕಾದ ಅಗತ್ಯ ಇದೆ.  ಕಷ್ಟಪಟ್ಟು ದುಡಿದು ತಿನ್ನುವುದರ ಬದಲು ಕೆಲವು ಪುರೋಹಿತಶಾಹಿಗಳು ಜ್ಯೋತಿಷ್ಯ, ವಾಸ್ತುವಿನ ಹೆಸರಿನಲ್ಲಿ ಜನರ ನಂಬಿಕೆಗಳನ್ನು, ಜನರ ಭಯವನ್ನು ತಮ್ಮ ಜೇಬು ತುಂಬಿಸಿಕೊಳ್ಳಲು ಸುಲಭೋಪಾಯವಾಗಿ ಬಳಸಿಕೊಳ್ಳುತ್ತಿರುವುದೂ ಒಂದು ರೀತಿಯ ಭ್ರಷ್ಟಾಚಾರವಲ್ಲವೇ?  ಇಂಥ ಭ್ರಷ್ಟಾಚಾರಕ್ಕೆ ಟಿವಿ ವಾಹಿನಿಗಳು ಕೈಗೂಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸವೆಂದು ಟಿವಿ ವಾಹಿನಿಗಳನ್ನು ನಡೆಸುವವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ.  ಜ್ಯೋತಿಷ್ಯ, ವಾಸ್ತು ಇಲ್ಲದೆ ಪಾಶ್ಚಾತ್ಯ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಿವೆ.   ಹೀಗಿರುವಾಗ ನಮ್ಮ ಟಿವಿ ವಾಹಿನಿಗಳು ಜ್ಯೋತಿಷ್ಯ, ವಾಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸುತ್ತ್ತಿರುವುದು ಯಾವ ಪುರುಷಾರ್ಥ ಸಾಧನೆಗಾಗಿ ಎಂದು ನಾವು ಕೇಳಬೇಕಾಗಿದೆ.  Read more »