ವಿಷಯದ ವಿವರಗಳಿಗೆ ದಾಟಿರಿ

Archive for

7
ಜೂನ್

ಇಲ್ಲಿ ‘ನಿಮ್ಮ’ ಕಣ್ಣಿಗೆ ಸಣ್ಣವರಾದ ಸಾಮಾನ್ಯ ಜನರು ಇದ್ದರು…

ಡಾ.ಅಜಕ್ಕಳ ಗಿರೀಶ್

ರಾಮದೇವ್ ಬಗ್ಗೆ ಬೇಕಾದದ್ದು ಮಾತಾಡಲಿ. ಆದರೆ ಹಾಗೆ ಹಿಡನ್ ಅಜೆಂಡಾ, ಕೋಮುವಾದಿಗಳು ಇತ್ಯಾದಿ ಬೈಯುವಾಗ ಕೂಡ ಯಾರೊಬ್ಬರೂ ಗಮನಿಸದ ವಿಚಾರ ಅಂದರೆ, ಅವರನ್ನು ಬೇಂಬಲಿಸಿ ರಾಮಲೀಲ ಮೈದಾನಕ್ಕೆ ಗಂಟುಮೂಟೆ ಕಟ್ಟಿಕೊಂಡು ಹೋದ ಸಾವಿರಾರು ಜನರು ಇದ್ದಾರಲ್ಲ ಅವರು ಯಾವ ಸ್ವಾರ್ಥದಿಂದ ಹೋದರು? ನಿಜ , ಅಲ್ಲಿ ಕಡುಬಡವರು ಇದ್ದಿರಲಾರರು. ಆದರೆ,ಅಲ್ಲಿ ಇದ್ದವರು ನಿಜವಾದ ದೇಶಭಕ್ತರು. ದೇಶಭಕ್ತಿ ಅಂದರೆ ಏನು ಅಂತ ವಿವರಿಸುವುದು ಯಾವಾಗಲೂ ಕಷ್ಜ್ಟ. ಆದರೆ ಇಂದು ಬಹುಶಃ ದೇಶಭಕ್ತಿ ಅಂದರೆ ಏನು ಅಂತ ಯಾರಿಗಾದರೂ ಪಾಠ ಹೇಳಬೇಕಾದರೆ ನಾವು ಇದು ಅಂತ ತೋರಿಸಬಹುದುದು. ಬೇರೆ ಅಂಥ ಉದಾಹರಣೆಗಳು ಬಹಳ ಸಿಗಲಿಕ್ಕಿಲ್ಲ. ಊಟದ ಆಸೆಯಿಂದ ಸೇರಿದ್ದಾರೆ ಅನ್ನಲು ಅಲ್ಲಿ ಊಟವಿಲ್ಲ,ಉಪವಾಸ. ಹಣದ ಆಸೆಗೆ ಹೋದರೇ? ಅವರು ತಮ್ಮ ಸ್ವಂತ ಹಣದಿಂದ ಹೋದರು ,ಅಷ್ಟೇ ಅಲ್ಲ ,ಬಹುಶ ಬಹಳ ಜನ ಪೆಂಡಲ್ ಇತ್ಯಾದಿ ಖರ್ಚಿಗೆ ದೇಣಿಗೆ ಕೂಡ ಕೊಟ್ಟಿರಬಹುದು(ದೇವಸ್ತಾನಗಳಿಗೆ ನಮ್ಮ ಖರ್ಚಲ್ಲಿ ಹೋಗಿ ಕಾಣಿಕೆ ಹಾಕಿದಂತೆ.ದೇವಸ್ತಾನದಲ್ಲಿ ಪುಣ್ಯವಾದರೂ ಸಿಗುತ್ತೆ ಸ್ವಂತಕ್ಕೆ ಅಂತ ಆಸೆ ಇರುತ್ತೆ, ಇಲ್ಲಿ ಸ್ವಂತಕ್ಕೆ ಅಂತ ಏನಿಲ್ಲ.) Read more »

7
ಜೂನ್

ನಾವಿನ್ನೂ ಬ್ರಿಟಿಷರ ಆಳ್ವಿಕೆಯಲ್ಲಿದ್ದೇವೆಯೇ?

– ಸಂಪತ್ ಕುಮಾರ್

ಸ್ವತಂತ್ರ, ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವ  ದೇಶದಲ್ಲಿ ಇಂತಹ ಘಟನೆಗಳು ನಡೆಯಲು ಸಾಧ್ಯವೇ!? ಜೂನ್ ೪ ರ ಘಟನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ.ಪ್ರಜೆಗಳ ಮೂಲಭೂತ ಹಕ್ಕುಗಳ ಕಗ್ಗೊಲೆಯಾಗಿದೆ. ಗಾಂಧಿಜಿ ಹೇಳಿಕೊಟ್ಟ ಸತ್ಯಾಗ್ರಹದಂತಹ ಅಸ್ತ್ರ ಬೆಲೆ ಕಳೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದನೆ ನೀಡಿದಂತಾಗಿದೆ.
ಪ್ರಜೆಗಳ ದನಿಯನ್ನು ಹತ್ತಿಕ್ಕಲು ಹೊಸ ವಿಧಾನವನ್ನು ಸರಕಾರ ಹೇಳಿಕೊಟ್ಟಿದೆ. ಬಾಬಾ ರಾಮದೇವ್ ಅವರ ಅಹಿಸಾತ್ಮಕ ಪ್ರತಿಭಟನೆಗೆ ಹಿಂಸಾತ್ಮಕ ಉತ್ತರ ನೀಡಿ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಏಪ್ರಿಲ್ ೧೨ ರಂದು ನಾನು ನಿಲುಮೆಯಲ್ಲಿ ಬರೆದ ಲೇಖನ “ಇನ್ನೊಂದು ಸಮರಕ್ಕೆ ಸಿದ್ದರಾಗಿ” ಸದಾಶಯದಂತೆ ಬಾಬಾ ರಾಮದೇವ್ ಅವರು ಸತ್ಯಾಗ್ರಹಕ್ಕೆ ಕುಳಿತದ್ದು ಸಂತೋಷದ ವಿಚಾರವಾಗಿರುತ್ತದೆ. ಲೋಕಪಾಲದಂತಹ ಬಹು ಆಯಾಮದ ಸಮಸ್ಯೆಯನ್ನು ಎದುರಿಸುವ ಬದಲು, “ಕಪ್ಪು ಹಣ” ದಂತಹ ಒಂದೇ ಸಮಸ್ಯೆಯನ್ನು ಎದುರಿಸಿ ಬಾಬಾ ಯಶಸ್ಸನ್ನು ಪಡೆಯುವ ಹಂತದಲ್ಲಿರುವಾಗಲೇ ಹೀಗೆ ಸತ್ಯಾಗ್ರಹವನ್ನು ಹತ್ತಿಕ್ಕಿದ್ದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಸರಕಾರದ ಸರ್ವಾಧೀಕಾರದ ಧೋರಣೆ ಎಂದಿಗೂ ಸಲ್ಲ.

Read more »

7
ಜೂನ್

ಬಾಲ್ಯಕಾಲವೇ ನೀ ಇನ್ನೊಮ್ಮೆ ಬಾರೆಯಾ?

– ಡಾ.ಶೈಲಾ ಯು.

ಮಾರಣಕಟ್ಟೆಯ ಜಾತ್ರೆಗೆ ಮಕ್ಕಳೊ೦ದಿಗೆ ಹೊರಟಿದ್ದೇನೆ; ನೆನಪುಗಳು ಮರುಕಳಿಸುತ್ತಿವೆ.   ಅವರನ್ನು ನೆಪವಾಗಿಟ್ಟುಕೊ೦ಡು ಎಷ್ಟು ವರ್ಷಗಳಿ೦ದ ನನ್ನ ಬಾಲ್ಯದ ದಿನಗಳನ್ನು ಮೆಲುಕು ಹಾಕಿದ್ದೇನೋ? ನನಗೇ ನೆನಪಿಲ್ಲ. ಯಾವುದಕ್ಕೂ ಬಿಡುವಿಲ್ಲ ಬಿಡುವಿಲ್ಲ ಎ೦ಬ ಗೊಣಗಾಟವನ್ನು ತತ್ಕಾಲಕ್ಕೆ ನಿಲ್ಲಿಸಿ, ಮಕ್ಕಳಿಗೂ ಕಿ೦ಚಿತ್ ಅನುಭವ ಸಿಗುವುದೇ ಎ೦ಬ ಕಾತುರದಲ್ಲಿ ನನ್ನ ಅಕ್ಕರೆಯ ಅಜ್ಜಿ ನಮಗೆಲ್ಲ ಪ್ರೀತಿ ಉಣಿಸಿದ ಆವರಣ ಈಗ ಹೇಗಿದೆ ನೋಡಲು ಹೋಗುತ್ತಿದ್ದೇನೆ. ಅ೦ದು ಆ ಊರು ಎಷ್ಟೊ೦ದು ಆತ್ಮೀಯವಾಗಿತ್ತು; ಆ ದಿನಗಳು ಎಷ್ಟೊ೦ದು ಚೆನ್ನಾಗಿದ್ದವು!…
ಕು೦ದಾಪುರ ತಾಲೂಕಿನ ಅ೦ದಿನ ಒ೦ದು ಕುಗ್ರಾಮ ನನ್ನಜ್ಜಿಯ ಮನೆರುವ ಊರು. ಸುತ್ತಲಿನ ಇಳಿಜಾರಾದ ಪ್ರದೇಶದಲ್ಲಿ ಸಮತಟ್ಟಾದ ಗದ್ದೆಗಳು. ಅವುಗಳ ತಪ್ಪಲಲ್ಲಿ ನನ್ನಜ್ಜಿಯ ಮನೆ. ‘ಅಜ್ಜಿ ಮನೆ’ ಎನ್ನುವಾಗಲೇ ನನ್ನೊಳಗೆ ಅವಿತಿರುವ ಆರ್ದ್ರತೆಯ೦ತಹ ಹೇಳಿಕೊಳ್ಳಲಾರದ ಭಾವ ನನ್ನನ್ನು ಆವರಿಸಿಕೊಳ್ಳುತ್ತದೆ. ಮನಸ್ಸು ತು೦ಬಿಬರುವ ಸವಿ ಸವಿ ನೆನಪುಗಳು. ಬಾಲ್ಯದ ರಜಾಕಾಲದಲ್ಲಿ ಅಲ್ಲಿ ಕಳೆಯುತ್ತಿದ್ದ ದಿನಗಳು ನನ್ನನ್ನು ಏಕಾ೦ಗಿಯಾಗಿದ್ದಾಗಲೆಲ್ಲ ಕಾಡುತ್ತವೆ; ನನ್ನ ಸಹಜ ಭಾವುಕ ಗುಣವನ್ನು ಉದ್ದೀಪಿಸಿ ಕಣ್ಣ೦ಚಿನಲ್ಲಿ ನೀರು ಜಿನುಗುವ೦ತೆ ಮಾಡುತ್ತವೆ. Read more »