ವಿಷಯದ ವಿವರಗಳಿಗೆ ದಾಟಿರಿ

Archive for

10
ಜೂನ್

ಕನ್ನಡ ಪ್ರೇಕ್ಷಕರಿಗೆ ತಿಳುವಳಿಕೆ ಇಲ್ವ?

– ಅರುಣ್ ಜಾವಗಲ್

ಡಬ್ಬಿಂಗ್ ಬೇಡ ಎಂದು ಹೇಳುತ್ತಿರುವ ಬಿ ಸುರೇಶ ರವರು ಫೇಸ್ ಬುಕ್ ನಲ್ಲಿ ಕೆಲವು ಡಬ್ಬಿಂಗ್ ಪರವಾದ ಮಾತುಗಳನ್ನು ಪಟ್ಟಿ ಮಾಡಿ ಅದಕ್ಕೆ ಉತ್ತರಿಸಲು ಪ್ರಯತ್ಸಿಸಿದ್ದಾರೆ. ಡಬ್ಬಿಂಗ್ ಪರವಾದ ಹೆಚ್ಚು ಕಡಿಮೆ ಎಲ್ಲಾ ಮಾತುಗಳನ್ನ ಪಟ್ಟಿಮಾಡಿದ್ದಕ್ಕಾಗಿ ಮತ್ತು ಅದಕ್ಕೆ ಅರೋಗ್ಯಕರ ರೀತಿಯಲ್ಲಿ ಉತ್ತರಿಸಲು ಪ್ರಯತ್ಸಿಸಿದ್ದಕ್ಕೆ ನಾನು ಅಬಿನಂದಿಸುತ್ತೇನೆ.

ಡಬ್ಬಿಂಗ್ ಪರವಾದ ಮಾತುಗಳಲ್ಲಿ ಡಬ್ಬಿಂಗ್ ಬೇಕೆ ಬೇಡವೇ ಅನ್ನೊದನ್ನ ಪ್ರೇಕ್ಷಕ(ಮಾರುಕಟ್ಟೆ) ನಿರ್ದರಿಸರಿ ಅನ್ನೋದು ಒಂದು. ಇದೇ ವಾದ ನನ್ನದೂ ಕೂಡ. ಆದರೆ ಡಬ್ಬಿಂಗ್ ಬೇಕೆ ಬೇಡವೇ ಎಂದು ಮಾರುಕಟ್ಟೆ ನಿರ್ದರಿಸೋದು ಸರಿ ಅಲ್ಲ ಅನ್ನೋ ಹಾಗೆ ಬಿ ಸುರೇಶ ರವರು ಹೇಳಿದ್ದಾರೆ. ಇದರ ಬಗ್ಗೆ ಅವರ ಉತ್ತರ ನೋಡಿ- Read more »
10
ಜೂನ್

ಅಂಥ ಕಳ್ಳರು ಸಂತೆಲೀ ಜೊತೆಯಾದರು…

– ವಿಜಯ್ ಹೆರಗು

ಭಾರತ ದೇಶದ ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ. ಇಲ್ಲಿ ವಾಹನ ಚಲಾಯಿಸಲು ಪರವಾನಗಿ ಇಲ್ಲದಿದ್ದರೂ ಪರವಾಗಿಲ್ಲ, ಪೋಲಿಸಪ್ಪನ ಕೈಗೆ ನೂರರ ನೋಟು ತುರುಕಿ ಬಚಾವಾಗಬಹುದು. ಆದರೆ ಉಪವಾಸ ಸತ್ಯಾಗ್ರಹ ಮಾಡಲು ಅನುಮತಿ ಬೇಕು. ಇಲ್ಲದಿದ್ದರೆ ಹೆಂಗಸರು, ಮಕ್ಕಳೆಂಬ ಭೇದ ತೋರದೆ ಸದೆಬಡಿಯುತ್ತಾರೆ. ಸಾಮಾನ್ಯ ಜನರು ಏನೂ ಮಾಡಲಾಗದ ಹಂತ ತಲುಪಿದ್ದಾರೆ. ತಾವೇ ಆರಿಸಿಕಳಿಸಿದ ಮಂದಿ ತಮ್ಮ ಮೇಲೆ ದಬ್ಬಾಳಿಕೆ ಮಾಡುವುದನ್ನು ನೋಡುವ ಅಸಹಾಯಕ ಸ್ಥಿತಿ ಯಾವುದೇ ದೇಶದ ಜನರಿಗೂ ಬರಬಾರದು.

  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಯು.ಪಿ.ಎ  ಸರ್ಕಾರ ಹಗರಣಗಳ ಮೇಲೆ ಹಗರಣಗಳನ್ನು ಸೃಷ್ಟಿಸುತ್ತಾ ಸಾಗಿದೆ. ಜನರು ಶಾಂತಿಯುತ ಪ್ರತಿಭಟನೆಗೆ ಮುಂದಾದರೆ ರಾತ್ರೋರಾತ್ರಿ ಪೋಲಿಸ್ ದಾಳಿಗಳಾಗುತ್ತವೆ. ಇದನ್ನು ಪ್ರಧಾನಿ ದುರದೃಷ್ಟಕರ ಎಂದರೆ ಅವರದೇ ಸಂಪುಟದ ಸಚಿವರು ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಒಂದು ಸರ್ಕಾರವನ್ನು ಆರಿಸಿ ಕಳಿಸಿದ್ದು ನಮ್ಮ ದುರದೃಷ್ಟ ಎಂದೇ ಹೇಳಬೇಕು.
 ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭಾಜಪ ಸರ್ಕಾರ ನಮ್ಮ ನಾಡು ಕಂಡ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಹಣೆಪಟ್ಟಿ ಹೊಂದಿದೆ. ಇಲ್ಲಿ ಯಡಿಯೂರಪ್ಪನವರೇ ಸರ್ವಸ್ವ. ಅವರು ಹೇಳಿದ್ದಕ್ಕೆ ಎಲ್ಲರೂ ಅಸ್ತು ಎನ್ನಲೇಬೇಕು, ಇಲ್ಲದಿದ್ದರೆ ಅವರಿಗೆ ಉಳಿಗಾಲವಿಲ್ಲ. ತಮ್ಮ ಕುಯುಕ್ತಿಯಿಂದ ಹೈಕಮಾನ್ದನ್ನೇ ಅಲುಗಾಡಿಸಬಲ್ಲ ಶಕ್ತಿ ಯಡಿಯೂರಪ್ಪನವರಿಗಿದೆ. Read more »