ವಿಷಯದ ವಿವರಗಳಿಗೆ ದಾಟಿರಿ

Archive for

21
ಜೂನ್

“ಪ.ಗೋ. ಕಾಲಂ” ಜಗತ್ತಿನಲ್ಲಿ ಪತ್ರಕರ್ತನಿಗೊಂದು “ಸರ್ಟಿಫಿಕೇಟ್”

-ರವಿ ಮುರ್ನಾಡು

  ಪ.ಗೋ. ಜಗತ್ತಿನ ಪದಗಳ  ಹಂದರದಲ್ಲಿ ಒಬ್ಬ ” ವಿಲನ್‍” ಸೃಷ್ಠಿಯಾಗುತ್ತಾನೆ . ಅವನನ್ನು ಬುದ್ಧಿವಂತ ಹುಚ್ಚ ಅನ್ನುತ್ತೇವೆ. ಅದು ಕೊಡಿಯಾಲ್‍ ಬೈಲ್‍ ನವಭಾರತ ಪತ್ರಿಕೆಯಿದ್ದಾಗ ಪತ್ರಿಕಾ ಪ್ರಸರಣಾ ವಿಭಾಗದ ಮುಖ್ಯಸ್ಥ ಕಾಮತ್‍. ಅದಕ್ಕೆ ದಿವಂಗತ ಪ.ಗೋ.ರವರು “ಹಿತ್ತಾಳೆ ದೂರುಗಂಟೆ” ಅಂತ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ತಮ್ಮ ” ವಿಚಿತ್ರ ಸೃಷ್ಠಿಯ ಲೋಕದಲ್ಲಿ ಮತ್ತು ಅಂಕಣ ಬರಹಗಳು” ಸಂಕಲನದಲ್ಲಿ  ಹಿತ್ತಾಳೆ ದೂರುಗಂಟೆಯ ಪಾತ್ರಧಾರಿ  ವಿಲಕ್ಷಣವಾಗಿ ಎದ್ದು ನಿಲ್ಲುವಂತದ್ದು. ಹೀಗೂ ಉಂಟೆ…?! ಅನ್ನುವ ಒಂದು ಪ್ರಶ್ನೆ. ಪತ್ರಿಕಾ ಕಾರ್ಯಾಲಯದಲ್ಲಿ ಅಚಾನಕ್ಕಾಗಿ ಸೃಷ್ಠಿಯಾಗುತ್ತವೆ, ಇಲ್ಲದಿದ್ದರೆ ಸೃಷ್ಠಿಸುತ್ತಾರೆ . ಎಲ್ಲಾ  ಖಾಸಾಗಿ ಸಂಸ್ಥೆಯಲ್ಲಿ  ಇಂತಹ “ಶಕುನಿ”ಗೊಂದು ಹುದ್ದೆ ಉಂಟೇ ಉಂಟು. ಪ.ಗೋ.ರವರು ಮೌನವಾಗಿ ನವಭಾರತ ಕಚೇರಿ ಬಿಟ್ಟು ಹೋದಾಗ, ಕಚೇರಿಯ ಬಾಗಿಲಿಗೆ ತುಕ್ಕು ಹಿಡಿಯಬಾರದಿತ್ತೋ ಆನ್ನಿಸಿತು. ಬದುಕಿನ ಗೋಡೆ ಬಿರುಕಿಟ್ಟ ಸನ್ನಿವೇಶಕ್ಕೆ, ಪತ್ರಿಕಾ ಬದುಕಿಗೆ ಛೀಮಾರಿ ಹಾಕುವಷ್ಟು ವ್ಯಥೆಯಾಗುವಂತದ್ದು.

ಇವತ್ತಿಗೂ ಮಾತಾಡುತ್ತಿದೆ…. ಮನುಷ್ಯ ಬದುಕಿಗೆ  ಸವಾಲು ಹಾಕಿದ ಮಾತು.  “ನಾನು ಪತ್ರಿಕೆ ಹುಟ್ಟು ಹಾಕುವ ಕನಸು ಕಂಡಿದ್ದು ತಪ್ಪಾಯಿತು..!” ಅಂತ. ಬದುಕಿನ ಸ್ಥಿತ್ಯಂತರದಲ್ಲಿ ಒಮ್ಮೊಮ್ಮೆ ಕನಸುಗಳು ಈಟಿ ಇರಿದಂತೆ ಅಣಕಿಸುತ್ತವೆ. ಮಂಗಳೂರಿನ ಕಡಲ ಮರಳ ಕಣಗಳಿಗೆ ಇದರ ಪರಿಚಯ ಉಂಟು. ಅಲೆಗಳು ದಡಕ್ಕೆ ಬಡಿದು ಎಚ್ಚರಿಸಿ ಹೋಗುತ್ತಿವೆ… ಆ ಒಂದು ಜಗತ್ತಿನ ವಿಸ್ತಾರದಲ್ಲಿ ಜೀವನದ ಸಾರ್ಥಕ್ಯಕ್ಕೆ  ಮನಸ್ಸುಗಳು ತೆರೆದುಕೊಳ್ಳಲಿಲ್ಲ . ಪಡ್ಯಾನ ಗೋಪಾಲಕೃಷ್ಣರ  ರೆಕ್ಕೆ ಮುರಿದ ಮಾತುಗಳ ಹಕ್ಕಿಯ ಕಲರವ ಕೇಳಿಸುತ್ತಲೇ ಇದೆ…. ಕನಸುಗಳ ಮೂಟೆ ಹೊತ್ತ ದೋಣಿ ಕಡಲ ಮಧ್ಯದಲ್ಲಿ ಈಜುತ್ತಿದೆ….! Read more »

21
ಜೂನ್

ಜಾತಿ ಎಂಬ ಜಾಡ ಹಿಡಿದು…

– ವಸಂತ್ ಕೋಡಿಹಳ್ಳೀ ಲಕ್ಕೂರು

ಮನುಷ್ಯ ಹುಟ್ಟುತ್ತಾ ಹುಟ್ಟುತ್ತಾ ಸ್ವಾತಂತ್ರ ಜೀವಿ!, ಅವನು ಬೆಳೆದಂತೆಲ್ಲ ಸಮಾಜದ ಕಟ್ಟುಪಾಡುಗಳು ಅವನ ಸ್ವಾತಂತ್ರವನ್ನು ಕಸಿದುಕೊಳ್ಳುತ್ತಾ ಬರುತ್ತದೆ. ಕರ್ನಾಟಕದ ಶ್ರೇಷ್ಟ ಕವಿ ಕುಂವೆಂಪುರವರು ತನ್ನ ವಿಶ್ವಮಾನವ ಸಂದೇಶದಲ್ಲಿ ಹೀಗೆ ಹೇಳುತ್ತಾರೆ. “ಪ್ರತಿಯೊಂದು ಮಗುವೂ ಹುಟ್ಟುತ್ತಲೆ ವಿಶ್ವಮಾನವ. ಬೆಳೆದಂತೆ ನಾವು ಅದನ್ನು ‘ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಎಂದರೆ ಹುಟ್ಟುವಾಗ ಎಲ್ಲರೂ ವಿಶ್ವಮಾನವರಾಗಿಯೇ ಹುಟ್ಟುತ್ತಾರೆ. ಬೆಳೆದಂತೆ ನಾವು ಅವರನ್ನು ಜಾತಿ, ಧರ್ಮ, ಬಾಷೆ, ದೇಶ, ಜನಾಂಗ ಎಂಬಲ್ಲ ಕಟ್ಟು ಪಾಡುಗಳಿಂದ ಬಂಧಿಸುತ್ತೇವೆ. ಬಹುಶಃ ಅವನು ಹುಟ್ಟಿದ ಸಮಜ ಅವನನ್ನು ಅಲ್ಪನನ್ನಾಗಿಸುತ್ತದೆ. ಇಲ್ಲಿ ‘ಸಮಾಜ’ವೆಂಬುದು ಮನುಷ್ಯ ಕಳಂಕವಲ್ಲವೇ

ಸರಿ ನಾನು ಕವಲುದಾರಿಗಳಲ್ಲಿ ಸಾಗಿ ಮನುಷ್ಯನ ನಿಗೂಢ ಜಾಡು ಹಿಡಿದು. ಅವನ ಕೆಲವು ಪದರುಗಳನ್ನು ಇಲ್ಲಿ ಮಂಡಿಸಲು ಪ್ರಯತ್ನಿಸುತ್ತೇನೆ. ಕುವೆಂಪುರವರು ಒಂದು ಜನಾಂಗ ಮತ್ತೊಂದು ಜನಾಂಗವನ್ನು ಮೆಟ್ಟಿ ತುಳಿಯುವುದು ವಿರಾಟ್ ಶಕ್ತಿ, ವಿರೋಧಿ ಕೃತ್ಯ, ಹೇಡಿತನ ಎಂದು ಬಣ್ಣಿಸುತ್ತಾರೆ. ಸಮಾಜದ ನೆರಳಿನಲ್ಲಿ ನಮ್ಮ ಬೆಳವಣಿಗೆಗಾಗಿ ತಮ್ಮ ಜೀವನದ ಮೌಲ್ಯಗಳನ್ನು ಸರಿದೂಗಿಸುವ ನೆಪದಲ್ಲಿ “ಜಾತಿ, ಬಾಷೆ, ಸಂಸ್ಕೃತಿಗಳ ಮೊರೆ ಹೋಗುವುದಂತೂ ಸರಿ ?. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬಂತೆ ವಿಂಗಡಿಸಿ ಉನ್ನತವಾದ ಸ್ತಾನಗಳನ್ನು ಮೇಲಿನ ಮೂರೂ ವರ್ಗದವರು ಪಡೆದುಕೊಂಡು ಶೂದ್ರರನ್ನು ಇಂದಿಗೂ ತುಳಿಯುತ್ತಾ ಶೋಷಣೆ ಗೈಯುವುದು ಯಾವ ನ್ಯಾಯ ? Read more »