ಅಮ್ಮ ಹೊಲಿದ ತಂಗಿಯ ಅಂಗಿ..!
-ರವಿ ಮೂರ್ನಾಡು
ಗೆಜ್ಜೆಗಳಿಲ್ಲದ ಕಾಲುಗಳಲ್ಲಿ ಮಗು ಅಂಬೆಗಾಲಿಕ್ಕುತ್ತಿತ್ತು. ಬೆಳಕಿನ ಚುಕ್ಕಿಯೊಂದು ಹಾಲ್ಗಲ್ಲದ ನಗೆ ಸೂಸುತ್ತಾ ಅಂಗಿ ತೊಟ್ಟು ಬರುತ್ತಿರುವಂತೆಯೇ, ಅಮ್ಮನ ಕಣ್ಣಿನಲ್ಲಿ ಹನಿಗಳು ತೊಟ್ಟಿಕ್ಕ ತೊಡಗಿದವು. ಹಾಗೇ ನೋಡುತ್ತಿದ್ದೆ. ಏಕಮ್ಮ ಅಳುತ್ತಿದ್ದೀಯ?. ಬಾಚಿ ತಬ್ಬಿಕೊಂಡ ಅಮ್ಮ, “ಇಲ್ಲ ಮಗನೇ.. ನೀನು ದೊಡ್ಡವನಾಗಿ ಕೆಲಸಕ್ಕೆ ಸೇರಿದ ಮೇಲೆ ನನಗೊಂದು ಸೀರೆ.. ತಂಗಿಗೊಂದು ಚೆಂದದ ಅಂಗಿ ತಂದು ಕೊಡಬೇಕು” ಅಂತ ಉಸುರಿದಳು. ಮನೆಯ ಹೊರಗೆ ಆಗ ತಾನೆ ಕತ್ತಲು ತಬ್ಬಿಕೊಂಡಿತ್ತು… ಹಾಗೇ ತಂಗಾಳಿ ಮುಖಕ್ಕೆ ಬಡಿದಾಗ, ಅಮ್ಮನ ಮಾತು ನನ್ನ ಹಗಲುಗಳನ್ನು ಕಾಯುತ್ತಿತ್ತು.
ವಾರಕ್ಕೆ ರವಿವಾರದ ಶಾಲೆಯ ರಜಾ ದಿನಗಳಲ್ಲಿ ಮನೆಗೆ ಬರುವಾಗಲೆಲ್ಲಾ, ಅವಳು ಕೇಳುತ್ತಾಳೆ ” ಮಾವ ಏನು ಕೊಡಲಿಲ್ಲವೇನೋ?” ಅಂತ . ಇದು ಪ್ರತೀ ಬಾರಿಯ ಪ್ರಶ್ನೆ. ಒಂದು ಬಾರಿ ಹಾಗೆ ಕೇಳಿದ್ದೆ. ಇಲ್ಲ ಸುಮ್ಮನೇ ಕೇಳಿದೆ ಅಂತ ಹೇಳಿದ್ದಳು. ತಂಗಿ ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಹುಟ್ಟಿದಾಗ, ಮಗು-ತಾಯಿಯನ್ನು ನೋಡಲು ಒಮ್ಮೆ ಮಾವ ಬಂದಿದ್ದು. ತದ ನಂತರ ಬರಲಿಲ್ಲ. ವರ್ಷ ಒಂದಾಗುತ್ತಾ ಬಂತು. ನಾಲ್ಕು ತಿಂಗಳ ಮಗುವಿರುವಾಗ, ಅಜ್ಜಿ ಎರಡು ಅಂಗಿ ತಂದಿದ್ದರು. ಅಪ್ಪ ಮಡಿಕೇರಿಯ ಶುಕ್ರವಾರದ ಸಂತೆ ದಿನ , ದಾರಿ ಬದಿಯ ಮುಸ್ಲಿಂ ವ್ಯಾಪಾರಿಯಿಂದ ತಂದ ಎರಡು ಅಂಗಿ. ಮಗು ದೊಡ್ಡದಾಗುತ್ತಿದ್ದಂತೆ ಎಲ್ಲವೂ ಸಣ್ಣದಾಗಿದ್ದವು. ಮತ್ತಷ್ಟು ಓದು 
ಟ್ರಾಪಿಕ್ ಸಮಸ್ಯೆ ಯ ಜಾಗ್ರುತಿ ಕನ್ನಡದಲ್ಲಿರಲಿ
ಆದ್ರೆ, ಬೆಂಗಳೂರಿನ ಟ್ರಾಪಿಕ್ ಸಮಸ್ಯ್ತೆಯನ್ನು ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಪೋಲೀಸರಿಗೆ ಸರಿಯಾಗಿ ಸಹಕರಿಸಿಲ್ಲ ಎಂದು ಬೆಂಗಳೂರಿನ ಪೋಲೀಸ್ ಕಮಿಶನರ್ ಆದ ಜ್ಯೋತಿ ಪ್ರಕಾಶ್ ಮಿರ್ಜಿಯವರು ಇಂದು ನಗರದ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.






