ವಿಷಯದ ವಿವರಗಳಿಗೆ ದಾಟಿರಿ

ಜುಲೈ 4, 2011

2

ಜನರೆಂದರೆ ಯಾರ್ ಯಾರು ಕಾಗೇರಿಯವರೇ?

by ನಿಲುಮೆ

– ಬನವಾಸಿ ಬಳಗ

ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.

ಸಾಹಿತಿಗಳಷ್ಟೇ… ಜನತೆಯಲ್ಲ!

ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.

ಜನರ ಶಿಕ್ಷಣದ ಬಗ್ಗೆ ಮಾತಾಡಬೇಕಾದವರು ಯಾರು?

ಕಾಗೇರಿಯವರು ಹೇಳಿದ ಹಾಗೆ ಸಾಹಿತಿಗಳು ಮಾತ್ರವೇ ಕನ್ನಡ ಜನರೆಲ್ಲಾ ಅಲ್ಲಾ ಸರಿ, ಹಾಗಾದ್ರೆ ನಾಡಿನ ಶಿಕ್ಷಣ ವ್ಯವಸ್ಥೆ ಬಗ್ಗೆ ಮಾತಾಡೋ, ದಿಕ್ಕುತೋರಿಸೋ ಹೊಣೆಗಾರಿಕೆ ಯಾರದ್ದು? ನಮ್ಮಂಥಾ ಸಾಮಾನ್ಯರು ಮಾತಾಡುದ್ರೂ ಕಾಗೇರಿಯವರು ಮೊದಲನೇ ಪ್ರಶ್ನೆಯಾಗಿ “ನಿಮ್ಮ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದೀರಾ?” ಅಂದಾರು… ಮತ್ತೂ ಮುಂದುವರೆದು “ನೀವು ಹೇಳೋದು ಇಡೀ ಕನ್ನಡ ಜನರ ಮಾತಾ?” ಅಂದಾರು. ತಾಯ್ನುಡಿಯಲ್ಲಿ ಕಲಿಕೆ ಒಳ್ಳೇದು ಅಂತಾಗಲೀ, ಸರ್ಕಾರವೇ ಇಂಗ್ಲೀಶ್ ಶಾಲೆ ತೆಗೀಬಾರದು ಅನ್ನೋಕಾಗಲೀ ಸರ್ಕಾರ ನಿರ್ಧಾರ ತೆಗೆದುಕೊಳ್ಳೋಕೆ ಶಿಕ್ಷಣತಜ್ಞರು, ಸಮಾಜತಜ್ಞರೂ ಮುಂತಾದವರ ಸಲಹೆ ತೆಗೆದುಕೊಳ್ಳಬೇಕಲ್ಲವೇ? ಏನಂತಾರೆ ಕಲಿಕೆಯ ಬಗ್ಗೆ ಪ್ರಪಂಚದ ತಜ್ಞರು? ಏನನ್ನುತ್ತೆ ಯುನೆಸ್ಕೋ? ಪ್ರಪಂಚದಲ್ಲಿರೋ ನಾನಾ ದೇಶಗಳಲ್ಲಿ ಎಂಥಾ ವ್ಯವಸ್ಥೆಯಿದೆ? ಇವೆಲ್ಲವನ್ನೂ ಅಧ್ಯಯನ ಮಾಡಿ ಸರ್ಕಾರ ನಿರ್ಧಾರ ತೊಗೊಳ್ಳೋಕೆ ಮುಂದಾಗುತ್ತೇನು? ಒಂದು ನಿರ್ಧಾರ ತೊಗೊಂಡು… ಅದನ್ನು ವಿರೋಧ ಮಾಡಿದೋರುನ್ನೆಲ್ಲಾ ಒಂದಲ್ಲಾ ಒಂದು ಮಾತೆತ್ತಿ ಕೆಳಗೆ ಮಾಡಿ ತಾವಂದುಕೊಂಡಿದ್ದನ್ನು ಜಾರಿ ಮಾಡೋದ್ರಲ್ಲಿ ಈ ಸರ್ಕಾರಕ್ಕೆ ಈಗಾಗಲೇ ಅನುಭವ ಇದೆಯಲ್ಲಾ? ಆಗ ತಿರುವಳ್ಳುವರ್ ಪ್ರತಿಮೆ ನಿಲ್ಲಿಸಬೇಡಿ ಅಂದಾಗ ಜನರ ಹೋರಾಟದ ಕತ್ತು ಹಿಸುಕಿ, ಸಾಹಿತಿಗಳಿಂದ ಪತ್ರಿಕೆಗಳಲ್ಲಿ ದಿನಕ್ಕೊಂದು ಪತ್ರ ಬರೆಸಿ, ಅದನ್ನೇ ಜನಾಭಿಪ್ರಾಯ ಅಂದಿದ್ದನ್ನು ಜನರು ಮರೀತಾರಾ ಗುರೂ? ಪಾಪಾ! ಆಗ ಅವರೇನು ಇಡೀ ಕನ್ನಡ ಜನತೆ ಆಗಿದ್ರಾ?

2 ಟಿಪ್ಪಣಿಗಳು Post a comment
 1. siddalingeswara
  ಜುಲೈ 7 2011

  My Dear Friend, it is not a just comments on ur comments,
  you r saying in tiruvallavar issue Govt., considered only Writers govt sponsored press notes which is not right, if that is the case why not at this time some political parties may might have sponsored the writers to talk, one more do u think that govt(political parties) can hv control on writers ? if that is the case why we should lesson to writers ? U advise

  ಉತ್ತರ
 2. Priyank
  ಜುಲೈ 7 2011

  ಸಿದ್ದಲಿಂಗೇಶ್ವರ ಅವರೇ,
  ನೀವು ಏನು ಪ್ರಶ್ನೆ ಕೇಳ ಹೊರಟಿದ್ದೀರೋ ನನಗೆ ಪೂರ್ತಿಯಾಗಿ ಗೊತ್ತಾಗಲಿಲ್ಲ.
  ನನಗೆ ಗೊತ್ತಾದ್ದಿಷ್ಟು: “ಸಾಹಿತಿಗಳ ಮನಸ್ಸನ್ನು ಸರ್ಕಾರ ಅತವಾ ರಾಜಕೀಯ ಪಕ್ಷಗಳು ಆಡಿಸಬಹುದು ಎಂದಾದರೆ, ನಾವು ಸಾಹಿತಿಗಳ ಮಾತನ್ನು ಯಾಕೆ ಕೇಳಬೇಕು?” ಎಂದಿದ್ದೀರಿ.
  ಸರ್ಕಾರವು ಶಿಕ್ಷಣ ರೀತಿ ರೂಪಿಸುವಲ್ಲಿ, ರಾಜ್ಯದ ತಜ್ಞರ, ಬೇರೆ ಬೇರೆ ದೇಶಗಳ ತಜ್ಞರ ಮಾತುಗಳನ್ನು ಕೇಳಿ, ಬೇರೆ ಬೇರೆಡೆ ನಡೆದ ಅಧ್ಯಯನಗಳನ್ನು ತಿಳಿದು ಆಮೇಲೆ ತೀರ್ಮಾನಕ್ಕೆ ಬರಬೇಕು ಎಂಬುದು ತಾನೇ ಇಲ್ಲಿ ಹೇಳಿರೋದು.
  ನಾವು ಪ್ರಜೆಗಳು ಯಾರ ಮಾತನ್ನು ಕೇಳಬೇಕು, ಯಾರ ಮಾತನ್ನು ಬಿಡಬೇಕು ಎಂಬುದು ನಮ್ಮ ನಮ್ಮ ಸ್ವಂತದ ವಿಷಯವಾಗಿದೆ ಅಲ್ಲವೇ.

  ಉತ್ತರ

ನಿಮ್ಮ ಅನಿಸಿಕೆ...

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

Note: HTML is allowed. Your email address will never be published.

Subscribe to comments