ವಿಷಯದ ವಿವರಗಳಿಗೆ ದಾಟಿರಿ

Archive for

5
ಜುಲೈ

ಚಿನ್ನದ ಹುಡುಗಿಯ ಜೊತೆ ನಿಲ್ಲೋಣ…

5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

Read more »

5
ಜುಲೈ

ಪರಭಾಷೆಯ ಚಿತ್ರಗಳಿಗೆ ಮಾರುಕಟ್ಟೆ ನಿರ್ಮಿಸಿ ಕೊಡುತ್ತಿರುವವರ್ಯಾರು?

– ಅರುಣ್ ಜಾವಗಲ್

ಸುವರ್ಣ ಕನ್ನಡ ಪಿಲಂ ಅವಾರ್ಡ್ ಕಾರ್ಯಕ್ರಮ ಕಳೆದ ವಾರ ಟಿವಿಯಲ್ಲಿ ನೋಡಿದೆ. ನಿಜಕ್ಕು ಅದ್ಬುತವಾದ ಕಾರ್ಯಕ್ರಮ, ಪರಬಾಶೆಗಳಲ್ಲಿ ಮಾತ್ರ ನಡೆಯುತ್ತಿದ್ದ ಅದ್ದೂರಿ ಕಾರ್ಯಕ್ರಮಗಳು, ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲು ನಡೆಯಲು ಪ್ರಾರಂಬವಾಗಿರೋದು ನಿಜಕ್ಕೂ ಸಂತೋಶಕರ. ಈ ರೀತಿಯ ಕಾರ್ಯಕ್ರಮಗಳು, ಕನ್ನಡ ಚಿತ್ರರಂಗ, ತಾವೇನು ಯಾರಿಗೂ ಕಡಿಮೆಯಿಲ್ಲ ಅನ್ನೊದನ್ನ ಎತ್ತಿಹಿಡಿದಿದೆ….
ಈ ರೀತಿಯ ಕಾರ್ಯಕ್ರಮಗಳನ್ನ ಬಳಸಿಕೊಂಡು ಚಿತ್ರರಂಗದ ಮಾರುಕಟ್ಟೆಯನ್ನು ವಿಸ್ತಾರ ಮಾಡಿಕೊಳ್ಳಬಹುದು. ಈ ಕೆಲಸವನ್ನು ಬೇರೆ ಬಾಶೆಯ ಚಿತ್ರರಂಗದರು ತುಂಬ ಚೆನ್ನಾಗಿಯೇ ಮಾಡಿಕೊಂಡು ಬಂದಿದ್ದಾರೆ, ಆದರೆ ದುರದ್ರುಶ್ಟ ಅಂದ್ರೆ ಕನ್ನಡ ಚಿತ್ರರಂಗದ ಕಾರ್ಯಕ್ರಮಗಳಲ್ಲಿ ಪರಬಾಶೆಯ ಹಾಡು/ಕುಣಿತದೊಂದಿಗೆ ಪರಬಾಶೆಯ ಚಿತ್ರಗಳಿಗೆ ನಮ್ಮ ರಾಜ್ಯದಲ್ಲಿ ಮಾರುಕಟ್ಟೆ ನಿರ್ಮಿಸೋಕ್ಕೆ ಹೊರಟಿರೋದು ಯಾಕೆ ಅನ್ನೊದು ಗೊತ್ತಾಗುತ್ತಿಲ್ಲ.
ಕಾರ್ಯಕ್ರಮಗಳಲ್ಲಿ- ಕನ್ನಡಿಗರು ಕನ್ನಡ ಸಿನೆಮಾಗಳನ್ನ ನೋಡಿ ಉತ್ತೇಜನ ಕೊಡಬೇಕು….., ಸಿನೆಮಾ ನೋಡೊ ಹವ್ಯಾಸ ಹೊರ ರಾಜ್ಯದಲ್ಲಿರುವಶ್ಟು ನಮ್ಮಲ್ಲಿಲ್ಲ….., ಕನ್ನಡ ಸಿನೆಮಾ ನೋಡೊಕ್ಕೆ ಜನರೇ ಇಲ್ಲ…ಸಿನೆಮಾವನ್ನ ತಿಯೇಟರಿನಲ್ಲೇ ನೋಡಿ….ಹೀಗೆ ಬಾಶಣಗಳನ್ನ ಮಾಡಿ.. ಅದೇ ಕಾರ್ಯಕ್ರಮದಲ್ಲಿ ಪರಬಾಶೆಯ ಹಾಡು/ಕುಣಿತ ನಡೆಸಿದರೆ ಕನ್ನಡಿಗರ ಪಾಡು ಏನಾಗಬಾರದು. ಗಂಟೆಗಟ್ಟಳೆ ಬಾಶಣ ಮಾಡಿ ಚಿತ್ರರಂಗದ ಎಲ್ಲಾ ತೊಡುಕು/ತೊಂದರೆಗಳಿಗೆ ಕನ್ನಡ ಚಿತ್ರ ನೋಡುಗರನ್ನೇ ಹೆಚ್ಚು ಗುರಿಯನ್ನಾಗಿಸಿ, ಪರಬಾಶೆಯ ಚಿತ್ರಗಳಿಗೆ ಕೈಮುಗಿಯುವ ಜನರಿಗೆ ನೈತಿಕತೆಯ ಬಗ್ಗೆ ಅರಿವಿದೆಯೇ?