ಸಂಸ್ಕೃತಿ ಸಂಕಥನ – ೨
-ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.
ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.