ವಿಷಯದ ವಿವರಗಳಿಗೆ ದಾಟಿರಿ

Archive for

26
ಜುಲೈ

ಸಿಂಗಂ ವಿವಾದ – ಕೇಳಿಕೊಳ್ಳಬೇಕಾದ ಕೆಲವು ಪ್ರಶ್ನೆಗಳು..

-ವಸಂತ್ ಶೆಟ್ಟಿ

ಸಿಂಗಂ ಅನ್ನುವ ನಕಲು ಚಿತ್ರದಲ್ಲಿ ಕನ್ನಡಿಗರನ್ನು ನಾಯಿಗಳೆಂದು ಜರಿಯುವ ಡೈಲಾಗ್ನಿಂದ ಕರ್ನಾಟಕದಲ್ಲಿ ಎಲ್ಲೆಡೆ ಪ್ರತಿಭಟನೆ ವ್ಯಕ್ತವಾಗಿದ್ದು ಕಂಡೆ. ಕರ್ನಾಟಕದಲ್ಲಿ ವ್ಯಕ್ತವಾದ ಭಾರಿ ವಿರೋಧಕ್ಕೆ ಪ್ರತಿಕ್ರಿಯಿಸಿದ ಸಿಂಗಂನಲ್ಲಿ ನಟಿಸಿರುವ ಕನ್ನಡ ಮೂಲದ ನಟ ಮಹಾಶಯರೊಬ್ಬರು “ಅದೇನು ದೊಡ್ಡ ವಿಷಯವೇ ಅಲ್ಲ. ಇದರ ವಿರೋಧಕ್ಕೆ ಅರ್ಥವಿಲ್ಲ” ಅಂದರು. ಘಟನೆ ಚಿಕ್ಕದೋ, ದೊಡ್ಡದೋ ಅನ್ನುವುದಕ್ಕಿಂತ ಇಂತಹ ಘಟನೆಯ ಹಿಂದೆ ಮನಸ್ಸಲ್ಲಿ ಏಳುವ ಕೆಲವು ಪ್ರಶ್ನೆಗಳು ಹಲವಾರು.

  • ಇದೊಂದು ಚಿಕ್ಕ ಘಟನೆ ಅನ್ನುವ ಪ್ರಕಾಶ ರೈ ಅವರಿಗೆ ಕರ್ನಾಟಕ-ಮಹಾರಾಷ್ಟ್ರದ ನಡುವೆ ದಶಕಗಳಿಂದ ಗಡಿ ವಿವಾದವಿರುವುದು, ಅದು ಎರಡೂ ಕಡೆಯವರಿಗೆ ಭಾವನಾತ್ಮಕ ವಿಷಯವಾಗಿರುವುದರ ಅರಿವಿಲ್ಲವೇ? ಅರಿವಿದ್ದೂ ಇಂತಹದೊಂದು ಡೈಲಾಗ್ ಪ್ರಯೋಗ ಮಾಡಿರುವುದು ಪ್ರಚೋದಿಸಿ ಮರಾಠಿಗರನ್ನು ಈ ಹಿಂದಿ ಚಿತ್ರದತ್ತ ಸೆಳೆಯುವ playing to the gallery ಅನ್ನುವ ಮನಸ್ಥಿತಿಯಲ್ಲವೇ? ಇಲ್ಲದಿದ್ದರೆ ಚಿತ್ರದಲ್ಲಿ ಕರ್ನಾಟಕದಿಂದ ಸಾವಿರ ಜನರನ್ನು ಕರೆ ತರುವೆ ಎಂದು ಇವರು ಅನ್ನುವುದು, ಅದಕ್ಕೆ ಎದೆ ತಟ್ಟಿ ನಾನು ಮರಾಠ, ನಾನು ಮರಾಠ ಎಂದು ಕೂಗುತ್ತ ಕನ್ನಡಿಗರನ್ನು ನಾಯಿಗಳು ಎಂದು ಹೀರೊ ಬೊಬ್ಬಿರಿಯವುದು ಏನನ್ನು ತೋರಿಸುತ್ತದೆ? Artistic freedom ಹೆಸರಿನಲ್ಲಿ ಯಾವ ಅವಮಾನ ಮಾಡಿದರೂ, ಏನು ಮಾತನಾಡಿದರೂ ಸಹಿಸಿಕೊಳ್ಳಬೇಕೆ? ಅದನ್ನು ಪ್ರಶ್ನಿಸಿ ಬೀದಿಗಿಳಿಯುವುದು ಸಣ್ಣತನವೇ? ಸಂಕುಚಿತ ಮನೋಭಾವನೆಯೇ? ಪ್ರಕಾಶ್ ರೈಗೇನು ಬಿಡಿ, ಇವತ್ತು ಇಲ್ಲಿ ಕನ್ನಡಿಗ, ಅಲ್ಲಿ ತಮಿಳಿಗ, ಇನ್ನೆಲ್ಲೋ ತೆಲುಗ, ಮತ್ತೆಲ್ಲೋ ಇಂಡಿಯನ್ ಅಂದುಕೊಂಡು ತಮ್ಮ ಕೆಲಸ ಮಾಡ್ಕೊಂಡು ಮುಂದಕ್ಕೊಗ್ತಾರೆ. ಎಷ್ಟೇ ಅಂದರೂ ಕಲಾವಿದರಿಗ ಭಾಶೆಯ ಹಂಗಿಲ್ಲವಲ್ಲವೇ? 🙂 Read more »