ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!
– ವಿಜಯ್ ಹೆರಗು
ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.
ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?
ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.
ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….
ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.





