ಹೈಕಮಾಂಡ್!!! ಹೈಕಮಾಂಡ್!!!
– ಚೇತನ್ ಜೀರಾಳ್
ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.
ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ…