ವಿಷಯದ ವಿವರಗಳಿಗೆ ದಾಟಿರಿ

ಜುಲೈ 29, 2011

3

ಹೈಕಮಾಂಡ್!!! ಹೈಕಮಾಂಡ್!!!

‍ನಿಲುಮೆ ಮೂಲಕ

– ಚೇತನ್ ಜೀರಾಳ್

ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.

ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ…

ತೀರಾ ಇತ್ತೀಚಿಗಿನ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಗಳನ್ನೂ ಆರಿಸಲು ಸಹ ನಮ್ಮ ರಾಜ್ಯದ ಬಿಜೆಪಿ ನಾಯಕರು ಹೈಕಮಾಂಡಿನತ್ತ ಮುಖಮಾಡಿರುವುದು ನಮ್ಮ ರಾಜ್ಯದ ೬ ಕೋಟಿ ಜನರ ವಿಶ್ವಾಸಕ್ಕೆ ದ್ರೋಹ ಮಾಡಿತಂತಾಗಿದೆ? ರಾಜ್ಯದ ಹಿತಕ್ಕಾಗಿ ಸ್ವಂತ ನಿರ್ಧಾರಗಳನ್ನು ತಗೆದುಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅವರುಗಳು ನಾಯಕರಾಗಿ ಮುಂದುವರೆಯುತ್ತಿರುವುದಾದರೂ ಏಕೆ?

ನಮ್ಮ ರಾಜ್ಯದ ಒಳಿತನ್ನು ನಿರ್ಧರಿಸಲು ಹೈಕಮಾಂಡ್ ಬೇಕೆ?
ನಾಯಕತ್ವ ಬದಲಾವಣೆಯ ಈ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿಯಾರಗಬೇಕು ಎನ್ನುವ ತೀರ್ಮಾನವನ್ನು ಹೈಕಮಾಂಡ್ ತಗೆದುಕೊಳ್ಳಲು ಹೊರಟಿದೆ ಎನ್ನುವು ಸುದ್ದಿ ಬರುತ್ತಿದೆ. ಇಷ್ಟಕ್ಕೂ ನಮ್ಮ ರಾಜ್ಯದಲ್ಲಿ ಯಾರು ಮುಖ್ಯಮಂತ್ರಿಯಾರಾಗಬೇಕು ಎನ್ನುವ ನಿರ್ಧಾರವನ್ನು ತೀರ್ಮಾನ ಮಾಡಲು ಹೈಕಮಾಂಡ್ ಬೇಕೆ? ಅಸಲಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮುಖ್ಯಮಂತ್ರಿ ಯಾರಾಗಿರಬೇಕು ಎನ್ನುವ ನಿರ್ಧಾರವನ್ನು ಮಾಡಬೇಕಾಗಿರುವವರು ನಮ್ಮ ಪ್ರತಿನಿಧಿಗಳಾದ ಶಾಸಕರು ಅಲ್ಲವೇ? ಇದನ್ನೆಲ್ಲ ಮೀರಿ ನಾಯಕತ್ವ ತೀರ್ಮಾನಿಸೋಕೆ ಹೈಕಮಾಂಡ್ ಗೆ ಇಲ್ಲಿನ ಯಾವ ಪರಿಸ್ಥಿತಿಯ ಅರಿವಿರುತ್ತದೆ? ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ಮಾರಕಾವಾಗಿರುವ ಈ ಹೈಕಮಾಂಡ್ ದಾಸ್ಯದಿಂದ ನಮ್ಮ ರಾಷ್ಟ್ರೀಯ ರಾಜಕೀಯ ಪಕ್ಷಗಳು ಎಂದು ಹೊರಗೆ ಬರುತ್ತವೆ? ಒಂದು ರಾಷ್ಟ್ರೀಯ ಪಕ್ಷ ಎಂದಾಕ್ಷಣ ಎಲ್ಲಾ ನಿರ್ಧಾರಗಳು ಮೇಲಿಂದಲೇ ಬರಬೇಕೆಂದೇನಿಲ್ಲ ಅಲ್ಲವೇ?. ಆದಷ್ಟು ಬೇಗ ಈ ಪರಿಸ್ಥಿತಿಯಿಂದ ನಮ್ಮ ರಾಜಕೀಯ ಪಕ್ಷಗಳು ಹೊರಬರಲಿ, ಹೈಕಮಾಂಡ್ ದಾಸ್ಯದಿಂದ ಮುಕ್ತವಾಗಲಿ ಎಂದು ಆಶಿಸೋಣ. ಕನ್ನಡಿಗರಲ್ಲಿ ಈ ಕುರಿತು ಜಾಗೃತಿಯಾಗಬೇಕು, ನಮ್ಮ ನಿರ್ಧಾರಗಳನ್ನು ನಾವೇ ತಗೆದುಕೊಳ್ಳುವಂತಾಗಬೇಕು.

3 ಟಿಪ್ಪಣಿಗಳು Post a comment
 1. ಜುಲೈ 29 2011

  ರಾಷ್ಟ್ರೀಯ ಪಕ್ಷಗಳನ್ನು ನಾವೆಲ್ಲಾ ಒಪ್ಪುವ ತನಕ, ರಾಷ್ಟ್ರೀಯ ಪಕ್ಷಗಳ “ಹೈಕಮಾಂಡ್” ಗಳಿಂದ ಮುಕ್ತಿ ಇಲ್ಲ.
  ಹಾಗಿಲ್ಲವಾದರೆ, ಅಪ್ಪ ಮಕ್ಕಳ ಪಕ್ಷಗಳನ್ನು ನಂಬಿಕೊಂಡು, ಅಪ್ಪ ಮಕ್ಕಳ ಮಾತುಗಳನ್ನು ಆಲಿಸಿಕೊಂಡು ಕೂರುವುದೊಂದೇ ಪರ್ಯಾಯ ಆಯ್ಕೆ!

  ಉತ್ತರ
 2. ಜುಲೈ 30 2011

  ಹೈಕಮಾಂಡ್ ದಾಸ್ಯ ಎಂಬ ನಿಮ್ಮ ಪರಿಕಲ್ಪನೆ ಅತಿ ಸರಳೀಕೃತ ಅಂತ ಅನಿಸ್ತಿದೆ…

  ಉತ್ತರ
  • ಮುರಳಿ
   ಜುಲೈ 31 2011

   ಸರ್ಯಾಗ್ ಹೇಳಿದ್ರಿ,ಪಕ್ಷ ವ್ಯವಸ್ಥೆ,ಪಕ್ಷದ ಸಂವಿಧಾನದ ಬಗ್ಗೆ ಲೇಖಕರಿಗೆ ಗೊತ್ತಿದ್ದ ಹಾಗೆ ಇಲ್ಲ

   ಉತ್ತರ

ನಿಮ್ಮ ಅನಿಸಿಕೆ...

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

Note: HTML is allowed. Your email address will never be published.

Subscribe to comments