ವಿಷಯದ ವಿವರಗಳಿಗೆ ದಾಟಿರಿ

Archive for

17
ಆಗಸ್ಟ್

`ಆವರಣ’ ಹಿಂದಿಗೆ

-ಕಾಲಂ ೯

ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.

ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.

ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ|  ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.

ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.

ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.

**********

17
ಆಗಸ್ಟ್

ಜಾತಿ ಸೂಚಕ ಹೆಸರಿಗೆ ನಿರ್ಬಂಧ, ಹಿಮಾಚಲ ಪೊಲೀಸರ ಮಾದರಿ ನೀತಿ

-ರಾಕೇಶ್ ಎನ್ ಎಸ್

ಹಿಮಾಚಲ ಪ್ರದೇಶದ ಪೊಲೀಸ್ ಇಲಾಖೆ ಅತ್ಯುತ್ತಮ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನೆಂದರೆ ತನ್ನ ಪೊಲೀಸರ ಪೂರ್ಣ ಹೆಸರಿನ ಜೊತೆ ಸಾಮಾನ್ಯವಾಗಿ ಒಂದು ಭಾಗವಾಗಿರುವ ಜಾತಿ ಸೂಚಕ ಹೆಸರನ್ನು ಕಿತ್ತು ಹಾಕುವ ವಿಶಿಷ್ಟ ಯೋಜನೆಯನ್ನು ಅದು ಹಾಕಿಕೊಂಡಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ನ ಜೂನ್ ೨೪ರ ನವದೆಹಲಿ ಆವೃತ್ತಿಯ ಮುಖಪುಟದಲ್ಲಿನ ವರದಿಯೊಂದು ಹೇಳುತ್ತಿತ್ತು.

ಇಂದು ಜಾತಿ ಈ ಹಿಂದಿಗಿಂತಲೂ ಹೆಚ್ಚು ಬಲಿಷ್ಠವಾಗಿ ತನ್ನ ಕಬಂಧ ಬಾಹುವನ್ನು ಚಾಚುತ್ತಿರುವುದು ಅಧುನಿಕತೆಯ ಮುಖವಾಡ ಹಾಕಿಕೊಂಡಿರುವ ನಮಗೆಲ್ಲ ನಾಚಿಕೆಗೇಡಿನ ಸಂಗತಿ. ಆದರೂ ವೈಯುಕ್ತಿಕ ಜೀವನದಲ್ಲಿ ‘ಜಾತೀಯ ಭಾವನೆ’ ಹೊಂದಿದ್ದೇ ಆದರೆ ಅದನ್ನು ಸುಮ್ಮನೆ ಬಿಟ್ಟು ಬಿಡಬಹುದು. ಆದರೆ ಸಾರ್ವಜನಿಕ ಜೀವನ ನಡೆಸುವ ಜನರು ಕೂಡ ಜಾತಿಯ ಹೊಲಸನ್ನು ಮೈಮೇಲೆ ಹಾಕಿಕೊಂಡು ವ್ಯವಹಾರ ನಡೆಸುತ್ತಿರುವುದು ನಿಜವಾದ ದುರಂತ. ರಾಜಕಾರಣಿಗಳಲ್ಲಿ, ಸರ್ಕಾರಿ ಅಧಿಕಾರಿಗಳಲ್ಲಿ (ಪತ್ರಕರ್ತರಲ್ಲೂ ಇದು ಹೆಚ್ಚಿನ ಪ್ರಮಾಣದಲ್ಲಿ ಇದೆ) ಜಾತಿಯ ಭಾವನೆ ಇರುವುದು ಮತ್ತು ಅದು ಅವರ ವ್ಯವಹಾರದಲ್ಲಿ ಪ್ರತಿಫಲಿಸುತ್ತಿರುವುದು ನಿಜಕ್ಕೂ ಅಕ್ಷಮ್ಯ. ಇಂತಹ ಸಂದರ್ಭದಲ್ಲಿ ಹಿಮಾಚಲ ಪೊಲೀಸರ ಈ ನಿರ್ಧಾರ ನಮ್ಮ ಕಣ್ಣು ತೆರೆಸುವಂತದ್ದಾಗಿದೆ. ಮತ್ತಷ್ಟು ಓದು »