ವಿಷಯದ ವಿವರಗಳಿಗೆ ದಾಟಿರಿ

Archive for

18
ಆಗಸ್ಟ್

ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು

– ಪವನ್ ಪರುಪತ್ತೆದಾರ   

ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).

ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು »

18
ಆಗಸ್ಟ್

ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!

– ಮಹೇಶ್ ರುದ್ರಗೌಡರ್

ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ ಇದರಿಂದ ಕಿರುತೆರೆಯನ್ನೇ ನಂಬಿ ಜೀವನ ನಡೆಸುತ್ತಿರುವ ಅನೇಕ ಕುಟುಂಬಗಳು ಬೀದಿಗೆ ಬರುತ್ತವಂತೆ. ಇದರ ಜೊತೆಗೆ ಜೀ ಟಿವಿಯ ಈ ನಡೆ ಕನ್ನಡ ವಿರೋದಿಯಂತೆ. ಇವರ ವಾದವನ್ನು ಮತ್ತು ಕನ್ನಡತನವನ್ನು ಸ್ವಲ್ಪ ಆಳವಾಗಿ ನೋಡಿ ಬರೋಣ ಬನ್ನಿ.

 ಹುರುಳಿಲ್ಲದ ವಾದ.!

ಈ ದಾರಾವಾಹಿ ಈಗಾಗಾಲೇ ತೆಲುಗು, ತಮಿಳು ಬಾಶೆಗೆ ಡಬ್ ಆಗಿ ಅಲ್ಲಿ ಪ್ರಸಾರವಾಗುತ್ತಿದೆ. ಹಾಗಾದರೆ ಆಂದ್ರ ತಮಿಳುನಾಡಿನಲ್ಲಿ ಕಲಾವಿದರೇ ಇಲ್ಲವೇ.? ಅಲ್ಲಿಯೂ ಕಲಾವಿದರಿದ್ದಾರೆ, ಅವರಲ್ಲಿಯೂ ಅನೇಕರಿಗೆ ಕಿರುತೆರೆಯಿಂದಲೇ ಹೊಟ್ಟೆ ತುಂಬುತ್ತದೆ. ಅಲ್ಲಿ ಅವರಿಗೆ ಇಲ್ಲದ ಸಮಸ್ಯೆ ದಿಡೀರನೇ ಕರ್ನಾಟಕಕ್ಕೆ ಬಂದ ಕೂಡಲೇ ಹೇಗೆ ಹುಟ್ಟುತ್ತದೆ. ಇದಕ್ಕೆ ಯಾರು ಕಾರಣ. ಯಾಕೆ ಈ ಮನಸ್ಥಿತಿ.! ಇದೇ ಸಂದರ್ಬದಲ್ಲಿ ಒಬ್ಬ ಕಲಾವಿದರು ಹೇಳಿದ್ರು, ಒಂದು ದಾರಾವಾಹಿ ಕನ್ನಡಕ್ಕೆ ಡಬ್ ಮಾಡಲು ಬಿಟ್ಟರೆ, ಅದರ ಜೊತೆಗೆ ನೂರಾರು ದಾರಾವಾಹಿಗಳು ಬಂದು ನಿಲ್ಲುತ್ತವೆ ಅಂತ.! ಇದು ಯಾವ ಮನಸ್ಥಿತಿಯನ್ನು ತೋರಿಸುತ್ತದೆ. ಸ್ಪರ್ದೆ ಎದುರಿಸುವ ಹಿಂಜರಿಕೆಯನ್ನು ತೋರಿಸುತ್ತದೆ ಅಲ್ಲವೇ.! ಸ್ಪರ್ದೆ ಎಂದ ತಕ್ಷಣ ಬೀದಿಗೆ ಬರುವ ಮಾತು ಇತರ ಬಾಶೆಯ ಕಲಾವಿದರ ಬಾಯಲ್ಲಿ ಬರದೇ ಬರೀ ನಮ್ಮ ಕಲಾವಿದರ ಬಾಯಲ್ಲಿ ಮಾತ್ರ ಏಕೆ ಬರುತ್ತದೆ.? ಒಂದು ಹಿಂದಿ ಬಾಶೆಯಲ್ಲಿರುವ ದಾರಾವಾಹಿಯನ್ನು ಕನ್ನಡ ಚಾನಲ್ಲಿನಲ್ಲಿ ಕನ್ನಡದಲ್ಲಿ ತೋರಿಸಿದರೇ ಅದು ಕನ್ನಡ ವಿರೋದಿ ಎನ್ನುವ ಇವರ ಕನ್ನಡತನಕ್ಕೆ ಏನನ್ನಬೇಕು. ಡಬ್ ಮಾಡದೇನೇ ಹಿಂದಿಯಲ್ಲೇ ತೋರಿಸಿದರೆ ಅದು ಕನ್ನಡಪರವಾಗುವುದೋ.! ಮತ್ತಷ್ಟು ಓದು »