ವಿಷಯದ ವಿವರಗಳಿಗೆ ದಾಟಿರಿ

Archive for

29
ಸೆಪ್ಟೆಂ

ಸಂಸ್ಕೃತಿ ಸಂಕಥನ – ೭

– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ

ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
Read more »

29
ಸೆಪ್ಟೆಂ

ಲೈಫು ಇಷ್ಟೇನೇ

– ರೂಪಾ ರಾಜೀವ್
ಗಾಂಧಿನಗರದಲ್ಲಿ ತಯಾರಾಗುವ ಪ್ರತಿ ಚಲನಚಿತ್ರಗಳು ಇಂತಿಂತಹ ಗುಂಪಿಗೆ ಎಂದು ತಯಾರಾಗುತ್ತವೆ.  ಉದಾಹರಣೆಗೆ ಮಚ್ಚು, ಲಾಂಗ್, ಫೈಟ್, ಇಂತಹವು ಒಂದು ವರ್ಗದ ವೀಕ್ಷಕರಿಗೆ, ಕಣ್ಣೀರು, ತಾಯಿ ಸೆಂಟಿಮೆಂಟ್ಸ್ ಮತ್ತೊಂದು ವರ್ಗದವರಿಗೆ, ದೇವಿ ಮಹಾತ್ಮೆ ಇಂತಹ ಭಕ್ತಿ ಪ್ರಧಾನ ಚಿತ್ರಗಳು ಇನ್ನೊಂದು ವರ್ಗದ ವೀಕ್ಷಕರಿಗೆ, ಹೀಗೆ.  ಯೋಗರಾಜ್ ಭಟ್ ತಮ್ಮ ‘ಪಂಚರಂಗಿ’ ನಿರ್ಮಾಣದ ವೇಳೆಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು, ನಮ್ಮ ಕನ್ನಡ ಚಲನಚಿತ್ರಗಳು ಉಳಿಯಬೇಕಾದರೆ ಅಥವಾ ಥಿಯೇಟರು ಗಳಲ್ಲಿ ಹಣ ಮಾಡಬೇಕೆಂದಿದ್ದರೆ ಆ ಚಿತ್ರವು ಯುವ ಜನಾಂಗವನ್ನು ಅಂದರೆ ೧೮ ವಯಸ್ಸಿನಿಂದ ೨೩ ವರ್ಷದವರನ್ನು ಸೆಳೆಯುವಂತಿರಬೇಕು. ಆ ವರ್ಗದವರಿಗೆ ಸಿನೆಮಾ ಹಿಡಿಸಿದರೆ ಚಿತ್ರವು ಹಿಟ್ ಆಗುವುದು ಎಂದಿದ್ದರು. ಅವರ ಶಿಷ್ಯ ಪವನ್ ಕುಮಾರ್ ಅಕ್ಷರಷಃ ಭಟ್ಟರ ಈ ಮಾತಿಗೆ ಮಾರು ಹೋಗಿ ನಿರ್ದೇಶಿಸಿರುವ ಸಿನೆಮಾ ‘ಲೈಫು ಇಷ್ಟೇನೇ’.

Read more »

28
ಸೆಪ್ಟೆಂ

ಬೆಳಕಿಗಿಂತ ವೇಗವಾಗಿ ಚಲಿಸಬಹುದಾದದ್ದು ಯಾವುದು?

ವಿಷ್ಣು ಪ್ರಿಯ

ಸೆರ್ನ್ ವಿಜ್ಞಾನಿಗಳ ಪ್ರಯೋಗ ಭೌತಶಾಸ್ತ್ರದ ಮೂಲನಿಯಮವನ್ನೇ ಅಲ್ಲಾಡಿಸುತ್ತಿದೆಯಲ್ಲ ಎಂಬ ಚಿಂತೆ ಈಗಾಗಲೇ ಹಲವರಲ್ಲಿ ಮೂಡಿದೆ. ಬೆಳಕಿಗಿಂತ ವೇಗವಾಗಿ ಚಲಿಸುವುದಕ್ಕೆ ಹೇಗೆ ಸಾಧ್ಯ? ಇದನ್ನು ಆರಂಭದಲ್ಲಿ ಸೆರ್ನ್ ವಿಜ್ಞಾನಿಗಳೂ ನಂಬಲಿಲ್ಲ. ಆದರೆ ತಮ್ಮ ಯಂತ್ರೋಪಕರಣಗಳಲ್ಲಿ, ಲೆಕ್ಕಾಚಾರಗಳಲ್ಲಿ ಯಾವುದೇ ದೋಷ ಇಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕವೇ ಅವರು ಮಾಹಿತಿಯನ್ನು ಹೊರಹಾಕಿದ್ದಾರೆ. ಹಾಗಿದ್ದರೆ ಐನ್ ಸ್ಟೀನನ ಸಿದ್ಧಾಂತವೇ ತಪ್ಪೇ?

ಇದರ ಬಗ್ಗೆಯೇ ಚಿಂತಿಸುತ್ತಾ ಅಂತರ್ಜಾಲದಲ್ಲಿ ಹುಡುಕಾಡುತ್ತಿರಬೇಕಾದರೆ ಟ್ರುಥ್ ಡೈವ್ ಎಂಬ ಅಂತರ್ಜಾಲತಾಣದಲ್ಲಿ ಕವಿ, ಲೇಖಕ, ಎಂಜಿನಿಯರ್ ಮನೋಹರನ್ ಸಂಬಂದಮ್ (Manoharan Sambandam) ಎಂಬವರು ಬರೆದಿದ್ದಂಥ ಲೇಖನ ಸಿಕ್ಕಿತು. ಅವರ ವಾದಸರಣಿ ನಿಜಕ್ಕೂ ಮನಸ್ಸಿಗೆ ನಾಟಿತು. ನನ್ನ ಬ್ಲಾಗ್ ಮಿತ್ರರಿಗಾಗಿ ಈ ಲೇಖನದ ಯಥಾವತ್ ಕನ್ನಡಾನುವಾದವನ್ನು ಇಲ್ಲಿ ಕೊಡುತ್ತಿದ್ದೇನೆ.

ಇಲ್ಲಿಂದ ಮನೋಹರನ್ ಲೇಖನ….

Read more »

27
ಸೆಪ್ಟೆಂ

ತಾಯಿಯೋ ತಂದೆಯೋ…?

ಪ್ರವೀಣ್ ಬೆಂಗಳೂರು

  ಕೆಲಸ ಮುಗಿಸಿ ಹೊರಡುವ ಹೊತ್ತಾಯಿತು, ಹೊರ ಬಂದು ನೋಡಿದರೆ ಸಂಜೆಗತ್ತಲು. ಇನ್ನೇನು ಆಗಲೋ ಈಗಲೋ ಭೋರ್ಗರೆವ ಮಳೆಯ ಸೂಚನೆ ಆದರೂ ಲೆಕ್ಕಿಸದೆ ಹೊರಟೆ; ಹತ್ತು ಹೆಜ್ಜೆ ಹಾಕಿ ಮುನ್ನಡೆದೆ, ಮಳೆ ಸುರಿದೇ ಬಿಟ್ಟಿತು. ತಕ್ಷಣವೇ ನನ್ನ ಸೂಟ್‌ಕೇಸ್‌ನಲ್ಲಿದ್ದ ರೈನ್‌ಕೋಟ್ ತೆಗೆದು ಹಾಕಿಕೊಳ್ಳುವ ಹೊತ್ತಿಗೆ ನನೆದು ತೊಪ್ಪೆಯಾಗಿ ಹೋಗಿದ್ದೆ. ಆದರೂ ಧರಿಸಿ ನಡೆಯುತ್ತಲೇ ಹೊರಟೆ. ಮಾರ್ಗ ಮಧ್ಯದಲ್ಲಿ  ಶಾಲೆಯಿಂದ ಹೊರಟ ಮಗು ಮಳೆಯಿಂದ ಅಲ್ಲಿಯೇ ಬಳಿಯಿದ್ದ ಅಂಗಡಿಯ ಮುಂದೆ ಸ್ವಲ್ಪವೇ ನೆನೆಯುತ್ತಾ ನಿಂತಿದ್ದನ್ನು ಕಂಡೆ. ಮಗು ಚಳಿಯಿಂದ ನಡುಗುತ್ತಿತ್ತು. ನಾನು ಮಗುವಿನ ಬಳಿಗೆ ಹೋಗುವಷ್ಟರಲ್ಲಿ ಮಗುವಿನ ತಂದೆ ಬಂದು ಮಗುವನ್ನು ಬಿಗಿದಪ್ಪಿ ಹಿಡಿದು ಭುಜಕ್ಕೆ ಆನಿಸಿಕೊಂಡು ಹೊರಟರು. ಹಿಂದಿನಿಂದ ಮಗು ನನ್ನನ್ನು ನೋಡಿ ಸುಂದರವಾದ ನಗೆಯೊಂದ ಬೀರಿತು. ಆಗಲೇ ನನಗನ್ನಿಸಿತು ತಾಯಿಯ ಬಿಸಿಯಪ್ಪುಗೆಯಷ್ಟೇ ಮನಕ್ಕೆ ಆಹ್ಲಾದ ನೀಡುವುದು ತಂದೆಯ ಎದೆಯಪ್ಪಿಗೆ ಎಂದು. ಎಲ್ಲಿಯೋ ಓದಿದ್ದ ನೆನಪು ತಂದೆಯು ಎದೆಗೆ ಅಪ್ಪಿಕೊಂಡು ಮಗುವನ್ನು ಮಲಗಿಸುವಾಗ ಆ ಮಕ್ಕಳು ಬೇಗೆ ಮಲಗುತ್ತವೆ ಕಾರಣ ತಂದೆಯ ಹೃದಯ ಬಡಿತ ತನ್ನ ಮಗುವಿನ ಹೃದಯ ಮಿಡಿತಕ್ಕೆ ಕೊಂಡಿಯಂತಿರುತ್ತದೆ.
Read more »

27
ಸೆಪ್ಟೆಂ

ಬಡವರ ಬದುಕಿಗೆ ‘ಅರ್ಥ’ವೇ ಇಲ್ವಾ?

-ಮರಳಿಧರ ದೇವ್

ದಿನಕ್ಕೆ ಒಬ್ಬ ವ್ಯಕ್ತಿ ಕೇವಲ ೨೫ ರೂಪಾಯಿಗಳನ್ನು ಗಳಿಸಿದರೆ ಸಾಕಂತೆ, ಇದಕ್ಕಿಂತ ಹೆಚ್ಚಿಗೆ ಖರ್ಚು ಮಾಡುವವರು ಬಡವರಲ್ಲವಂತೆ. ಈ ರೀತಿ ಮೂರ್ಖತನದ ಹೇಳಿಕೆ ದಾಖಲು ಮಾಡಿರುವುದು ಯೋಜನಾ ಆಯೋಗ. ಒಬ್ಬ ವ್ಯಕ್ತಿಯ ದೀನದ ಖರ್ಚು ೨೫ ರೂಪಾಯಿಗಳಿಗಿಂತ ಹೆಚ್ಚಿದ್ದರೆ ಅವರು ಸರಕಾರದಿಂದ ಯಾವುದೇ ವಿಶೇಷ ಅನುದಾನ ಪಡೆಯಲು ಅರ್ಹರಲ್ಲ.

ಈ ರೀತಿಯ ವರದಿ ತಯ್ಯಾರಿಸುವವರಿಗೆ ದೇಶದ ಹಣದುಬ್ಬರದ ಹಾಗು ದೈನಂದಿನ ಖರ್ಚುಗಳಿಗೆ ಬೇಕಾಗಿರುವ ಹಣದ ಬಗ್ಗೆ ಅರಿವಿದೆಯೇ? ಇಂತಹ ಜನರು ಯೋಜನಾ ಅಯೋಗದಲ್ಲಿರೋದ್ರಿಂದಾನೆ ದೇಶದಲ್ಲಿ ಹಣದುಬ್ಬರ ಗಗನಕ್ಕೆ ಏರ್ತಾ ಇದ್ರೂ ಸರಕಾರಗಳು ಏನು ಆಗೇ ಇಲ್ಲ ಅನ್ನೋ ರೀತಿ ತೂಕಡಿಸುತ್ತಾ ಕೂತಿವೆ. ಅಲ್ಲ ಸ್ವಾಮಿ ಪ್ರತಿ ತಿಂಗಳಿಗೊಮ್ಮೆ ಪೆಟ್ರೋಲ್ ದರವನ್ನು ಮನಸೋ ಇಚ್ಚೆ ಹೆಚ್ಚಿಸಿ ಎಲ್ಲ ಪದಾರ್ಥಗಳ ಬೆಲೆಯನ್ನು ನಿಯಂತ್ರಣಕ್ಕೆ ಬಾರದೆ ಹಾಗೆ ಮಾಡಿ ಈಗ ಬರಿ ೨೫ ರೂಪಾಯಿಗಳಲ್ಲಿ ನಿಮ್ಮ ಜೀವನ ನಡೆಸಬೇಕು ಅಂತ ಆಯೋಗದ ವರದಿ ಹೇಳಿದ್ರೆ ಜನ ಸಾಮಾನ್ಯರು ಎಲ್ಲಿಗೆ ಹೋಕ್ಬೇಕು? Read more »

26
ಸೆಪ್ಟೆಂ

ಕಳ್ಳತನವೊಂದು ಬಿಟ್ಟು ಎಲ್ಲ ಕೆಲ್ಸ ಬರುತ್ತೆ ಸ್ಸಾರ್. .

-ಕಾಲಂ೯

ಮಾಧ್ಯಮದಿಂದ ಬಹುದೂರದಲ್ಲಿ ಆಗಿಹೋದ ಸಂಭಾಷಣೆಯಿದು. ನಮ್ಮ ರಸ್ತೆಯ ಸ್ವಚ್ಛತೆಯ ಹೊಣೆಹೊತ್ತ ಪೌರಕಾರ್ಮಿಕ ನಾಗರಾಜನೊಂದಿಗೆ ಅದೊಂಥರಾ ದೋಸ್ತಿ. ಬೆಳಗಿನ ವಾಕಿಂಗ್ – ಅವನೆಲ್ಲೋ ಎದುರಾಗಿ `ನಮಸ್ಕಾರ ಸ್ಸಾರ್’ ಎಂಬ ಮುಗುಳ್ನಗೆ ಧಕ್ಕದೆ ಮುಗಿಯೋದಿಲ್ಲ. ಮಾತಿಗೇನಾದರೂ ನಿಂತರೆ ಅನೇಕ ಸಲ ಅವನು ಹೊಸ ಹೊಳಹುಗಳನ್ನು ಸರಳವಾಗಿ ದಾಟಿಸಿಬಿಡ್ತಾನೆ. ಮೊನ್ನೆ ಆದದ್ದು ಹಾಗೆಯೇ.

ನಾವಿರೋ ಕಟ್ಟಡದ ಡ್ರೈನೇಜ್ ಬ್ಲಾಕ್ ಆಗಿ ಬದುಕು ಅಸಹನೀಯವೆನಿಸಲು ಆರಂಭವಾಗಿತ್ತು. ಹೀಗಾಗಿದೆ ಸ್ವಲ್ಪ ನೋಡು ಬಾ ಮಾರಾಯ ಅಂತಂದದ್ದೇ ತಡ ನಾಗರಾಜ ಬಂದ. ಸಮಸ್ಯೆ ಗಂಭೀರವಾಗೇ ಇದೆ, ಆಪರೇಷನ್ನೇ ಮಾಡಬೇಕಿದೆ ಎಂಬುದನ್ನು ಗಮನಕ್ಕೆ ತಂದು ಕೆಲಸ ಶುರು ಹಚ್ಚಿಕೊಂಡ. ಮತ್ಯಾವಗಲೋ ರಿಪೇರಿ ನಡೆದ ಜಾಗಕ್ಕೆ ಹೋದೆ. ಪೈಪ್‌ಲೈನ್ ಒಡೆದು ಹೋಗಿತ್ತು. ಅದನ್ನು ರೀಪ್ಲೇಸ್ ಮಾಡುತ್ತಾ ಬಾಣಲೆಯಲ್ಲಿ ಕಲಸಿದ ಸಿಮೆಂಟು ಇಟ್ಟುಕೊಂಡು ಕೆಲಸ ಮಾಡುತ್ತಿದ್ದ. ಹಾಗೇ ಕೇಳಿದೆ `ನಾಗರಾಜಣ್ಣ ನಿಂಗೆ ಗಾರೆ ಕೆಲ್ಸನೂ ಬರುತ್ತಾ?’. ಆಳದಲ್ಲೆಲ್ಲೋ ಹುದುಗಿಸಿದ್ದ ತಲೆಯನೆತ್ತಿ ನಾಗರಾಜ ಹೇಳಿದ `ಕಳ್ಳತನವೊಂದು ಬಿಟ್ಟು ಎಲ್ಲ ಕೆಲ್ಸ ಬರುತ್ತೆ ಸ್ಸಾರ್. . . ’ ದೀರ್ಘವಾಗಿ ಉಸಿರೆಳೆದುಕೊಳ್ಳುವ ಸರದಿ ನನ್ನದಾಗಿತ್ತು. ಕಳ್ಳತನದ ಹೊಸ ಅಧ್ಯಾಯಗಳನ್ನು ತೆರೆದು ಕಂಬಿ ಎಣಿಸುತ್ತಿರುವ ಯಾರ‍್ಯಾರೋ ಕಣ್ಣ ಮುಂದೆ ಬಂದು ಹೋದರು. ಸುದ್ದಿಗಾಗಿ ಕಾಸಿನ ಮಾಧ್ಯಮದ ಜಾಯಮಾನವೂ ಕಣ್ಣೆದುರು ಬಂದು ಹಿಂಡಿ ಹಾಕಿತು. Read more »

24
ಸೆಪ್ಟೆಂ

ಸಂಸ್ಕೃತಿ ಸಂಕಥನ – ೬

ರಮಾನಂದ ಐನಕೈ

ಸಂಶೋಧನೆ ಅಂದರೆ ಏನು? ಇತ್ತೀಚಿನ ದಿನಗಳಲ್ಲಿ ಯಾರಾದರೂ ಸಂಶೋಧನೆ ಮಾಡಿದ್ದಾರೆ ಅಥವಾ ಪಿ.ಎಚ್.ಡಿ. ಪದವಿ ಪಡೆದಿದ್ದಾರೆಂದರೆ ನಗು ಬರುತ್ತದೆ. ನೌಕರಿ ಪಡೆಯಲು ಅಥವಾ ನೌಕರಿಯಲ್ಲಿ ಬಡ್ತಿ ಪಡೆಯಲು ಈ ಪಿ.ಎಚ್.ಡಿ. ಅರ್ಹತೆಯಾಗುತ್ತದೆಯೆಂಬ ಕಾರಣಕ್ಕೆ ಮಾಡುತ್ತಾರೆಯೇ ವಿನಾ ಆಸಕ್ತಿಗಾಗಿ ಅಲ್ಲ. ನಮ್ಮ ವಿಶ್ವವಿದ್ಯಾಲಯಗಳ ಸಂಶೋಧನಾ ವಿಭಾಗಗಳಿಗೆ ಈ ದುರ್ಗತಿ ಬಂದಿದೆ. ಹಣ ಕೊಟ್ಟರೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರೇ ಪ್ರಬಂಧ ಬರೆದು ಪದವಿ ಕೊಡುತ್ತಾರೆ. ಪಿ.ಎಚ್.ಡಿ. ಎಂಬುದು ವ್ಯಾಪಾರವಾಗಿದೆ. ಸಂಶೋಧನೆಗೆ ಆಯ್ದುಕೊಳ್ಳುವ ವಿಷಯವಾದರೂ ಎಂಥದ್ದು. ಯಾರಿಗೂ ಪ್ರಯೋಜನವಾಗದ ವಿಷಯ. ಸಂಶೋಧನಾ ಪ್ರಬಂಧವನ್ನು ನೆಟ್ಟಗೆ ಮೂರು ಜನರು ಓದಲಾರರು. ಈ ರೀತಿಯ ಸಂಶೋಧನೆಗಳಿಂದ ಅಥವಾ ಸಂಶೋಧಕರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯಾ?

ಸುಮಾರು ಹತ್ತು ವರ್ಷಗಳ ಹಿಂದಿನ ಘಟನೆ. ಶಿರಸಿಯ ಗಣಪತಿ ದೇವಸ್ಥಾನದ ಹತ್ತಿರವಿರುವ ಶಂಕರಹೊಂಡದ ಸ್ವಚ್ಛತಾ ಕಾರ್ಯಕ್ರಮ ನಡೆಯತ್ತಿತ್ತು. ಆಗ ಒಂದು ಪುಟ್ಟ ವಿಗ್ರಹ ಸಿಕ್ಕಿತು. ಕ್ಷಣಾರ್ಧದಲ್ಲಿ ಇಡೀ ಶಿರಸಿ ನಗರ ವ್ಯಾಪಿಸಿತು ಈ ಸುದ್ದಿ. ಅಷ್ಟರಲ್ಲಿ ಇತಿಹಾಸ ಸಂಶೋಧಕನೊಬ್ಬ ಅಲ್ಲಿಗೆ ಬಂದ ಆತ ಆಗಷ್ಟೇ ಅರೆಕಾಲಿಕ ಇತಿಹಾಸ ಉಪನ್ಯಾಸಕನಾಗಿ ಸೇರಿದವ. ಆಗಲೇ ಹೆಸರಿನ ಹಿಂದೆ ಪ್ರೊಫೆಸರ್ ಎಂದು ಬಳಸುತ್ತಿದ್ದ. ಆತ ಈ ವಿಗ್ರಹವನ್ನು ಕೂಲಂಕಶವಾಗಿ ಪರಿಶೀಲಿಸಿ ಅದರ ಕುರಿತು ಪತ್ರಿಕಾ ಪ್ರಕಟಣೆ ನೀಡಿದ.

Read more »

24
ಸೆಪ್ಟೆಂ

ನಿನ್ನೆ ಈಕ್ವಿನಾಕ್ಸ್…!

– ಹಂಸಾನಂದಿ

ನೆನ್ನೆ ಗೆಳೆಯರೊಡನೆ ಮಾತಾಡ್ತಾ ಹೇಳ್ದೆ – “ಇವತ್ತು ಈಕ್ವಿನಾಕ್ಸ್” ಅಂತ.

“ಹಂಗಂದ್ರೇನು” ಅಂದರು ಅವರು.

ಮತ್ತೆ ಶುದ್ಧ ಸಂಸ್ಕೃತದಲ್ಲಿ “ಇವತ್ತು ಶರದ್ ವಿಷುವ” ಅಂತ ಹೇಳ್ಬಹುದಿತ್ತು – ಅದರ ಬದಲು ಕೇಳಿದರೆ, ತಾನಾಗೇ ಅರ್ಥ ಆಗೋ ಅಂತಹ ಪದ ಯಾಕೆ ಹೇಳ್ಬಾದ್ರು ಅನ್ನಿಸಿ “ಸಮಹಗಲಿರುಳು” ಅಂದೆ.

ಪದದಲ್ಲೇ ಅರ್ಥ ಬಂತಲ್ಲ? ಅಂದ್ರೆ ಇವತ್ತು ರಾತ್ರಿ ಮತ್ತೆ ಹಗಲು ಒಂದೇ ಸಮ ಇರುತ್ತವೆ. ಬೆಂಗಳೂರು (ಅಥವಾ ಕರ್ನಾಟಕದಲ್ಲಿ ಯಾವ ಜಾಗ ಆದರೂ) ಭೂಮಧ್ಯರೇಖೆಗೆ ಬಹಳ ದೂರ ಇಲ್ಲದೇ ಇರೋದ್ರಿಂದ ಚಳಿಗಾಲಕ್ಕೂ ಬೇಸಿಗೇಗೂ ದಿನ ರಾತ್ರಿಗಳ ಅವಧಿ ತುಂಬಾ ಬದಲಾಗೋದಿಲ್ಲ. ಆದ್ರೆ, ಭೂಮಧ್ಯ ರೇಖೆಯಿಂದ ಹೆಚ್ಚು ಹೆಚ್ಚು ಉತ್ತರಕ್ಕೆ (ಅಥವಾ ದಕ್ಷಿಣಕ್ಕೆ) ಹೋದಹಾಗೆ ಕಾಲ ಬದಲಾದ ಹಾಗೆ ಹಗಲು ಹೆಚ್ಚಾಗೋದೂ, ಅಥವಾ ರಾತ್ರಿ ಹೆಚ್ಚಾಗೋದೋ ಸುಲಭವಾಗಿ ಗೊತ್ತಾಗುತ್ತೆ.

Read more »

24
ಸೆಪ್ಟೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 3 – ನಜ್ಜು ಗುಜ್ಜಾಗುವ ಪ್ರಹ್ಲಾದ

ಮನೆಯಲ್ಲೊಂದು ದಿನ ಯಾವುದೋ ಶುಭಕಾರ್ಯ ನಿಮಿತ್ತ ನೆರೆಕರೆಯವರು ಸೇರಿದ್ದರು. ನಮ್ಮ ಊರಿನತ್ತ ಯಾವುದೇ ಕಾರ್ಯಕ್ಕಾಗಿ ಭೇಟಿ ಕೊಟ್ಟರೆ ‘ಉಂಡೊಡನೆ ಊರು ಬಿಡುವ’ ಕ್ರಮವಿರುವುದಿಲ್ಲ.

ಆ ದಿನ ಸಂಜೆಯ ಹೊತ್ತಿಗೆ ತೆರಳುವವರು ತೆರಳಿದ ತರುವಾಯವೂ, ಕೆಲವರು ಸಮೀಪದವರು ಉಳಿದಿದ್ದರು. ಬಂಧುಗಳೂ ಇದ್ದರು.

ಊರಿನ ಹಲವು ಸಮಸ್ಯೆಗಳ, ಜನರ ನಡೆನುಡಿಯ ವಿಚಾರಗಳ ಚರ್ಚೆ ಮಾತುಕತೆಗಳಲ್ಲಿ ಆಗುತ್ತಿತ್ತು. ಅಂತೆಯೇ ಮಾತು ಮುಂದುವರಿದು ತಾಳಮದ್ದಳೆಯ ಕಡೆಗೂ ತಿರುಗಿತು. ಬರಿಯ ಮಾತಿನಿಂದ ಪಾತ್ರ ಪೋಷಣೆಯಾಗುವುದಿಲ್ಲ, ಸಜೀವ ಚಿತ್ರಣವಾಗುವುದಿಲ್ಲ ಎಂದು ಒಬ್ಬರು ಹೇಳಿದರು.

”ಪಾತ್ರ ಚಿತ್ರಣ ಬೇಕಾದರೆ ಬಯಲಾಟವನ್ನೇ ನೋಡಬೇಕು” ಎಂದರು ಇನ್ನೊಬ್ಬರು.

ಮಳೆಗಾಲ ಕಳೆದಿದ್ದು, ಮೇಳಗಳು ಹೊರಡುವುದಕ್ಕೆ ಇನ್ನೂ ಸಮಯವಿದ್ದುದಾಗಿ ನನ್ನ ನೆನಪು.
Read more »

24
ಸೆಪ್ಟೆಂ

ಅವನಲ್ಲಿನ ಅವಳ ಕಥೆ

-ಕಾಲಂ ೯

ಅವನು ಅವನಲ್ಲ, ಅವನು ’ಅವಳು’!

ಅವಳು? ನಿಜಕ್ಕೂ ಅವಳೇನಾ?

ಈ ಅವನಲ್ಲಿನ ಅವಳ ಕಥೆಯೇ – ಬದುಕು ಬಯಲು – ಹಿಜ್ಡಾ ಒಬ್ಬಳ ಆತ್ಮಕಥೆ.

ನಾಲ್ಕು ವರ್ಷದ ಹಿಂದಿನ ಮಾತು. ಗಾಂಧಿಬಜಾರಿನ ’ಅಂಕಿತ’ದಲ್ಲಿ ಗೆಳೆಯನೊಬ್ಬನ ಬರುವಿಕೆಗೆ ಕಾಯ್ತಾ ಇದ್ದೆ ಪುಸ್ತಕಗಳನ್ನು ತಡವುತ್ತಾ. . . . ಸಂಜೆ ೪ ರ ಸಮಯ, ಕಂಬತ್ತಳ್ಳಿ – ಪ್ರಭಾ ಇಬ್ಬರೂ ಇರಲಿಲ್ಲ. ಗಲ್ಲಾದಲ್ಲಿ ಕೂತ ಸಹಾಯಕ ಹುಡುಗಿಯೊಬ್ಬಳು ಕಿವಿಗೆ ಫೋನ್ ಹಚ್ಚಿಕೊಂಡಿದ್ದಳು. ನಾನು ಪುಸ್ತಕ ತಡವುತ್ತಿದ್ದ ಜಾಗದಿಂದ ಮತ್ತೂ ಒಳಗೆ ಹಿರಿಯೊಬ್ಬರು ಧಾರ್ಮಿಕ ಪುಸ್ತಕಗಳಲ್ಲಿ ಕಳೆದುಹೋಗಿದ್ದರು. ಆ ಕ್ಷಣ ಇಬ್ಬರು ಹಿಜ್ಡಾಗಳು ಅಂಕಿತದೊಳಗೆ ನುಗ್ಗಿದರು. ಫೋನಿನಲ್ಲಿದ್ದ ಗಲ್ಲಾದ ಹುಡುಗಿ ಗಲಾಟೆ ಮಾಡದಂತೆ ಸನ್ನೆ ಮಾಡಿದಳು. ನಾನು ಮತ್ತೂ ಒಳಗೆ ಹೋದರೂ ದೃಷ್ಟಿ ಇತ್ತಲೇ ನೆಟ್ಟಿದ್ದೆ. ಗಲ್ಲಾದ ಹುಡುಗಿ ಕೊಟ್ಟ ಐದೋ ಎರಡೋ ರೂಪಾಯಿ ಹಿಜ್ಡಾಗಳಿಗೆ ಸಮಾಧಾನ ತರಲಿಲ್ಲ. ಅವರು ತಮ್ಮ ನಖ್ರಾ ತೋರಿಸುತ್ತಲೇ ಪುಸ್ತಕಗಳಿಗೆ ಕೈ ಹಾಕಿದರು. ಮತ್ತೆ ಗಲ್ಲಾದ ಹುಡುಗಿ ಅದನ್ನೆಲ್ಲ ಮುಟ್ಟಬಾರದೆಂದು ತಾಕೀತು ಮಾಡಿದಳು. ಆಗ ಈ ಹಿಜ್ಡಾಗಳು ತಮಗೊಂದು ಪೆನ್ನು ಕೊಡುವಂತೆ ಕೇಳಿದರು. ಗಲ್ಲಾದ ಹುಡುಗಿ ನಿರಾಕರಿಸಿದಳಾದರೂ ಕೊನೆಗೆ ಇಬ್ಬರಿಗೂ ಒಂದೊಂದು ಪೆನ್ನು ಕೊಟ್ಟು ಸಾಗು ಹಾಕಿದಳು. ಒಳಗಿನಿಂದ ಇದೆಲ್ಲವನ್ನೂ ನೋಡುತ್ತಿದ್ದ ನನಗೆ ಅವರೇನಾದರೂ ಪೆನ್ನನ್ನು ಬಳಸಿಯೇ ಬಿಟ್ಟರೇ? ತಮ್ಮ ಅನುಭವಗಳನ್ನೆಲ್ಲ ಕೆತ್ತಿಯೇ ಬಿಟ್ಟರೆ? ಅಲ್ಲೇ ಪುಸ್ತಕಗಳಾಗಿ ಬಿದ್ದಿದ್ದ ಮೊಗಳ್ಳಿ, ಜೋಗಿ, ವಸುಧೇಂದ್ರ ಎಲ್ಲ ಏನಾಗಬಹುದು? ಎಂದೆಲ್ಲ ಅನ್ನಿಸಿತ್ತು. Read more »