ವಿಷಯದ ವಿವರಗಳಿಗೆ ದಾಟಿರಿ

Archive for

23
ಸೆಪ್ಟೆಂ

ಕುರುಡಾಗದಿರು ಭಾರತೀಯ ನಿನ್ನ ಕಣ್ಣುಗಳಿರುವ ತನಕ..

ಅಶ್ವಿನ್ ಎಸ್ ಅಮೀನ್

ಕೋಮುವಾದ, ಜಾತಿವಾದ,  ಇವುಗಳ ನಡುವಿನ ಸಂಘರ್ಷಗಳು ಯಾವ ದೇಶದಲ್ಲಿ ಎಷ್ಟರವರೆಗೆ ಇರುತ್ತವೆಯೋ ಅಲ್ಲಿಯ ತನಕ ಆ ದೇಶದ ಬೆಳವಣಿಗೆ ಕುಂಠಿತವಾಗಿ ಸಾಗುತ್ತದೆ. ಅದರಲ್ಲೂ ಆಳುವ ಸರಕಾರಗಳು ನಡೆಸುವ ಒಂದು ಸಮುದಾಯದವರ ಓಲೈಕೆ ಅದು ಅಲ್ಪಸಂಖ್ಯಾತರನ್ನಾಗಲೀ, ಬಹುಸಂಖ್ಯಾತರನ್ನಾಗಲೀ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ.

ನಮ್ಮೀ ಭಾರತ ಇದೆಲ್ಲ ಸಮಸ್ಯೆಗಳಿಂದ ಹೊರತಾಗಿಲ್ಲ.. ಬಹುಶಃ ಈ ತರಹದ ಕೋಮು ವಿಂಗಡಣೆ, ಜಾತಿ ವಿಂಗಡಣೆ ರಾಜಕೀಯ ಭಾರತದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಸಿಗದು..! ತಾಜಾ ಉದಾಹರಣೆಯಾಗಿ ಕೇಂದ್ರದ NAC ಸಿದ್ದಪಡಿಸಿದ ಕೋಮು ಸಂಘರ್ಷ ನಿಯಂತ್ರಣಾ ಕಾಯಿದೆಯ ಕರಡು ರೂಪದಲ್ಲೊಮ್ಮೆ ಕಣ್ಣಾಡಿಸಿ. ಇಲ್ಲಿ ಕಾಣಸಿಗುವುದು ಅಲ್ಪ ಸಂಖ್ಯಾತ, ಬಹು ಸಂಖ್ಯಾತ, ಪರಿಶಿಷ್ಟ ವರ್ಗ – ಪಂಗಡಗಳೆಂಬ ವಿಂಗಡಣಾ ರಾಜಕೀಯ.
ಕೋಮು ಸಂಘರ್ಷಗಳಲ್ಲಿ ತಪ್ಪಿತಸ್ಥರಾದವರಿಗೆ ಎಲ್ಲರಿಗೂ ಶಿಕ್ಷೆಯಾಗುವುದಾದರೆ ಈ ಕೋಮು ಸಂಘರ್ಷ ನಿಯಂತ್ರಣ ಕಾಯಿದೆ ಸ್ವಾಗತಾರ್ಹವಾಗುತಿತ್ತು. ಇಡೀ ಭಾರತಕ್ಕೆ ಭಾರತವೇ NAC ಯ ಮುಖ್ಯಸ್ಥೆ ಸೋನಿಯಾ ಗಾಂದಿಯವರನ್ನು ಅಭಿನಂದನೆಗಳಿಂದ ಮುಳುಗೇಳಿಸುತ್ತಿತ್ತು. ಆದರೆ ಹಾಗಾಗಲಿಲ್ಲ..! ಕಾರಣ ಇಲ್ಲಿ ಕೇವಲ ಬಹುಸಂಖ್ಯಾತರಿಗಷ್ಟೇ ಶಿಕ್ಷೆ.. ಅಲ್ಪಸಂಖ್ಯಾತರು ಯಾವುದೇ ಗಲಬೆಗಳಲ್ಲಿ ಪಾಲ್ಗೊಂಡರೂ ಈ ಕಾಯಿದೆಯಡಿ ಶಿಕ್ಷೆಯಿಲ್ಲ. ಅದರಲ್ಲೂ ಬೆಂಕಿಗೆ ತುಪ್ಪ ಸುರಿದಂತೆ ಬಹುಸಂಖ್ಯಾತ ಹಿಂದೂ ಧರ್ಮದಿಂದ ಪರಿಶಿಷ್ಟ ವರ್ಗ-ಪಂಗಡಗಳನ್ನು ಬೇರ್ಪಡಿಸಿರುವುದು..! ಪರಿಶಿಷ್ಟ ವರ್ಗ-ಪಂಗಡಗಳಿಗೆ ಸೌಲಭ್ಯ ಕಲ್ಪಿಸಿರುವುದು ಒಳ್ಳೆಯದೇ ಆಗಿದೆ. ಆದರೆ ಇಲ್ಲಿ ಭಾರತದ ಮೂಲ ಧರ್ಮವಾದ ಸನಾತನ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಅಡಗಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕು. Read more »