ಯಾರು ಅಪಾಯಕಾರಿ!?
– ಸಚಿನ್
ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.
ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.
ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ
“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…” ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು 18.11.1972 ರಂದು ಬಣ್ಣ ಕಳಚಿ ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912 ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಪದ್ಯಾಣ ಗೋಪಾಲಕೃಷ್ಣ ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು” ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…
—————-
ಮೊದಲ ಪ್ರೇಮ ಗೀತೆ……
ಪವನ್ ಪರುಪತ್ತೇದಾರ್
ಸುತ್ತಲೂ ದೊಡ್ಡದಾಗಿ ನೆರೆದಿದ್ದ ವಿದ್ಯಾರ್ಥಿ ಸಮೂಹ, ಅಲ್ಲಲ್ಲಿ ಒಬ್ಬಬ್ಬರು ಒಂದೊಂದು ಆಟ ಅಡುತಿದ್ದರು. ಕೆಲವರು ಬಾಕ್ಸ್ ಟೆನ್ನಿಸ್, ಕೆಲವರು ಲೆಗ್ ಕ್ರಿಕೆಟ್, ಕೆಲವರು ಹೈ ಜಂಪ್ ಮತ್ತೆ ಕೆಲವರು ಕಬ್ಬಡ್ಡಿ, ಇನ್ನೊಂದು ಬದಿಯಲ್ಲಿ ಕೆಲವು ವಿದ್ಯಾರ್ಥಿಗಳು ನೆನ್ನೆ ಕೊಟ್ಟ ಹೋಂ ವರ್ಕ್ ಮನೆಯಲ್ಲಿ ಮಾಡಿಲ್ಲದಿದ್ದರಿಂದ ಸ್ನೇಹಿತರ ಬಳಿ ಪಡೆದು ಆತುರಾತುರವಾಗಿ ಗೀಚುತಿದ್ದರು.
ಅಲ್ಲೇ ಒಂದು ಮೂಲೆಯಲ್ಲಿ ಪ್ರವೀಣ ಗೆತನ್ನೇ ನೋಡುತ್ತಾ ನಿಂತಿದ್ದ. ತನ್ನ ಸ್ನೇಹಿತರೆಲ್ಲ ಒಂದಲ್ಲ ಒಂದು ಆಟ ಅಡುತಿದ್ದರು ಪ್ರವಿಣನಿಗೆ ಅ ಕಡೆ ಗಮನ ಬಂದಿಲ್ಲ, ಅವನ ಗಮನ ಏನಿದ್ದರು ಸಂಪೂರ್ಣ ಗೇಟಿನ ಕಡೆಯೇ ಕೆಂದ್ರಿಕ್ರುತವಗಿತ್ತು. ಇದ್ದಕ್ಕಿದ್ದಂತೆ PT ಮೇಷ್ಟ್ರು ಜೋರಾಗಿ ಪೀಪಿ ಊದಿದರು. ಆಡುತಿದ್ದ ಮಕ್ಕಳೆಲ್ಲರೂ ಓಡೋಡಿ ಬಂದು ಸಾಲುಗಳಲ್ಲಿ ನಿಂತರು. ಹೋಂ ವರ್ಕ್ ಮದುತಿದ್ದವರೆಲ್ಲ ಘಾಬರಿ ಘಾಬರಿಯಾಗಿ ಪುಸ್ತಕಗಳನ್ನು ಹೇಗೆ ಬರೆಯುತಿದ್ದರೋ ಹಾಗೇ ಬ್ಯಾಗ್ ಗೆ ತುಂಬಿಸಿಕೊಂಡು ಬಂದು ಸಾಲಲ್ಲಿ ನಿಂತರು. ಪ್ರವೀಣ ಗೇಟನ್ನು ನೋಡುತ್ತಲೇ ಮುಖ ಚಿಕ್ಕದು ಮಾಡಿಕೊಂಡು ಬೇಸರವಾಗಿ ಭಾರವಾದ ಹೆಜ್ಜೆ ಇಡುತ್ತಾ ಬಂದು ಸಾಲಿನ ಮುಂಭಾಗದಲ್ಲಿ ಪ್ರಾರ್ಥನೆ ಹೇಳಿಕೊಡುವ ಜಾಗದಲ್ಲಿ ನಿಂತನು. ಅಷ್ಟರಲ್ಲೇ ಬಜಾಜ್ ಸ್ಕೂಟರ್ ಒಂದು ಬಂದು ಗೇಟಿನ ಹೊರಗಡೆ ನಿಂತಿತು. ಭಾರವಾದ ಬ್ಯಾಗ್ ಹೊತ್ತ ಹುಡುಗಿ ತನ್ನ ತಂದೆಗೆ ಟಾಟಾ ಮಾಡುತ್ತ ಗೇಟ್ ಒಳಗೆ ಬಂದು ಓಡೋಡಿ ಪ್ರಾರ್ಥನೆಯ ಜಾಗಕ್ಕೆ ಬರುತಿದ್ದಳು, ಪ್ರವಿಣನ ಬಾಡಿದ್ದ ಮುಖ ಚಿಗುರಿ ಮನ ಆತ್ಮ ವಿಶ್ವಾಸದಿಂದ ತುಳುಕಾಡಿತು. ಬ್ಯಾಗ್ ಪಕ್ಕ ಇಟ್ಟು ಅ ಹುಡುಗಿಯು ಬಂದು ಪ್ರವಿಣನ ಪಕ್ಕ ನಿಂತಳು. ಪ್ರವೀಣ ಯಾಕೆ ಕಾವ್ಯ ಇವತ್ತು ಲೇಟ್ ಅಂದ, ಅಮ್ಮ ಬಾಕ್ಸ್ ಕೊಡೋದು ಲೇಟ್ ಮಾಡಿದ್ರು ಅನ್ನೋ ಮಾಮೂಲಿ ಉತ್ತರವನ್ನೇ ಅವಳು ಕೊಟ್ಟಳು. ಸ್ವಾಮಿ ದೇವನೇ ಲೋಕ ಪಾಲನೆ ಎಂದು ಪ್ರಾರ್ಥನೆ ಮಡಿ ಎಲ್ಲರು ತಮ್ಮ ತಮ್ಮ ತರಗತಿಗಳಿಗೆ ಸೇರಿಕೊಂಡರು… ಮತ್ತಷ್ಟು ಓದು 
ಮನದ ತೀರದ ತುಂಬಾ ಮರೆಯದ ಹೆಜ್ಜೆಗುರುತು!
– ವಾಣಿ ಶೆಟ್ಟಿ, ಉಡುಪಿ.
ನೆನಪುಗಳು………….. ಇವೇ ಹೊತ್ತಲ್ಲದ ಹೊತ್ತಲ್ಲಿ ಕಾಡುತ್ತವೆ.. ಮತ್ತವೇ ನೊಂದ ಮನಸ್ಸನ್ನು ಸಂತೈಸುತ್ತವೆ ಕೂಡಾ!ಅವುಗಳು ಸದಾ ನಮ್ಮ ಅದೊಂದು ಕಾಲದ…ಅನ್ನೋ ನೆನಪಿನ ಗಣಿಯ ವಜ್ರ.ಸರಿಯಾಗಿ ಏಳೆಂಟು ವರ್ಷಗಳ ಹಿಂದೆ ಹೈಸ್ಕೂಲ್ ಮುಗಿಸುವ ತರಾತುರಿಯಲ್ಲಿದ್ದೆವಲ್ಲ.ಆಗೆಲ್ಲ ನಮಗೆ ಬದುಕು ಇಷ್ಟು ಬೇಗ ಆಧುನಿಕವಾಗಿ ಬಿಡಬಹುದು ಅನ್ನೋ ಕಲ್ಪನೆಯೇ ಇದ್ದಿರಲಿಲ್ಲ.ಯಾವ ಗೋಜಲು,ಗೊಂದಲ ಗಳೇ ಇಲ್ಲದ ದಿನಗಳವು!ಸ್ಕೂಲ್ ಡೇಯ ಹಿಂದಿನ ದಿನ ನಾಟಕ ,ಡ್ಯಾನ್ಸ್ ಪ್ರಾಕ್ಟಿಸ್ ಮಾಡಿ ಶಾಲೆಯ ಹಿಂದಿದ್ದ ಮರಗಳ ಅಡಿ ಕುಳಿತು ಮಾತಾಡುವಾಗ ಬಹುಶಃ ನಮ್ಮ ನಾಲ್ವರಿಗೂ ಗೊತ್ತಿತ್ತು ಮುಂದೆ ಹೀಗೆ ಭೇಟಿ ಆಗೋದು ಕಷ್ಟ ಅಂತ.ಅಷ್ಟು ದೂರದ ಕಾಲೇಜಿಗೆ ನಮ್ಮೆಲ್ಲರ ಮನೇಲಿ ಕಳಿಸ್ತಾರೋ ಇಲ್ವೋ ಏನೇ ಆದರೂ ಸಿಗ್ತಾನೆ ಇರೋಣ ಆಯ್ತಾ ಅಂದಾಗ ಹಾಂ ಆಯ್ತು ಅದಕ್ಕೇನು ಅಂದಿದ್ದೆ..ಆಮೇಲೆ ದಿನಗಳೆಲ್ಲ ಹ್ಯಾಗೆ ಓಡಿಬಿಟ್ಟವಲ್ಲ, !
ಈಗ ಕಾಡುತ್ತಿವೆ ನೆನಪುಗಳು ಸಾಯುವಷ್ಟು…! ಅಂದುಕೊಂಡಿದ್ದು ಸಾಧಿಸಿ ಸಂಪೂರ್ಣವಾಗಿ ಆಧುನಿಕತೆಯ ಗೂಡೊಳಗೆ ಬಂದ ಮೇಲೆ ಇಂದು ಎಲ್ಲವೂ ಇದೆ ಇಲ್ಲಿ ..ಸಮಯ ಮರೆಸುವ ಸ್ನೇಹಿತರು ,ಅಂತರ್ಜಾಲಗಳು, ರೆಸಾರ್ಟ್, ಗೇಮ್ಸ್,ಪಿಕ್ನಿಕ್ ,…ಇನ್ನೂ..ಆದರೆ ಬರೀ ನೂರು ಪುಟಗಳ ನನ್ನ ಹಳೆಯ ಆಟೋಗ್ರಾಫ್ ಕೊಡೊ ಅಧ್ಬುತ ಭಾವುಕತೆಯನ್ನು ಯಾವ ಆರ್ಕುಟ್, ಫೇಸ್ ಬುಕ್ ಗಳು ಕೂಡಾ ಕೊಡಲಾರವು..ಈ ಆಟೋಗ್ರಾಫ್ ನಲ್ಲಿ ರಜನಿ ಬರೆದ ಒಂದು ವಾಕ್ಯವಿದೆ “ನಮ್ಮ ಜೀವನ ಒಂದು ಬಸ್ ಪ್ರಯಾಣ ಇದ್ದ ಹಾಗೆ .ನಮ್ಮ ನಮ್ಮ ಸ್ಟಾಪ್ ಬಂದಾಗ ಇಳಿದು ಕೊಳ್ಳಲೇಬೇಕು”..ಹೇಯ್, ತಿರುಗಿ ಬಂದಿದ್ದೆನಲ್ಲಾ ನೀವೆಲ್ಲ ಇಳಿದಲ್ಲಿ ನಿಮ್ಮನ್ನು ಹುಡುಕಿಕೊಂಡು !!?ಎಲ್ಲಿದ್ರಿ ನೀವೆಲ್ಲಾ ಅಲ್ಲಿ ?ಬರೀ 4-5 ವರ್ಷದಲ್ಲೇ ನಿಮ್ಮ ಮೂರೂ ಜನರ ಮದುವೆಯಾಗಿ ಎಲ್ಲೆಲ್ಲೋ ಹೋಗಿಬಿಟ್ಟಿರಲ್ಲ..ನಿನ್ನ ಅಡ್ರೆಸ್ ,ಫೋನ್ ನಂಬರ್ ತುಂಬಾ ಹುಡುಕಿದ್ಲು.ಅಡ್ರೆಸ್ ಕೊಡಲೇ ಇಲ್ವಂತೆ ನೀನು.ಮದುವೆಗ್ ಕರಿಯೋಕೆ ಆಗಲಿಲ್ಲ ಅಂತ ಎಸ್ಟ್ ಬೇಜಾರ್ ಮಾಡ್ಕೊಂಡ್ಲು ಗೊತ್ತ ..ಹೆಚ್ಚು ಕಮ್ಮಿ ಮೂವರ ಮನೆಯಲ್ಲೂ ಹೇಳಿದ ಮಾತಿದು ..ಪೇಲವ ನಗೆ ನಕ್ಕಿದ್ದೆ..ಮುಂದೆ ಎಲ್ಲಿ ಹ್ಯಾಗೆ ಎಷ್ಟು ಓದ್ತೀನಿ ಅಂತ ಗೊತ್ತಿಲ್ಲದವಳು ಏನು ಅಡ್ರೆಸ್ ಕೊಟ್ಟಿರಬೇಕಿತ್ತು?ನಿಮ್ಮೆಲ್ಲರ ಮದುವೆ ಆಲ್ಬಮ್ ನೋಡ್ಲಿಕ್ಕೆ ಸಿಕ್ಕಿದ್ದಷ್ಟೇ ಪುಣ್ಯ ! ಹಾಗೆ ವಾಪಾಸ್ ಬರೋವಾಗ ಶಾಲೆಯ ಬಳಿ ಹೋಗಿದ್ದೆ..ಸಡನ್ ಆಗಿ “ಮೈ ಆಟೋಗ್ರಾಫ್ ” ಸಿನೆಮಾ ನೆನಪಾಗಿತ್ತು.
ಅಣ್ಣಾ ಹಜಾರೆ – ಶ್ರೀ ಸಾಮಾನ್ಯನ ಮನೆ – ಮನಗಳ ದೀಪ.
– ಹೊಳೆನರಸೀಪುರ ಮಂಜುನಾಥ್
ಅಣ್ಣಾ ಹಜಾರೆಯವರ ಬೇಡಿಕೆಗಳನ್ನು ಕೇ೦ದ್ರ ಸರ್ಕಾರ ಒಪ್ಪಿಕೊಳ್ಳುವುದರ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ೧೨ ದಿನಗಳ ಉಪವಾಸ ಸತ್ಯಾಗ್ರಹ, ದೇಶದ ಮೂಲೆಮೂಲೆಯಿ೦ದ ಎ೦ದೂ ಕ೦ಡರಿಯದ೦ಥ ಅಭೂತಪೂರ್ವ ಜನಬೆ೦ಬಲ, ಕೇ೦ದ್ರಸರ್ಕಾರವನ್ನು ಮಣಿಸಿ, ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಸ೦ಸತ್ತಿನಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಅನುಮೋದಿಸುವ೦ತೆ ಮಾಡಿದೆ. ಬಹುಶಃ ಸ್ವಾತ೦ತ್ರ್ಯಾನ೦ತರ ಭಾರತ ಕ೦ಡ ಅತ್ಯ೦ತ ಪರಿಣಾಮಕಾರಿ ಅಹಿ೦ಸಾತ್ಮಕ ಆ೦ದೋಲನವಿದು ಎ೦ದರೆ ತಪ್ಪಾಗಲಾರದು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಿಕ್ಕಿರುವ ಜಯ, ಯಾವುದೇ ಒ೦ದು ಪಕ್ಷಕ್ಕೆ, ಸ೦ಘಟನೆಗೆ ಅಥವಾ ವ್ಯಕ್ತಿಗೆ ಸಿಕ್ಕಿರುವ ಜಯವಲ್ಲ. ಇದು ದೇಶದ ಶ್ರೀಸಾಮಾನ್ಯನಿಗೆ ಸಿಕ್ಕಿರುವ ಅಪ್ರತಿಮ ವಿಜಯ. ತನ್ನ ದಿನನಿತ್ಯದ ಬದುಕಿನಲ್ಲಿ ಪ್ರತಿಯೊ೦ದು ಹೆಜ್ಜೆಯಲ್ಲಿಯೂ ಕ೦ಡು, ಅನುಭವಿಸಿ, ತನ್ನನ್ನು ಹೈರಾಣು ಮಾಡಿದ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಈ ದೇಶದ ಸಾಮಾನ್ಯ ನಾಗರಿಕನ ಸಾತ್ವಿಕ ಕೋಪಕ್ಕೆ ಸಿಕ್ಕ ವಿಜಯ ಇದಾಗಿದೆ.
ಮತ್ತಷ್ಟು ಓದು 
ಒಂದು ಲಕ್ಷ ಹಿಟ್ಸ್ ಕಂಡ ನಿಲುಮೆ
ಪ್ರಿಯ ನಿಲುಮೆ ಓದುಗರೆ ಇವತ್ತಿಗೆ ನಿಲುಮೆಯು ನಿಮ್ಮೆಲ್ಲರ ಪ್ರೋತ್ಸಾಹದಿಂದ ಒಂದು ಲಕ್ಷ ಹಿಟ್ಸ್ ಆಗಿದೆ.ನಿಮ್ಮಿಂದ ಇನ್ನು ಮುಂದೆಯೂ ಸಲಹೆ, ಪ್ರೋತ್ಸಾಹ, ಲೇಖನಗಳನ್ನು ನಿರೀಕ್ಷಿಸುತ್ತೇವೆ, ವಂದನೆಗಳು.
ನಿಮ್ಮೊಲುಮೆಯ,
ನಿಲುಮೆ
ಜನರ ಸಂತೆಯಲ್ಲಿ ಹಕ್ಕಿಗಳೊಂದಿಗೆ… ನಾನು.
– ಅಮಿತಾ ರವಿಕಿರಣ
ಇಂಥವೆಲ್ಲ ನನ್ನ ಕಣ್ಣಿಗೆ ಯಾಕೆ ಬಿಳುತ್ತವೆಯೋ ಗೊತ್ತಿಲ್ಲ…ದೇಶ ಬಿಟ್ಟು ನನ್ನದಲ್ಲದ ನಾಡಿಗೆ ಬಂದು ನೆಲೆಸಿದರು ಈ ನಂಟು ನನ್ನ ಬಿಡಲೊಲ್ಲದು..ಮದುವೆಯ ನಂತರ ಮೊದಲು ಸಂಸಾರದ ಬಂಡಿ ಹೂಡಿದ್ದು ಬೆಳಗಾವಿಯಲ್ಲಿ….೨ ನೇ ಅಂತಸ್ತಿನಲ್ಲಿ ನನ್ನ ಪುಟ್ಟ ಗೂಡು..ಅಡಿಗೆ ಮನೆಯ ಕಿಟಕಿ ತೆರೆದ ಕೂಡಲೇ ಕಾಣುತ್ತಿತ್ತು ಅವರ ಬಳಗ..ಅತ್ತಿರದ ಅಂಗಡಿಯ ಬಾಗಿಲಲ್ಲಿ ಅವರು ಎಸೆಯುತ್ತಿದ್ದ ಅಕ್ಕಿಯ ಕಾಲಿಗೆ ಆಸೆ ಪಟ್ಟು ಎದುರಿನ ವಿದ್ಯುತ್ ತಂತಿಯ ಮೇಲೆ ಮದುವೆ ಉಟಕ್ಕೆ ಕುಳಿತ ಪಂಕ್ತಿಯಂತೆ ಕೂಡುತ್ತಿದ್ದ ಮುದ್ದು ಮುಖದ ಗುಬ್ಬಿಗಳು…

“ ಹೌದು..ಹಾಗಿದ್ದರು ಹೆಗಡೇಜಿ ” !!!
ಕೆ ಎಸ್ ರಾಘವೇಂದ್ರ ನಾವಡ
ಇತ್ತೀಚೆಗೆ ಯಡಿಯೂರಪ್ಪ ಅಧಿಕಾರ ಉಳಿಸಿಕೊಳ್ಳುವ ಕೊನೆಯ ತ೦ತ್ರಗಳೆಲ್ಲಾ ವಿಫಲವಾದ ನ೦ತರ ಜನತೆಗೆ ಆಷಾಢ ಮಾಸವೆ೦ಬ ಯಕಶ್ಚಿತ್ ಕಾರಣ ನೀಡಿ, ಅಲ್ಲಿಯವರೆಗೂ ಎಳೆದಾಡಿ, ಕೊನೆಗೆ ಪದತ್ಯಾಗ ಅನಿವಾರ್ಯವಾದಾಗ ರಾಜೀನಾಮೆ ನೀಡಿದ್ದು, ಕೂಡಲೇ ರಾಜೀನಾಮೆ ನೀಡುವ ಮೂಲಕ ತಮ್ಮ ಮರ್ಯಾದೆ ಉಳಿಸಿಕೊಳ್ಳಬಹುದಾದ ಏಕೈಕ ಮಾರ್ಗವನ್ನೂ ತೊರೆದು, ಇ೦ದು ಬ೦ದು ನಾಳೆ ಹೋಗುವ “ಅಧಿಕಾರ“ ವೆ೦ಬ
( ಅದೂ ಜನತೆ ನೀಡಿದ್ದು) ಹಾಸಿಗೆಯ ಮೇಲೆ ಆರಾಮಾಗಿ ಮಲಗಿ, ಕಾಲ ಕಳೆದದ್ದರ ಬಗ್ಗೆ ಹಾಗೂ ಆ ಮೂಲಕ ಭಾಜಪಾದ ಶಕ್ತಿಯೇ ತಾನೆ೦ಬುದನ್ನು ತನ್ನ ಹೈಕಮಾ೦ಡ್ ಗೆ ಮನವರಿಕೆ ಮಾಡಿಕೊಡುವ ಯತ್ನದಲ್ಲಿ ಗೆದ್ದರೂ, ಸದಾನ೦ದ ಗೌಡರು ಮುಖ್ಯಮ೦ತಿರ್ಗಳಾಗಿ ರಹಸ್ಯ ಮತದಾನದ ಮೂಲಕ ಗೆಲ್ಲುವಲ್ಲಿ ಇಟ್ಟ ರಾಜಕೀಯ ಚಾಣಾಕ್ಷ ಹೆಜ್ಜೆಗಳು, ಅದಕ್ಕವರು ತೆಗೆದುಕೊ೦ಡ ತೀರ್ಮಾನಗಳು, ಒ೦ದರ ನ೦ತರ ಮತ್ತೊ೦ದರ೦ತೆ ನ್ಯಾಯಾಲಯಕ್ಕೆ ಅವರು ತಮ್ಮ ಮೊಕದ್ದಮೆಗಳ ಮೇಲಿನ ವಿಚಾರಣೆ ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಸುಮಾರು ೬ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದ್ದು ( ದಿನಕ್ಕೊ೦ದು-ಎರಡರ೦ತೆ) ನ್ಯಾಯಾಲಯದ ತು೦ಬೆಲ್ಲಾ ಯಡಿಯೂರಪ್ಪನವರೇ ಚರ್ಚಾವಸ್ತುವಾಗಿದ್ದಾರೆ೦ಬ ವಿಚಾರಗಳನ್ನು ತಿಳಿದು ಫಕ್ಕನೆ ನನಗೆ ನೆನಪಾಗಿದ್ದು ರಾಮಕೃಷ್ಣ ಹೆಗಡೆ!!
ರಾಜಕೀಯದಲ್ಲಿ ಯಾವಾಗಲೂ ಹಾಗೆಯೇ…. ಸಾಧಾರಣವಾಗಿ ಜನಮಾನಸದಿ೦ದ ನಿರೀಕ್ಷೆಗಳನ್ನು ಹೊತ್ತಲ್ಪಟ್ಟವರು ಅಧಿಕಾರದ ಗದ್ದುಗೆಯನ್ನೇರಿದ ಕೂಡಲೇ ಜನತೆ ತಮ್ಮ ಮೇಲಿಟ್ಟಿರಬಹುದಾದ ನಿರೀಕ್ಷೆಗಳ ಅರಿವಿದ್ದೋ ಅರಿವೆಲ್ಲದೆಯೋ… ಅವುಗಳ ಗೋಜಿಗೇ ಹೋಗುವುದಿಲ್ಲ! ಆದರೆ ಕೆಲವೊಮ್ಮೆ ಯಾವುದೇ ನಿರೀಕ್ಷೆಯಿರದಿದ್ದ.. ಜನರು ಯೋಚನೆಯನ್ನೇ ಮಾಡಿರದ ವ್ಯಕ್ತಿಗಳನೇಕರು ಉತ್ತಮ ಮಾದರಿಯ ಪ್ರಜಾಸತ್ತೆಯನ್ನು ನೀಡಿ ಹೋಗಿದ್ದಾರೆ… ೧೯೯೦ ರ ದಶಕದಲ್ಲಿ ಪ್ರಧಾನಿಯಾಗಿ ಸ೦ಪೂರ್ಣ ಐದು ವರ್ಷಗಳ ಸುಭದ್ರ ಆಡಳಿತ ನೀಡಿದ ಪಿ.ವಿ. ನರಸಿ೦ಹರಾಯರ ಮೇಲೆ ಯಾರೂ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟೇ ಇರಲಿಲ್ಲ!! ಆದರೂ ಸ್ವತ೦ತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಪಿ.ವಿ. ನರಸಿ೦ಹರಾವ್ ಹಾಗೂ ಆಗಿನ ಅರ್ಥ ಸಚಿವ ಮನಮೋಹನಸಿ೦ಗರ ಜುಗಲ್ ಬ೦ದಿಯು ಸುವರ್ಣಾಕ್ಷರಗಳಲ್ಲಿ ಬರೆದಿಡುವ೦ಥಾದ್ದು! ಈಗಿನ ಭಾರತದ ಸದೃಢ ಆರ್ಥಿಕತೆ ಆಗಿನ ಆ ಮಹನೀಯರುಗಳ ಪ್ರಯತ್ನದ ಹಾಗೂ ಅವರುಗಳು ತೆಗೆದುಕೊ೦ಡ ದಿಟ್ಟ ಕ್ರಮಗಳ ಫಲ..




