ವಿಷಯದ ವಿವರಗಳಿಗೆ ದಾಟಿರಿ

Archive for

18
ಆಕ್ಟೋ

ಹೋಳಿ ಹಬ್ಬದಂದು ನಮ್ಮ ಗೋಳಿನ ಕಥೆ

ವಿಜಯ್ ಹೆರಗು

ಸುಮಾರು ಹದಿನೈದು ವರ್ಷಗಳ ಹಿಂದಿನ ಮಾತು, ಅವತ್ತು ಹೋಳಿ ಹಬ್ಬದ ದಿನ. ಬೆಳಿಗ್ಗೆಯಿಂದಲೇ ಎಲ್ಲೆಲ್ಲೂ ಬಣ್ಣದ ಓಕುಳಿಯಾಟ. ನಾನಾಗ ಮೈಸೂರಿನ ಮಹಾರಾಜ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸ್ಟೂಡೆಂಟು. ಮಾಮೂಲಿನಂತೆ ಆ ದಿನವೂ ಕಾಲೇಜಿಗೆ ಹೋಗಿದ್ದೆ. ಆದರೆ ಅಂದು ಕಾಲೇಜ್ ಕ್ಯಾಂಪಸ್ ಕಲರ್ ಫುಲ್ಲಾಗಿ ಕಂಗೊಳಿಸ್ತಿತ್ತು. ನಾನಾಗ ತುಂಬಾ ಸೈಲೆಂಟ್ ಹುಡ್ಗ(ಇದು ಹದಿನಾರಾಣೆ ಸತ್ಯ ಸ್ವಾಮಿ ಧರ್ಮಸ್ಥಳಕ್ಕೆ ಬೇಕಾದ್ರೂ ಬರ್ತೀನಿ,ನೀವು ನಂಬ್ಲೇಬೇಕು). ಆದ್ರೆ ನನ್ ಕ್ಲೋಸ್ ಫ್ರೆಂಡ್ ಒಬ್ಬ ಇದ್ದ ಆಂಬ್ರೋಸ್ ಅಂತ. ಅವನು ಸಖತ್ ತರ್ಲೆ. ಅವನೂ ಜೇಬಿನ ತುಂಬಾ ಬಣ್ಣದ ಪ್ಯಾಕೆಟ್ ತುಂಬಿಕೊಂಡು ಬಂದಿದ್ದ. ನಮಗೆಲ್ಲಾ ಬಳಿದು ಅವ್ನು ಬಳ್ಕೊಂಡು ಎಂಜಾಯ್ ಮಾಡಿದ. ಮಧ್ಯಾಹ್ನ ಹನ್ನೆರಡು ಘಂಟೆ ಹೊತ್ತಿಗೆ ನಾನು ಮನೆಗೆ ಹೋಗೋಣ ನಡೀ ಅಂತ ಆಂಬ್ರೋಸ್ ಜೊತೆ ಸಿಟಿ ಬಸ್ ಸ್ಟಾಂಡಿಗೆ ಹೊರಟೆ.

ದೇವರಾಜ ಅರಸು ರಸ್ತೆ ಯಲ್ಲಿ ನಾವಿಬ್ರು ನಡ್ಕೊಂಡು ಬರ್ತಾ ಇದ್ವಿ. ಆಗ ಇಬ್ರು ಫಾರಿನ್ನರ್ಸು (ಅಚ್ಚಕನ್ನಡದಲ್ಲಿ ಪರದೇಶಿಗಳು) ನಮ್ಮ ಬಣ್ಣದ ವೇಷ ನೋಡಿ ನಮ್ ಜೊತೆ ಫೋಟೋ ತೆಗೆಸ್ಕೊಂಡರು. ನಾವು ಅವ್ರ ಹತ್ರ ಸ್ವಲ್ಪ ಟಸ್ ಪುಸ್ ಅಂತ ಇಂಗ್ಲೀಷ್ ಮಾತಾಡಿ ಮುಂದಕ್ಕೆ ಹೊರಟ್ವಿ  ಅಲ್ಲಿಂದ ಸ್ವಲ್ಪ ಮುಂದೆ ಬಂದ್ರೆ ಪ್ರಜಾವಾಣಿ ಆಫೀಸು. ಅಡ್ಡರಸ್ತೆಯಲ್ಲಿ ನಡ್ಕೊಂಡು ಹೋಗಿ ಮಹಾರಾಣಿ ಜ್ಯೂನಿಯರ್ ಕಾಲೇಜ್ ಮುಂದೆ ಬಂದ್ವಿ. ನಾನು ಆಂಬ್ರೋಸ್ ಹತ್ರ ಏನೋ ಹೇಳ್ತಾ ನಡ್ಕೊಂಡು ಹೋಗ್ತಾ ಇದ್ದೆ. ಇವನು ಹಿಂದೇನೆ ನಿಂತುಬಿಟ್ಟಿದ್ದಾನೆ. ತಿರುಗಿನೋಡಿದ್ರೆ ಮಹಾರಾಣಿ ಕಾಲೇಜ್ ಗೇಟ್ ಮುಂದೆ ನಿಂತ್ಕೊಂಡು ಯಾವ್ದೋ ಹುಡುಗಿಗೆ hoy ಹೇಳೋ ರೀತೀಲಿ ಕೈ ತೋರಿಸ್ತಾ ಇದ್ದ. ನಾನು ಹಿಂದಕ್ಕೆ ಬಂದು ಅವನ್ನ ಎಳ್ಕೊಂಡು ‘ಬಾರೋ ಮಗಾ ಇವತ್ತು ಎಲ್ಲಾ ಕಡೆ ಸ್ಕ್ವಾಡ್ ಇರ್ತಾರೆ’ ಅಂತ ಹೇಳ್ದೆ. ಅಷ್ಟರಲ್ಲಿ ಮಫ್ತಿಯಲ್ಲಿದ್ದ ಪೋಲಿಸ್ ಒಬ್ಬ ಬಂದು ನಮ್ಮಿಬ್ಬರನ್ನೂ ಹಿಡ್ಕೊಂಡ. ನಂಗೆ ಕೈಕಾಲು shake ಆಗೋಕೆ ಶುರುವಾಯ್ತು. ‘ಸರ್ ನಂಗೇನೂ ಗೊತ್ತಿಲ್ಲ ಸರ್ ಇವ್ನು ಅದ್ಯಾರೋ ಹುಡ್ಗಿಗೆ ಕೈ ತೋರಿಸ್ತಿದ್ದ, ನಾನು ಬೇಡ ಬಾ ಅಂತ ಕರದೆ ಅಷ್ಟೇ, ಬೇಕಾದ್ರೆ ಚೆಕ್ ಮಾಡ್ಕೊಳ್ಳಿ ಸರ್ ನನ್ ಹತ್ರ ಬಣ್ಣ ಕೂಡಾ ಇಲ್ಲ ಸರ್’ ಅಂತ ಪೋಲಿಸ್ ಹತ್ರ ಅಂಗಲಾಚಿದೆ. ಆಂಬ್ರೋಸ್ ‘ಆ ಹುಡ್ಗಿ ನನ್ ತಂಗಿ ಸರ್’ ಅಂತ ಸುಳ್ಳು ಹೇಳ್ದ. ‘ಆಯ್ತು ನಡೀರಿ ಸ್ಟೇಷನ್ ಗೆ ಹೋಗೋಣ, ಅದ್ನೇ ಸಾಹೇಬ್ರ ಹತ್ರ ಹೇಳಿ ಬಿಟ್ಬಿಡ್ತಾರೆ’ ಅಂತ ಹೇಳಿದ ಪೋಲಿಸ್ ಆಟೋ ಒಂದಕ್ಕೆ ನಮ್ಮಿಬ್ಬರನ್ನು ಹತ್ತಿಸಿ ತಾನೂ ಕೂತ್ಕೊಂಡ.

ಮತ್ತಷ್ಟು ಓದು »