ಅವತ್ತು ಎದೆ ನೋವೂ ಬಂದಿರಲಿಲ್ಲ, ಶರಣರೂ ಬರಲಿಲ್ಲ..!
-ಕಾಲಂ ೯
ನೂರು ವರ್ಷ ದಾಟಿದ ಸಿದ್ಧಗಂಗಾ ಸ್ವಾಮೀಜಿ ಜೈಲು-ಆಸ್ಪತ್ರೆ ಹುಡುಕಿಕೊಂಡು ಯಡಿಯೂರಪ್ಪನವರನ್ನು ನೋಡಲು ಹೋಗಿದ್ದಾರಲ್ಲ? ಏನಿದರ ಹಿಂದಿನ ಹಕೀಕತ್ತು? ಧರ್ಮಾಚರಣೆಗೂ ಪುರುಸೊತ್ತು ಇಲ್ಲದಷ್ಟು ಸಾಮ್ರಾಜ್ಯ ಕಟ್ಟಿಕೊಂಡು ಸ್ವಾಮೀಜಿಯೊ ಅಥವಾ JSS ಕಂಪೆನಿಯ CEO ನೋ ಎಂಬಂತಿರುವ ಜಗದ್ಗುರುಗಳು ಧಾವಿಸಿ ಬಂದರಲ್ಲ? ಅಂತಹದೇನು ಆಗಿತ್ತಲ್ಲಿ? ರಂಭಾಪುರಿಗಳು ಸೇರಿದಂತೆ ಅನೇಕ ಸಣ್ಣ-ಪುಟ್ಟ ವೀರಶೈವ ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಸಂತೈಸಲು ಸಾಲುಗಟ್ಟಿದ್ದು ಮಾಧ್ಯಮಕ್ಕೆ ಆಶ್ಚರ್ಯವೆನಿಸಿರಲಿಲ್ಲ. ಆದರೆ ಈ ಹಿರಿತಲೆಗಳು ಹಾಗೇ ದೌಡಾಯಿಸಿದ್ದರ ಹಿಂದೇನು ನಡೆದಿದೆ? ಇದು ಮಾಧ್ಯಮದ ಒಳಗೂ-ಹೊರಗೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಮವಾರದ ತಮ್ಮ ಅಂಕಣದಲ್ಲಿ ಅಮೀನ್‌ಮಟ್ಟು ತುಂಬಾ ಆಪ್ತವಾಗಿಯೇ ಯಡಿಯೂರಪ್ಪನವರ ಪ್ಲಸ್ಸು-ಮೈನಸ್ಸುಗಳನ್ನು ಹೊರಹಾಕಿದ್ದನ್ನು ಓದಿದ ಅನೇಕರು ’ಈ ಮಠಾಧಿಪತಿಗಳನ್ನೇಕೆ ಬಿಟ್ಟಿರಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಸರ್ವ ವೀರಶೈವ ಮಠಗಳಿಗೂ ಒಬ್ಬನೇ ಆಡಳಿತಾಧಿಕಾರಿ ಎಂಬಂತಿರುವ ಸಚಿವ ಸೋಮಣ್ಣ ಬೆನ್ನುಹತ್ತಿ ಇವರನ್ನೆಲ್ಲ ಹೊರಡಿಸಿಕೊಂಡು ಬರುತ್ತಿದ್ದಾರೆಯೇ? ಸರ್ಕಾರದಿಂದ ದೇಣಿಗೆಯಾಗಿ ಪಡೆದ ೩-೫ ಕೋಟ ರೂಗಳ ಹಂಗು ಹಿಂಗೆಲ್ಲ ಮಾಡುವಂತೆ ಮಾಡಿತೆ?
ಒಟ್ಟು ರಾಜ್ಯದ ನಾಯಕತ್ವದ ಎಲ್ಲ ಲಕ್ಷಣಗಳು ಕರಗಿ ಶುದ್ಧ ವೀರಶೈವ ಮುಖಂಡನಂತೆ ಗೋಚರಿಸುತ್ತಿರುವ ಯಡಿಯೂರಪ್ಪನವರ ಜೈಲು-ಆಸ್ಪತ್ರೆಗಳ ಹರಾಕಿರಿ ನಗೆಪಾಟಲಾಗಿ ಹೋಗಿರುವಾಗ ಈ ’ಗೌರವಾನ್ವಿತ’ರೇಕೆ ಹರಸಲು ಹೊರಟರು? ಮತ್ತಷ್ಟು ಓದು 
ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!
– ಕೆ.ಎಸ್ ರಾಘವೇಂದ್ರ ನಾವಡ
“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“ ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..
ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..




