ವಿಷಯದ ವಿವರಗಳಿಗೆ ದಾಟಿರಿ

Archive for

26
ಆಕ್ಟೋ

ಪಾಂಚಾಲಿ ಪ್ರಲಾಪ

-ರೂಪ ರಾವ್ 
ಈ ವಿಜಯಕ್ಕೆ ನಗಬೇಕೆ? ಇಲ್ಲ ಅಳಬೇಕೆ? ನನ್ನೈವರು ಪತಿ ಉಳಿದರು ಎಂದು ಸಂತಸ ಪಡಲೇ ಇವರಬಿಟ್ಟು ಇನ್ನೆಲ್ಲರನ್ನೂ ಕಳೆದುಕೊಂಡ ದುರದೃಷ್ಟತನಕ್ಕೆ ದು:ಖಿಸಲೇ.
ಭಗವಂತ ಎಂಬುವನು ನಿಜಕ್ಕೂ ಇದ್ದಾನೆಯೇ, ಕಣ್ಣಿಗೇ ಕಾಣೋ ದೇವರಂತೆ  ಈ ಕೃಷ್ಣ   ಅಣ್ಣ  ಕೂಡ, ಇವನೊಬ್ಬನೇ  ಈ ಬಾಳಿಗುಳಿದ ಸೌಭಾಗ್ಯವೇ?ಯುದ್ದ ಮುಗಿದ ನಂತರ ಆ ರಕ್ತದ ಹೊಳೆ ನೋಡಿ ಮತ್ತೆ ರಾಣಿಯಂತೆ ಬದುಕಬೇಕೆಂಬ ಆಸೆಯಿರಲಿ ಬದುಕುವಾಸೆಯೇ ಮುರುಟಿ ಹೋಗಿದೆ…..
ಆವತ್ತು ಹಾಳು ಅಶ್ವಥ್ತಾಮ ಒಬ್ಬರಲ್ಲಿ ಒಬ್ಬರನ್ನೂ ಉಳಿಸಬಾರದಿತ್ತೆ , ನನ್ನ ಕರುಳ ಕುಡಿ ಎಂದು. ಹೆಣ್ಣಿನ ಸೌಭಾಗ್ಯ ಪತಿ, ಅವರೆಲ್ಲಾ ಬದುಕಿದ್ದಾರೆ ಎಂದು ಸಂತೈಸುತ್ತಿರುವ ಅತ್ತೆಯ ನೋಡಿ ನಿನ್ನ ಮಕ್ಕಳಲ್ಲಿ ಯಾರದರೂಬ್ಬರನ್ನು ಕಳೆದುಕೊಂಡಿದ್ದರೂ ನಿರ್ಲಿಪ್ತಳಾಗುತ್ತಿದ್ದೆಯಾ ಎಂದು ಕೇಳಿದ್ದಕ್ಕೆ ಕೋಪಿಸಿಕೊಂಡು ದುರು ದುರುಗುಟ್ಟಿ ನೋಡಿ ಎದ್ದು ಹೋಗಿದ್ದಳು. ಸತ್ತ ಅಷ್ಟೂ ಮಕ್ಕಳ ನೋಡಿ ನಾನು ಅಳುತ್ತಿದ್ದರೇ ಆ ಸ್ವಾರ್ಥಿ ಗಂಡಂದಿರು , ಇವರಲ್ಲಿ ಯಾರು ಯಾರ ಮಕ್ಕಳಿದ್ದಿರಬಹುದು? ಅಳಬೇಕೆ ಬೇಡವೇ ಎಂದು ಯೋಚಿಸುತ್ತಿದ್ದಾಗ, ಕಣ್ಣೀರು ಕುದಿ ಕುದಿದು ಮರಗಟ್ಟಿ ಹೋಗಿತ್ತು.
ಪಾಪಿಗಳು ಇವರು ಹೆಜ್ಜೆ ಇಟ್ಟಲ್ಲೆಲ್ಲಾ ಹೆಜ್ಜೆ ಇಟ್ಟೆ, ಒಬ್ಬ ಒಳ್ಳೆಯ ಗಂಡ ಸಿಗುವುದು ದುಸ್ತರವಾಗುತ್ತಿರುವ ಈಕಾಲದಲ್ಲಿ ಐವರು ಅತಿರಥ ಮಹಾರಥರೆಂದು ಹೆಸರು ಪಡೆದ ಈ  ಐವರೂ ನನ್ನನ್ನ ಮಡದಿ ಎಂದು ಪಾಣಿಗ್ರಹಿಸಿದಾಗ , ನಗಬೇಕೆ, ಅಳಬೇಕೇ ತಿಳಿಯದೇ ಕಕ್ಕಾಬಿಕ್ಕಿಯಾಗಿ ನಿಂತಿದ್ದೆ, , ಇದೇ  ಕುಂತಿ –ಯಾಕಾದರೂ ಐದು ಜನರನ್ನು ಹೆತ್ತಳೋ . (ಐದು ಅದು ನೆನ್ನೆಯವರೆಗೆ, ಇಂದು ಆ ಸತ್ಯ ಕೂಡ ಗೊತ್ತಾಯಿತಲ್ಲ ಆ ಕರ್ಣನೂ ಇವಳ ಮಗನೇ ಅಂತೆ.)  ಆ ಐದೂ ಜನರನ್ನ ಮದುವೆಯಾಗು ನಿನ್ನನ್ನು ಸುಖವಾಗಿ ನೋಡಿಕೊಳ್ಳುತ್ತಾರೆ ಎಂದಾಗ ಹಿರಿ ಹಿರಿ ಹಿಗ್ಗಿದ್ದೆ, ಅಪ್ಪ ಕಣ್ಣನು ತುಂಬಿಕೊಂಡು ನಿನಗೆ ಒಪ್ಪಿಗೆಯೇ ಎಂದಾಗ ಸಮ್ಮತಿಸಿದ್ದು ಕೂಡ ಆ ಕುಂತಿ ಹೇಳಿದ ಮಾತಿಗಾಗಿ  ಮದುವೆಯಾದ ಕೆಲವು ವರ್ಷದಲ್ಲೇ ಇವರೆಲ್ಲರ ಗೋಳುಗಳು ತಿಳಿದದ್ದು, ಇವರ ದಾಯಾದಿಗಳು ಇವರ ಮೇಲೆ ದ್ವೇಷ ತುಂಬಿಕೊಂಡು ಇವರ ಅವನತಿಗೆ ಹೊಂಚು ಹಾಕುತ್ತಿದ್ದಾರೆಂದು. ಆಗಲೇ ಮತ್ತೊಂದು ಸತ್ಯ ಎದುರಾಗಿತ್ತು . ಅಪ್ಪ ದ್ರೋಣನ ಮೇಲಿನ ಕೋಪಕ್ಕಾಗಿ ತನ್ನನ್ನು ಅರ್ಜುನನಿಗೆ ಕೊಟ್ಟು ಮದುವೆ ಮಾಡುವುದಾಗಿ ಶಪಥ ತೊಟ್ಟಿದ್ದನಂತೆ. ಒಟ್ಟಿನಲ್ಲಿ ಇವರೆಲ್ಲರ ಆಸೆಗೆ, ಶಪಥಕ್ಕೆ ನಾನು ಬಲಿಯಾಗಿದ್ದೆ. ಮತ್ತಷ್ಟು ಓದು »
26
ಆಕ್ಟೋ

ಯೋಚಿಸಿ ಮಿಸ್ಡ್ ಕಾಲ್ ಕೊಡುವ ಮುನ್ನ

-ಇಂದುಶ್ರೀ ಬೆಂಗಳೂರು

 “ಮನೆ ಹತ್ರ ಬಂದಾಗ ಒಂದು ಮಿಸ್ಡ್ ಕಾಲ್ ಕೊಡು. ನಾ ಬಂದು ನಿನ್ನ ಭೇಟಿಯಾಗ್ತೀನಿ”

“ಬೆಳಿಗ್ಗೆ ಬೇಗ ಹೊರಡಬೇಕು. ನಾನು ಬೇಗ ಏಳೊಲ್ಲ. ನಿಂಗೆ ಎಚ್ಚರ ಆದ್ರೆ ೫ ಗಂಟೆಗೆ ಮಿಸ್ಡ್ ಕಾಲ್ ಕೊಡ್ತೀಯಾ?”
“ನಾನು ವಿಜಯನಗರಕ್ಕೆ ಬಂದಾಗ ಮಿಸ್ಡ್ ಕಾಲ್ ಕೊಡ್ತೀನಿ.ಆಗ ನೀನು ಮನೆಯಿಂದ ಹೊರಡು.”
ಹೌದಲ್ಲ… ಇದು ನಾವು ಸಾಮಾನ್ಯವಾಗಿ ಹೇಳುವ ಮಾತು. ಸುಮ್ನೆ ಸಿಗ್ನಲ್ ಕೋಡೋದಕ್ಕೆಲ್ಲಾ ಯಾಕೆ ದುಡ್ಡು ದಂಡ ಮಾಡೋದು ಅಂತ. ೧ ಸೆಕೆಂಡಿಗೆ ೧ ಪೈಸೆ ಚಾರ್ಜ್ ಮಾಡಿದ್ರೂ ಅದನ್ನು ಕಳೆದುಕೊಳ್ಳೋಕೂ ನಾವು ತಯಾರಿಲ್ಲ. ಆದ್ರೆ ಒಂದು ಮಿಸ್ಡ್ ಕಾಲ್ ನಮ್ಮ ಮೊಬೈಲ್ ಇಂದ ನಮ್ಮ ಸ್ನೇಹಿತರ ಮೊಬೈಲ್ ಗೆ ಹೋಗೋದಕ್ಕೆ ಏನೆಲ್ಲಾ ಕೆಲಸಗಳು ನಡೆಯುತ್ತವೆ ಗೊತ್ತಾ?

ಮೊಬೈಲ್ ಉಪಕರಣ ರೇಡಿಯೋ ತರಂಗಗಳ ಮೂಲಕ ನಮ್ಮ ಮಾತನ್ನು ರವಾನಿಸುತ್ತದೆ ಎಂಬುದು ಬಹುತೇಕರಿಗೆ ಗೊತ್ತು. ಆದರೆ ನಮ್ಮ ಮೊಬೈಲ್ ಇಂದ ಕರೆ ಮಾಡುತ್ತಿರುವವರ ಮೊಬೈಲ್ ವರೆಗೆ ಸಂದೇಶಗಳು ಕೇವಲ ರೇಡಿಯೋ ತರಂಗಗಳ ಮೂಲಕ ಗಾಳಿಯಲ್ಲೇ ಹೋಗುತ್ತಾ? ಇದಕೆ ಉತ್ತರ “ಇಲ್ಲ”. ಹಾಗಿದ್ರೆ ಮೊಬೈಲ್ ಇಂದ ಮೊಬೈಲ್ ಗೆ ಸಂಪರ್ಕ ಹೇಗೆ? ನಮ್ಮಲ್ಲನೇಕರು ಬಳಸುತ್ತಿರುವ ಜಿ.ಎಸ್.ಎಂ(Global System for Mobile communication) ತಂತ್ರಜ್ಞಾನದಲ್ಲಿ ಮೊಬೈಲ್ ದೂರ‍ಸಂಪರ್ಕ ಸೇವೆ ಲಭಿಸುವುದು ಹೀಗೆ…

ಮತ್ತಷ್ಟು ಓದು »