ವಿಷಯದ ವಿವರಗಳಿಗೆ ದಾಟಿರಿ

ಅಕ್ಟೋಬರ್ 29, 2011

3

ಇದು ”ನಮ್ಮ” ಮೆಟ್ರೋನಾ ????

‍ನಿಲುಮೆ ಮೂಲಕ

– ಮಹೇಶ.ಎಮ್.ಆರ್

ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಬೆಂಗಳೂರು ಮೆಟ್ರೊ ಸೇವೆ ಶುರು ಆಗಿದೆ. ಮೆಟ್ರೊದಲ್ಲಿನ ಮೊದಲ ಓಡಾಟ ಹೊಸ ಅನುಭವ ನೀಡಿತು. ನಮ್ಮ ಮೆಟ್ರೊ ಸೇವೆಯನ್ನು ಅನುಭವಿಸಿದ ಮೇಲೆ ಇದೇ ಸಮಯದಲ್ಲಿ ಗಮನ ಸೆಳೆದಿದ್ದು ಎಂದರೆ ಅಲ್ಲಿ ಪಾಲಿಸಲಾದ ಬಾಷಾ ನೀತಿ. ಸಂವಿಧಾನದ ಮೂಲಕ ನಾವು ತಿಳಿದುಕೊಂಡಿದ್ದು ಏನು ಅಂದ್ರೆ, ಭಾರತದಲ್ಲಿ ಎಲ್ಲರೂ ಸಮಾನರು ಎಲ್ಲ ಬಾಷೇಗಳೂ ಸಮಾನ ಎಂದು. ಆದರೆ ಕರ್ನಾಟಕದಲ್ಲಿ ಅನುಷ್ಟಾನವಾಗುವ ಯೋಜನೆಗಳಲ್ಲಿ ಈ ನಮ್ಮ ತಿಳುವಳಿಕೆಯನ್ನು ಹುಸಿ ಮಾಡುವ ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ನಮ್ಮ ಮೆಟ್ರೊದಲ್ಲೂ ಇದನ್ನು ಕಂಡಿದ್ದು ಸುಳ್ಳಲ್ಲ. ಎಂದಿನಂತೆ ಕೇಂದ್ರ ಸರಕಾರ ಕರ್ನಾಟಕದ ಯೋಜನೆಗಳಿಗೆ ನಮ್ಮದೇ ತೆರಿಗೆ ಹಣವನ್ನು ಆರ್ಥಿಕ ಸಹಕಾರದ ಮೂಲಕ ನೀಡುವುದರ ಜೊತೆಗೆ ತನ್ನ ಹುಳುಕು ಬಾಷಾ ನೀತಿಯನ್ನು ನಮ್ಮ ಮೆಟ್ರೊ ಮೂಲಕ ಪ್ರದರ್ಶಿಸಿದೆ.

ಬೆಂಗಳೂರಿಗರಿಗೆ ಮೀಸಲಾಗಿರುವ ಈ ಸೇವೆಯಲ್ಲಿ ವಿನಾಕಾರಣ ಎಲ್ಲೆಡೆ ಹಿಂದಿಯನ್ನು ಬಳಸಲಾಗಿದೆ. ಬೆಂಗಳೂರಿನಲ್ಲಿ ೧% ಕ್ಕಿಂತಲೂ ಕಡಿಮೆಯಿರುವ ಹಿಂದಿ ಬಲ್ಲವರಿಗೆ ತೊಂದರೆ ಆಗಬಾರದು ಎಂಬ ನಿಯಮ ಇಲ್ಲಿ ಪಾಲಿಸಲಾಗಿದೆ. ಬೆಂಗಳೂರಿನಲ್ಲಿರುವ ಹಿಂದಿ ಬಾಷಿಕರ ಸಂಖ್ಯೆಯಷ್ಟೆ ಹೆಚ್ಚು ಕಡಿಮೆ ದಿಲ್ಲಿಯಲ್ಲೂ ಕನ್ನಡ ಬಾಷಿಕರ ಸಂಖ್ಯೆಯಿದೆ. ಈ ಸಂಖ್ಯಾ ಆಧಾರದ ಮೇಲೆ ನೋಡುವುದಾದರೆ, ಬೆಂಗಳೂರಿನ ನಮ್ಮ ಮೆಟ್ರೊದಲ್ಲಿ ಹಿಂದಿಯಲ್ಲಿ ಸೇವೆ ಕೊಡುವುದಾದರೆ ದಿಲ್ಲಿಯಲ್ಲಿನ ಮೆಟ್ರೊದಲ್ಲೂ ಕನ್ನಡದಲ್ಲಿ ಸೇವೆ ಕೊಡಬೇಕು. ಆದರೆ ಭಾರತದ ಬಾಷಾ ನೀತಿ ಪ್ರಕಾರ ಇದು ಸಾದ್ಯವಿಲ್ಲ. ದಿಲ್ಲಿ ಮೆಟ್ರೊದಲ್ಲಿ ಸ್ಥಳೀಯ ಬಾಷೆ ಮತ್ತು ಆಂಗ್ಲ ಬಾಷೆಗೆ ಮಾತ್ರ ಸ್ಥಾನ ಕಲ್ಪಿಸಿದರೆ ಬೆಂಗಳೂರಿನಲ್ಲಿ ಸ್ಥಳೀಯ ಮತ್ತು ಆಂಗ್ಲ ಬಾಷೆ ಜೊತೆಗೆ ಇನ್ನೊಂದು ಬಾಷೆಯನ್ನು ಸ್ಥಳೀಯರ ಮೇಲೆ ಹೇರಲಾಗುತ್ತಿದೆ. ದಿಲ್ಲಿಗೊಂದು ನಿಯಮ ಬೆಂಗಳೂರಿಗೊಂದು ನಿಯಮ ಯಾಕೆ.? ಇಂಥ ಹುಳುಕಿನ ಬಾಷಾ ನೀತಿಯಿಂದ ಒಕ್ಕೂಟ ವ್ಯವಸ್ಥೆಗೆ ಬೆಲೆಯಿಲ್ಲದಂತಾಗಿದೆ. ಎಲ್ಲ ಬಾಶೆಗಳೂ ಸಮಾನ ಎಂಬ ಸಂದೇಶ ಸಾರಬೇಕಾದ ಸರಕಾರಗಳೇ ಇಂದು ತಮ್ಮ ಯೋಜನೆಗಳ ಮೂಲಕ ಸ್ಥಳೀಯ ಬಾಷೆಗಳಿಗಿಂತ ಹಿಂದಿಗೆ ಕೊಂಬು ಜಾಸ್ತಿ ಎಂಬ ಸಂದೇಶ ರವಾನಿಸುತ್ತಿವೆ.

ಕನ್ನಡಿಗರಾಗದ ವಲಸಿಗರು:

ಮೆಟ್ರೊದಲ್ಲಿನ ಈ ಬಾಶಾ ನೀತಿ ಒಂದು ಕಡೆ ೮ನೇ ಪರಿಚ್ಚೇಧದಲ್ಲಿ ಗುರುತಿಸಲಾದ ಎಲ್ಲ ೨೨ ಭಾಷೆಗಳು ಸಮಾನ ಎಂಬ ಸಂವಿದಾನದ ಆಶಯಕ್ಕೆ ದಕ್ಕೆ ತಂದರೆ, ಇನ್ನೊಂದು ಕಡೆ ವಲಸಿಗರು ಕನ್ನಡ ಕಲಿತು ಸ್ಥಳೀಯ ಮುಖ್ಯವಾಹಿನಿಯಲ್ಲಿ ಅವರು ಬೆರೆಯುವ ಅವಕಾಶವನ್ನು ತಪ್ಪಿಸುತ್ತದೆ. ವಲಸಿಗರು ಅಲ್ಲಿನ ಭಾಷೆಯನ್ನು ಕಲಿತು ಸ್ಥಳೀಯ ಮುಖ್ಯವಾಹಿನಿಗೆ ಬೆರೆಯಬೇಕು. ಜಗತ್ತಿನ ನಿಯಮನೂ ಇದೇ ಹೇಳುತ್ತದೆ. ವಿವಿದತೆಯಲ್ಲಿ ಏಕತೆಯೆಂಬ ಮಂತ್ರ ಪಠಿಸುವ ಒಕ್ಕೂಟ ವ್ಯವಸ್ಥೆಯಿರುವ ಭಾರತವೂ ಇದರಿಂದ ಹೊರತಾಗಿಲ್ಲ. ವಿಪರ್ಯಾಸವೆಂದರೆ ಜರ್ಮನಿ, ಫ್ರಾನ್ಸಿಗೆ ಹೋಗುವುದಕ್ಕಿಂತ ಮುಂಚೆಯೇ ಅಲ್ಲಿನ ಭಾಷೆ ಕಲಿಯುವ ಅನೇಕ ಹೆಮ್ಮೆಯ ಬಾರತೀಯರು ಕರ್ನಾಟಕಕ್ಕೆ ವಲಸೆ ಬಂದು ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡರೂ ಕನ್ನಡವನ್ನು ಕಲಿಯುವ ಗೋಜಿಗೆ ಹೋಗುವುದಿಲ್ಲ. ವಲಸಿಗರಿಗೆನೇ ವ್ಯವಸ್ಥೆಯನ್ನು ಕಟ್ಟುವಂಥ ಮೆಟ್ರೊದಂಥ ಯೋಜನೆಗಳಲ್ಲಿನ ಭಾಷಾನೀತಿಯೇ ಇಂಥ ಒಂದು ಕೆಟ್ಟ ವಾತಾವರಣಕ್ಕೆ ನಾಂದಿ ಹಾಡುತ್ತಿವೆ. ವಲಸಿಗರನ್ನು ಕನ್ನಡಿಗರಾಗದ ಹಾಗೆ ತಡೆಯುತ್ತಿವೆ.

ನಮ್ಮ ಮೆಟ್ರೊ ಭಾಷಾನೀತಿ:

ನಮ್ಮ ಮೆಟ್ರೊ ಸೇವೆ ಒದಗಿಸುತ್ತಿರುವುದು ಬೆಂಗಳೂರಿಗರಿಗೆ. ಹೀಗಾಗಿ ಬೆಂಗಳೂರಿನ ನುಡಿಯಲ್ಲೇ ಎಲ್ಲ ಮಾಹಿತಿಗಳು ಸಿಗಬೇಕು. ಇನ್ನು ಬೆಂಗಳೂರಿಗರಿಗೆ ಬರುವ ವಲಸಿಗರಿಗೆ ತಾತ್ಕಾಲಿಕ ಅನುಕೂಲವಾಗುವ ಹಾಗೆ ಆಂಗ್ಲ ಭಾಷೆ ಇರಲಿ. ಒಕ್ಕೂಟ ವ್ಯವಸ್ಥೆಯಿರುವ ಯುರೋಪಿನಲ್ಲಿನ ಭಾಷಾ ನೀತಿ ಇದಕ್ಕೆ ಒಳ್ಳೆಯ ಉದಾಹರಣೆ. ಆದ್ದರಿಂದ ಮೆಟ್ರೊ ಆಡಳಿತ ವರ್ಗ ಈ ನಿಟ್ಟಿನಲ್ಲಿ ಗಮನ ಹರಿಸಿ ತನ್ನ ಸೇವೆಯಲ್ಲಿ ಹಿಂದಿ ಬಳಕೆಯನ್ನು ನಿಲ್ಲಿಸಿ, ಕಡಿಮೆ ಸಂಖ್ಯೆಯ ವಲಸಿಗರಿಗಾಗಿ ವ್ಯವಸ್ಥೆ ಕಟ್ಟುವ ಕೆಟ್ಟ ಸಂಪ್ರದಾಯವನ್ನು ಬಿಟ್ಟು ಬಹುಸಂಖ್ಯಾತ ಸ್ಥಳೀಯರಿಗೆ ಅನುಕೂಲ ಮಾಡಿಕೊಡುವ ವ್ಯವಸ್ಥೆಯನ್ನು ಕಟ್ಟಿ, ಆ ಮೂಲಕ ಕರ್ನಾಟಕದಲ್ಲಿರುವ ವಲಸಿಗರು ಮುಂದಿನ ದಿನಗಳಲ್ಲಿ ಕನ್ನಡಿಗರಾಗಿ ಪರಿವರ್ತನೆಯಾಗಲು ಅವಕಾಶ ಕಲ್ಪಿಸಿಕೊಡಬೇಕಾಗಿದೆ.

* * * * * * *

ಚಿತ್ರಕೃಪೆ : ಅಂತರ್ಜಾಲ

3 ಟಿಪ್ಪಣಿಗಳು Post a comment
  1. Sudarshan G Hegde's avatar
    ಆಕ್ಟೋ 31 2011

    Sumne bhashe bhashe anta yaake hullukannu tumbutteeri….

    ಉತ್ತರ
    • ಅರುಣ್ ಕುಮಾರ್'s avatar
      ಅರುಣ್ ಕುಮಾರ್
      ನವೆಂ 1 2011

      @ Sudarshan
      ನಿಮ್ಮಂಥ ಉದಾರಿಗಳು ಇರೋದ್ರಿಂದ್ಲೇ ಕನ್ನಡ ಈ ಮಟ್ಟಕ್ಕೆ ಹಾಳಗಿರೋದು. ಕರ್ನಾಟಕದಲ್ಲಿ ಬಂದು ಕನ್ನಡ ಕಲಿದೆ ಹಿಂದಿ ನಮ್ಮ ರಾಷ್ಟ್ರ ಬಾಷೆ ಅದೊಂದೇ ಸಾಕು ಮತ್ತೆ ನಮ್ಮ ದೇಶ ಹಿಂದುಸ್ತಾನ್ ಇಲ್ಲಿ ಹಿಂದಿ ಗೊತ್ತಿದ್ರೆ ಸಾಕು ಅಂತ ಹೇಳಿಕೊಂಡು ಆರಾಮಗಿರೋ ಉತ್ತರ ಭಾರತೀಯರು ಅದೇ ನಾವ್ ಅಲ್ಲಿ ಹೋದ್ರೆ ಮದ್ರಾಸಿ ನನ್ ಮಕ್ಕಳು ಅಂತ ಕರೆದಾಗ ನಿಮ್ಮಂತವರಿಗೆ ತುಂಬಾ ಖುಷಿ ಆಗಬಹುದು.

      ಉತ್ತರ
  2. ರವಿ ಕುಮಾರ್ ಜಿ ಬಿ's avatar
    ರವಿ ಕುಮಾರ್ ಜಿ ಬಿ
    ನವೆಂ 3 2011

    ಅರುಣ್,
    ಸ್ವಲ್ಪ ನಮ್ಮನು ನಾವೇ ನೋಡಿ ಕೊಳ್ಳೋಣ , ಬೆಂಗಳೂರಲ್ಲಿ ನೋಡಿ ಕೇಬಲ್ ನಲ್ಲಿ ತಮಿಳು ,ತೆಲುಗು ,ಮಲಯಾಳ ಇತ್ಯಾದಿ ಎಲ್ಲಾ ಚಾನೆಲ್ಲುಗಳು ಬರುತ್ತವೆ. ಅದೇ ಚೆನ್ನೈ ಗಾಗಲಿ ,ಹೈದರಾಬಾದ್ ಗಾಗಲಿ ,ಕೊಚ್ಹಿನ್ ಗಾಗಲಿ ಹೋಗಿ ನೋಡಿ!! ಕನ್ನಡ ನಾಪತ್ತೆ!!! ಇನ್ನು ದಿಸ್ಕಾವೆರಿ ಅಥವಾ ಅನಿಮಲ್ ಪ್ಲಾನೆಟ್ ಚಾನೆಲ್ ಅಥವಾ ಹಿಸ್ಟರಿ ಚಾನೆಲ್ಲ್ಗಳು ಗಳು ಕನ್ನಡ ಒಂದು ಬಿಟ್ಟು ಮತ್ತೆಲ್ಲ ಭಾಷೆಗಳಲ್ಲೂ ಇವೆ!!! ಇದು ಏನನ್ನು ತೋರಿಸತ್ತೆ? ನಮ್ಮ ಉದಾಸೀನತೆಯೇ ಅಥವಾ ಉದಾರತೆಯೇ? ನಷ್ಟ ಯಾರಿಗೆ??

    ಉತ್ತರ

Leave a reply to ರವಿ ಕುಮಾರ್ ಜಿ ಬಿ ಪ್ರತ್ಯುತ್ತರವನ್ನು ರದ್ದುಮಾಡಿ

Note: HTML is allowed. Your email address will never be published.

Subscribe to comments