ವಿಷಯದ ವಿವರಗಳಿಗೆ ದಾಟಿರಿ

Archive for

4
ಆಕ್ಟೋ

ನಿಮ್ಮ ನಿಲುಮೆಗೆ ಒಂದು ವರ್ಷ- ಹರಸ ಬನ್ನಿ, ಹಾರೈಸಬನ್ನಿ

ವರ್ಷವಾಗಿದ್ದು ತಿಳಿಯಲೇ ಇಲ್ಲ ನೋಡಿ.ಹೌದು ನಮ್ಮ-ನಿಮ್ಮ ’ನಿಲುಮೆ’ಗೆ ವರ್ಷದ ಸಂಭ್ರಮ :). ’ಕನಸು-ಕನವರಿಕೆ’ಯಾಗಿ ಶುರುವಾದ ನಿಲುಮೆ ’ಎಲ್ಲ ತತ್ವದ ಎಲ್ಲೇ ಮೀರಿ’ ನಿಲ್ಲಲ್ಲಿ ಅನ್ನುವ ನಮ್ಮ ಆಶಯಕ್ಕೆ ವರುಷವಾಗಿದೆ. ಈ ಸಂಭ್ರಮಕ್ಕೆ ನಮ್ಮ ಎಲ್ಲ ಬರಹಗಾರರು, ಓದುಗರು ಕಾರಣಕರ್ತರು. ಅವರಿಲ್ಲದಯೇ ನಾವಾದರೂ ಏನು ಮಾಡಲಿಕ್ಕಾಗುತಿತ್ತು ಅಲ್ಲವೇ?

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದ ಎಲ್ಲೆ ಮೀರಿ
ನಿರ್ದಿಗಂತವಾಗಿ ಏರಿ
ಓ ನನ್ನ ಚೇತನ ಆಗು ನೀ ಅನಿಕೇತನ

ರಸ ಋಷಿ ಕುವೆಂಪು ಅವರ ಈ ನುಡಿಗಳೆ ನಮಗೆ ಸ್ಪೂರ್ತಿ. ಯಾವುದೇ ಜಾತಿ, ಮತ, ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ, ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ, ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು. ಅಷ್ಟಕ್ಕೂ ’ಸತ್ಯ’ ಅನ್ನುವುದು ಎಡ-ಬಲ ಪಂಥದ ಆಸ್ತಿಯೇನು ಅಲ್ಲವಲ್ಲ. ಅದು ಈ ಇಬ್ಬರ ನಡುವೆಯು ಸಿಲುಕದೆ ತನ್ನ ಪಾಡಿಗದು ಯಾವುದೋ ಮೂಲೆಯಲ್ಲಿ ನಿರ್ಲಿಪ್ತವಾಗಿರುತ್ತದೆ. ಅದನ್ನ ಹುಡುಕುವ ಮುಗ್ಧ ಆಸೆ ನಮ್ಮದು.ನೊಂದ ಜೀವಗಳಿಗೆ ದನಿಯಾಗುವ ಬಯಕೆ ನಮ್ಮದು. ಮತ್ತಷ್ಟು ಓದು »

3
ಆಕ್ಟೋ

ನಿಲುಮೆಯ ಬಗ್ಗೆ ನಿಮ್ಮ ನಿಲುವೇನು?

1
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 4 – ಐದು ವರ್ಷಗಳಲ್ಲಿ ಆಸ್ತಿ ಅಡವು

1931ರ ಆರ್ಥಿಕ ಮುಗ್ಗಟ್ಟಿನ ದಿನಗಳ ನೆನಪಿರುವವರು ಬಹಳ ಮಂದಿ. ನಮ್ಮ ನಾಟಕ ಮಂಡಳಿಯಿಂದಾಗಿ ನನಗೂ ಆ ದಿನಗಳ ನೆನಪು ಉಳಿದಿದೆ; ಅಂದಿನ ಮತ್ತು ಇಂದಿನ ಪರಿಸ್ಥಿತಿಗಳ ವ್ಯತ್ಯಾಸವನ್ನು ಜ್ಞಾಪಿಸಿಕೊಳ್ಳುವ ಹಾಗಾಗಿದೆ.

ಆಗ ಊರಿಂದೂರಿಗೆ ಸಾಮಾನು ಸಾಗಿಸುವ ಲಾರಿಗಳ ಸೌಕರ್ಯವಿರಲಿಲ್ಲ. ಸಾಗಾಟಕ್ಕೆ ಸಿಗುತ್ತಿದ್ದುದು ಎತ್ತಿನ ಗಾಡಿಗಳು ಮಾತ್ರ.

ದಶಾವತಾರದ ಮೇಳಗಳಲ್ಲಿ ಇರುತ್ತಿದ್ದ ಸಾಮಾನುಗಳನ್ನು ಸಾಗಿಸಲು ಬಹಳ ಕಷ್ಟವಾಗುತ್ತಿರಲಿಲ್ಲ. ಪರದೆ ಇತ್ಯಾದಿಗಳ ತೊಡಕು ಇಲ್ಲದ ಕಾರಣ, ಕೆಲವು ಪೆಟ್ಟಿಗೆಗಳನ್ನು ತಲೆ ಹೊರೆಯಲ್ಲಿ ಸಾಗಿಸಲು ಸಾಧ್ಯವಾಗುತ್ತಿತ್ತು. ಸಂಚಾರಕ್ಕೆ ರಸ್ತೆಯ ಅನುಕೂಲವಿದ್ದರೆ ಒಂದು ಗಾಡಿಯನ್ನು ಬಾಡಿಗೆಗೆ ಹಿಡಿದರೆ ಸಾಕಾಗುತ್ತಿತ್ತು. ಊರು ಸೇರಿದ ತರುವಾಯ ಡೇರೆಯ ವ್ಯವಸ್ಥೆಯೂ ಬೇಕಾಗುತ್ತಿರಲಿಲ್ಲ. ಹೆಚ್ಚಾಗಿ ಬಯಲಾಟಗಳೇ ಅಂದು ನಡೆಯುತ್ತಿದ್ದುವು.

ಆದರೆ ಯಕ್ಷಗಾನ ನಾಟಕ ಕಂಪೆನಿಯ ಹೊಣೆ ಹೊತ್ತ ನಮ್ಮ ಪರಿಸ್ಥಿತಿ ಅದಕ್ಕೆ ತೀರಾ ವ್ಯತಿರಿಕ್ತವಾಗಿತ್ತು.

ದೃಶ್ಯಾವಳಿಗಳಿಗಾಗಿ ಪರದೆಗಳು, ‘ಪಕ್ಕದ ರೆಕ್ಕೆ’ಗಳು, ಆಸನ- ಪೀಠೋಪಕರಣಗಳು, ಕಿರೀಟ-ಆಯುಧ, ಅಲಂಕಾರಗಳು ಇವೆಲ್ಲವುಗಳ ಜೊತೆಗೆ ಸಾಕಷ್ಟು ಫರ್ನಿಚರ್‌ಗಳನ್ನು ಸಾಗಿಸಲು ಎಂಟು ಹತ್ತು ಗಾಡಿಗಳನ್ನು ಅನುವು ಮಾಡಿಕೊಳ್ಳಬೇಕಾಗುತ್ತಿತ್ತು. ಎಷ್ಟೇ ಜನಪ್ರಿಯತೆ ಗಳಿಸಿದರೂ, ಕೆಲವು ದಿನಗಳ ತರುವಾಯ ಊರು ಬದಲಾಯಿಸಲೇಬೇಕಾಗುವುದಷ್ಟೇ.

ಊರಿಂದೂರಿಗೆ
ಬಟ್ಟೆಯ ಡೇರೆಗೆ ಬೇಕಾದ ಅನುಕೂಲ ನಮಗೆ ಇರಲಿಲ್ಲ. ಆದುದರಿಂದ ಪ್ರತಿಯೊಂದು ಊರಿನಲ್ಲೂ ”ಥಿಯೇಟರ್” ಕಟ್ಟಿಸಬೇಕಾಗುತ್ತಿತ್ತು. ಸರಾಸರಿ ಒಂದು ಸಾವಿರ ರೂ. ಅದಕ್ಕಾಗಿ ವೆಚ್ಚವಾಗುತ್ತಿತ್ತು.
ಮತ್ತಷ್ಟು ಓದು »