ಕರ್ನಾಟಕದಲ್ಲಿ ಬೇಲಿಯೇ ಎದ್ದು ಹೊಲ ಮೈಯುತ್ತಿದೆ ನೋಡ್ರಣ್ಣಾ.!
ಮಹೇಶ್ ಎಂ. ಆರ್.
ನಿಯಮಗಳು ಮಾಡುವುದೇ ಮುರಿಯೋದಕ್ಕೆ ಎಂಬ ಮಾತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಒಪ್ಪುತ್ತದೆ. ಅನೇಕ ಬಾರಿ ಕರ್ನಾಟಕ ಚಲನಚಿತ್ರ ಮಂಡಳಿ ವಿದಿಸಿದ ನಿಯಮಗಳನ್ನು ಪರಬಾಶೆ ಚಿತ್ರಗಳ ವಿತರಕರು ಗಾಳಿಗೆ ತೂರಿರುವುದನ್ನು ನಾವು ಕಾಣಬಹುದು. ಈ ಹಿಂದೆ ಹಿಂದಿಯ ರಾವಣ, ಕೈಟ್ಸ್, ತೆಲುಗಿನ ದೂಕುಡು, ಊಸರವಳ್ಳಿ ಚಿತ್ರ ಬಿಡುಗಡೆ ಸಮಯದಲ್ಲಿ ಈ ನಿಯಮಗಳನ್ನು ಪಾಲಿಸಲಾಗಿಲ್ಲ. ಅದೇ ಪರಿಪಾಠ ಈ ಸಲದ ದೀಪಾವಳಿ ಸಮಯದಲ್ಲೂ ಮುಂದುವರೆದಿದೆ. ಆದರೆ ಈ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೇ ಮುಂದೆ ನಿಂತು, ತಾನು ಸ್ವತ: ಮಾಡಿದ ನಿಯಮಗಳನ್ನು ಹಿಂದಿಯ ರಾ ವನ್, ತಮಿಳಿನ ವೆಲಾಯುದಂ, ೭ ಅಮ್ ಅರಿವು ಚಿತ್ರಗಳ ಮೂಲಕ ಕಸದ ಬುಟ್ಟಿಗೆ ಎಸೆದಿದೆ. ಮಂಡಳಿಯ ಸಲಹಾ ಸಮಿತಿ ಸದಸ್ಯರು ಈ ಮೂರು ಚಿತ್ರಗಳನ್ನು ಕರ್ನಾಟಕದಲ್ಲಿ ನಿಯಮ ಮೀರಿ ಬಿಡುಗಡೆಗೊಳಿಸಲು ಅನುಮತಿ ನೀಡಿದ್ದಾರೆ ಎಂಬ ಸುದ್ದಿ ಇತ್ತೀಚಿಗೆ ಡೆಕ್ಕನ್ ಹೆರಾಲ್ಡಿನಲ್ಲಿ ಪ್ರಕಟವಾಗಿತ್ತು. (The members of the advisory board of the Karnataka Film Chamber of Commerce (KFCC) have consented to the release of Ra. One, Velayudham, and 7 Aum Arivu during Deepavali this week. And because of this no Kannada films are releasing this week.) ಇದು ಆಶ್ಚರ್ಯವಾದರೂ ಸತ್ಯ. ಕನ್ನಡ ಚಿತ್ರರಂಗದ ಏಳಿಗೆಗೆ ಸಲಹೆಗಳನ್ನು ನೀಡಬೇಕಾದ ಮಂಡಳಿಯ ಸಲಹಾ ಸಮಿತಿ ಸದಸ್ಯರು ಪರಬಾಶೆ ಚಿತ್ರಗಳನ್ನು ನಿಯಮ ಮೀರಿ ಬಿಡುಗಡೆ ಮಾಡುವಂತೆ ಸಲಹೆ ಮಾಡಿದ್ದಾರೆ.! ಕನ್ನಡ ಚಿತ್ರಗಳ ಮಾರುಕಟ್ಟೆ ಬೆಳೆಸುವ ಬಗ್ಗೆ ಸಲಹೆ ನೀಡಬೇಕಾದವರಲ್ಲಿ ಕೆಲವರು ಪರಬಾಶೆ ಚಿತ್ರ ವಿತರಣೆ ಹಕ್ಕನ್ನು ಪಡೆದುಕೊಂಡು, ಕನ್ನಡ ಚಿತ್ರಗಳು ಬಿಡುಗಡೆ ಆಗದ ಹಾಗೆ, ಈಗಾಗಲೇ ಬಿಡುಗಡೆ ಆದ ಚಿತ್ರಗಳಿಗೆ ಚಿತ್ರಮಂದಿರ ಸಿಗದ ಹಾಗೆ ಪರಿಸ್ಥಿತಿ ನಿರ್ಮಿಸಿ ಕನ್ನಡ ಚಿತ್ರರಂಗದ ಬಗೆಗಿನ ತಮ್ಮ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಇದು ಚಲನಚಿತ್ರ ಮಂಡಳಿಯ ಕರ್ಮಕಾಂಡ.
ಸಂದರ್ಭ ಸಹಿತ ಕುವೆಂಪು ಕವನಗಳ ಸೊಗಸು
ಬಿ ಅರ್ ಸತ್ಯನಾರಾಯಣ
ನಾನು ಚಿಕ್ಕವನಿದ್ದಾಗ ರೇಡಿಯೋದಲ್ಲಿ ಬರುತ್ತಿದ್ದ ಬೇಂದ್ರೆಯವರ ’ನೀ ಹೀಂಗ ನೋಡಬ್ಯಾಡ ನನ್ನ’ ಎಂಬ ಹಾಡನ್ನು ಅದೊಂದು ಪ್ರೇಮಗೀತೆ ಎನ್ನವಂತೆ ಭಾವಿಸಿದ್ದೆ. ಆಗಿನ್ನೂ ನನಗೆ ಇಡೀ ಕವಿತೆಯ ಪಾಠವನ್ನು ಗಮನಿಸುವ ವ್ಯವಧಾನವೂ ಇರಲಿಲ್ಲ. ಓದಿಯೂ ಇರಲಿಲ್ಲ. ನಂತರ ಆ ಕವಿತೆ ಹುಟ್ಟಿದ ಸಂದರ್ಭ ಸನ್ನಿವೇಶ, ಪೂರ್ಣಪಾಠ ಮೊದಲಾದವುಗಳು ದೊರೆತ ಮೇಲೆ ಅದು ನನಗೆ ದಕ್ಕಿದ, ತಟ್ಟಿದ ರೀತಿಯೇ ಬೇರೆ!
ಇದನ್ನು ಏಕೆ ಹೇಳಿದೆನೆಂದರೆ, ಒಂದು ಕವಿತೆ ಹುಟ್ಟಿದ ಸಂದರ್ಭ ಸನ್ನಿವೇಶ ಗೊತ್ತಿದ್ದಾಗ ಆ ಕವಿತೆ ನಮ್ಮ ಮೇಲೆ ಬೀರುವ ಪ್ರಭಾವವೇ ಬೇರೆ. ಏನೂ ಗೊತ್ತಿಲ್ಲದೆ ಒಂದು ಕವಿತೆಯನ್ನು ಓದಿದಾಗ ಆಗುವ ಪರಿಣಾಮವೇ ಬೇರೆ. ಅದು ಹುಟ್ಟಿದ ಸಂದರ್ಭವು ಗೊತ್ತಿರದ ಓದುಗನ ಮೇಲೆ ತೀವ್ರತರವಾದ ಬೇರೆ ಬೇರೆಯದೇ ಆದ ಪರಿಣಾಮವನ್ನು ಕವಿತೆ ಉಂಟು ಮಾಡುತ್ತದೆ, ನಿಜ. ಆದರೆ ಕವಿತೆ ಹುಟ್ಟಿದ ಸಂದರ್ಭ ಗೊತ್ತಿದ್ದಾಗ ಅದಕ್ಕೊಂದು ಹೆಚ್ಚುವರಿ ಸೊಬಗು ಇರುತ್ತದೆ ಎಂಬುದು ನಿಜ. ಅದಕ್ಕಿಂತ ಹೆಚ್ಚಾಗಿ ಆ ಕವಿತೆ ನಮ್ಮನ್ನು ತಡೆಹಿಡಿದು, ನಿಲ್ಲಿಸಿ, ಓದಿಸಿಕೊಳ್ಳುತ್ತದೆ. ಜೊತೆಗೆ ಚಾರಿತ್ರಿಕವಾಗಿ ಕವಿತೆಗೆ ಹೆಚ್ಚಿನ ಮಹತ್ವ ದೊರೆಯುತ್ತದೆ.
ಒಂದು ಕಲಾಕೃತಿ ಹೆಚ್ಚು ಪರಿಣಾಮಕಾರಿಯಾಗಲು ಚಾರಿತ್ರಿಕ ಅಂಶಗಳು ಕೆಲಸ ಮಾಡುತ್ತವೆ. ತೇಜಸ್ವಿ ತಮ್ಮ ’ವಿಮರ್ಶೆಯ ವಿಮರ್ಶೆ’ ಪುಸ್ತಕದಲ್ಲಿ ಒಂದು ಕಡೆ ಇದರ ಮಹತ್ವವನ್ನು ದಾಖಲಿಸಿದ್ದಾರೆ. ಅಬಚೂರಿನ ಪೋಸ್ಟಾಫೀಸು ಕಥಾಸಂಕನದಲ್ಲಿರುವ ’ಅವನತಿ’ ಮತ್ತು ’ತಬರನ ಕಥೆ’ ಎರಡು ಕಥೆಗಳಲ್ಲಿ ’ಅವನತಿ’ ಕಲಾತ್ಮಕವಾಗಿ ಶ್ರೇಷ್ಟಕೃತಿ. ಆದರೆ, ಚಾರಿತ್ರಿಕ ಸಂದರ್ಭಗಳಿಂದ ’ತಬರನ ಕಥೆ’ಗೆ ಹೆಚ್ಚು ಪ್ರಚಾರ, ಯಶಸ್ಸು ದೊರೆಯಿತು. ಮತ್ತಷ್ಟು ಓದು