ಆಧುನಿಕ ವಿಕ್ರಮಾದಿತ್ಯ, ಬೇತಾಳನೂ ಮತ್ತು ಕುರುನಾಡ ಉಳಿಸಿ ವೇದಿಕೆಯ ವ್ಯಥೆಯೂ…
-ಸಾತ್ವಿಕ್ ಎನ್ ವಿ
ಎಂದಿನಂತೆ ಬೇತಾಳವು ಲೇಡಿಸ್ ಹಾಸ್ಟೆಲ್ ಎದುರಿಗಿನ ಹುಣಸೆ ಮರದ ತನ್ನ ಕೊಂಬೆಯ ಮೇಲೆ ನೇತಾಡುತ್ತಿತ್ತು. ರಸ್ತೆ ಅಗಲೀಕರಣವಾಗುವಾಗ ತನ್ನ ಮರಕ್ಕೂ ಎಲ್ಲಿ ಕೊಡಲಿ ಬೀಳುತ್ತದೋ ಎಂಬ ಭಯ ಇದ್ದುದರಿಂದ ತರಗತಿಯಲ್ಲಿರುವ ಸಭ್ಯ ವಿದ್ಯಾರ್ಥಿಯಂತೆ ಒಂದೇ ಕಣ್ಣಿನಲ್ಲಿ ನಿದ್ದೆ ಮಾಡುತ್ತಿತ್ತು. ಇಂಥ ಸ್ಥಿತಿಯಲ್ಲಿ ವೋಟರ್ ಐಡಿಯಲ್ಲಿರುವ ಫೋಟೋದಂತೆ ಮುಖ ಮಾಡಿಕೊಂಡು ವಿಕ್ರಮರಾಜನು ಬೇತಾಳವನ್ನು ಸೆಳೆದುಕೊಂಡು ಹೋಗಲು ಧಾವಿಸಿದನು. ಆಗ ಬೇತಾಳವು ‘ನಿನಗಂತೂ ಕೆಲಸವಿಲ್ಲ. ಪದೇಪದೇ ಬಂದು ನನ್ನನ್ನು ಹೊತ್ತುಕೊಂಡು ಹೋಗುತ್ತಿಯಾ. ಆದರೆ ಒಮ್ಮೆಯೂ ನೀನು ನಿನ್ನ ಕೆಲಸದಲ್ಲಿ ಉತ್ತೀರ್ಣನಾಗಿಲ್ಲ. ಇದೆಲ್ಲ ನೋಡಿದರೆ ಮುಂದಿನ ಜನ್ಮದಲ್ಲಿ ನೀನು ಎಂಜಿನಿಯರಿಂಗ್ ವಿದ್ಯಾರ್ಥಿಯಾಗುವ ಎಲ್ಲ ಅರ್ಹತೆಗಳಿವೆ’ ಎಂದಿತು.
ಇದೆಲ್ಲವನ್ನೂ ತಲೆಗೆ ತೆಗೆದುಕೊಳ್ಳದ ವಿಕ್ರಮನು, ಮುಂದೆ ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ಇಲ್ಲದಿದ್ದರೂ ಮಕ್ಕಳಿಗೆ ಒಳಿತನ್ನೇ ಬಯಸುವ ಪಾಪದ ತಂದೆತಾಯಿಗಳ ಹಾಗೆ ತನ್ನಷ್ಟಕ್ಕೆ ತನ್ನ ಕಾರ್ಯದಲ್ಲಿ ನಿರತನಾದನು. ಇವನ ಹಸುತನವನ್ನು ಗಮನಿಸಿದ ಬೇತಾಳದ ಮನಸ್ಸು ಕರಗಿ ವಿಕ್ರಮನೇ, ನಿನ್ನ ಕಾರ್ಯಶ್ರದ್ಧೆಯನ್ನು ಮೆಚ್ಚಿದ್ದೇನೆ. ಪದೇ ಪದೇ ವಿಫಲನಾದರೂ ಸ್ವಮೇಕ್ ಚಿತ್ರವನ್ನೇ ಮಾಡುವ ಕನ್ನಡ ನಿರ್ದೇಶಕನಂಥ ನಿನ್ನ ಅಚಲ ನಿರ್ಧಾರವನ್ನು ಗೌರವಿಸುತ್ತೇನೆ. ದಾರಿ ಸವೆಯಲಿ ಎಂದು ಕಥೆಯೊಂದನ್ನು ಹೇಳುತ್ತೇನೆ ಎಂದು ಹೇಳಿ ವಿಕ್ರಮನ ಅನುಮತಿಯನ್ನೂ ಕಾಯದೇ ಕಥೆಯೊಂದನ್ನು ಹೇಳಲು ಪ್ರಾರಂಭಿಸಿತು. Read more
ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು
-ಓಂ ಶಿವಪ್ರಕಾಶ್
(ಗಂಗಾವತಿಯಲ್ಲಿ ನೆಡೆದ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಧುನಿಕ ಜಗತ್ತು ಮತ್ತು ಕನ್ನಡ ಗೋಷ್ಠಿಯಲ್ಲಿ ಮಾಡಿದ ಭಾಷಣದ ಪ್ರತಿ )
ನಮಸ್ಕಾರ ಗಂಗಾವತಿ. ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ – ಇಂದು ಮತ್ತು ಮುಂದು, ಈ ವಿಷಯವನ್ನು ಮಂಡಿಸುವ ಮುನ್ನ ಒಂದು ಸಣ್ಣ ರಿಯಾಲಿಟಿ ಚೆಕ್. ತಂತ್ರಜ್ಞಾನ ನಮಗೆಲ್ಲಿ ಅರ್ಥವಾಗುತ್ತದೆ ಎನ್ನುವಿರಾ? ಕನ್ನಡದಲ್ಲಿ ವಿಷಯವನ್ನು ಪ್ರಸ್ತಾಪಿಸಿದಲ್ಲಿ ರಾಕೆಟ್ ತಂತ್ರಜ್ಞಾನವನ್ನೂ ಕೂಡ ನೀವು ಅರ್ಥ ಮಾಡಿಕೊಳ್ಳಬಲ್ಲಿರಿ. ಆದ್ದರಿಂದ ಚಿಂತೆ ಬೇಡ. ನಮ್ಮಲ್ಲಿ ಎಷ್ಟು ಜನರ ಬಳಿ ಮೊಬೈಲ್ ಫೋನ್ ಇದೆ? ಅದರಲ್ಲಿ ಕನ್ನಡ ಬರುತ್ತಾ? ಕನ್ನಡದಲ್ಲಿ ಎಸ್.ಎಂ.ಎಸ್ ಬರುತ್ತಾ? ನೀವು ಕನ್ನಡದಲ್ಲಿ ಕಳಿಸಿದ ಎಸ್.ಎಂ.ಎಸ್ ಬೇರೆಯವರ ಮೊಬೈಲ್ ನಲ್ಲಿ ಓದ್ಲಿಕ್ಕಾಗುತ್ತಾ? ಹೌದು / ಇಲ್ಲ ಎಂಬ ಉತ್ತರ ನಮ್ಮದು.
ಮಾಹಿತಿ ತಂತ್ರಜ್ಞಾನ ನಮ್ಮೆಲ್ಲರ ಜೀವನಗಳಲ್ಲಿ ಇಂದು ಹಾಸು ಹೊಕ್ಕಾಗಿದೆ. ಕಿಸೆಯಲ್ಲಿ ಕೂರುವ ಆ ಮೊಬೈಲ್ ಫೋನ್ ಕೂಡ ಮಾಹಿತಿ ತಂತ್ರಜ್ಞಾನದ ಮಹಾಪೂರವನ್ನು ನಿಮ್ಮ ಬೆರಳಂಚುಗಳಲ್ಲಿ ಹರಿಸುವ ಶಕ್ತಿಯನ್ನು ಹೊಂದಿದೆ. ಆದರೆ ಅದರಲ್ಲಿ ಕನ್ನಡ ಒಂದು ಪ್ರಶ್ನೆ. ಮೊಬೈಲ್‌ಗಳಿಂದ ಹಿಡಿದು ಹತ್ತಾರು ವಿಷಯಗಳಲ್ಲಿನ ಶಿಷ್ಟತೆ/ಸ್ಟಾಂಡರ್ಡ್ಸ್ ನ ಕೊರತೆಯಿಂದಾಗಿ ತಂತ್ರಜ್ಞಾನದಲ್ಲಿ ಕನ್ನಡದ ಬಳಕೆಗೆ ಬಹಳಷ್ಟು ತೊಡಕುಗಳಿವೆ. ಆದರೂ, ಕನ್ನಡ ಮಾಹಿತಿ ತಂತ್ರಜ್ಞಾನದ ಸುತ್ತ ಬೆಳದಿದೆ. ನಿಮಗೆ ಈ ವಿಷಯಗಳನ್ನು ಸುಲಭವಾಗಿ ವಿವರಿಸಲು ಒಂದೆರಡು ಕಥೆಗಳನ್ನು ಹೇಳುತ್ತೇನೆ.
Read more
ರಾಮುಲು ಗೆಲುವು ಬಿಜೆಪಿಗೆ ದಿಗಿಲು
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ (ಈ ಹಿಂದೆ ಕುರಗೋಡು ಕ್ಷೇತ್ರ ಎಂದು ಕರೆಯಲಾಗುತ್ತಿತ್ತು) ಹೆಚ್ಚಾಗಿ ಲಿಂಗಾಯತರೇ ಗೆದ್ದು ಬರುತ್ತಿದ್ದರು. ರಾಮುಲು ಈ ಪರಂಪರೆಯನ್ನು ಮುರಿದಿದ್ದಾರೆ (ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ). ಆದರೆ ಈ ಮುರಿಯುವ ಪ್ರಕ್ರಿಯೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಅನಭಿಷಿಕ್ತ ನಾಯಕ ತಾನೇ ಎಂದು ಸ್ವಯಂಘೋಷಿಸಿಕೊಂಡಿರುವ ಅಥವಾ ಆ ರೀತಿ ತನ್ನ ಭಟ್ಟಂಗಿಗಳಿಂದ ಘೋಷಿಸಲ್ಪಟ್ಟಿರುವ ಯಡಿಯೂರಪ್ಪರಿಗೆ ಒಂದು ರೀತಿಯಲ್ಲಿ ಹೊಡೆತ ಮತ್ತು ಮತ್ತೊಂದು ರೀತಿಯಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿದ್ದಾರೆ. Read more