ಏಕೆ ಹೀಗೆ ನಮ್ಮ ನಡುವೆ ಹಮ್ಮು ಬೆಳೆದಿದೆ ?
ಸ್ವಲ್ಪ ಯೋಚಿಸಬೇಕಾಸದ ಸಾಮಾನ್ಯ ಹಾಗೂ ಉತ್ತಮ ಪ್ರಶ್ನೆ! ನಾವು ಬಡಮರ್ಜಿಯಲ್ಲಿದ್ದಾಗ, ನಮ್ಮ ಕುದುರೆ ಸೋತಾಗ, ನಾವು ಪರೀಕ್ಷೆಗಳಲ್ಲಿ ಉತ್ತೀರ್ಣರಾಗದಾಗ, ನಾವು ಚುನಾವಣೆಗಳಲ್ಲಿ ಸೋತಾಗ, ನಮಗೆ ಉದ್ಯೋಗ ಸಿಗದಾಗ, ಸಿಕ್ಕ ಉದ್ಯೋಗ ಕಳೆದುಕೊಂಡಾಗ, ಯಾವುದೋ ರೀತಿಯಲ್ಲಿ ಶಾರೀರಿಕ ಅಸೌಖ್ಯವುಂಟಾದಾಗ, ಅಸಹಾಯ ಸ್ಥಿತಿ ಬಂದೊದಗಿದಾಗ, ಹೊರಲಾರದ ಸಂಸಾರದ ಭಾರ ಜಾಸ್ತಿಯಾದಾಗ, ಶಾರೀರಿಕ/ಮಾನಸಿಕ ವಿಕಲ ಮಕ್ಕಳು ಅಕಸ್ಮಾತ್ ಜನಿಸಿಬಿಟ್ಟಾಗ….ಹೀಗೇ ಹಲವಾರು ಸಮಯಗಳಲ್ಲಿ ನಾವು ಎಲ್ಲರೊಳಗೊಂದು ಎಂಬ ರೀತಿ ಇದ್ದುಬಿಡುತ್ತೇವೆ.
ನಾನು ನೋಡುತ್ತಲೇ ಬಂದಿದ್ದೇನೆ. ಊರಲ್ಲಿ ಕನ್ನಡ ಶಾಲೆಯ ಒಬ್ಬ ಬಡ ಮಾಸ್ತರರಿದ್ದರು. ಒಬ್ಬರ ದುಡಿಮೆ, ಅಂದಿನಕಾಲಕ್ಕೆ ಸಂಬಳವೂ ಅಷ್ಟೆಲ್ಲಾ ಇರಲಿಲ್ಲ. ನಾಲ್ಕು ಮಕ್ಕಳು ಇರುವ ಆರುಮಂದಿಯ ಕುಟುಂಬ. ಮಾಸ್ತರರ ಅಮ್ಮನ ಮುದುಕಿಯೊಬ್ಬಳೂ ಸೇರಿದಂತೇ ಲೆಕ್ಕಹಾಕಿದರೆ ಏಳುಮಂದಿ. ಎಲ್ಲಾ ನಡೆಯಬೇಕಲ್ಲ? ಅಗೆಲ್ಲಾ ಊರ ಜನರೊಟ್ಟಿಗೆ ಸಾದಾ ಸೀದಾ ಇದ್ದ ಮಾಸ್ತರರು ಎಲ್ಲರೊಂದಿಗೂ ಬೆರೆತು ಜನಪ್ರಿಯರಾಗಿದ್ದರು. ಮಾಸ್ತರಿಗೆ ವರ್ಗವಾಯ್ತು, ಬೇರೇ ಊರಿಗೆ ತೆರಳಿದರು, ಮಕ್ಕಳು ಬೆಳೆದವು. ಈಗ ಮಾಸ್ತರರ ಮಕ್ಕಳು ಎಮ್.ಎನ್.ಸಿ ಕಂಪನಿಯಲ್ಲಿ ಕೆಲಸಮಾಡುತ್ತಾರೆ, ಮಾಸ್ತರರಿಗೆ ನಿವೃತ್ತಿಯಾದರೂ ಆಗ ಸಿಕ್ಕ ಹಣದಲ್ಲಿ ಮನೆ ಕಟ್ಟಿದ್ದಾರೆ, ಮಕ್ಕಳು ಅಪ್ಪನಿಗೆ ಕಾರು ಕೊಡಿಸಿದ್ದಾರೆ! ಅಂತೂ ಮಾಸ್ತರರು ಈಗ ಬಡತನ ಎಂಬ ಮಟ್ಟದಲ್ಲಿಲ್ಲ. ಅದಕ್ಕೆ ತಕ್ಕಹಾಗೇ ಮಾಸ್ತರರು ಯಾರೊಡನೆಯೂ ಬೆರೆಯುವುದೂ ಇಲ್ಲ; ತಮ್ಮ ಸರ್ಕಲ್ಲೇ ಬೇರೆ ಎನ್ನುವ ತಂತ್ರಾಂಶ ತಂತ್ರಂಜ್ಞರಂತೇ ಮಾಸ್ತರರಿಗೆ! ’ಅಲ್ಪನಿಗೆ ಐಶ್ವರ್ಯ ಬಂದರೆ ತಿಂಗಳಬೆಳಕಲ್ಲೂ ಕೊಡೆ ಹಿಡಿದನಂತೆ’ ಎಂಬ ಗಾದೆ ಇದೆಯಲ್ಲಾ ಅದೇ ರೀತಿ ಮಾಸ್ತರು ೨ ಫರ್ಲಾಂಗು ದೂರ ಹೋಗುವುದಾದರೂ ಕಾರು ಬೇಕೇ ಬೇಕು. ಬೆಳೆದುನಿಂತ ಮಗಳನ್ನು ಸಾಮಾನ್ಯದ ಯಾರಿಗೂ ಮದುವೆಮಾಡಲು ಸಿದ್ಧರಿಲ್ಲ. ಅಮೇರಿಕಾದಲ್ಲಿರುವ ವ್ಯಕ್ತಿಗಾಗಿ ಹುಡುಕುತ್ತಿದ್ದಾರೆ.
ಯಹ್ ದಿಲ್ಲಿ ಹೇ ದಿಲ್‌ವಾಲೊಂಕಿ” ಎಂಬುದನ್ನು ಆತ ನನಗೆ ತೋರಿಸಿಕೊಟ್ಟಿದ್ದ
ಸುಪ್ರೀಂ ಕೋರ್ಟ್‌ನ ಮುಂದೆ ಇಂದು ನಮ್ಮ ರಾಜ್ಯಕ್ಕೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ಇಲ್ಲ ಮತ್ತು ಎಂದು ಖಾತ್ರಿ ಮಾಡಿಕೊಂಡ ಬಳಿಕ ಕಚೇರಿಗೆ ಆರಾಮವಾಗಿಯೇ ಹೊರಟಿದ್ದೆ. ಅಪಾರ್ಟ್‌ಮೆಂಟ್‌ನಿಂದ ಹೊರ ಬರುತ್ತಲೆ ರಿಕ್ಷಾವೊಂದು ಬಂತು. ಅದನ್ನು ಏರಿ ಆತ್ಮೀಯರಿಗೆ ಮೆಸೇಜ್ ಕಳಿಸುವ ನನ್ನ ನಿತ್ಯ ಪೂಜೆಯನ್ನು ಶುರು ಮಾಡಿಕೊಂಡೆ. ನಮ್ಮಲ್ಲಿಂದ ಕೌಶಂಬಿ ಮೆಟ್ರೋ ಸ್ಟೇಶನ್‌ಗೆ ೧೫ ನಿಮಿಷಗಳ ಪ್ರಯಾಣ (ಟ್ರಾಫಿಕ್ ಇಲ್ಲದೇ ಹೋದರೆ). ಮೆಟ್ರೋ ಸ್ಟೇಶನ್‌ನ ಬಳಿ ರಿಕ್ಷಾ ಇಳಿದು ಹಣ ಕೊಡೋಣ ಎಂದು ಕಿಸೆಗೆ ಕೈ ಹಾಕಿದರೆ ಪರ್ಸ್ ಇಲ್ಲ. ತಕ್ಷಣವೇ ಶಾಕ್ ಹೊಡೆದಂತೆ ಆಯಿತು. ಇದೀಗ ಕೆಲಸ ಕೆಟ್ಟಿತ್ತು ಅಂತ ಅಂದು ಕೊಂಡರು ವಿಚಲಿತನಾಗಲಿಲ್ಲ. ಪರ್ಸ್ ಮನೆಯಲ್ಲೆ ಬಿಟ್ಟಿದ್ದೇನಾ ಅಥವಾ ಪಿಕ್ ಪಾಕೆಟ್ ಅಯಿತಾ ಅಥವಾ ಎಲ್ಲದರೂ ಬಿತ್ತಾ ಎಂಬ ಗೊಂದಲ ತಲೆಯಲ್ಲಿ ಫ್ಯಾನ್‌ನಂತೆ ತಿರುಗುತ್ತಿತ್ತು. ಹಾಗಂತ ಮೊದಲ ಕಾರಣವನ್ನು ಈ ರಿಕ್ಷಾ ಡ್ರೈವರ್ ಜೊತೆ ಹೇಳುವ ಹಾಗಿಲ್ಲ. ಹೇಳಿದ್ದೆ ಆದರೆ ಅವನು ಯಾವ ಭಾಷೆ ಪ್ರಯೋಗ ಮಾಡುತ್ತಾನೆ ಅನ್ನುವುದು ತಕ್ಷಣವೆ ಫ್ಲಾಶ್ ಆಗಿ ಹೋಗಿತ್ತು. ಇನ್ನು ಯಾರಾದರೂ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಸುಮ್ಮನೆ ಹೇಳುವುದು ಸರಿಯಲ್ಲ. ಏನು ಮಾಡುವುದು ಅಂದು ಕೊಂಡು ತಕ್ಷಣವೇ ಪರ್ಸ್ ಹುಡುಕುವ ರೀತಿ ಮಾಡಿದೆ. ಪರ್ಸ್ ಸಿಗಲೇ ಇಲ್ಲ. ನಾನು ಸಾಮಾನ್ಯವಾಗಿ ನನ್ನ ಪ್ಯಾಂಟ್‌ನ ಮುಂದಿನ ಕಿಸೆಯಲ್ಲಿ ನೂರಿನ್ನೂರು ರೂಪಾಯಿ ಇಟ್ಟುಕೊಂಡಿರುತ್ತೇನೆ. ಆದರೆ ಇಂದು ಆ ರೀತಿಯೂ ಮಾಡಿಲ್ಲ ಎಂಬುದನ್ನು ಕಿಸೆಗೆ ಕೈ ಹಾಕಿ ಖಾತ್ರಿ ಪಡಿಸಿಕೊಂಡೆ. ಸರಿ, ರಿಕ್ಷಾದವನಿಗೆ ನನ್ನ ಸ್ಥಿತಿ ಅರ್ಥವಾಯಿತು. ಅವನು ಏನೂ ಹೇಳಲಿಲ್ಲ. ನನ್ನ ಪುಣ್ಯ. ನನ್ನನ್ನು ಅಲ್ಲೇ ಬಿಟ್ಟು ಮುಂದೆ ಹೋದ. ನನ್ನ ಪ್ರಕಾರ ಅವನು ಮಾಡಿದ ದೊಡ್ಡ ಪುಣ್ಯದ ಕೆಲಸ ಅದೇ. ಮತ್ತಷ್ಟು ಓದು