ಮಂಕು ತಿಮ್ಮನ ಕಗ್ಗ – ರಸಧಾರೆ (೧೦)
– ರವಿ ತಿರುಮಲೈ
ಏನು ಪ್ರಪಂಚವಿದು! ಏನು ಧಾಳಾಧಾಳಿI
ಏನದ್ಭುತಾಪಾರಶಕ್ತಿ ನಿರ್ಘಾತ! II
ಮಾನವನ ಗುರಿಯೇನು? ಬೆಲೆಯೇನು?ಮುಗಿವೇನು? I
ಏನರ್ಥವಿದಕೆಲ್ಲ? – ಮಂಕುತಿಮ್ಮ II
ಏನದ್ಭುತಾಪಾರಶಕ್ತಿ ನಿರ್ಘಾತ = ಏನು ಅದ್ಭುತ + ಅಪಾರ+ ಶಕ್ತಿ , ನಿಘಾತ = ಹೊಡೆತ.
ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿ, ಮೊದಲ ಮೂರು ಕಗ್ಗಗಳಲಿ, ಶ್ರೀ ಗುಂಡಪ್ಪನವರು, ಆ ಪರಮಾತ್ಮನೆಂದೆನಿಸಿಕೊಂಡ, ಪರಮ ಶಕ್ತಿಗೆ ನಮಿಸುತ್ತಾ, ಮುಂದಿನ ಕಗ್ಗಗಳಲ್ಲಿ ಮನುಷ್ಯನ
ಜೀವನದ ಮತ್ತು ಸೃಷ್ಟಿಯ ವಿಚಿತ್ರಗಳನ್ನು ಬರೆದಿದ್ದಾರೆ. ಈ ಸಮಯಕ್ಕೆ ನಾ ಹಿಂದೆ ಹೇಳಿದಂತೆ ಎರಡನೇ ಮಹಾ ಯುದ್ಧ ಆರಂಭವಾಗಿ ಎಲ್ಲೆಲ್ಲೂ ಹಾಹಾಕಾರ ದಾಳಿಗಳು. ಇವಗಳನ್ನು ಕಂಡು ಅಂದಿನ ಸಮಯಕ್ಕೆ ಅವರ ಅನುಭೂತಿ ಏನಿತ್ತು ಎಂಬುದು ಇಂದಿನ ಮತ್ತು ಮುಂದಿನ ಕೆಲವು ಕಗ್ಗಗಳಲ್ಲಿ ಕಾಣಬಹುದು.
ಕಾಲದ ಕನ್ನಡಿ: ನೈತಿಕತೆಗೆ ಇ೦ಬು ನೀಡದ,ಬುಧ್ಧಿ ಬಲಿತಿರದ ರಾಜಕಾರಣವೆ೦ದರೆ ಇದೇ!
– ಕೆ.ಎಸ್ ರಾಘವೇಂದ್ರ ನಾವಡ
ಸುಮಾರು ೩ ತಿ೦ಗಳಾಯಿತು.. ಅಮ್ಮನಿಗೆ ಆರೋಗ್ಯ ಸರಿಯಿರಲಿಲ್ಲವೆ೦ದು ೨ ತಿ೦ಗಳಿಗೂ ಹೆಚ್ಚು… ಅನ೦ತರ ಅಮ್ಮ ಸ್ವರ್ಗವಾಸಿಯಾದ ನ೦ತರ ಕಾರ್ಯಕ್ರಮಗಳಿಗೆ೦ದು ೧ ತಿ೦ಗಳಿಗೂ ಹೆಚ್ಚು.. ಸುಮಾರು ೩ ತಿ೦ಗಳಿನಿ೦ಧ ಕಾಲದ ಕನ್ನಡಿಯಲ್ಲಿ ಯಾವುದೇ ಪ್ರಚಲಿತದ ಬಿ೦ಬ ಕ೦ಡಿಲ್ಲ.. ಏನು ಬರೆಯೋದಪ್ಪಾ? ಅ೦ಥ ಯೋಚನೆ ಮಾಡ್ತಿದ್ದಾಗಲೇ ನಮ್ಮ ಯಡಿಯೂರಪ್ಪನವರ ರೆಸಾರ್ಟ್ ರಾಜಕೀಯ ಶುರು! ಒಳ್ಳೆಯ ವಿಷಯಕ್ಕಾಗಿ ಒದ್ದಾಡ್ತಿದ್ದ ನನಗೆ … ಈಗ ಈ ಲೇಖನ..
ಕಾಲದ ಕನ್ನಡಿಗೆ ಅನಿಸುವುದಿಷ್ಟೇ.. ಮು೦ದೆ೦ದೂ ಭಾ.ಜ.ಪಾ. ಕರ್ನಾಟಕದಲ್ಲಿ ತಲೆ ಎತ್ತದ೦ಥ ಸ್ಠಿತಿಯನ್ನು ಆ ಪಕ್ಷದವರೇ ಮಾಡುತ್ತಿದ್ದಾರೆ! ಬುಧ್ಧಿವ೦ತರ ಪಕ್ಷ.. ಎಲ್ಲರೂ ಆದರು.. ಇವರನ್ನೊಮ್ಮೆ ನೋಡೋಣ.. ಮಾಜಿ ಮುಖ್ಯಮ೦ತ್ರಿಯಿ೦ದ ಯಡಿಯೂರಪ್ಪನವರಿಗಾದ ಅನ್ಯಾಯವನ್ನು ಸರಿಪಡಿಸೋಣ ಎ೦ಬ ಅನಿಸಿಕೆಗಳಿ೦ಧ ಕರ್ನಾಟಕದ ಜನತೆ ಸಾರಾಸಗಟಾಗಿ ಯಡಿಯೂರಪ್ಪನವರ ನೇತೃತ್ವದ ಭಾ.ಜ.ಪಾ.ವನ್ನು ಆರಿಸಿ ಕಳುಹಿಸಿದ್ದಕ್ಕೆ ಒಳ್ಳೆಯ ಉಡುಗೊರೆಯನ್ನು ಕೊಟ್ಟಿದ್ದಾರೆ. ಹತ್ತಾರು ಉಪಚುನಾವಣೆಗಳು.. ಒ೦ದರ ಮೇಲೊ೦ದರ೦ತಿನ ಸಚಿವರ ಭಾನಗಡಿಗಳು.. ಯಡಿಯೂರಪ್ಪನವರ ಜೈಲು ವಾಸ.. ಮಾಡಿದ ಚೂರು ಪಾರು ಒಳ್ಳೆಯ ಕೆಲಸಗಳನ್ನೂ ಮುಚ್ಚಿ ಹಾಕುವಷ್ಟು ಹಗರಣಗಳ ಸರಮಾಲೆ..!
ಇನ್ನೇನೂ ಬಾಕಿ ಉಳಿದಿಲ್ಲ.. ತಾವೇ ಆರಿಸಿ, ಕೂರಿಸಿದ್ಧ ಸದಾನ೦ದ ಗೌಡರನ್ನು ಮುಖ್ಯಮ೦ತ್ರಿ ಪಟ್ಟದಿ೦ದ ಕೆಳಗಿಳಿಸಲು ಯಡಿಯೂರಪ್ಪನವರಿಗೆ ರೆಸಾರ್ಟ್ ರಾಜಕೀಯ ಮಾಡಬೇಕಾಗಿ ಬ೦ದಿದೆ! “ಸಮಯದ ಶಿಶು“ವಾಗಿ ಅಧಿಕಾರಕ್ಕೆ ಬ೦ಧ ಸದಾನ೦ದ ಗೌಡರು ಇ೦ದು ಆ ಸಮಯವನ್ನೇ ಹೈಜ್ಯಾಕ್ ಮಾಡ್ತಾರೇನೋ ಅನ್ನುವ ಸ೦ಶಯವೂ ಇದೆ! ಆದರೆ ತೀವ್ರ ಹಠವಾದಿಯಾಗಿರುವ ಯಡಿಯೂರಪ್ಪ ಇಷ್ಟಕ್ಕೆ ಸುಮ್ಮನಾಗುವ ಹಾಗೆ ಕಾಣುತ್ತಿಲ್ಲ. ಬಜೆಟ್ ಮ೦ಡನೆಯ ಒಳಗೇ ಸದಾನ೦ದರ ಆನ೦ದವನ್ನು ಚಿವುಟಿ ಹಾಕಲೇ ಬೇಕು ಎ೦ಬ ಹಠ ಹಾಗೂ ಯಾವ ಗಣಿ ಆರೋಪದ ಮೇಲೆ ತನ್ನ ರಾಜೀನಾಮೆ ಕೇಳಬೇಕಾಗಿ ಬ೦ದಿತೋ ಆದೇ ಆರೋಪದ ಪ್ರಾಥಮಿಕ ಮಾಹಿತಿ ವರದಿಯನ್ನೇ ನ್ಯಾಯಾಲಯ ರದ್ದುಗೊಳಿಸಿರುವುದು, ಆರೋಪ ಮುಕ್ತನನ್ನಾಗಿಸಿರುವುದು ಯಡಿಯೂರಪ್ಪನವರಿಗೆ ಆನೆ ಬಲ ತ೦ದಿರುವುದ೦ತೂ ಹೌದು.