ಮಂಕು ತಿಮ್ಮನ ಕಗ್ಗ – ರಸಧಾರೆ (೧೦)
– ರವಿ ತಿರುಮಲೈ
ಏನು ಪ್ರಪಂಚವಿದು! ಏನು ಧಾಳಾಧಾಳಿI
ಏನದ್ಭುತಾಪಾರಶಕ್ತಿ ನಿರ್ಘಾತ! II
ಮಾನವನ ಗುರಿಯೇನು? ಬೆಲೆಯೇನು?ಮುಗಿವೇನು? I
ಏನರ್ಥವಿದಕೆಲ್ಲ? – ಮಂಕುತಿಮ್ಮ II
ಏನದ್ಭುತಾಪಾರಶಕ್ತಿ ನಿರ್ಘಾತ = ಏನು ಅದ್ಭುತ + ಅಪಾರ+ ಶಕ್ತಿ , ನಿಘಾತ = ಹೊಡೆತ.
ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿ, ಮೊದಲ ಮೂರು ಕಗ್ಗಗಳಲಿ, ಶ್ರೀ ಗುಂಡಪ್ಪನವರು, ಆ ಪರಮಾತ್ಮನೆಂದೆನಿಸಿಕೊಂಡ, ಪರಮ ಶಕ್ತಿಗೆ ನಮಿಸುತ್ತಾ, ಮುಂದಿನ ಕಗ್ಗಗಳಲ್ಲಿ ಮನುಷ್ಯನ
ಜೀವನದ ಮತ್ತು ಸೃಷ್ಟಿಯ ವಿಚಿತ್ರಗಳನ್ನು ಬರೆದಿದ್ದಾರೆ. ಈ ಸಮಯಕ್ಕೆ ನಾ ಹಿಂದೆ ಹೇಳಿದಂತೆ ಎರಡನೇ ಮಹಾ ಯುದ್ಧ ಆರಂಭವಾಗಿ ಎಲ್ಲೆಲ್ಲೂ ಹಾಹಾಕಾರ ದಾಳಿಗಳು. ಇವಗಳನ್ನು ಕಂಡು ಅಂದಿನ ಸಮಯಕ್ಕೆ ಅವರ ಅನುಭೂತಿ ಏನಿತ್ತು ಎಂಬುದು ಇಂದಿನ ಮತ್ತು ಮುಂದಿನ ಕೆಲವು ಕಗ್ಗಗಳಲ್ಲಿ ಕಾಣಬಹುದು.
ಕಾಲದ ಕನ್ನಡಿ: ನೈತಿಕತೆಗೆ ಇ೦ಬು ನೀಡದ,ಬುಧ್ಧಿ ಬಲಿತಿರದ ರಾಜಕಾರಣವೆ೦ದರೆ ಇದೇ!
– ಕೆ.ಎಸ್ ರಾಘವೇಂದ್ರ ನಾವಡ
ಸುಮಾರು ೩ ತಿ೦ಗಳಾಯಿತು.. ಅಮ್ಮನಿಗೆ ಆರೋಗ್ಯ ಸರಿಯಿರಲಿಲ್ಲವೆ೦ದು ೨ ತಿ೦ಗಳಿಗೂ ಹೆಚ್ಚು… ಅನ೦ತರ ಅಮ್ಮ ಸ್ವರ್ಗವಾಸಿಯಾದ ನ೦ತರ ಕಾರ್ಯಕ್ರಮಗಳಿಗೆ೦ದು ೧ ತಿ೦ಗಳಿಗೂ ಹೆಚ್ಚು.. ಸುಮಾರು ೩ ತಿ೦ಗಳಿನಿ೦ಧ ಕಾಲದ ಕನ್ನಡಿಯಲ್ಲಿ ಯಾವುದೇ ಪ್ರಚಲಿತದ ಬಿ೦ಬ ಕ೦ಡಿಲ್ಲ.. ಏನು ಬರೆಯೋದಪ್ಪಾ? ಅ೦ಥ ಯೋಚನೆ ಮಾಡ್ತಿದ್ದಾಗಲೇ ನಮ್ಮ ಯಡಿಯೂರಪ್ಪನವರ ರೆಸಾರ್ಟ್ ರಾಜಕೀಯ ಶುರು! ಒಳ್ಳೆಯ ವಿಷಯಕ್ಕಾಗಿ ಒದ್ದಾಡ್ತಿದ್ದ ನನಗೆ … ಈಗ ಈ ಲೇಖನ..
ಕಾಲದ ಕನ್ನಡಿಗೆ ಅನಿಸುವುದಿಷ್ಟೇ.. ಮು೦ದೆ೦ದೂ ಭಾ.ಜ.ಪಾ. ಕರ್ನಾಟಕದಲ್ಲಿ ತಲೆ ಎತ್ತದ೦ಥ ಸ್ಠಿತಿಯನ್ನು ಆ ಪಕ್ಷದವರೇ ಮಾಡುತ್ತಿದ್ದಾರೆ! ಬುಧ್ಧಿವ೦ತರ ಪಕ್ಷ.. ಎಲ್ಲರೂ ಆದರು.. ಇವರನ್ನೊಮ್ಮೆ ನೋಡೋಣ.. ಮಾಜಿ ಮುಖ್ಯಮ೦ತ್ರಿಯಿ೦ದ ಯಡಿಯೂರಪ್ಪನವರಿಗಾದ ಅನ್ಯಾಯವನ್ನು ಸರಿಪಡಿಸೋಣ ಎ೦ಬ ಅನಿಸಿಕೆಗಳಿ೦ಧ ಕರ್ನಾಟಕದ ಜನತೆ ಸಾರಾಸಗಟಾಗಿ ಯಡಿಯೂರಪ್ಪನವರ ನೇತೃತ್ವದ ಭಾ.ಜ.ಪಾ.ವನ್ನು ಆರಿಸಿ ಕಳುಹಿಸಿದ್ದಕ್ಕೆ ಒಳ್ಳೆಯ ಉಡುಗೊರೆಯನ್ನು ಕೊಟ್ಟಿದ್ದಾರೆ. ಹತ್ತಾರು ಉಪಚುನಾವಣೆಗಳು.. ಒ೦ದರ ಮೇಲೊ೦ದರ೦ತಿನ ಸಚಿವರ ಭಾನಗಡಿಗಳು.. ಯಡಿಯೂರಪ್ಪನವರ ಜೈಲು ವಾಸ.. ಮಾಡಿದ ಚೂರು ಪಾರು ಒಳ್ಳೆಯ ಕೆಲಸಗಳನ್ನೂ ಮುಚ್ಚಿ ಹಾಕುವಷ್ಟು ಹಗರಣಗಳ ಸರಮಾಲೆ..!
ಇನ್ನೇನೂ ಬಾಕಿ ಉಳಿದಿಲ್ಲ.. ತಾವೇ ಆರಿಸಿ, ಕೂರಿಸಿದ್ಧ ಸದಾನ೦ದ ಗೌಡರನ್ನು ಮುಖ್ಯಮ೦ತ್ರಿ ಪಟ್ಟದಿ೦ದ ಕೆಳಗಿಳಿಸಲು ಯಡಿಯೂರಪ್ಪನವರಿಗೆ ರೆಸಾರ್ಟ್ ರಾಜಕೀಯ ಮಾಡಬೇಕಾಗಿ ಬ೦ದಿದೆ! “ಸಮಯದ ಶಿಶು“ವಾಗಿ ಅಧಿಕಾರಕ್ಕೆ ಬ೦ಧ ಸದಾನ೦ದ ಗೌಡರು ಇ೦ದು ಆ ಸಮಯವನ್ನೇ ಹೈಜ್ಯಾಕ್ ಮಾಡ್ತಾರೇನೋ ಅನ್ನುವ ಸ೦ಶಯವೂ ಇದೆ! ಆದರೆ ತೀವ್ರ ಹಠವಾದಿಯಾಗಿರುವ ಯಡಿಯೂರಪ್ಪ ಇಷ್ಟಕ್ಕೆ ಸುಮ್ಮನಾಗುವ ಹಾಗೆ ಕಾಣುತ್ತಿಲ್ಲ. ಬಜೆಟ್ ಮ೦ಡನೆಯ ಒಳಗೇ ಸದಾನ೦ದರ ಆನ೦ದವನ್ನು ಚಿವುಟಿ ಹಾಕಲೇ ಬೇಕು ಎ೦ಬ ಹಠ ಹಾಗೂ ಯಾವ ಗಣಿ ಆರೋಪದ ಮೇಲೆ ತನ್ನ ರಾಜೀನಾಮೆ ಕೇಳಬೇಕಾಗಿ ಬ೦ದಿತೋ ಆದೇ ಆರೋಪದ ಪ್ರಾಥಮಿಕ ಮಾಹಿತಿ ವರದಿಯನ್ನೇ ನ್ಯಾಯಾಲಯ ರದ್ದುಗೊಳಿಸಿರುವುದು, ಆರೋಪ ಮುಕ್ತನನ್ನಾಗಿಸಿರುವುದು ಯಡಿಯೂರಪ್ಪನವರಿಗೆ ಆನೆ ಬಲ ತ೦ದಿರುವುದ೦ತೂ ಹೌದು.
ಮಂಕು ತಿಮ್ಮನ ಕಗ್ಗ – ರಸಧಾರೆ (೯)
– ರವಿ ತಿರುಮಲೈ
ಏನು ಭೈರವಲೀಲೆಯೀ ವಿಶ್ವಭ್ರಮಣೆ!
ಏನು ಭೂತಗ್ರಾಮನರ್ತನೋನ್ಮಾದ ! I
ಏನಗ್ನಿ ಗೋಳಗಳು ! ಏನಂತರಾಳಗಳು !
ಏನು ವಿಸ್ಮಯ ಸೃಷ್ಟಿ! – ಮಂಕುತಿಮ್ಮ II
ಭೈರವಲೀಲೆಯೀ = ಭೈರವ+ ಲೀಲೆಯು+ಈ , ಭೂತಗ್ರಾಮನರ್ತನೋನ್ಮಾದ = ಭೂತ+ಗ್ರಾಮ+ನರ್ತನ+ಉನ್ಮಾದ, ಏನಗ್ನಿ= ಏನು+ ಅಗ್ನಿ
ಬೈರವ= ಪರಮ ಶಿವ, ರುದ್ರ, ಉನ್ಮಾದ = ಉದ್ವೇಗ, ಗೋಳ = ಉಂಡೆ, ವಿಸ್ಮಯ= ಆಶ್ಚರ್ಯ.
ಮಂಕು ತಿಮ್ಮನ ಕಗ್ಗ – ರಸಧಾರೆ (೮)
– ರವಿ ತಿರುಮಲೈ
ಏನು ಜೀವನದರ್ಥ?
ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
ಭ್ರಮಿಪುದೇನಾಗಾಗ ಕರ್ತೃವಿನ ಮನಸು?
ಮಮತೆಯುಳ್ಳವನಾತನಾದೊಡೀ ಜೀವಗಳು
ಶ್ರಮಪಡುವುದೇಕಿಂತು -ಮಂಕುತಿಮ್ಮ ?
ಕ್ರಮವು ಒಂದು ಲಕ್ಷ್ಯವು ಒಂದು ಉಂಟೇನು ಸೃಷ್ಟಿಯಲಿ ಭ್ರಮಿಪುದು ಅದೇನು ಆಗಾಗ ಕರ್ತೃವಿನ ಮನಸು
ಮಮತೆಯುಳ್ಳವನು ಆತನು ಆದೊಡೆ ಜೀವಗಳು ಶ್ರಮಪದುವುದೇಕೆ ಇಂತು – ಮಂಕುತಿಮ್ಮ
ಮಂಕು ತಿಮ್ಮನ ಕಗ್ಗ – ರಸಧಾರೆ (೭)
– ರವಿ ತಿರುಮಲೈ
ಏನು ಜೀವನದರ್ಥ?
ಬದುಕಿಗಾರ್ ನಾಯಕರು, ಏಕನೋ ಅನೇಕರೋ?
ವಿಧಿಯೋ ಪೌರುಷವೋ ಧರುಮವೋ ಅಂಧಬಲವೋ?
ಕುದುರುವುದೆಂತು ಈಯವ್ಯವಸ್ಥೆಯ ಪಾಡು?
ಅದಿಗುದಿಯೆ ಗತಿಯೇನೋ? – ಮಂಕುತಿಮ್ಮ
ಬದುಕಿಗಾರ್= ಬದುಕಿಗೆ=ಯಾರ್, ಧರುಮವೋ= ಧರ್ಮವೋ, ಅಂಧಬಲವೋ= ಅಂಧ ಶ್ರದ್ಧೆಯೋ, ಈಯವ್ಯವಸ್ಥೆಯ = ಈ + ಅವ್ಯವಸ್ಥೆಯ, ಅದಿಗುದಿ = ಸಂದೇಹ ಅಥವಾ ತಳಮಳ.
ಈ ಬದುಕಿಗೆ ಯಾರು ನಾಯಕರು? ಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋ? ಅಥವಾ ಈ ಬದುಕಿಗೆ ನಾಯಕ, ವಿಧಿಯೋ,ಧರ್ಮವೋ,ಅಥವಾ ಅಂಧ ಶ್ರದ್ಧೆಯೋ? ಹಿಂದಿನ ಕಗ್ಗದಲ್ಲಿ ಉಲ್ಲೇಖಿಸಿರುವ ಅವ್ಯವಸ್ಥೆ ಸರಿಯಾಗುವುದೋ ಇಲ್ಲವೋ? ಅಥವಾ ಇವೆಲ್ಲರದರ ವಿಚಾರದ ತಳಮಳದಲ್ಲಿಯೇ ನಾವು ಯಾವಾಗಲೂ ಇರಬೇಕೆ? ಈ ರೀತಿಯ ಪ್ರಶ್ನೆಗಳನ್ನು ಸನ್ಮಾನ್ಯ ಡಿ ವಿ ಗುಂಡಪ್ಪನವರು ತಮ್ಮನ್ನೇ ತಾವು ಕೇಳಿಕೊಳ್ಳುತ್ತಾ, ಓದುಗರ ಮುಂದೆ ಪ್ರಸ್ತಾಪಿಸುತ್ತಾರೆ.
ಮತ್ತಷ್ಟು ಓದು
ಕಹಾನಿ, ವಿದ್ಯಾಬಾಲನ್ ಮತ್ತೆ ಮಿಂಚಿಂಗ್
ಫಿಲ್ಮಿ ಪವನ್
ಈ ನಡುವೆ ಎಲ್ಲಾ ಕಡೆಯೂ ವಿದ್ಯಾಬಾಲನ್ ದೇ ದುನಿಯಾ, ಡರ್ಟಿ ಪಿಕ್ಚರ್ ಬಂದಮೇಲೇನೆ ವಿದ್ಯಾ ಬಾಲನ್ ಗೆ ಈ ಪಾಟಿ ಡಿಮ್ಯಾಂಡ್ ಬಂದಿದ್ದು. ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಸಹ ಬಾಚಿಕೊಂಡಿದ್ದರು ವಿದ್ಯಾ, ಅವರಿಗೆ ನಿಲುಮೆ ತಂಡದಿಂದ ಶುಭಾಶಯಗಳು. ಶನಿವಾರ ಭಾನುವಾರ ಐ.ಟಿ ಹುಡುಗರಿಗೆ ಹಬ್ಬ ಇದ್ದ ಹಾಗೆ, ಗುರುವಾರವೇ ಎಲ್ಲ ಪ್ಲಾನ್ ಆಗಿ ಬಿಡುತ್ತೆ ಶುಕ್ರವಾರ ಮತ್ತು ಶನಿವಾರದ ಪ್ರೋಗ್ರಾಮ್. ಹಾಗೇ ಪ್ಲಾನ್ ಮಾಡಿ ಶನಿವಾರ ಕಹಾನಿ ಚಿತ್ರ ನೋಡಲು ಹೋಗಿದ್ದೆವು, ಮೊದಲ ಬಾರಿ ನನ್ನ ಸಹೋದ್ಯೋಗಿಗಳೊಂದಿಗೆ ಸಿನಿಮಾ ಪಯಣ.
ಕೊಲ್ಕತ್ತಾದಂತಹ ಮಹಾನಗರದಲ್ಲಿ ತೆಗೆದುಕೊಳ್ಳುವ ಸಿನಿಮಾ ಕೊಲ್ಕತ್ತಾದ ದೈನಂದಿನ ಬದುಕನ್ನು ತೆರೆದುಕೊಳ್ಳುತ್ತಾ ನಾಯಕಿಯ ಎಂಟ್ರಿ ಕೊಡಿಸುತ್ತೆ. ನಾಯಕಿ ಕೊಲ್ಕತ್ತಾ ಬಂದೊಡನೆ ಪೋಲೀಸ್ ಠಾಣೆಗೆ ತೆರಳಿ ತನ್ನ ಗಂಡ ನಾಪತ್ತೆಯಾದ ಬಗ್ಗೆ ದೂರು ನೀಡುತ್ತಾಳೆ. ಆಗ ಪ್ರೇಕ್ಷಕನಿಗೂ ಸಹ ಟ್ಯಾಕ್ಸಿ ಚಾಲಕನಿಗೆ ಬಂದ ಅನುಮಾನವೆ ಬರುತ್ತೆ, ಯಾಕೆ ನೇರ ಪೋಲೀಸ್ ಠಾಣೆ ಅಂತ. ನಾಯಕಿ ತುಂಬು ಗರ್ಭಿಣಿ, ಲಂಡನ್ ಅಲ್ಲಿದ್ದ ಪತಿ ಕೊಲ್ಕತ್ತಾಗೆಂದು ಹೊರಟು ಬಂದವರು ಮತ್ತೆ ಕರೆ ಮಾಡಿಲ್ಲ, ಸಂದೇಶ ಕಳುಹಿಸಿಲ್ಲ, ಕಾಣೆಯಾಗಿದ್ದಾರೆ ಎಂದು ನೀಡುವ ದೂರನ್ನು ಪೋಲೀಸರು ಯುವ ಆಫೀಸರ್ ರಾಣಾಗೆ ವಹಿಸುತ್ತಾರೆ. ರಾಣಾ ಮತ್ತು ಪೋಲೀಸ್ ಅಲ್ಲದಿದ್ದರು ಪೋಲೀಸರಂತೆ ತನಿಖೆಯ ಎಲ್ಲ ಕಡೆಗಳಲ್ಲು ತನ್ನನ್ನು ತಾನು ತೊಡಗಿಸಿಕೊಳ್ಳುವ ವಿದ್ಯಾಬಾಲನ್ ಜೊತೆಯಾಗಿ ನಡೆಸುವ ಸಸ್ಪನ್ಸ್ ಥ್ರಿಲ್ಲರ್ ಕಹಾನಿ.
ವಿದ್ಯಾ ಬಾಲನ್ ಗೆ ಸಿನಿಮಾದಲ್ಲಿ ಸಹ ವಿದ್ಯಾ ಎಂಬ ಹೆಸರು, ತಮ್ಮ ಪತಿ ಕಳೆದು ಹೋದ ಎಂದು ದೂರು ನೀಡಿದ ದಿನದಿಂದ ಸಂಪೂರ್ಣ ತನಿಖೆ ಮುಗಿಯುವವರೆಗೂ ಪೋಲೋಸರೊಂದಿಗೇ ಇರುತ್ತಾರೆ. ವಿದ್ಯಾ ವೃತ್ತಿಯಲ್ಲಿ ನೆಟ್ವರ್ಕ್ ಸೆಕ್ಯೂರಿಟಿ ಇಂಜಿನಿಯರ್, ಈ ತನಿಖೆ ನಡೆಯುವಾಗ ಅವರ ಕಂಪ್ಯೂಟರ್ ತಲೆ ಬಹಳವಾಗಿ ಉಪಯೋಗವಾಗುತ್ತದೆ, ಅದೇ ಭರದಲ್ಲಿ ನಿರ್ದೇಶಕರು ಪೋಲೀಸರಿಗೆ ಕಂಪ್ಯೂಟರ್ ಬಗೆಗಿನ ಅಲ್ಪ ತಿಳುವಳಿಕೆಯನ್ನೂ ಸಹ ತೋರಿಸಿದ್ದಾರೆ. ಬರೀ ಫೋನಿನಲ್ಲಿ ಮಾತನಾಡಿದ್ದನ್ನೆ ಅರ್ಥ ಮಾಡಿಕೊಂಡು ನನ್ನ ಗಂಡ ಇದೇ ಲಾಡ್ಜಿನಲ್ಲಿ ಇರುತಿದ್ದರು, ಇದೇ ಅಂಗಡಿಯಲ್ಲಿ ಟೀ ಕುಡಿಯುತಿದ್ದರು ಎಂದೆಲ್ಲ ಗೆಸ್ ಮಾಡುವ ವಿದ್ಯಾ ಬುದ್ದಿವಂತಿಕೆ ನಂಬಲು ಸಾಧ್ಯವಾಗದಿದ್ದರು ಸಿನಿಮಾ ಆದ್ದರಿಂದ ನಂಬಿ ಬಿಡಬೇಕಾಗುತ್ತದೆ. ಮತ್ತಷ್ಟು ಓದು
ಮಂಕು ತಿಮ್ಮನ ಕಗ್ಗ – ರಸಧಾರೆ (೬)
– ರವಿ ತಿರುಮಲೈ
ಒಗಟೆಯೇನೀ ಸೃಷ್ಟಿ? ಬಾಳಿನರ್ಥವೇನು ?
ಬಗೆದು ಬಿಡಿಸುವರಾರು ಸೋಜಿಗವನಿದನು ?
ಜಗವ ನಿರವಿಸಿದ ಕೈಯೊಂದಾದೊಡೇಕಿಂತು
ಬಗೆ ಬಗೆಯ ಜೀವಗತಿ ? – ಮಂಕುತಿಮ್ಮ
ಒಗಟೆಯೇನೀ (ಒಗಟೇ+ ಏನು+ ಈ) ಸೃಷ್ಟಿ? ಬಾಳಿನ ಅರ್ಥವೇನು. ಬಗೆ ಬಿಡಿಸುವವರು ಯಾರು ಸೋಜಿಗವ ಇದನು.
ಜಗವ ನಿರವಿಸಿದ ( ನಿರ್ಮಿಸಿದ) ಕೈ ಒಂದು ಆಡೋದೇ ( ಆದರೆ ) ಏಕೆ ಇಂತು( ಹೀಗೆ) ಬಗೆ ಬಗೆಯ ಜೀವಗತಿ – ಮಂಕುತಿಮ್ಮ.
ಈ ಸೃಷ್ಟಿಯು ಒಗಟೇ? ಈ ಬಾಳಿಗೆ ಅರ್ಥವೇನು ?. ಆದರೆ ಈ ಒಗಟನ್ನು ಬಿಡಿಸುವವರು ಯಾರು. ಈ ಜಗತ್ತನ್ನು ಸೃಷ್ಟಿಮಾಡಿದ ಕೈ ಒಂದೇ ಆದರೆ , ಸೃಷ್ಟಿಯಲ್ಲಿ ಸಮಾನತೆಯೇಕಿಲ್ಲ ?
ಬೇರೆ ಬೇರೆಯಾದ ಜೀವಗತಿ ಏಕೆ? ಎನ್ನುವ ಪ್ರಶ್ನೆಗಳನ್ನು ತಮಗೆ ತಾವೇ ಕೇಳಿಕೊಳ್ಳುವ ರೀತಿಯಲ್ಲಿ ಶ್ರೀ ಗುಂಡಪ್ಪನವರು, ನಮ್ಮೆಲ್ಲರ ಮುಂದೆ ಈ ಕಗ್ಗದ ರೂಪದಲ್ಲಿ ಇಟ್ಟಿದ್ದಾರೆ.
ಎಲ್ಲ ಜೀವಿಗಳಲ್ಲೂ ಇರುವ ಆ ಚೇತನವು ಜ್ಞಾನ ಸ್ವರೂಪ. ಆದರೆ ಕೆಲವರು ಜ್ಞಾನಿಗಳು ಮತ್ತೆ ಕೆಲವರು ಏಕಿಲ್ಲ ಎಂದರೆ, ಕೆಲವರ ಕನ್ನಡಿ ಒರೆಸಿ ಶುದ್ಧವಾಗಿದೆ.
ಕೆಲವರ ಕನ್ನಡಿಯ ಮೇಲೆ ಧೂಳು ಕೂತಿದೆ. ದೂಳನ್ನು ಒರೆಸಿದರೆ ಅದೂ ಸಹ ಪ್ರಕಾಶಿಸುತ್ತಾ, ಶುದ್ಧ ಬಿಂಬವನ್ನು ಪ್ರತಿಫಲಿಸುತ್ತದೆ.
ಆದರೂ ಏನಿದು ಪ್ರಪಂಚ ಎಂಬ ಪ್ರಶ್ನೆ ಮತ್ತು ಅರ್ಥವೇ ಆಗುವುದಿಲ್ಲವಲ್ಲ ಅಥವಾ ನಮಗೆ ಅರ್ಥವಾಗಿರುವುದು ಪೂರ್ಣವಲ್ಲ ಎಂಬ ಭಾವ ಎಲ್ಲರಿಗೂ ಬರುತ್ತದೆ. ಇದು ಅರ್ಥವಾಗದ ಗಂಟಾದರೆ ಯಾರಾದರೂ ಬಿಡಿಸಬಹುದಲ್ಲ ಎನ್ನುವ ಪ್ರಶ್ನೆಯೂ ಉದ್ಭವವಾಗುತ್ತದೆ.
ಈ ಜಗತ್ತನ್ನು ನಿರ್ಮಿಸದ ಅಥವಾ ಸೃಷ್ಟಿಸಿದ “ಕೈ” ಒಂದೇ ಎಂದಾದರೆ, ವಿಧವಿದವಾದ ಅಸಮತೆಯಿಂದ ಏಕೆ ಕೂಡಿದೆ ಎನ್ನುವ ಸಂದೇಹ, ಪ್ರಶ್ನೆ ವಿಚಾರವಂತರಾದ ಎಲ್ಲರ ಮನಸ್ಸಲ್ಲೂ ಉದ್ಭವವಾಗುತ್ತದೆ ಅಲ್ಲವೇ, ಹಾಗೆಯೆ ಇದೆ ಈ ಕಗ್ಗದ ಭಾವ.
ನಾ ಹಿಂದೆಯೇ ಹೇಳಿದಂತೆ, ಈ ಜಗತ್ತಿನ ಗುಟ್ಟನ್ನು ಚೇಧಿಸಲು ಈ ವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ. ಪ್ರಯತ್ನಪಟ್ಟವರಿಗೆಲ್ಲ ಒಂದೊಂದು ರೂಪದಲ್ಲಿ ಕಾಣುವ ಈ ಜಗತ್ತಿನ ನಿಜ ರೂಪ ಕಂಡುಕೊಳ್ಳುವಲ್ಲಿ ಯಾರೂ ಪೂರ್ಣ ಸಫಲರಲ್ಲ. ಹಾಗೆಯೇ ಈ ಜಗತ್ತಿನ ಎಲ್ಲ ಜೀವರಾಶಿಗಳಲ್ಲೂ ಹೇರಳವಾದ ವೈವಿಧ್ಯತೆ. ಒಬ್ಬ ಮನುಷ್ಯನಿದ್ದಂತೆ ಇನ್ನೊಬ್ಬನಿಲ್ಲ. ಒಬ್ಬನ ಮನಸ್ಸು ಬುಧ್ಧಿಗಳಿದ್ದಂತೆ ಮತ್ತೊಬ್ಬರದ್ದಿಲ್ಲ. ಅವರವರ ಜೀವನ ಅವರವರದ್ದು. ಅವರವರ ಭಾಗ್ಯ ಅವರವರದ್ದು. ಒಬ್ಬರ ನೋವು ಮತ್ತು ಆ ನೋವಿಗೆ ಕಾರಣ ಮತ್ತೊಬ್ಬರ ನೋವು ಮತ್ತು ಅದರ ಕಾರಣದಂತಿಲ್ಲ.
ಒಬ್ಬರ ಸುಖ ಮತ್ತದರ ಕಾರಣ ಇನ್ನೊಬ್ಬರಿಗಿಲ್ಲ. ಒಬ್ಬನ ಸುಖದ ಕಾರಣವು ಮತ್ತೊಬ್ಬರ ದುಃಖಕ್ಕೆ ಕಾರಣವಾಗಬಹುದು.ಇದರ ಗುಟ್ಟನ್ನು ಬಿಡಿಸುವವರಾರು? ಈ ಎಲ್ಲವೂ ಮಾನವನಿಗಷ್ಟೆ ಅಲ್ಲ ಸಕಲ ಪ್ರಾಣಿಗಳಿಗೂ ಅನ್ವಯಿಸಿದ್ದತೆ. ನಮ್ಮ ಮನೆಯ ಬೀದಿಯಲ್ಲಿ ಒಂದು ಮುದಿ ನಾಯಿ ಹೊತ್ತು ಹೊತ್ತಿನ ಊಟಕ್ಕೆ ಹೋರಾಡುವಾಗ, ಹಾಕಿದ್ದ ಯಾವುದನ್ನೂ ತಿನ್ನಲಾಗದೆ ಮುದಿತನ, ಸಾವು, ಬದುಕಗಳ ಮಧ್ಯದಲ್ಲಿನರಳುವಾಗ , ಅಥವಾ ಬಹಳ ದಿನಗಳಿಂದ ಬೆಳೆದು ಹೆಮ್ಮರವಾಗಿ ಎಲ್ಲರಿಗೂ ನೆರಳನ್ನೂ ಪ್ರಾಣಿ ಪಕ್ಷಿಗಳಿಗೆ ಆಹಾರವನ್ನೂ ಆಶ್ರಯವನ್ನೂ ನೀಡಿದ ಒಂದು ಮರವನ್ನು ಯಾವುದೋ ಕಾರಣಕ್ಕೆ ಕಡಿದಾಗಲೂ ಹೇ! ಪರಮಾತ್ಮ ಏನಿದು ಈ ಜೇವಿಯ ಅವಸ್ಥೆ ಎಂದು ನನ್ನ ಮನಸ್ಸು ಕರಗುತ್ತದೆ.ಆದರೆ ಅದರ ಅವಸ್ಥೆಗೆ ಉತ್ತರ ಖಂಡಿತ ನನಗೆ ಸಿಗುವುದಿಲ್ಲ. ಇದು ಎಲ್ಲ ಪ್ರಾಣಿಗಳ ಪರಿಸ್ತಿತಿ.
ಅಷ್ಟೇ ಅಲ್ಲ ಇಂದು ಸುಖ ನಾಳೆ ದುಖ, ಇಂದು ಆರೋಗ್ಯ ನಾಳೆ ಅನಾರೋಗ್ಯ, ಇಂದು ಮಿತ್ರ ನಾಳೆ ಶತ್ರು, ಇಂದು ಸಂತೋಷ ನಾಳೆ ಬೇಸರ ಹೀಗೆ ಇಂದು ನಾಳೆಗಳಲ್ಲಿ ಮತ್ತು ದಿನದಿನಕ್ಕೆ ಬೇರೆಬೇರೆಯೇ ಭಾವಗಳು ಈ ರೀತಿಯ ವೈವಿಧ್ಯಕ್ಕೆ ಕಾರಣರಾರು ಅಥವಾ ಕಾರಣವೇನು? ನಾವೆಷ್ಟು ಕಾರಣ? ಪರರೆಷ್ಟು ಕಾರಣ? ವಿಧಿಯೆಷ್ಟು ಕಾರಣ? ವಿಧಾತನೆಷ್ಟು ಕಾರಣ? ಹೇಗೆ ಹತ್ತು ಹಲವಾರು ಪ್ರಶ್ನೆಗಳ ಭಾವವೇ ಈ ಆರನೆಯ ಕಗ್ಗ. ಈ ಕಗ್ಗದಲ್ಲಿ ಬರುವ ಸೂಕ್ತ ಪ್ರಶ್ನೆಗಳು ನಮ್ಮ ನಿಮ್ಮಲ್ಲಿಯೂ ಸಹ ಎಂದಾದರೂ ಉದ್ಭವಿಸಿರಬಹುದು ಉತ್ತರ ಸಿಕ್ಕಿಲ್ಲ ದಿರಬಹುದು
ಮಿತ್ರರೇ ಬನ್ನಿ ನಾವು ನೀವು ಎಲ್ಲರೂ ಇಂತಹ ಪ್ರಶ್ನೆಗಳಿಗೆ ಉತ್ತರಗಳನ್ನು ಹುಡುಕಲು , ವಿಚಾರ ಮಾಡುವ, ವಿಚಾರ ಮಾಡುತ್ತಾ ಮಾಡುತ್ತಾ ಮುಂದಿನ ಕಗ್ಗಕ್ಕೆ ಹೋಗುವ.
ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.
ಬೆಟ್ಟದಾ ಬುಡದಲ್ಲಿ ಹುಟ್ಟಿರುವ ವೃಕ್ಷಕ್ಕೆ…
ಸೋಮಾಲಿಯಾದ ಕಳ್ಳರು ಸೆರೆಹಿಡಿದು ಆತನನ್ನೂ ಆತನ ಜೊತೆಗಾರರನ್ನೂ ಹಡಗಿನಲ್ಲೇ ಬಂಧಿಸಿದ್ದರು. ಅನ್ನ-ನೀರು ಸರಿಯಾಗಿ ಇಲ್ಲದೇ ಮೂರುಹಗಲು ಮೂರು ರಾತ್ರಿ ಕಳೆದುಹೋಗಿತ್ತು. ಶರೀರ ನಿತ್ರಾಣವಾಗಿತ್ತು. ಸಿರಿವಂತ ವ್ಯಾಪಾರಿಯ ಉದ್ಯೋಗಿಯಾಗಿ ಯಾಕಾದರೂ ಸೇರಿಕೊಂಡೆನೋ ಎನ್ನಿಸಿಬಿಟ್ಟಿತ್ತು. ಆತ ಮಲಗೇ ಇದ್ದ. ಜೊತೆಗಾರರನ್ನೂ ಅದೇ ಹಡಗಿನಲ್ಲಿ ಎಲ್ಲೆಲ್ಲೋ ಬಂಧಿಸಲಾಗಿತ್ತು. ನಾಳೆ ಬೆಳಗಾದರೆ ತಮ್ಮೆಲ್ಲರನ್ನೂ ಕೊಲ್ಲುವುದಾಗಿ ಹೇಳಿದ್ದನ್ನು ಆತ ಕೇಳಿದ್ದ. ಭಾರತ ಸರಕಾರದ ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮನ್ನು ಕಳ್ಳರು ಹೈಜಾಕ್ ಮಾಡಿ ಬಂಧಿಸಿದ ವರದಿ ತಲ್ಪಿದೆಯೋ ಇಲ್ಲವೋ ತಿಳಿದಿರಲಿಲ್ಲ. ಭಾರತೀಯ ನೌಕಾಪಡೆಯ ತುಕಡಿಗಳನ್ನಾದರೂ ಕಳಿಸಿ ತಮ್ಮನ್ನೆಲ್ಲಾ ರಕ್ಷಿಸಿ ಕರೆದೊಯ್ಯಬಹುದಿತ್ತಲ್ಲ ಎಂದು ಆತ ಯೋಚಿಸುತ್ತಿದ್ದ.
ಕಳ್ಳರು ಸಾಮಾನ್ಯ ಕ್ರೂರಿಗಳಾಗಿರಲಿಲ್ಲ; ಹಿಡಿದ ಜನರನ್ನು ಏನೂ ಮಾಡಲು ಹೇಸದ ಜನ ಅವರಾಗಿದ್ದರು. ಮನುಷ್ಯರನ್ನೇ ಕೊಂದು ತಿಂದು ಬದುಕಬಹುದಾದ ಮಾನವರೇ ಅಲ್ಲದ ರಕ್ಕಸರು ಅವರು. ಒಬ್ಬೊಬ್ಬರೂ ಯಮದೂತರಂತೇ ಕಾಣುತ್ತಿದ್ದರು. ಅವರ ಕೆಂಗಣ್ಣುಗಳನ್ನು ನೆಟ್ಟಗೆ ನೋಡಲು ಹೆದರಿಕೆಯಾಗುತ್ತಿತ್ತು. ಉದ್ದುದ್ದ ಬೆಳೆದ ಉಗುರುಗಳು ಬಾಕುಗಳಂತೇ ಕೆಲಸಮಾಡುತ್ತಿದ್ದವು. ಮೊಂಡುತಲೆಯ ಕುರುಚಲು ಕೂದಲು, ಚಿತ್ರವಿಚಿತ್ರ ಗತಿಯ ಗಡ್ಡ-ಮೀಸೆಗಳು, ನಾರುವ ಜೀನ್ಸು ದಿರಿಸುಗಳು ಇವುಗಳನ್ನೆಲ್ಲಾ ನೋಡಿದಾಗ ಬಹಳ ಅಸಹ್ಯವಾಗುತ್ತಿತ್ತು. ಬದುಕಿನ ಕೊನೆಗಳಿಗೆ ಬಂದೇಬಿಡುತ್ತದೆಂದು ಕನಸಲ್ಲೂ ಎಣಿಸದ ಆತ ಪಶ್ಚಾತ್ತಾಪ ಪಡುತ್ತಿದ್ದ. ತಾನು ಸತ್ತರೆ ಹೆಂಡತಿ-ಮಕ್ಕಳ ಗತಿ ಮುಂದೇನು ಎಂಬ ಚಿಂತೆಯಲ್ಲಿ ಹೊಟ್ಟೆಯ ಹಸಿವೂ ಅಡಗಿಹೋಗಿತ್ತು! ನಿರ್ದಯಿಗಳ ಕೂಗು-ಘರ್ಜನೆ ಸದಾ ನಡೆದೇ ಇತ್ತು. ಆಗಾಗ ಪಿಸ್ತೂಲಿನಿಂದ ಸಿಡಿಯುವ ಗುಂಡುಗಳ ಸದ್ದು ಕೇಳಿಸುತ್ತಿತ್ತು. ಅದು ಯಾರು ಯಾರಿಗೆ ಹಾರಿಸಿದ್ದು ಎಂಬುದು ಮಾತ್ರ ಗೊತ್ತಾಗುತ್ತಿರಲಿಲ್ಲ.
ಉಪಚುನಾವಣೆ ಫಲಿತಾಂಶ: ಬಿಜೆಪಿಗೆ ಮತದಾರ ಪ್ರಭು ಕೊಟ್ಟ ಮೊದಲ ಮತ್ತು ಕಡೆಯ ಎಚ್ಚರಿಕೆ
ಸಾತ್ವಿಕ್ ಎನ್ ವಿ
ಕಳೆದ ವಿಧಾನಸಭಾ ಚುನಾವಣೆಯ ನಂತರ ನಡೆದ ಎಲ್ಲ ಚುನಾವಣೆಗಳಲ್ಲೂ ಕರ್ನಾಟಕದ ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದರು. ಹಲವಾರು ವಿವಾದಗಳನ್ನು ಬಿಜೆಪಿ ಹುಟ್ಟುಹಾಕಿಕೊಂಡಿದ್ದರೂ ಜನತೆ ಪಕ್ಷಕ್ಕೆ ಆಶೀರ್ವದಿಸಿದ್ದರು. ಆದರೆ ಈ ಸರಣಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆಯಲ್ಲಿ ಮುಂದುವರೆದಿಲ್ಲ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ತೆರವಾಗಿ ಪ್ರತಿಷ್ಠೆಯ ಕಣವಾಗಿ ಮಾರ್ಪಾಡಾಗಿತ್ತು.
ಇಂದು ಉಪಚುನಾವಣೆಯ ಫಲಿತಾಂಶ ಹೊರಬಂದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಜಯಪ್ರಕಾಶ ಹೆಗ್ಡೆಯವರು ಸರಿಸುಮಾರು ೫೦ ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶವು ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಬಿಸಿತುಪ್ಪವಾಗುವ ಸಾಧ್ಯತೆಗಳಿವೆ. ಇದು ಉಪಚುನಾವಣೆಯಾದುದರಿಂದ ಮುಂದಿನ ಸುಮಾರು ಎರಡು ವರ್ಷಗಳು ಹೆಗ್ಡೆಯವರು ಲೋಕಸಭಾಸದಸ್ಯರಾಗಿರುತ್ತಾರೆ. ಮತ್ತಷ್ಟು ಓದು
ಮಂಕು ತಿಮ್ಮನ ಕಗ್ಗ – ರಸಧಾರೆ (೫)
– ರವಿ ತಿರುಮಲೈ
ದೇವರೆಂಬುದದೇನು ಕಗ್ಗತ್ತಲ ಗವಿಯೆ?
ನಾವರಿಯಲಾದೆಲ್ಲದರೊಟ್ಟು ಹೆಸರೇ?
ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು ?
ಸಾವು ಹುಟ್ಟುಗಳೇನು?- ಮಂಕುತಿಮ್ಮ
ದೇವರೆಂಬುದು ಅದೇನು ಕಗ್ಗತ್ತಲ ಗವಿಯೆ?. ನಾವರಿಯಲಾರದ ಎಲ್ಲದರ ಒಟ್ಟು ಹೆಸರೇ?
ಕಾವನು(=ಕಾಯುವವನು) ಓರ್ವನು(=ಒಬ್ಬನು) ಇರಲ್ಕೆ( =ಇರಲು) ಜಗದ ಕಥೆಯು ಏಕಿಂತು? ಸಾವು ಹುಟ್ಟುಗಳೇನು? – ಮಂಕುತಿಮ್ಮ.
ಮತ್ತಷ್ಟು ಓದು