ಡಬ್ಬಿಂಗ್ ಎಂಬ ರುಚಿಗೆಟ್ಟ ದಿಢೀರ್ ಅಡುಗೆ ಏಕೆ?
– ರೂಪ ರಾವ್
ಇತ್ತೀಚಿಗೆ ಡಬ್ಬಿಂಗ್ ಬೇಕು ಬೇಡ ಅನ್ನುವ ಹುಯಿಲು ಮತ್ತೆ ಕಾಣ್ತಿದೆ. ರಾಕೇಶ್ ಶೆಟ್ಟಿಯವರ ಲೇಖನ ಓದಿದ ಮೇಲೆ ಇದರ ಬಗ್ಗೆ ನನ್ನದೊಂದಿಷ್ಟು ಅನಿಸಿಕೆ.
ಸ್ವಾಮಿ ಡಬ್ಬಿಂಗ್ ಬೇಡ ಅನ್ನೋದು ಹಳೆಯ ರಾಗವಿರಬಹುದು. ಆದರೆ ಕಾರಣ ಮಾತ್ರ ನಿಚ್ಚಳ… ಅದು ಕನ್ನಡದ ಕಲಾವಿದರಿಗೆ ಆಗೋ ಅನ್ಯಾಯ ಅಷ್ಟೆ. ಅದು ಯಾವತ್ತಿಗೂ ಸಲ್ಲುವ ಕಾರಣ. ಚಿತ್ರರಂಗವನ್ನೇ ನಂಬಿಕೊಂಡು ನಿಂತ ಅಸಂಖ್ಯಾತ ಕಲಾವಿದರಿಗೆ. ನಾಯಕ ,ನಾಯಕಿ ಪಾತ್ರದಿಂದ ಹಿಡಿದು ಪೋಷಕ ಪಾತ್ರಧಾರಿಗಳು, ಛಾಯಾಗ್ರಾಹಕರು, ನಿರ್ದೇಶಕರು,ನೂರಾರು ಜನ ನೇರವಾಗಿ ಇಲ್ಲವೇ ಪರೋಕ್ಷವಾಗಿ ಒಂದು ಚಿತ್ರದ ಮೇಲೆ ಅವಲಂಬಿತರಾಗಿರುತ್ತಾರೆ.. ಅಷ್ಟೂ ಜನರ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರವಿದು.
ರಿಮೇಕ್ ಚಿತ್ರಗಳ ಆರ್ಭಟಕ್ಕೆ ನಿರ್ದೇಶಕರ ಸೃಜನಾತ್ಮಕತೆ ಈಗಾಗಲೇ ಕಡಿಮೆಯಾಗಿದೆ.ಒಂದು ವೇಳೆ ಡಬ್ಬಿಂಗ್ ನಿಷೇಧ ತೆರವು ಗೊಳಿಸಿದರೆ,ಕನ್ನಡದಲ್ಲಿ ನಿರ್ದೇಶಕ, ಕತೆಗಾರ, ಸತ್ತಂತೆ…..! ಉಪೇಂದ್ರ, ಸೂರಿ, ಶಶಾಂಕ್, ಚಂದ್ರು,ಯೋಗರಾಜ್ ಭಟ್ ರವರಂತೆ ಆಗಬೇಕೆನ್ನುವ ಯುವ ನಿರ್ದೇಶಕರ ಗತಿ ?
ಮತ್ತೆ ಯಾವುದೋ ಪ್ರಾದೇಶಿಕತೆಗೆ ಹೊಂದುವ ಅಲ್ಲಿನ ವಾತಾವರಣಕ್ಕೆ ನಿರ್ಮಿಸಲಾಗಿರುವ ಚಿತ್ರವೊಂದನ್ನ ಹಾಗೆಯೇ ಡಬ್ಬಿಂಗ್ ಮಾಡಿದಲ್ಲಿ ಅದನ್ನು ಕೂತು ನೋಡುವ ಕರ್ಮ ನಮ್ಮದಾಗುತ್ತದೆ.ಪಾತ್ರದ ತುಟಿಯ ಚಲನೆ ಒಂದಾದರೆ. ಹಿನ್ನಲೆ ದ್ವನಿಯ ಮಾತು ಒಂದಾಗಿರುತ್ತದೆ. ಅದಕ್ಕೂ ಇದಕ್ಕೂ ಜೋಡಿಸಿ ನೋಡುವ ದರ್ದು ನಮಗೆ ಬೇಕಾ?
ಮತ್ತಷ್ಟು ಓದು